Homeಮುಖಪುಟಬಿಜೆಪಿ ರಾಹುಲ್ ಗಾಂಧಿಯನ್ನು 'ಹೀರೋ' ಮಾಡುತ್ತಿದೆ: ಮಮತಾ ಬ್ಯಾನರ್ಜಿ ವಾಗ್ದಾಳಿ

ಬಿಜೆಪಿ ರಾಹುಲ್ ಗಾಂಧಿಯನ್ನು ‘ಹೀರೋ’ ಮಾಡುತ್ತಿದೆ: ಮಮತಾ ಬ್ಯಾನರ್ಜಿ ವಾಗ್ದಾಳಿ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ”ಹೀರೋ” ಮಾಡುವ ಮೂಲಕ ಬಿಜೆಪಿಯು ಪ್ರಸ್ತುತ ಸಮಸ್ಯೆಗಳಿಂದ ಬೇರೆಡೆ ಗಮನ ಸೆಳೆಯಲು ಪ್ರಯತ್ನಿಸುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಲಂಡನ್‌ನಲ್ಲಿ ನೀಡಿದ ಅವರ ಹೇಳಿಕೆಗಳ ವಿಚಾರವಾಗಿ ಸಂಸತ್ತಿನ ಕಲಾಪಗಳನ್ನು ಸ್ಥಗಿತಗೊಳಿಸಿದ್ದಾರೆ.

ಮಾರ್ಚ್ 19ರಂದು ಸಂಜೆ ಬಹರಂಪುರ ಪಕ್ಷದ ಕಚೇರಿಯಲ್ಲಿ ಆಂತರಿಕ ಸಭೆ ನಡೆಯಿತು. ಈ ಸಭೆಯಲ್ಲಿ ಫೊನ್ ಮೂಲಕ ಪಕ್ಷದ ಮುಖಂಡರ ಜೊತೆ ಮಾತನಾಡಿದ ಬ್ಯಾನರ್ಜಿ, ”ಬಿಜೆಪಿಯನ್ನು ಎದುರಿಸಲು ಕಾಂಗ್ರೆಸ್ ವಿಫಲವಾಗಿದೆ ಮತ್ತು ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಮತ್ತು ಕೇಸರಿ ಪಕ್ಷದ ನಡುವೆ ಅಘೋಷಿತ ಒಪ್ಪಂದವಿದೆ ಎಂದು ಆರೋಪ ಮಾಡಿದ್ದಾರೆ.

”ವಿರೋಧ ಪಕ್ಷಗಳು ಜನರ ಬಗ್ಗೆ ಕಾಳಜಿ ವ್ಯಕ್ತಪಡಿಸುವುದನ್ನು ತಡೆಯುವ ಮೂಲಕ ಬಿಜೆಪಿ ಲಾಭ ಮಾಡಿಕೊಳ್ಳುವ ಗುರಿಯನ್ನು ಹೊಂದಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಲಂಡನ್ ಭಾಷಣದ ವಿಚಾರ: ರಾಹುಲ್‌ ಲೋಕಸಭೆ ಸದಸ್ಯತ್ವ ಅಮಾನತ್ತಿಗೆ ಆಗ್ರಹಿಸಿದ ಬಿಜೆಪಿ

ರಾಹುಲ್ ಗಾಂಧಿ ಅವರು ಇತ್ತೀಚಿನ ಲಂಡನ್ ಪ್ರವಾಸದ ಸಂದರ್ಭದಲ್ಲಿ ನೀಡಿದ ಹೇಳಿಕೆಗಳ ಕುರಿತು ಸಂಸತ್ತಿನಲ್ಲಿ ಗದ್ದಲ ಗಲಾಟೆಯಲ್ಲೇ ಸದನ ಮುಂದೂಡತ್ತ ಬರಲಾಗಿದೆ. ಬಜೆಟ್ ಅಧಿವೇಶನದ ದ್ವಿತೀಯಾರ್ಧದ ಮೊದಲ ಐದು ದಿನಗಳವರೆಗೆ ಮಹತ್ವದ ವ್ಯವಹಾರವನ್ನು ನಡೆಸದಂತೆ ಎರಡೂ ಸದನಗಳನ್ನು ಸ್ಥಗಿತಗೊಳಿಸಲಾಗಿದೆ. ಹಾಗಾಗಿ ಮಮತಾ ಬ್ಯಾನರ್ಜಿ ಅವರು ಕೇಂದ್ರ ಬಿಜೆಪಿ ವಿರುದ್ಧ ಆರೋಪ ಮಾಡಿದ್ದಾರೆ.

ಕಾಂಗ್ರೆಸ್ ವಿರೋಧ ಪಕ್ಷದ “ಬಿಗ್ ಬಾಸ್” ಅಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಈ ಮೂಲಕ ಎಲ್ಲ ವಿರೋಧ ಪಕ್ಷಗಳು ಒಗ್ಗೂಡಿ 2024ರ ಲೋಕಾಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ವಿಚಾರದಿಂದ ದೂರ ಉಳಿದಿದ್ದಾರೆ.

ಸಾಗರ್ದಿಘಿ ಉಪಚುನಾವಣೆ ಫಲಿತಾಂಶಗಳನ್ನು ಉಲ್ಲೇಖಿಸಿ, ಟಿಎಂಸಿ ಸ್ಥಾನವನ್ನು ಕಾಂಗ್ರೆಸ್ ಸ್ಥಾನ ಪಡೆದುಕೊಂಡಿದೆ. ರಾಜ್ಯದಲ್ಲಿ “ಕಾಂಗ್ರೆಸ್-ಸಿಪಿಐ(ಎಂ)-ಬಿಜೆಪಿಯೊಂದಿಗೆ ಅಪವಿತ್ರ ನಂಟು” ಹೊಂದಿದೆ ಎಂದು ಬ್ಯಾನರ್ಜಿ ಆರೋಪ ಮಾಡಿದ್ದಾರೆ. ಮುಂಬರುವ ಪಂಚಾಯತ್ ಮತ್ತು ಲೋಕಸಭೆ ಚುನಾವಣೆಯಲ್ಲಿ ಈ ಮೈತ್ರಿಕೂಟವನ್ನು ಸೋಲಿಸಬೇಕು ಎಂದು ಪಕ್ಷದ ಸದಸ್ಯರನ್ನು ಬ್ಯಾನರ್ಜಿ ಕೋರಿದ್ದಾರೆ.

”ಅವರು “ಬಿಜೆಪಿಯೊಂದಿಗೆ ಅಘೋಷಿತ ಹೊಂದಾಣಿಕೆ” ಹೊಂದಿದ್ದಾರೆ ಎಂದು ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಧೀರ್ ಚೌಧುರಿ ಅವರನ್ನು ಹೆಸರಿಸದೆ ಬ್ಯಾನರ್ಜಿ ಆರೋಪಿಸಿದರು. ಈ ಹಿಂದೆ ಉಪಚುನಾವಣೆ ಫಲಿತಾಂಶದ ನಂತರ ಬ್ಯಾನರ್ಜಿ ಅವರು ಕಾಂಗ್ರೆಸ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿ ‘ಸಂವಿಧಾನ ಮತ್ತು ಮೀಸಲಾತಿ’ಯನ್ನು ರದ್ದುಗೊಳಿಸಲು ಬಯಸುತ್ತಿದೆ: ಲಾಲು ಪ್ರಸಾದ್ ಯಾದವ್

0
ಬಿಜೆಪಿ ಸಂವಿಧಾನ ಮತ್ತು ಮೀಸಲಾತಿಯನ್ನು ರದ್ದುಗೊಳಿಸಲು ಬಯಸುತ್ತಿದೆ, ಸರ್ಕಾರಿ ಉದ್ಯೋಗ ಮತ್ತು ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಮರು ಕೂಡ ಮೀಸಲಾತಿಯನ್ನು ಪಡೆಯಬೇಕು, ಅವರ ಮೀಸಲಾತಿ ಪರವಾಗಿ ನಾನಿದ್ದೇನೆ ಎಂದು ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ)...