Homeಕರ್ನಾಟಕಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ದೇವೇಗೌಡರನ್ನು ಆಹ್ವಾನಿಸದೆ ಅವಮಾನಿಸಿದ ಬಿಜೆಪಿ: ಜೆಡಿಎಸ್ ಆಕ್ರೋಶ

ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ದೇವೇಗೌಡರನ್ನು ಆಹ್ವಾನಿಸದೆ ಅವಮಾನಿಸಿದ ಬಿಜೆಪಿ: ಜೆಡಿಎಸ್ ಆಕ್ರೋಶ

“ಕೆಂಪೇಗೌಡರು ಬಿಜೆಪಿಯ ಆಸ್ತಿಯಲ್ಲ, ಕೆಲ ಸಚಿವರ ಜಹಗೀರಲ್ಲ, ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುವ ವಿಷಯವೂ ಅಲ್ಲ” ಎಂದು ಜೆಡಿಎಸ್‌ ಹರಿಹಾಯ್ದಿದೆ

- Advertisement -
- Advertisement -

ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಎಚ್‌.ಡಿ.ದೇವೇಗೌಡ ಅವರನ್ನು ಆಹ್ವಾನಿಸಿಲ್ಲದಿರುವುದು ಟೀಕೆಗೆ ಗುರಿಯಾಗಿದೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಜಾ.ದಳ (ಜೆಡಿಎಸ್‌), ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದೆ. “ಕೆಂಪೇಗೌಡರು ಬಿಜೆಪಿಯ ಆಸ್ತಿಯಲ್ಲ, ಕೆಲ ಸಚಿವರ ಜಹಗೀರಲ್ಲ, ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುವ ವಿಷಯವೂ ಅಲ್ಲ” ಎಂದು ಹರಿಹಾಯ್ದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾಡಪ್ರಭು ಕೆಂಪೇಗೌಡರ ನಂತರ ಬೆಂಗಳೂರು ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ, ಕನ್ನಡ ನೆಲದಿಂದ ಪ್ರಧಾನಿ ಆಗಿದ್ದ ಏಕೈಕ ಕನ್ನಡಿಗರಾದ ಎಚ್‌.ಡಿ.ದೇವೇಗೌಡ ಅವರನ್ನು ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯ ಬಿಜೆಪಿ ಸರಕಾರವು ಆಹ್ವಾನ ಮಾಡದಿರುವುದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ” ಎಂದು ಜೆಡಿಎಸ್ ಆಕ್ರೋಶ ಹೊರಹಾಕಿದೆ.

“ನಾಡಪ್ರಭುಗಳ ಪ್ರತಿಮೆ ಸ್ಥಾಪನೆಯ ಕಾಮಗಾರಿಗೆ ಅಡಿಗಲ್ಲು ಹಾಕುವ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿಗಳನ್ನು ಆಹ್ವಾನಿಸಿದ ಬಿಜೆಪಿ ಸರಕಾರ, ಅದೇ ಪ್ರಧಾನಿಗಳಿಂದ ಪ್ರತಿಮೆ ಲೋಕಾರ್ಪಣೆ ಮಾಡಿಸುವ ಸಮಾರಂಭಕ್ಕೆ ಅವರನ್ನು ಆಹ್ವಾನ ಮಾಡಲಿಲ್ಲ, ಯಾಕೆ?” ಎಂದು ಪ್ರಶ್ನಿಸಿದೆ.

“ಯಾವುದೋ ಸ್ಥಳೀಯ ಮಟ್ಟದ ಕಾರ್ಯಕ್ರಮ ಆಗಿದ್ದಿದ್ದರೆ ಯಾರೂ ಪ್ರಶ್ನೆ ಮಾಡುತ್ತಿರಲಿಲ್ಲ. ಆದರೆ, ನಾಡಪ್ರಭುಗಳ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಪ್ರಧಾನಿಗಳೇ ಬರುತ್ತಾರೆ ಎಂದರೆ, ನಮ್ಮ ಹೆಮ್ಮೆಯ ಮಾಜಿ ಪ್ರಧಾನಿಗಳನ್ನು ಅಧಿಕೃತವಾಗಿ ಕರೆಯಲೇಬೇಕಿತ್ತು. ಅವರ ಬಗ್ಗೆ ಅನಾದರ ತೋರಿದ್ದು ಕನ್ನಡಿಗರಿಗೆ ಅಪಾರ ನೋವುಂಟು ಮಾಡಿದೆ‘” ಎಂದು ಬೇಸರ ವ್ಯಕ್ತಪಡಿಸಿದೆ.

“ರಾಜ್ಯ ಬಿಜೆಪಿ ಸರಕಾರ, ಬಿಜೆಪಿ ನಾಯಕರು ರಾಜಕೀಯ ಕಾರಣಕ್ಕಾಗಿ ಮಾಜಿ ಪ್ರಧಾನಿಗಳನ್ನು ಕಡೆಗಣಿಸಿದ್ದಾರೆ ಎನ್ನುವುದು ಎಲ್ಲರ ಭಾವನೆ. ಇದನ್ನು ಬಿಜೆಪಿ ಪಕ್ಷದ ಕಾರ್ಯಕ್ರಮದಂತೆ ನಡೆಸಿದ್ದು ಮಾಜಿ ಪ್ರಧಾನಿಗಳಿಗೆ ಮಾತ್ರವಲ್ಲ, ಸಮಸ್ತ ಕನ್ನಡಿಗರು ಹಾಗೂ ಸ್ವತಃ ನಾಡಪ್ರಭುಗಳಿಗೇ ಮಾಡಿದ ಅಪಮಾನ. ಇದು ಅಕ್ಷಮ್ಯದ ಪರಮಾವಧಿ” ಎಂದು ಅಭಿಪ್ರಾಯಪಟ್ಟಿದೆ.

“ಸರ್ವಜನರನ್ನು ಸಮಾನವಾಗಿ ಕಂಡು ಆದರ್ಶ ಪ್ರಭುವಾಗಿದ್ದ ನಾಡಪ್ರಭು ಕೆಂಪೇಗೌಡರನ್ನು ರಾಜಕೀಯಕ್ಕೆ ಎಳೆಯುವ ಕೆಲಸವನ್ನು ಸ್ವತಃ ಪ್ರಧಾನಿ ನರೇಂದ್ರಮೋದಿ ಅವರೇ ಮಾಡಿರುವುದು ಸ್ಪಷ್ಟ. ಇದು ಅತ್ಯಂತ ದುರದೃಷ್ಟಕರ. ರಾಜ್ಯ ವಿಧಾನಸಭೆ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡೇ ಪ್ರತಿಮೆ ಅನಾವರಣ ಮಾಡಲಾಗಿದೆ ಎನ್ನುವುದು ಸತ್ಯ” ಎಂದು ಎಚ್ಚರಿಸಿದೆ.

ಇದನ್ನೂ ಓದಿರಿ: ಕ್ರೈಸ್ತ- ಮುಸ್ಲಿಂ ದಲಿತರಿಗೆ ಪರಿಶಿಷ್ಟ ಜಾತಿ ಸ್ಥಾನಮಾನ ನೀಡಲಾಗದು: ಒಕ್ಕೂಟ ಸರ್ಕಾರ

“ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯ ಸರಕಾರ ಹಾಗೂ ಬಿಜೆಪಿ ನಾಯಕರು ದಾರಿ ತಪ್ಪಿಸಿದ್ದಾರೆ ಎನ್ನುವುದರಲ್ಲಿ ಸಂಶಯ ಇಲ್ಲ. ಮಾನ್ಯ ದೇವೇಗೌಡರ ಬಗ್ಗೆ ಅತೀವ ಗೌರವ ಇಟ್ಟುಕೊಂಡಿರುವ ಪ್ರಧಾನಿಗಳ ಬಗ್ಗೆಯೇ ಕನ್ನಡಿಗರಲ್ಲಿ ತಪ್ಪು ಅಭಿಪ್ರಾಯ ಮೂಡುವಂತೆ ರಾಜ್ಯ ಬಿಜೆಪಿ ಸರಕಾರ ಮತ್ತು ಬಿಜೆಪಿ ನಾಯಕರು ವರ್ತಿಸಿದ್ದಾರೆ” ಎಂದು ಟೀಕಿಸಿದೆ.

“ಕೆಂಪೇಗೌಡರು ಬಿಜೆಪಿಯ ಆಸ್ತಿಯಲ್ಲ, ಕೆಲ ಸಚಿವರ ಜಹಗೀರಲ್ಲ, ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುವ ವಿಷಯವೂ ಅಲ್ಲ. ನಾಡಪ್ರಭುಗಳು ಸಮಸ್ತ ಕನ್ನಡಿಗರ ಹೆಮ್ಮೆ. ನಮ್ಮೆಲ್ಲರ ಅರಾಧ್ಯದೈವ. ಇನ್ನು, ಬೆಂಗಳೂರು ನಗರ ನಮ್ಮೆಲ್ಲರದ್ದು. ಸಮಸ್ತ ಕನ್ನಡಿಗರ ಜೀವನಾಡಿ. ಈ ಸೂಕ್ಷ್ಮವನ್ನು ರಾಜ್ಯ ಬಿಜೆಪಿ ಸರಕಾರ ಮರೆತು ಕನ್ನಡಿಗರನ್ನು ಅಪಮಾನಿಸಿದೆ” ಎಂದು ಟೀಕಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೋದಿ ಬರುವಾಗ ಎಷ್ಟೊಂದು ವಿಜೃಂಭಣೆಯಿಂದ ಅಲಂಕಾರ ಮಾಡಿದ್ದಾರೆ ನೋಡಿ ನೆಲಕ್ಕೆ ಕೆಂಪು ಕೆಂಪು ಕೆಂಪು ಕೆಂಪು ಕಾರ್ಪೆಟ್ ಹಾಸಿ ಹೇಗೆ ಅಲಂಕಾರಿಸಿದ್ದಾರೆ ನೋಡಿ ಆದರೆ ಅಲ್ಲಿ ಇದ್ದವರ ಜನರನ್ನು ಐಡೆಂಟಿ ಮಾಡಿ ಉನ್ನತ ವರ್ಗದವರು ಮಾತ್ರ ಕಾಣಿಸ್ತಿದ್ರು, ಹೆಚ್ಚಾಗಿ ಶೂದ್ರನೂ ದಲಿತನು ಗೌಡನು ಕಾಣಿಸಿಲ್ಲ ಅಥವಾ ಮಾಧ್ಯಮದವರು ತೋರಿಸುವುದೇ ಹಾಗೆಯೋ ಏನೋ ಗೊತ್ತಿಲ್ಲ ಆದರೆ ಅದಕ್ಕೆ ಸಾಕ್ಷಿಯಾಗಿ ನಿಜವಾಗಿ ಸನ್ಮಾನ್ಯ ದೇವೇಗೌಡರನ್ನು ಕರೆಯಲೇಬೇಕಿತ್ತು, ಕರಿಲಿಲ್ಲ ಅಂತಾರೆ ನಿಜವೋ ಗೊತ್ತಿಲ್ಲ, ಕೆಂಪೇಗೌಡರ ಪ್ರತಿಮೆಯನ್ನು ಅನಾವರಣಗೊಳಿಸುವವಾಗ ಹಿರಿಯ ತಲೆಯ ವ್ಯಕ್ತಿಯನ್ನ( ದೇವೇಗೌಡರು ) ಕರೆಯದೆ ಇದ್ದದ್ದು ಸರಕಾರದ ಕೋಮುವಾದಿತನವನ್ನು ತೋರಿಸುತ್ತದೆ .

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...