Homeಮುಖಪುಟಬಿಜೆಪಿ ಹರಿಯಾಣದಲ್ಲಿ 'ನಿರುದ್ಯೋಗ ರೋಗ' ಹರಡಿದೆ | ರಾಹುಲ್ ಗಾಂಧಿ

ಬಿಜೆಪಿ ಹರಿಯಾಣದಲ್ಲಿ ‘ನಿರುದ್ಯೋಗ ರೋಗ’ ಹರಡಿದೆ | ರಾಹುಲ್ ಗಾಂಧಿ

- Advertisement -
- Advertisement -

ಬಿಜೆಪಿ ಹರಡುವ ನಿರುದ್ಯೋಗದ ರೋಗವು ಹರಿಯಾಣದ ಭದ್ರತೆ ಮತ್ತು ಯುವಕರ ಭವಿಷ್ಯವನ್ನು “ತೀವ್ರವಾಗಿ ಅಪಾಯ” ದಲ್ಲಿ ಸಿಲುಕಿಸಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶುಕ್ರವಾರ ಆರೋಪಿಸಿದ್ದಾರೆ. ರಾಜ್ಯದಲ್ಲಿ ಅಧಿಕಾರ ಹಿಡಿದರೆ ಕಾಂಗ್ರೆಸ್ ಸರ್ಕಾರವು ಯುವಕರಿಗೆ ಉದ್ಯೋಗವನ್ನು ಹಿಂದಿರುಗಿಸುತ್ತದೆ ಎಂದು ಪ್ರತಿಪಾದಿಸಿದ ಅವರು, ಪ್ರತಿ ಕುಟುಂಬವು ರಾಜ್ಯದಲ್ಲಿ ಸಮೃದ್ಧವಾಗಲಿದೆ ಎಂದು ಹೇಳಿದ್ದಾರೆ.ಬಿಜೆಪಿ ಹರಿಯಾಣದಲ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ತಮ್ಮ ಇತ್ತೀಚಿನ ವಿಜಯ ಸಂಕಲ್ಪ ಯಾತ್ರೆಯ ಸಂದರ್ಭದ ಮಹಿಳೆಯರ ಗುಂಪಿನೊಂದಿಗೆ ನಡೆಸಿದ ಸಂವಾದದ ವೀಡಿಯೊವನ್ನು ಎಕ್ಸ್‌ನಲ್ಲಿ ರಾಹುಲ್ ಗಾಂಧಿಯವರು ಹಂಚಿಕೊಂಡಿದ್ದಾರೆ. ವೀಡಿಯೊ ಜೊತೆಗೆ ತಮ್ಮ ಪೋಸ್ಟ್‌ನಲ್ಲಿ, “ಬಿಜೆಪಿ ಹರಡುವ ನಿರುದ್ಯೋಗ ರೋಗವು ಹರಿಯಾಣದ ಬೇರುಗಳನ್ನು, ಯುವಕರ ಭವಿಷ್ಯ ಮತ್ತು ರಾಜ್ಯದ ಭದ್ರತೆಯನ್ನು ತೀವ್ರವಾಗಿ ಅಪಾಯದಲ್ಲಿ ಸಿಲುಕಿಸಿದೆ” ಎಂದು ಹೇಳಿದ್ದಾರೆ.

“ಹರಿಯಾಣದ ಕೆಲವು ಸಹೋದರಿಯರು ವಿಜಯ್ ಸಂಕಲ್ಪ ಯಾತ್ರೆಯ ಸಮಯದಲ್ಲಿ ನಮಗೆ ಆಶ್ರಯ ನೀಡಿದರು. ಮನೆಯ ರೊಟ್ಟಿಗಳನ್ನು ಬಹಳ ಪ್ರೀತಿಯಿಂದ ತಿನ್ನಿಸಿದರು ಮತ್ತು ರಾಜ್ಯದ ಸಂಕೀರ್ಣ ಸಮಸ್ಯೆಗಳನ್ನು ವಿವರಿಸಿದರು” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಭಾರತದಲ್ಲಿ ಅತಿ ಹೆಚ್ಚು ನಿರುದ್ಯೋಗವನ್ನು ಹೊಂದಿರುವ ರಾಜ್ಯವಾಗಿ ಹರಿಯಾಣ ಹೊರಹೊಮ್ಮಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಒಳ ಮೀಸಲಾತಿ ತೀರ್ಪು ಮರುಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

”ಕಳೆದ ಒಂದು ದಶಕದಲ್ಲಿ ರಾಜ್ಯದ ಯುವಕರಿಗೆ ಉದ್ಯೋಗ ನೀಡುವ ಪ್ರತಿಯೊಂದು ವ್ಯವಸ್ಥೆಯ ಬೆನ್ನೆಲುಬನ್ನು ಬಿಜೆಪಿ ಮುರಿದಿದೆ” ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ದೋಷಪೂರಿತ ಜಿಎಸ್‌ಟಿ ಮತ್ತು ನೋಟು ಅಮಾನ್ಯೀಕರಣದ ಮೂಲಕ ಬಿಜೆಪಿ ಸಣ್ಣ ಉದ್ಯಮಗಳ ಬೆನ್ನು ಮುರಿದಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. ಜೊತೆಗೆ ಅಗ್ನಿವೀರ್‌ ತಂದು ಸೇನೆಗೆ ತಯಾರಿ ನಡೆಸುತ್ತಿರುವ ಯುವಕರ ಉತ್ಸಾಹವನ್ನು ಕೂಡಾ ಬಿಜೆಪಿ ಮುರಿದಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಬಿಜೆಪಿ ಹರಿಯಾಣದಲ್ಲಿ

ಕರಾಳ ಕಾನೂನುಗಳ ಮೂಲಕ ಕೃಷಿ ವ್ಯಾಪಾರ ಮಾಡುವವರ ಧೈರ್ಯವನ್ನು ಬಿಜೆಪಿ ಮುರಿದಿದೆ. ಬೆಂಬಲವನ್ನು ಕಸಿದುಕೊಳ್ಳುವ ಮೂಲಕ ಕ್ರೀಡಾಪಟುಗಳ ಕನಸುಗಳನ್ನು ಮುರಿದಿದೆ. ‘ಪರಿವಾರ ಪೆಹಚಾನ್ ಪತ್ರ’ದೊಂದಿಗೆ ಸರ್ಕಾರಿ ನೇಮಕಾತಿಯನ್ನು ನಿಲ್ಲಿಸುವ ಮೂಲಕ ಕುಟುಂಬಗಳನ್ನು ಒಡೆಯುವಂತೆ ಮಾಡಿದೆ ಎಂದು ರಾಹುಲ್‌ ಗಾಂಧಿ ಆರೋಪಿಸಿದ್ದಾರೆ.

“ಬಿಜೆಪಿಯ ಕೃತ್ಯದ ಪರಿಣಾಮ, ಯುವ ಪ್ರತಿಭೆಗಳು ಮಾದಕ ದ್ರವ್ಯಗಳ ಹಿಡಿತದಲ್ಲಿ ವ್ಯರ್ಥವಾಗುತ್ತಿವೆ. ನಿರಾಶೆಗೊಂಡ ಯುವಕರು ಅಪರಾಧದ ಹಾದಿ ಹಿಡಿಯುತ್ತಿದ್ದಾರೆ. ಡಂಕಿಯಂತಹ ಅಪಾಯಗಳ ಪ್ರಯಾಣದಿಂದ ಕುಟುಂಬಗಳು ನಾಶವಾಗುತ್ತಿವೆ” ಎಂದು ಅವರು ಹೇಳಿದ್ದಾರೆ. ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಕಾಂಗ್ರೆಸ್ ಸರ್ಕಾರ 2 ಲಕ್ಷ ಖಾಯಂ ಉದ್ಯೋಗಗಳನ್ನು ನೇಮಕ ಮಾಡಿ ಹರಿಯಾಣವನ್ನು ಮಾದಕ ದ್ರವ್ಯ ಮುಕ್ತವನ್ನಾಗಿ ಮಾಡಲಿದೆ ಎಂದು ಅವರು ಭರವಸೆ ನೀಡಿದ್ದಾರೆ.

ವಿಡಿಯೊ ನೋಡಿ: ‘ಅಂಬೇಡ್ಕರ್ ರಚಿಸಲಿದ್ದ ಸಂವಿಧಾನವನ್ನು ಗುರಿಯಾಗಿಸಿಕೊಂಡಿದ್ದವರ ಮೊದಲ ಗುಂಡು ಬಿದ್ದಿದ್ದು ಗಾಂಧಿ ಎದೆಗೆ’: ಎ ನಾರಾಯಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...