Homeಮುಖಪುಟಬಿಜೆಪಿಯು ಮಹಾರಾಷ್ಟ್ರದ ರೈತರ ದೊಡ್ಡ ಶತ್ರುವಾಗಿದೆ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಬಿಜೆಪಿಯು ಮಹಾರಾಷ್ಟ್ರದ ರೈತರ ದೊಡ್ಡ ಶತ್ರುವಾಗಿದೆ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

“ಮಹಾರಾಷ್ಟ್ರದಲ್ಲಿ ಬಿಜೆಪಿ ರೈತರ ದೊಡ್ಡ ಶತ್ರು, ಡಬಲ್ ಇಂಜಿನ್ ಸರ್ಕಾರವನ್ನು ಅಧಿಕಾರದಿಂದ ತೆಗೆದುಹಾಕುವುದರಿಂದ ಮಾತ್ರ ರೈತರಿಗೆ ಲಾಭವಾಗುತ್ತದೆ” ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ ಪ್ರತಿಪಾದಿಸಿದರು.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಮಹಾರಾಷ್ಟ್ರದಲ್ಲಿ ರೈತರ ಆತ್ಮಹತ್ಯೆಗಳ ಬಗ್ಗೆ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. “ರಾಜ್ಯವನ್ನು ಬರ ಮುಕ್ತಗೊಳಿಸುವ ಭರವಸೆ ಜುಮ್ಲಾ (ವಾಕ್ಚಾತುರ್ಯ), ಬಿಜೆಪಿಯು ಮಹಾರಾಷ್ಟ್ರದ ರೈತರ ದೊಡ್ಡ ಶತ್ರುವಾಗಿದೆ. 20,000 ರೈತರು 20,000 ಕೋಟಿ ವಾಟರ್ ಗ್ರಿಡ್ ಭರವಸೆ ಸುಳ್ಳಾಗಿದೆ” ಎಂದು ಅವರು ಹೇಳಿದರು.

ವಿಮಾ ಕಂಪನಿಗಳಿಗೆ 8000 ಕೋಟಿ ರೂ.ಗಳ ಸುರಿಮಳೆಯಾಗುತ್ತಿರುವಾಗ ರೈತರಿಗೆ ಪರಿಹಾರ ನೀಡಲು ನಿರಾಕರಿಸಿರುವ ಬಿಜೆಪಿ ವಿರುದ್ಧ ಖರ್ಗೆ ವಾಗ್ದಾಳಿ ನಡೆಸಿದರು.

ರಫ್ತು ನಿಷೇಧ, ಈರುಳ್ಳಿ ಮತ್ತು ಸೋಯಾಬೀನ್ ರೈತರ ಮೇಲೆ ಹೆಚ್ಚಿನ ರಫ್ತು ಸುಂಕದ ಹೊರೆ; ಹತ್ತಿ ಮತ್ತು ಕಬ್ಬು ಉತ್ಪಾದನೆಯಲ್ಲಿ ಭಾರಿ ಕುಸಿತ, ರೈತರನ್ನು ಸಂಕಷ್ಟಕ್ಕೆ ತಳ್ಳುವ ಬಗ್ಗೆ ಅವರು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು.

ರಾಜ್ಯದ ಹಾಲು ಸಹಕಾರಿ ಸಂಘಗಳು ಬಿಕ್ಕಟ್ಟಿಗೆ ಸಿಲುಕಿದ್ದು, ಸರ್ಕಾರವೇ ಒಪ್ಪಿಕೊಂಡಿದೆ ಎಂದು ಖರ್ಗೆ ಕಿಡಿಕಾರಿದರು.

ಆಡಳಿತಾರೂಢ ಮಹಾಯುತಿ ಮೈತ್ರಿಕೂಟವು ಏಕನಾಥ್ ಶಿಂಧೆ ಅವರ ಶಿವಸೇನೆ, ಬಿಜೆಪಿ ಮತ್ತು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಯನ್ನು ಒಳಗೊಂಡಿದೆ.

ಆದರೆ, ವಿರೋಧ ಪಕ್ಷದ ಎಂವಿಎ ಕಾಂಗ್ರೆಸ್, ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಮತ್ತು ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಒಳಗೊಂಡಿದೆ.

ಮಹಾರಾಷ್ಟ್ರ ತನ್ನ 288 ಸದಸ್ಯರ ವಿಧಾನಸಭೆಯನ್ನು ಆಯ್ಕೆ ಮಾಡಲು ನವೆಂಬರ್ 20 ರಂದು ಒಂದು ಹಂತದಲ್ಲಿ ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗವು ಕಳೆದ ಮಂಗಳವಾರ ಘೋಷಿಸಿತು.

ಪ್ರಸ್ತುತ ಮಹಾರಾಷ್ಟ್ರ ವಿಧಾನಸಭೆಯು ತನ್ನ ಅವಧಿಯನ್ನು ಪೂರ್ಣಗೊಳಿಸುವ ಒಂದು ದಿನ ಮೊದಲು ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ; ತಮಿಳುನಾಡಿನಲ್ಲಿ ಹೇಗಾದರೂ ಹಿಂದಿ ಹೇರಲು ಅನೇಕರು ಪ್ರಯತ್ನಿಸುತ್ತಿದ್ದಾರೆ: ಉದಯನಿಧಿ ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....