Homeಕರ್ನಾಟಕವಿಪಕ್ಷ ನಾಯಕರನ್ನು ಆಯ್ಕೆ ಮಾಡದ ಶೋಚನಿಯ ಸ್ಥಿತಿಯಲ್ಲಿ ಬಿಜೆಪಿ: ಜಗದೀಶ್ ಶೆಟ್ಟರ್

ವಿಪಕ್ಷ ನಾಯಕರನ್ನು ಆಯ್ಕೆ ಮಾಡದ ಶೋಚನಿಯ ಸ್ಥಿತಿಯಲ್ಲಿ ಬಿಜೆಪಿ: ಜಗದೀಶ್ ಶೆಟ್ಟರ್

- Advertisement -
- Advertisement -

ವಿಪಕ್ಷ ನಾಯಕರನ್ನು ಆಯ್ಕೆ ಮಾಡದ ಶೋಚನಿಯ ಪರಿಸ್ಥಿತಿ ಬಿಜೆಪಿಗೆ ಬಂದಿದೆ. ಇದನ್ನು ಜನ ಅರ್ಥ ಮಾಡಿಕೊಳ್ಳಬೇಕು. ಒಂದು ರಾಷ್ಟ್ರೀಯ ಪಕ್ಷದ ವೈಫಲ್ಯಕ್ಕೆ ರಾಜ್ಯ ಬಿಜೆಪಿ ಸ್ಪಷ್ಟ ಉದಾಹರಣೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಈ ಕುರಿತು ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬರೀ‌ ಹೆಸರು ಕೇಳಿ ಬರುತ್ತಿದ್ದು, ಯಾರು ಅಧ್ಯಕ್ಷರು ಎನ್ನುವುದು ಬಹಿರಂಗವಾಗಿ ಹೇಳುತ್ತಿಲ್ಲ. ದೆಹಲಿ ವರಿಷ್ಠರು ಒಂದು ಹೆಸರು ತೇಲಿಬಿಟ್ಟರು ಅದರ ಪ್ರತಿಕ್ರಿಯೆಗಳನ್ನು ನೋಡಿ ಅದು ಫೇಲ್ ಆಯಿತು. ಹಾಗಾಗಿ ಈಗ ಮತ್ತೆ ಬೇರೆ ಹೆಸರಿನ ಪ್ರಯೋಗ ಮಾಡುತ್ತಿದ್ದಾರೆ. ಆದರೆ ಈ ಬಗ್ಗೆ ಶೋಭಾ ಕರಂದ್ಲಾಜೆ ಊಹಾಪೋಹ ಅಂತ ಹೇಳಿದ್ದಾರೆ. ರಾಜ್ಯಧ್ಯಕ್ಷರನ್ನು, ವಿಪಕ್ಷ ನಾಯಕರನ್ನು ಆಯ್ಕೆ ಮಾಡದ ಶೋಚನಿಯ ಪರಿಸ್ಥಿತಿ ಬಿಜೆಪಿಗೆ ಬಂದಿದೆ. ಇದನ್ನು ಜನ ಅರ್ಥ ಮಾಡಿಕೊಳ್ಳಬೇಕು” ಎಂದರು

”ಕಾಂಗ್ರೆಸ್ ಸರ್ಕಾರಕ್ಕೆ ಏನು ಆಗುವುದಿಲ್ಲ. ಪಕ್ಷ ಬಿಟ್ಟು ಹೋಗುತ್ತಿರುವ ನಾಯಕರನ್ನು, ಕಾರ್ಯಕರ್ತರನ್ನು ಹಿಡಿದಿಟ್ಟುಕೊಳ್ಳುವ ಪ್ರಯತ್ನದ ಭಾಗವಾಗಿ, ಸಂಕ್ರಾಂತಿ ನಂತರ ಅಲ್ಲೋಲ ಕಲ್ಲೋಲ ಆಗುತ್ತೆ ಎಂದು ಹೇಳುತ್ತಾ ಅವರಲ್ಲಿ ಆಶಾಭಾವನೆ ಮೂಡಿಸಸುವ ಪ್ರಯತ್ನ ಬಿಜೆಪಿ ನಾಯಕರು ಮಾಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಗಟ್ಟಿಮುಟ್ಟಾಗಿ ಐದು ವರ್ಷ ಇರುತ್ತದೆ. 104 ಇದ್ದಾಗಾಲೇ ಏನು ಮಾಡಲು ಆಗಿಲ್ಲ ಈಗ ಏನು ಮಾಡಲು ಸಾಧ್ಯ? ಎಂದು ಶೆಟ್ಟರ್ ಸವಾಲು ಹಾಕಿದ್ದಾರೆ.

ಡಿಕೆಶಿ-ಹೆಚ್‌ಡಿಕೆ ನಡುವಿನ ಕಿತ್ತಾಡದ ಕುರಿತು ಪ್ರತಿಕ್ರಿಯಿಸಿದ ಶೆಟ್ಟರ್, ”ಬೆಂಗಳೂರು ಸಾಕಷ್ಟು ಬೆಳವಣಿಗೆ ಆಗಿದೆ. ನೂರಾರು ಹಳ್ಳಿಗಳು ಬೆಂಗಳೂರಿಗೆ ಸೇರುತ್ತಿವೆ. ಇದಕ್ಕೆ ಕನಕಪುರ ಹೊರತಾಗಿಲ್ಲ. ಕನಕಪುರ ಬೆಂಗಳೂರು ಗ್ರಾಮೀಣದ ಒಂದು ಭಾಗ. ಸಹಜವಾಗಿ ಕನಕಪುರ ಬೆಂಗಳೂರು ನಗರಕ್ಕೆ ಸೇರಿದೆ ಎನ್ನುವುದರಲ್ಲಿ ಆಶ್ಚರ್ಯಪಡುವಂತಹ ವಿಚಾರ ಏನಿದೆ. ಇದಕ್ಕೆ ವಿಶೇಷ ಕಾಮೆಂಟ್ ಮಾಡುವ ಅವಶ್ಯಕತೆ ಇಲ್ಲ. ಡಿಕೆಶಿ ಕನಕಪುರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಾತನಾಡಿದ್ದಾರೆ ಹೊರತು ಜಿಲ್ಲೆಯ ಬಗ್ಗೆ ಹೇಳಿಲ್ಲ” ಎಂದರು.

”ಡಿಕೆಶಿ ತಮ್ಮ ಕ್ಷೇತ್ರದ ಬಗ್ಗೆ ಮಾತನಾಡಿದ್ದಾರೆ. ಈ ಮೂಲಕ ಅವರು ಅಭಿವೃದ್ಧಿಗೆ ಒತ್ತು ನೀಡುವ ಕಾರ್ಯ ಮಾಡುತ್ತಿದ್ದಾರೆ. ಆದರೆ ಎಲ್ಲವನ್ನೂ ರಾಜಕೀಯ ಮಾಡಲಾಗುತ್ತಿದೆ. ಇದನ್ನು ಬಿಟ್ಟು ಇಡೀ ವ್ಯವಸ್ಥೆಗೆ ಅನುಕೂಲ ಆಗುವುದನ್ನು ನೋಡಬೇಕು” ಎಂದು ಹೇಳಿದರು.

”ಕುಮಾರಸ್ವಾಮಿ ಏನೇ ಟಿಕೆ ಮಾಡಿದರು ಅದಕ್ಕೆ ಪುರಾವೆ ಇರಬೇಕು. ಜಾರ್ಜ್ ಮನೆಯಲ್ಲಿ ಸಿದ್ದರಾಮಯ್ಯ ಏನು ಮಾಡಿದರು ಅಂತ ಪ್ರಶ್ನೆ ಮಾಡಿದರೆ, ಅದು ಪ್ರಶ್ನೆಯಾಗಿಯೇ ಉಳಿಯಲಿದೆ. ಪೆನ್ ಡ್ರೈವ್ ವಿಚಾರದಲ್ಲಿಯೂ‌ ಇದೆ ಆಯಿತು. ಟೀಕೆ ಮಾಡುವ ಸಲುವಾಗಿ ಟ್ವೀಟ್ ಮಾಡಿದರೆ ಅದರಿಂದ ಏನು ಉಪಯೋಗ ಆಗುವುದಿಲ್ಲ. ಮಾಧ್ಯಮದಲ್ಲಿ ಚರ್ಚೆ ಆಗುತ್ತೆ ಹೊರೆತು ವಾಸ್ತವವಾಗಿ ಏನು ಗೊತ್ತಾಗುವುದಿಲ್ಲ” ಎಂದು ಹೇಳಿದರು.

ಇದನ್ನೂ ಓದಿ: ದೇವಾಲಯದ ಆವರಣದಲ್ಲಿ RSS ಚಟುವಟಿಕೆಗೆ ನಿಷೇಧ: ಕೇರಳ ಸರ್ಕಾರದ ಸುತ್ತೋಲೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಂಡ್ಯ | ಹೆಣ್ಣು ಭ್ರೂಣ ಹತ್ಯೆ ಪ್ರಕರಣ : ಮತ್ತೆ ಮೂವರ ಬಂಧನ

0
ಮಂಡ್ಯ ಜಿಲ್ಲೆಯ ಪಾಂಡವಪುರ, ಬೆಳ್ಳೂರು, ಮೇಲುಕೋಟೆ ಪೊಲೀಸ್ ಠಾಣೆಗಳಲ್ಲಿ ದಾಖಲಾದ ಭ್ರೂಣ ಪತ್ತೆ ಮತ್ತು ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ರಾಮಕೃಷ್ಣ ಅಲಿಯಾಸ್...