Homeಮುಖಪುಟಕಿಚ್ಚು ಹಚ್ಚಿದ ಅಮಿತ್ ಶಾ ಹೇಳಿಕೆ | ಸಂಸತ್‌ ಬಳಿ ಭಾರೀ ಪ್ರತಿಭಟನೆ ; ಇಂಡಿಯಾ-ಬಿಜೆಪಿ...

ಕಿಚ್ಚು ಹಚ್ಚಿದ ಅಮಿತ್ ಶಾ ಹೇಳಿಕೆ | ಸಂಸತ್‌ ಬಳಿ ಭಾರೀ ಪ್ರತಿಭಟನೆ ; ಇಂಡಿಯಾ-ಬಿಜೆಪಿ ಮುಖಾಮುಖಿ

- Advertisement -
- Advertisement -

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ನೀಡಿರುವ ಹೇಳಿಕೆ ಖಂಡಿಸಿ ಕಾಂಗ್ರೆಸ್ ನೇತೃತ್ವದಲ್ಲಿ ಇಂಡಿಯಾ ಮೈತ್ರಿಕೂಟದ ನಾಯಕರು ಇಂದು (ಡಿ.19) ಸಂಸತ್‌ ಬಳಿ ಪ್ರತಿಭಟನೆ ನಡೆಸಿದರು.

ಕೈಯಲ್ಲಿ ಅಂಬೇಡ್ಕರ್ ಫೋಟೋ ಹಿಡಿದು ಸಂಸತ್‌ ಆವರಣದ ಅಂಬೇಡ್ಕರ್ ಪ್ರತಿಮೆ ಬಳಿಯಿಂದ ಮೆರವಣಿಗೆ ನಡೆಸಿದ ಇಂಡಿಯಾ ಮೈತ್ರಿಕೂಟದ ನಾಯಕರು, ಅಮಿತ್ ಶಾ ಅವರು ಕ್ಷಮೆ ಯಾಚಿಸುವಂತೆ ಮತ್ತು ರಾಜೀನಾಮೆ ನೀಡುವಂತೆ ಆಗ್ರಹಿಸಿದರು. ಈ ವೇಳೆ ಬಹುತೇಕರು ನೀಲಿ ಬಣ್ಣದ ವಸ್ತ್ರ ಧರಿಸಿದ್ದರು.

ಮೆರವಣಿಗೆ ಬಳಿಕ ಇಂಡಿಯಾ ನಾಯಕರು ಸಂಸತ್ತಿನ ಮಕರ ದ್ವಾರದ ಬಳಿ ಗೋಡೆ ಏರಿ ಅಮಿತ್ ಶಾ ಮತ್ತು ಕೇಂದ್ರದ ಎನ್‌ಡಿಎ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಸಂಸದರಿಂದ ಪ್ರತಿಭಟನೆ

ಇಂಡಿಯಾ ಮೈತ್ರಿಕೂಟದ ನಾಯಕರ ಪ್ರತಿಭಟನೆ ನಡುವೆ ಬಿಜೆಪಿ ಸಂಸದರು ಕೂಡ ಸಂಸತ್ತಿನ ಬಾಗಿಲ ಬಳಿ ಅಂಬೇಡ್ಕರ್‌ ಅವರಿಗೆ ಸಂಬಂಧಿಸಿದ ಪೋಟೋಗಳನ್ನು ಹಿಡಿದು ಪ್ರತಿಭಟಿಸಿದರು. ಕಳೆದ 60 ವರ್ಷಗಳಲ್ಲಿ ಕಾಂಗ್ರೆಸ್ ಅಂಬೇಡ್ಕರ್ ಅವರನ್ನು ಅವಮಾನಿಸಿದೆ ಎಂದು ಘೋಷಣೆಗಳನ್ನು ಕೂಗಿದರು.

ರಾಹುಲ್ ಗಾಂಧಿ ತಳ್ಳಿದ್ರೂ ಎಂದ ಬಿಜೆಪಿ ಸಂಸದ

ಸಂಸತ್ ಬಳಿ ಬಿಜೆಪಿ-ಕಾಂಗ್ರೆಸ್ ಸಂಸದರು ಮುಖಾಮುಖಿಯಾದಾಗ ರಾಹುಲ್ ಗಾಂಧಿ ನನ್ನನ್ನು ತಳ್ಳಿದ್ರು ಎಂದು ಬಿಜೆಪಿ ಸಂಸದ ಪ್ರತಾಪ್ ಚಂದ್ರ ಸಾರಂಗಿ ಆರೋಪಿಸಿದರು. ರಾಹುಲ್ ಗಾಂಧಿ ತಳ್ಳಿದ್ರಿಂದ ನಾನು ನೆಲಕ್ಕೆ ಬಿದ್ದೆ ಎಂದು ಸಾರಂಗಿ ಮಾಧ್ಯಮಗಳ ಮುಂದೆ ಹೇಳಿದ್ದಾರೆ. ತಳ್ಳಾಟ-ನೂಕಾಟದಿಂದ ಸಾರಂಗಿ ಅವರ ಎಡಗಣ್ಣಿನ ಕಣ್ಣಿನ ಬಳಿ ಗಾಯವಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಗಳು ಹೇಳಿವೆ.

ಆರೋಪ ತಳ್ಳಿ ಹಾಕಿದ ರಾಹುಲ್ ಗಾಂಧಿ
ಸಂಸದ ಪ್ರತಾಪ್ ಚಂದ್ರ ಸಾರಂಗಿ ಅವರನ್ನು ತಳ್ಳಿದ್ದಾರೆ ಎಂಬ ಆರೋಪವನ್ನು ರಾಹುಲ್ ಗಾಂಧಿ ಅಲ್ಲಗಳೆದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನಾನು ಸಂಸತ್ತಿನ ಒಳಗೆ ಹೋಗಲು ಪ್ರಯತ್ನಿಸುತ್ತಿದ್ದೆ. ಈ ವೇಳೆ ಬಿಜೆಪಿ ಸಂಸದರು ನನ್ನನ್ನು ತಡೆಯಲು ಪ್ರಯತ್ನಿಸಿದರು. ಇದು ಸಂಭವಿಸಿರುವುದು. ಇದು ಸಂಸತ್ ಭವನದ ಪ್ರವೇಶ ದ್ವಾರವಾಗಿದೆ. ಇಲ್ಲಿಂದ ಒಳಗೆ ಹೋಗಲು ನಮಗೆ ಹಕ್ಕಿದೆ” ಎಂದು ಸಂಸತ್‌ ಭವನದ ಬಾಗಿಲತ್ತ ಕೈ ತೋರಿಸಿದರು.

ಇದನ್ನೂ ಓದಿ : ಅಂಬೇಡ್ಕರ್‌ಗೆ ಅವಮಾನ | ಅಮಿತ್ ಶಾ ವಿರುದ್ಧ ಟಿಎಂಸಿಯಿಂದ ಹಕ್ಕುಚ್ಯುತಿ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...