Homeರಾಜಕೀಯ‘ಬಿಜೆಪಿಯಲ್ಲಿ ಕೆಲವು ಒಳ್ಳೆಯ ವಿಷಯಗಳಿವೆ...’: ಕಾಂಗ್ರೆಸ್‌ಗೆ ಎಚ್ಚರಿಕೆ ರವಾನಿಸಿದ ಹಾರ್ದಿಕ್‌ ಪಟೇಲ್!

‘ಬಿಜೆಪಿಯಲ್ಲಿ ಕೆಲವು ಒಳ್ಳೆಯ ವಿಷಯಗಳಿವೆ…’: ಕಾಂಗ್ರೆಸ್‌ಗೆ ಎಚ್ಚರಿಕೆ ರವಾನಿಸಿದ ಹಾರ್ದಿಕ್‌ ಪಟೇಲ್!

- Advertisement -
- Advertisement -

ಮೂರು ವರ್ಷಗಳಿಂದ ಪಕ್ಷದಿಂದ ಕಡೆಗಣಿಸಲಾಗುತ್ತಿದೆ ಎಂದು ದೂರುತ್ತಿರುವ ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ಅವರು ಗುಜರಾತ್ ಚುನಾವಣೆಗೆ ಕೆಲವೇ ತಿಂಗಳುಗಳ ಮೊದಲು ಬಿಜೆಪಿಯನ್ನು ಹೊಗಳುವ ಮೂಲಕ ತನ್ನ ಪಕ್ಷದ ಕೇಂದ್ರದ ನಾಯಕತ್ವಕ್ಕೆ ಆತಂಕಕಾರಿ ಸಂಕೇತಗಳನ್ನು ರವಾನಿಸಿದ್ದಾರೆ.

ರಾಜ್ಯದ ಪ್ರಮುಖ ಸಮುದಾಯವಾದ ‘ಪಾಟಿದಾರ್’ನ ನಾಯಕರಾದ ಅವರು ಮತ್ತೊಮ್ಮೆ ತಮ್ಮ ಪಕ್ಷ ಮತ್ತು ರಾಜ್ಯ ಕಾಂಗ್ರೆಸ್ ನಾಯಕತ್ವದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ ಬಿಜೆಪಿಯೊಂದಿಗೆ ತಾನು ಮಾತುಕತೆ ನಡೆಸುತ್ತಿದ್ದೇನೆ ಎಂಬ ವರದಿಗಳನ್ನು ಅವರು ನಿರಾಕರಿಸಿದ್ದಾರೆ. ಜೊತೆಗೆ, “ಬಿಜೆಪಿಯ ಬಗ್ಗೆ ಕೆಲವು ಒಳ್ಳೆಯ ವಿಷಯಗಳನ್ನು ನಾವು ಒಪ್ಪಿಕೊಳ್ಳಬೇಕು” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ರಾಜಕೀಯವಾಗಿ ಬಿಜೆಪಿ ತೆಗೆದುಕೊಂಡ ಇತ್ತೀಚಿನ ನಿರ್ಧಾರಗಳು, ಇಂತಹ ಕ್ರಮಗಳನ್ನು ತೆಗೆದುಕೊಳ್ಳುವ ಶಕ್ತಿ ಅವರಿಗೆ ಇದೆ ಎಂದು ನಾವು ಒಪ್ಪಿಕೊಳ್ಳಬೇಕು. ಅವರ ಪರವಾಗಿ ನಿಲ್ಲದೆ ಅಥವಾ ಅವರನ್ನು ಹೊಗಳದೆ, ನಾವು ಕನಿಷ್ಠ ಸತ್ಯವನ್ನು ಒಪ್ಪಿಕೊಳ್ಳಬಹುದು ಎಂದು ನಾನು ನಂಬುತ್ತೇನೆ. ಗುಜರಾತಿನಲ್ಲಿ ಕಾಂಗ್ರೆಸ್ ಬಲಿಷ್ಠವಾಗಬೇಕಾದರೆ, ನಾವು ನಮ್ಮ ನಿರ್ಧಾರ ತೆಗೆದುಕೊಳ್ಳುವ ಕೌಶಲ್ಯ ಮತ್ತು ನಿರ್ಧಾರ ತೆಗೆದುಕೊಳ್ಳುವ ಶಕ್ತಿಯನ್ನು ಸುಧಾರಿಸಿಕೊಳ್ಳಬೇಕು” ಎಂದು ಹಾರ್ದಿಕ್ ಪಟೇಲ್ ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಕನ್ಹಯ್ಯ, ಜಿಗ್ನೇಶ್ ಮತ್ತು ಹಾರ್ದಿಕ್‌ ಮೇಲೆ ‘ಬಿಹಾರ ಕಾಂಗ್ರೆಸ್‌‌’ಗೆ ನಂಬಿಕೆ – RJD ಜೊತೆ ಮೈತ್ರಿಗೆ ಬ್ರೇಕ್

2015 ರಲ್ಲಿ ಗುಜರಾತ್‌ನಲ್ಲಿ ಮೀಸಲಾತಿಗಾಗಿ ಪ್ರಬಲ “ಪಾಟಿದಾರ್” ಸಮುದಾಯದ ಆಂದೋಲನದ ನೇತೃತ್ವ ವಹಿಸಿದ್ದ ಹಾರ್ದಿಕ್ ಪಟೇಲ್, 2019 ರ ರಾಷ್ಟ್ರೀಯ ಚುನಾವಣೆಯ ಮೊದಲು ಕಾಂಗ್ರೆಸ್‌ಗೆ ಸೇರಿದ್ದರು. ಅವರ ರಾಜಕೀಯ ಪಾದಾರ್ಪಣೆಯ ನಂತರ ಅವರ ಜನಪ್ರಿಯತೆ ಕ್ಷೀಣಿಸಿತು ಎಂದು ಎನ್‌ಡಿಟವಿ ಉಲ್ಲೇಖಿಸಿದೆ.

2017 ರ ಗುಜರಾತ್ ಚುನಾವಣೆಯಲ್ಲಿ ಪಾಟಿದಾರ್‌ ಸಮುದಾಯದಿಂದ ಪಕ್ಷವು ಲಾಭ ಗಳಿಸಿದ್ದರೂ, ಸಮುದಾಯವು 2019 ರ ಚುನಾವಣೆ ಅಥವಾ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸಲಿಲ್ಲ.

ಹಾರ್ದಿಕ್ ಪಟೇಲ್ ತಮ್ಮ ಪಕ್ಷದ ನಾಯಕತ್ವವು ತನ್ನನ್ನು ಬದಿಗಿಟ್ಟಿದೆ ಎಂದು ಆರೋಪಿಸಿದ್ದು, ಸಮುದಾಯದ ಇನ್ನೊಬ್ಬ ಪ್ರಮುಖ ನಾಯಕ ನರೇಶ್ ಪಟೇಲ್ ಅವರನ್ನು ಕಣಕ್ಕಿಳಿಸುವ ಕಾಂಗ್ರೆಸ್ ಯೋಜನೆ ಬಗ್ಗೆ ಅವರು ಅಸಮಾಧಾನಗೊಂಡಿದ್ದಾರೆ ಎಂದು ವರದಿಗಳು ಹೇಳಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...