Homeಕರ್ನಾಟಕತಿಂಗಳಾದರೂ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡದ ಬಿಜೆಪಿ!: ರಾಜ್ಯಾಧ್ಯಕ್ಷ ಸ್ಥಾನವೂ ಕಗ್ಗಂಟು

ತಿಂಗಳಾದರೂ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡದ ಬಿಜೆಪಿ!: ರಾಜ್ಯಾಧ್ಯಕ್ಷ ಸ್ಥಾನವೂ ಕಗ್ಗಂಟು

- Advertisement -
- Advertisement -

ರಾಜ್ಯದಲ್ಲಿ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಿದ್ದು ತಿಂಗಳು ಕಳೆದಿದೆ. ಕಾಂಗ್ರೆಸ್ ನೇತೃತ್ವದ ನೂತನ ಸರ್ಕಾರ ಸಚಿವ ಸಂಪುಟ, ಉಸ್ತುವಾರಿಗಳ ನೇಮಕ ಎಲ್ಲಾ ಮುಗಿಸಿ ಬಜೆಟ್ ಅಧಿವೇಶನಕ್ಕೆ ತಯಾರಿ ನಡೆಸುತ್ತಿದೆ. ಅಲ್ಲದೇ ಚುನಾವಣಾ ಪೂರ್ವದಲ್ಲಿ ನೀಡಿದ್ದ ಗ್ಯಾರಂಟಿ ಯೋಜನೆಗಳ ಅನುಷ್ಟಾನಕ್ಕೂ ಮುಂದಾಗಿದೆ. ಆದರೆ ಬಿಜೆಪಿ ಮಾತ್ರ ಇದುವರೆಗೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ಇನ್ನೂ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರವೂ ನೆನೆಗುದಿಗೆ ಬಿದ್ದಿದೆ.

ಒಂದು ವಾರದ ಹಿಂದೆಯೇ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಮುಂದಿನ ಮೂರು ದಿನಗಳಲ್ಲಿ ಪಕ್ಷವು ಪ್ರತಿಪಕ್ಷ ನಾಯಕನ ಆಯ್ಕೆ ಮಾಡಲಿದ್ದೇವೆ ಎಂದು ಹೇಳಿದ್ದರು. ಆದರೆ ಒಂದು ವಾರ ಕಳೆದರೂ ಮಾಡಲಾಗಿಲ್ಲ. ಇನ್ನು ಬಿಜೆಪಿಯ ಕಾರ್ಯಕಾರಿಣಿ ಸಭೆಯಲ್ಲಿ ಆಯ್ಕೆ ನಡೆಯಲಿದೆ ಎನ್ನಲಾಗಿತ್ತು. ಆದರೆ ಸಭೆಯೆ ಅರ್ಧಬರ್ಧ ನಡೆದಿದೆ. ಈಗಾಗಿ ವಿಪಕ್ಷ ನಾಯಕನ ಆಯ್ಕೆ ಕಗ್ಗಂಟಾಗಿ ಉಳಿದಿದೆ.

ಜುಲೈ ಮೊದಲ ವಾರದಲ್ಲಿ ಬಜೆಟ್ ಅಧಿವೇಶನ ನಡೆಸಲು ಸಿಎಂ ಸಿದ್ದರಾಮಯ್ಯನವರು ಸಿದ್ಧತೆ ನಡೆಸಿದ್ದಾರೆ. ಇಂತಹ ಸಮಯದಲ್ಲಿ ಸಮರ್ಥ ವಿರೋಧ ಪಕ್ಷದ ನಾಯಕರಿರುವುದು ಅಗತ್ಯ. ಆದರೆ ಹೀನಾಯವಾಗಿ ಸೋತಿರುವ ಬಿಜೆಪಿಗೆ ವಿಪಕ್ಷ ನಾಯಕರಾಗುವ ಸಾಮರ್ಥ್ಯ ಯಾರಲ್ಲೂ ಇಲ್ಲವೇ ಎಂಬ ಮಾತುಗಳು ಕೇಳಿಬರುತ್ತಿವೆ.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ಸುನೀಲ್ ಕುಮಾರ್ ಹಾಗೂ ಅರವಿಂದ್ ಬೆಲ್ಲದ್ ಅವರ ಹೆಸರು ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಮುಂಚೂಣಿಯಲ್ಲಿವೆ ಎಂದು ಹೇಳಲಾಗುತ್ತಿದೆ.

ರಾಜ್ಯದಲ್ಲಿ ಬಿಜೆಪಿ ಸೋಲಿಗೆ ಬೊಮ್ಮಾಯಿಯವರ ಅಸಮರ್ಥತೆ ಮತ್ತು ಸರಿಯಾದ ಆಡಳಿತ ನಡೆಸದಿರುವುದು ಕಾರಣ ಎಂಬ ಮಾತಿದೆ. ಹಾಗಾಗಿ ಮತ್ತೆ ಅವರ ಮುಂದಾಳತ್ವದಲ್ಲಿ ಹೋಗಬೇಕೆ ಎಂಬುದು ಬಿಜೆಪಿಯನ್ನು ಕಾಡುತ್ತಿದೆ. ಇನ್ನು ಬಸನಗೌಡ ಪಾಟೀಲ ಯತ್ನಾಳ್ ಬಾಯಿಗೆ ಬಂದಂತೆ ಮಾತನಾಡುವುದರಿಂದ ಆಡಳಿತ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸುವ ಬದಲಿಗೆ ವಿಪಕ್ಷ ಬಿಜೆಪಿಯೇ ಮುಜುಗರಕ್ಕೊಳಗಾಗಬಹುದು ಎಂಬ ಆತಂಕವಿದೆ. ಅರವಿಂದ್ ಬೆಲ್ಲದ್‌ ಮತ್ತು ಸುನೀಲ್‌ ಕುಮಾರ್‌ರವರಿಗೆ ರಾಜ್ಯದ ವಸ್ತುಸ್ಥಿತಿಯ ಅರಿವು ಮತ್ತು ಅನುಭವ ಸಾಲದು ಎನ್ನಲಾಗುತ್ತಿದೆ.

ಇನ್ನು ಬಿಜೆಪಿ ಹಿರಿಯ ನಾಯಕರು ನಿವೃತ್ತಿ ಘೋಷಿಸಿದ್ದಾರೆ. ಯಡಿಯೂರಪ್ಪ ಮಗನಿಗಾಗಿ ಹಿಂದೆ ಸರಿದರೆ, ಈಶ್ವರಪ್ಪನವರು ರಾಜಕೀಯ ನಿವೃತ್ತಿ ಘೋಷಿಸಿದರು. ಹಾಗಾಗಿ ಸದ್ಯ ಬಿಜೆಪಿ ಯಾರ ಮೊರೆ ಹೋಗಲಿದೆ ಎಂಬುದು ಕುತೂಹಲಕಾರಿಯಾಗಿದೆ.

ಬದಲಾಗದ ರಾಜ್ಯಾಧ್ಯಕ್ಷ ಸ್ಥಾನ

ಹಾಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಅವಧಿ ಕಳೆದ ವರ್ಷ ಆಗಸ್ಟ್‌ನಲ್ಲಿಯೇ ಕೊನೆಗೊಂಡಿದೆ. ವಿಧಾನಸಭಾ ಚುನಾವಣೆಯ ಕಾರಣದಿಂದ ಅವರ ಅವಧಿಯನ್ನು ವಿಸ್ತರಿಸಲಾಗಿತ್ತು. ಇದೀಗ ಬಿಜೆಪಿಯ ಹೀನಾಯ ಸೋಲಿನ ನಂತರೆ ರಾಜ್ಯಾಧ್ಯಕ್ಷರನ್ನು ಬದಲಾಯಿಸುವ ಮಾತುಗಳು ಮುನ್ನೆಲೆಗೆ ಬಂದಿದೆ.

ರಾಜ್ಯಾದ್ಯಂತ ಸುತ್ತಿ ಬಿಜೆಪಿ ಪಕ್ಷ ಬಲಪಡಿಸುವ ಮುಖ ಯಾರು ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ನಳೀನ್ ಕುಮಾರ್‌ರವರನ್ನೆ ಮತ್ತೊಂದು ಅವಧಿಗೆ ಮುಂದುವರೆಸುವ ಸಾಧ್ಯತೆಗಳು ಕಡಿಮೆ ಎನ್ನಲಾಗುತ್ತಿದೆ.

”ನಾವು ಗೆದ್ದೂ ಆಯ್ತು, ಸಿಎಂ, ಡಿಸಿಎಂ ಆಯ್ಕೆಯೂ ಆಯ್ತು, ಸಚಿವ ಸಂಪುಟವೂ ರೆಡಿ ಆಯ್ತು, ಸರ್ಕಾರದ ರಚನೆಯೂ ಆಯ್ತು. ಇದುವರೆಗೂ ನಮ್ಮ ಸರ್ಕಾರವನ್ನು ಎದುರಿಸಲು ಬಿಜೆಪಿಗೆ ಸಮರ್ಥ ವಿರೋಧ ಪಕ್ಷದ ನಾಯಕ ಸಿಗದಿರುವುದು ದುರಂತ!. ನೈತಿಕತೆ ಇರದಿದ್ದರೇನಂತೆ, ಕನಿಷ್ಠ ವಿರೋಧ ಪಕ್ಷದ ನಾಯಕನನ್ನು ಮುಂದಿಟ್ಟುಕೊಂಡಾದರು ಬಿಜೆಪಿ ನಮ್ಮನ್ನು ವಿರೋಧಿಸಲಿ!” ಎಂದು ಕಾಂಗ್ರೆಸ್ ಈ ಹಿಂದೆ ವ್ಯಂಗ್ಯವಾಡಿತ್ತು.

ಇದನ್ನೂ ಓದಿ; 2024ರ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ದಸಂಸ ‘ಭೀಮ ಸಂಕಲ್ಪ’; ಕಾರ್ಯಕ್ರಮದಲ್ಲಿ ಸಿಎಂ, ಡಿಸಿಎಂ ಭಾಗಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...