Homeಕರ್ನಾಟಕಬಿಜೆಪಿ ಯಡಿಯೂರಪ್ಪರನ್ನು ಬೆದರಿಕೆಯೊಡ್ಡಿ ರಾಜೀನಾಮೆ ಕೊಡಿಸಿದೆ: ಕಾಂಗ್ರೆಸ್

ಬಿಜೆಪಿ ಯಡಿಯೂರಪ್ಪರನ್ನು ಬೆದರಿಕೆಯೊಡ್ಡಿ ರಾಜೀನಾಮೆ ಕೊಡಿಸಿದೆ: ಕಾಂಗ್ರೆಸ್

- Advertisement -
- Advertisement -

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಐಟಿ, ಈಡಿ, ಸಿಬಿಐಗಳ ಬೆದರಿಕೆಯೊಡ್ಡಿ ರಾಜೀನಾಮೆ ನೀಡುವಂತೆ ಬಿಜೆಪಿ ಮಾಡಿದೆ ಎಂದು ಕಾಂಗ್ರೆಸ್‌ ಭಾನುವಾರ ಹೇಳಿದೆ. ಅಷ್ಟೇ ಅಲ್ಲದೆ ಯಡಿಯೂರಪ್ಪ ಅವರ ಪುತ್ರ ವಿಜೆಯೇಂದ್ರ ಅವರನ್ನು ಜೈಲಿಗೆ ಕಳುಹಿಸುತ್ತೇವೆ ಎಂದೂ ಬಿಜೆಪಿ ಬೆದರಿಸಲಾಗಿದೆ ಎಂದು ಅದು ಆರೋಪಿಸಿದೆ.

ಕಾಂಗ್ರೆಸ್‌ ಪಕ್ಷ ತನ್ನ ಅಧೀಕೃತ ಟ್ವಿಟರ್‌ ಖಾತೆಯಲ್ಲಿ, “ಬಿಜೆಪಿಯು ಯಡಿಯೂರಪ್ಪ ಅವರನ್ನು ಐಟಿ, ಈಡಿ, ಸಿಬಿಐಗಳ ಬೆದರಿಕೆಯೊಡ್ಡಿ ರಾಜೀನಾಮೆ ಕೊಡಿಸಿದೆ. ಅಷ್ಟೇ ಅಲ್ಲದೆ ಪುತ್ರ ವಿಜಯೇಂದ್ರ ಅವರನ್ನು ಕೂಡಾ ಜೈಲಿಗೆ ಕಳಿಸುತ್ತೇವೆ ಎಂದೂ ಬಿಜೆಪಿ ಬೆದರಿಸಿದೆ” ಎಂದು ಹೇಳಿದೆ.

ಇದನ್ನೂ ಓದಿ: ದವಳಗಿರಿಯೇ ಈಗ ಬಿಜೆಪಿ ಹೈಕಮಾಂಡ್! ಎಂದು ವ್ಯಂಗ್ಯವಾಡಿದ ಕಾಂಗ್ರೆಸ್

“ಕಣ್ಣೀರಿಟ್ಟ ಯಡಿಯೂರಪ್ಪ ಅವರೂ ಸಹ ರಾಜ್ಯದಲ್ಲಿ ಬಿಜೆಪಿಯನ್ನು ನಿರ್ನಾಮ ಮಾಡುವ ಬೆದರಿಕೆಯೊಡ್ಡಿ ಹೈಕಮಾಂಡ್‌ನ್ನು ಮಣಿಸಿದ್ದಾರೆ ಎಂಬ ಸುದ್ದಿ ಇದೆ” ಎಂದು ಕಾಂಗ್ರೆಸ್‌ ತಿಳಿಸಿದೆ.

ಈ ಮಧ್ಯೆ ಇಂದಿರಾ ಕ್ಯಾಂಟಿನ್ ಹೆಸರನ್ನು ಬದಲಾಯಿಸುವ ಬಗ್ಗೆ ಬಿಜೆಪಿಯ ಹೇಳಿಕೆ ನೀಡುತ್ತಿದೆ. ಈ ಹೇಳಿಕೆಗೆ ಧ್ವನಿಗೂಡಿಸಿರುವ ಮಾಜಿ ಕಾಂಗ್ರೆಸ್ ಶಾಸಕ, ಪ್ರಸ್ತುತ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿರುವ ಸುಧಾಕರ್‌ ಅವರು, “ಇಂದಿರಾ ಕ್ಯಾಂಟೀನ್‌‌ಗೆ ಅನ್ನಪೂರ್ಣೇಶ್ವರಿ ಎಂದು ಹೆಸರಿಟ್ಟರೆ ತಪ್ಪೇನು” ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌, “ಇಂದಿರಾ ಕ್ಯಾಂಟೀನ್‌ಗೆ ಅನ್ನಪೂರ್ಣೇಶ್ವರಿ ಹೆಸರಿಟ್ಟರೆ ತಪ್ಪೇನು ಎಂದು ಕೇಳಿದ ಸುಧಾಕರ್‌ ಅವರೇ, ಇಂದಿರಾ ಕ್ಯಾಂಟೀನ್ ಪ್ರಾರಂಭವಾಗುವಾಗ ತಾವು ಕಾಂಗ್ರೆಸ್‌ನಲ್ಲಿಯೇ ಇದ್ದಿರಿ, ಆಗ ತಾವೇಕೆ ಈ ಪ್ರಶ್ನೆ ಕೇಳಲಿಲ್ಲ?” ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

“ಗೋಸುಂಬೆಗಳು ವೇಗವಾಗಿ ಬಣ್ಣ ಬದಲಿಸುತ್ತವೆ, ತಾವು ಅದಕ್ಕಿಂತಲೂ ಅತಿ ವೇಗವಾಗಿ ಬಣ್ಣ ಬದಲಿಸುತ್ತೀರಿ ಅಲ್ಲವೇ ಸುಧಾಕರ್‌” ಎಂದು ವ್ಯಂಗ್ಯವಾಡಿದೆ.

ಇದನ್ನೂ ಓದಿ: ಕುಟುಂಬ ರಾಜಕಾರಣ ಪೋಷಿಸುತ್ತ ಇತರರ ಕಡೆ ಕಲ್ಲು‌ ಎಸೆಯುವ ಬಿಜೆಪಿ : ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...