HomeಮುಖಪುಟBJP ಕಳೆದ ಚುನಾವಣೆಯಲ್ಲಿ ನೀಡಿದ್ದ 90% ಭರವಸೆಗಳನ್ನು ಈಡೇರಿಸಿಲ್ಲ: ಸಿದ್ದರಾಮಯ್ಯ

BJP ಕಳೆದ ಚುನಾವಣೆಯಲ್ಲಿ ನೀಡಿದ್ದ 90% ಭರವಸೆಗಳನ್ನು ಈಡೇರಿಸಿಲ್ಲ: ಸಿದ್ದರಾಮಯ್ಯ

- Advertisement -
- Advertisement -

ಬಿಜೆಪಿ ಹೊಸ ಪ್ರಣಾಳಿಕೆಗೂ ಮುನ್ನ ತಮ್ಮ ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡಬೇಕು. ಏಕೆಂದರೆ ಕಳೆದ ಚುನಾವಣೆ ಸಮಯದಲ್ಲಿ ನೀಡಿದ ಬಹುತೇಕ ಭರವಸೆಗಳನ್ನು ಬಿಜೆಪಿ ಈಡೇರಿಸಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಇಂದು ಬಿಡುಗಡೆಗೊಂಡ ಬಿಜೆಪಿ ಪ್ರಣಾಳಿಕೆ ಕುರಿತು ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, “ಬಿಜೆಪಿ ನಾಯಕರಿಗೆ ತಾವು ನೀಡುವ ಭರವಸೆಗಳಿಗೆ ಕಿಂಚಿತ್ತೂ ಮನ್ನಣೆ ಇಲ್ಲ. ಹಿಂದಿನ ಚುನಾವಣೆಯಲ್ಲಿ ನೀಡಿದ ಭರವಸೆಗಳಲ್ಲಿ ಶೇ.90ಕ್ಕಿಂತ ಹೆಚ್ಚು ಈಡೇರಿಲ್ಲ. ಬಿಜೆಪಿ ಎಂದರೆ ದ್ರೋಹಿಗಳು” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಬಿಜೆಪಿಯವರು ಕಳೆದ ಚುನಾವಣೆಯ ಭರವಸೆಗಳನ್ನು ಈಡೇರಿಸಿಲ್ಲ. ಈಗ ಹೊ ಪ್ರಣಾಳಿಕೆ ಬಿಡುಗಡೆ ಮಾಡುತ್ತಿದ್ದಾರೆ. ನಾವು ಗ್ಯಾರಂಟಿಗಳನ್ನು ನೀಡಿದರೆ ಎಲ್ಲಿಂದ ಹಣ ತರುತ್ತೀರಿ ಅನ್ನುವ ಅವರು ತಮ್ಮ ಪ್ರಣಾಳಿಕೆಯಲ್ಲಿನ ಭರವಸೆಗಳನ್ನು ಈಡೇರಿಸಲು ಎಲ್ಲಿಂದ ಹಣ ತರುತ್ತಾರೆ ಎಂಬುದರ ಬಗ್ಗೆ ಮಾತನಾಡಿಲ್ಲ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗ ಬಿಜೆಪಿ ಪಕ್ಷವು ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. NRC, ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸುವ ಭರವಸೆ ನೀಡಿದೆ.

ಬಿಪಿಎಲ್ ಕುಟು೦ಬಗಳಿಗೆ ಪ್ರತಿ ವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆ 3 ಅಡುಗೆ ಅನಿಲದ ಸಿಲಿಂಡರ್‌ಗಳನ್ನು ಉಚಿತವಾಗಿ ವಿತರಿಸುತ್ತೇವೆ. ಬೆಂಗಳೂರಿನ ಪ್ರತಿ ವಾರ್ಡ್‌ಗಳಲ್ಲಿ ಅಟಲ್‌ ಆಹಾರ ಕೇಂದ್ರ ಸ್ಥಾಪನೆ ಮಾಡುತ್ತೇವೆ ಎಂದು ಬಿಜೆಪಿ ಭರವಸೆ ನೀಡಿದೆ.

ಪ್ರಜಾ ಪ್ರಣಾಳಿಕೆಯ ಮುಖ್ಯಾಂಶಗಳು

‘ಪೋಷಣೆ’ ಯೋಜನೆಯ ಮೂಲಕ ಪ್ರತಿ ಬಿಪಿಎಲ್ ಕುಟುಂಬಗಳಿಗೆ ಪ್ರತಿದಿನ ಅರ್ಧ ಲೀಟರ್ ನಂದಿನಿ ಹಾಲು ಮತ್ತು ಪ್ರತಿ ತಿಂಗಳು 5 ಕೆಜಿ ಸಿರಿ ಅನ್ನ-ಸಿರಿಧಾನ್ಯವನ್ನು ಒಳಗೊಂಡ ಪಡಿತರ ಕಿಟ್ ನೀಡುತ್ತೇವೆ.

ಉನ್ನತ ಮಟ್ಟದ ಸಮಿತಿಯ ಶಿಫಾರಸ್ಸಿನ ಆಧಾರದ ಮೇಲೆ ಕರ್ನಾಟಕದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೊಳಿಸುತ್ತೇವೆ.

ರಾಜ್ಯದಾದ್ಯಂತ ನಿವೇಶನ ರಹಿತ/ ವಸತಿ ರಹಿತ ನಿವಾಸಿಗಳಿಗೆ, ‘ಸರ್ವರಿಗೂ ಸೂರು ಯೋಜನೆ’ಯಡಿ 10 ಲಕ್ಷ ವಸತಿ ನಿವೇಶನಗಳನ್ನು ಕಂದಾಯ ಇಲಾಖೆ ಮೂಲಕ ಹಂಚಿಕೆ ಮಾಡುತ್ತೇವೆ.

ಕರ್ನಾಟಕದಲ್ಲಿ ರಾಷ್ಟ್ರೀಯ ನಾಗರಿಕರ ನೋಂದಣಿ ಪ್ರಕ್ರಿಯೆ ಚುರುಕುಗೊಳಿಸಿ ಎಲ್ಲಾ ಅಕ್ರಮ ವಲಸಿಗರನ್ನು ಗಡಿಪಾರು ಮಾಡುತ್ತೇವೆ ಎಂದು ಬಿಜೆಪಿ ಹೇಳಿಕೊಂಡಿದೆ.

ಇದನ್ನೂ ಓದಿ: ಸಿಟಿ ರವಿ ಸೋಲಿಸಲು ಕಾಂಗ್ರೆಸ್‌ಗೆ ಮತ ಹಾಕಿ: ಕೈ ಅಭ್ಯರ್ಥಿ ಪರ ಜೆಡಿಎಸ್ ಮುಖಂಡನ ಪ್ರಚಾರ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ನಿಂದನೆ ಸಾರ್ವಜನಿಕವಾಗಿ ನಡೆದಿದ್ದರೆ ಮಾತ್ರ ಎಸ್ಸಿ-ಎಸ್ಟಿ ಕಾಯ್ದೆಯಡಿ ಅಪರಾಧವಾಗುತ್ತದೆ: ಸುಪ್ರೀಂ ಕೋರ್ಟ್‌

0
ಸಾರ್ವಜನಿಕವಾಗಿ ಉದ್ದೇಶಪೂರ್ವಕ ಅವಮಾನ ಅಥವಾ ನಿಂದನೆ ಮಾಡಿದರೆ  ಮಾತ್ರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ದೌರ್ಜನ್ಯ ತಡೆ ಕಾಯಿದೆಯಡಿಯಲ್ಲಿ ಅಪರಾಧವಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಎಸ್ಸಿ-ಎಸ್ಟಿ ಕಾಯ್ದೆಯಡಿ ಅಪರಾಧವಾಗಬೇಕಿದ್ದರೆ 'ನಿಂದನೆಯು...