Homeಮುಖಪುಟಬಂಗಾಳಿ ಭಾಷಿಕರನ್ನು ಬಾಂಗ್ಲಾದೇಶಿಗಳು ಎಂದು ಬಿಜೆಪಿ ಹಣೆಪಟ್ಟಿ ಕಟ್ಟುತ್ತಿದೆ: ಸಿಎಂ ಮಮತಾ

ಬಂಗಾಳಿ ಭಾಷಿಕರನ್ನು ಬಾಂಗ್ಲಾದೇಶಿಗಳು ಎಂದು ಬಿಜೆಪಿ ಹಣೆಪಟ್ಟಿ ಕಟ್ಟುತ್ತಿದೆ: ಸಿಎಂ ಮಮತಾ

- Advertisement -
- Advertisement -

ಬಿಜೆಪಿ ಆಳ್ವಿಕೆಯಲ್ಲಿರುವ ರಾಜ್ಯಗಳಲ್ಲಿ ಬಂಗಾಳಿ ಮಾತನಾಡುವ ಭಾರತೀಯ ನಾಗರಿಕರನ್ನು ಅಕ್ರಮ ಬಾಂಗ್ಲಾದೇಸಿ ವಲಸಿಗರೆಂದು ಹಣೆಪಟ್ಟಿ ಕಟ್ಟಲಾಗುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಆಕ್ರೋಶ ವ್ಯಕ್ತಪಡಿಸಿದ್ದು, ದೃಢೀಕೃತ ದಾಖಲೆ ಹೊಂದಿದ್ದರೂ ಬಂಗಾಳಿ ಭಾಷಿಕರನ್ನು ಗುರಿಯಾಗಿಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಬಂಗಾಳಿ ಭಾಷಿಕರನ್ನು

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಬಂಗಾಳಿ ಮಾತನಾಡುವ ಜನರನ್ನು ಬಿಜೆಪಿ ಬೇಟೆಯಾಡುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಅವರು ರಾಜ್ಯದ ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಆರೋಪಿಸಿದ್ದು, ಈ ವೇಳೆ ವಿಪಕ್ಷಗಳು ಗದ್ದಲ ಆರಂಭಿಸಿದವು.

“ಮಾತನಾಡುವ ಭಾಷೆಯ ಕಾರಣಕ್ಕಾಗಿ ನಿಜವಾದ ಭಾರತೀಯ ನಾಗರಿಕರನ್ನು ಬಾಂಗ್ಲಾದೇಶಿಗಳು ಎಂದು ಹಣೆಪಟ್ಟಿ ಕಟ್ಟುತ್ತಿರುವುದಕ್ಕೆ ನಿಮಗೆ ನಾಚಿಕೆಯಾಗಬೇಕು. ಬಂಗಾಳಿ, ಗುಜರಾತಿ, ಮರಾಠಿ, ಹಿಂದಿ ಭಾಷೆಗಳಲ್ಲಿ ಮಾತನಾಡಲು ಹೆಮ್ಮೆಪಡಬೇಕು. ನೀವು ನನ್ನನ್ನು ಕೇಳಿದರೆ, ನಾನು ಈ ಎಲ್ಲಾ ಭಾಷೆಗಳಲ್ಲಿ ಮಾತನಾಡಬಲ್ಲೆ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

“ಒಂದೆಡೆ, ನೀವು ಮಾತನಾಡುವ ಮಾತಿಗಾಗಿ ಭಾರತೀಯರನ್ನು ಬಾಂಗ್ಲಾದೇಶಿಗಳು ಎಂದು ಬ್ರಾಂಡ್ ಮಾಡುತ್ತಿದ್ದೀರಿ ಮತ್ತು ಮತ್ತೊಂದೆಡೆ, ಮತದಾರರ ಗುರುತಿನ ಚೀಟಿ, ಪ್ಯಾನ್ ಮತ್ತು ಆಧಾರ್ ಕಾರ್ಡ್‌ಗಳನ್ನು ಹೊಂದಿರುವ ಈ ಜನರಿಗೆ ನಿಮ್ಮ ರಾಜ್ಯಗಳಲ್ಲಿ ಜೀವನೋಪಾಯವನ್ನು ಗಳಿಸುವ ಹಕ್ಕನ್ನು ಕಸಿದುಕೊಳ್ಳುತ್ತಿದ್ದೀರಿ” ಎಂದು ಅವರು ಹೇಳಿದ್ದಾರೆ.

ಅವರ ಹೇಳಿಕೆಗಳನ್ನು ವಿರೋಧಿಸಿ ಬಿಜೆಪಿ ಶಾಸಕರು ಪ್ರತಿಭಟನೆ ಮುಂದಾಗಿ ಎದ್ದು ನಿಂತು ಘೋಷಣೆಗಳನ್ನು ಕೂಗಿದ್ದು ವಿಧಾನಸಭೆಯಲ್ಲಿ ಕೋಲಾಹಲಕ್ಕೆ ಕಾರಣವಾಯಿತು. ಆದರೆ, ಮುಖ್ಯಮಂತ್ರಿಗಳು ತಮ್ಮ ಭಾಷಣವನ್ನು ನಿಲ್ಲಿಸದೆ ಮುಂದುವರಿಸಿದರು.

ಕೇಂದ್ರ ಸರ್ಕಾರವು ರಾಜ್ಯಕ್ಕೆ ಬರಬೇಕಾದ ಕೇಂದ್ರದ ನಿಧಿಯನ್ನು ನಿರ್ಬಂಧಿಸುತ್ತಿದೆ ಎಂದು ಆರೋಪಿಸಿದ ಸಿಎಂ, ಬಿಜೆಪಿಯ ಮಲತಾಯಿ ಧೋರಣೆಯ ಹೊರತಾಗಿಯೂ, ರಾಜ್ಯವು ಪಾಠಶ್ರೀ ಅಡಿಯಲ್ಲಿ 69,000 ಕಿ.ಮೀ ರಸ್ತೆಗಳನ್ನು ನಿರ್ಮಿಸಿದೆ ಮತ್ತು 11,000 ಕೋಟಿ ರೂ.ಗಳೊಂದಿಗೆ ಆವಾಸ್ ಯೋಜನೆಯನ್ನು ಪ್ರಾರಂಭಿಸಿದೆ ಎಂದು ಹೇಳಿದ್ದಾರೆ.

“ಬಂಗಾಳವು ರಸ್ತೆ ಮತ್ತು ಗ್ರಾಮೀಣ ವಸತಿ ಯೋಜನೆಗಳ ಶ್ರೇಯಾಂಕದಲ್ಲಿ ಸತತ ಐದು ಬಾರಿ ಅಗ್ರಸ್ಥಾನದಲ್ಲಿದೆ” ಎಂದು ಅವರು ಹೇಳಿದ್ದಾರೆ.

ಆರ್ಥಿಕ ಬಿಕ್ಕಟ್ಟಿನ ಹೊರತಾಗಿಯೂ, ರಾಜ್ಯದ ಜನರು ಸರಾಸರಿ 50 ದಿನಗಳ ಉದ್ಯೋಗವನ್ನು ಪಡೆಯುತ್ತಿದ್ದಾರೆ ಮತ್ತು ಅವರ ಸರ್ಕಾರವು ವಿವಿಧ ಯೋಜನೆಗಳ ಅಡಿಯಲ್ಲಿ 1.5 ಕೋಟಿ ಮಾನವ ದಿನಗಳನ್ನು ಸೃಷ್ಟಿಸಿದೆ ಎಂದು ಅವರು ಹೇಳಿಕೊಂಡಿದ್ದಾರೆ.

“ಒಂದೆಡೆ ನೀವು ಬಂಗಾಳದ ಬಡ ಜನರನ್ನು ವಂಚಿತಗೊಳಿಸುತ್ತಿದ್ದರೆ, ಮತ್ತೊಂದೆಡೆ, ನಿಮ್ಮ ರಾಜ್ಯಗಳಲ್ಲಿ ವಿವಿಧ ಅಪಘಾತಗಳಲ್ಲಿ ಸಾವಿನ ಮೆರವಣಿಗೆ ಮುಂದುವರೆದಿದೆ” ಎಂದು ಅವರು ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನ ಸಾಮಾಜಿಕ ಕಲ್ಯಾಣ ನಿರ್ದೇಶನಗಳಿಗೆ ಅನುಗುಣವಾಗಿ, ಪರಿಶಿಷ್ಟ ಜಾತಿಗಳು (ಶೇಕಡಾ 26), ಪರಿಶಿಷ್ಟ ಪಂಗಡಗಳು (ಶೇಕಡಾ 6), ಹಿಂದುಳಿದ ಜಾತಿಗಳು ಮತ್ತು ಮುಸ್ಲಿಮರ (ಶೇಕಡಾ 30) ಹಿತಾಸಕ್ತಿಗಳನ್ನು ಕಾಪಾಡಲು ತಮ್ಮ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಮಮತಾ ಬ್ಯಾನರ್ಜಿ ಪ್ರತಿಪಾದಿಸಿದ್ದಾರೆ.

“ನಮ್ಮ ಹಾದಿಯಿಂದ ನಮ್ಮನ್ನು ಹಳಿತಪ್ಪಿಸಲು ಅಥವಾ ನಮ್ಮ ಕನಸುಗಳನ್ನು ನನಸಾಗಿಸುವುದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

ಈ ಮಧ್ಯೆ, ಎಸ್‌ಎಸ್‌ಸಿ ಹಗರಣಕ್ಕೆ ಸಂಬಂಧಿಸಿದ “ಶಿಕ್ಷಣ ವಲಯದಲ್ಲಿನ ಬಿಕ್ಕಟ್ಟು” ಕುರಿತು ಮುಂದೂಡಿಕೆ ನಿರ್ಣಯವನ್ನು ಸ್ವೀಕರಿಸಲು ಸ್ಪೀಕರ್ ಬಿಮನ್ ಬ್ಯಾನರ್ಜಿ ನಿರಾಕರಿಸಿದ ನಂತರ ಬಿಜೆಪಿ ಶಾಸಕರು ಸಭಾತ್ಯಾಗ ಮಾಡಿದರು.

ಗದ್ದಲದ ಮಧ್ಯೆ, ಶಿಸ್ತು ಉಲ್ಲಂಘನೆಗಾಗಿ ಸ್ಪೀಕರ್ ಬಿಜೆಪಿ ಶಾಸಕ ಮನೋಜ್ ಒರಾವ್ ಅವರನ್ನು ದಿನದ ಮಟ್ಟಿಗೆ ಅಮಾನತುಗೊಳಿಸಿದರು ಮತ್ತು ಬಿಜೆಪಿ ಮುಖ್ಯ ಸಚೇತಕ ಶಂಕರ್ ಘೋಷ್ ಅವರ ನಡವಳಿಕೆಗೆ ಎಚ್ಚರಿಕೆ ನೀಡಿದರು.

ಸಾಂಕೇತಿಕ ಪ್ರತಿಭಟನೆ ನಡೆಸಿದ ಎಲ್ಲಾ 40 ಬಿಜೆಪಿ ಶಾಸಕರು ಮಡಕೆಯಲ್ಲಿಟ್ಟ ತುಳಸಿ ಗಿಡಗಳನ್ನು ಹೊತ್ತುಕೊಂಡು ಸದನದಿಂದ ನಿರ್ಗಮಿಸಿದರು. ಬಂಗಾಳಿ ಭಾಷಿಕರನ್ನು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕೆ.ಆರ್.ಪೇಟೆ ದಲಿತ ಯುವಕನ ಸಜೀವ ದಹನ ಪ್ರಕರಣ; ಅರೋಪಿಗೆ ಜಾಮೀನು ನಿರಾಕರಣೆ

ಕೆ.ಆರ್.ಪೇಟೆ ದಲಿತ ಯುವಕನ ಸಜೀವ ದಹನ ಪ್ರಕರಣ; ಅರೋಪಿಗೆ ಜಾಮೀನು ನಿರಾಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...