Homeಕರ್ನಾಟಕಬಿಜೆಪಿ ಮಾಡುತ್ತಿರುವುದು ಧರ್ಮಯಾತ್ರೆ ಅಲ್ಲ, ರಾಜಕೀಯ ಯಾತ್ರೆ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಮಾಡುತ್ತಿರುವುದು ಧರ್ಮಯಾತ್ರೆ ಅಲ್ಲ, ರಾಜಕೀಯ ಯಾತ್ರೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಧರ್ಮಸ್ಥಳಕ್ಕೆ ಬಿಜೆಪಿ ಕೈಗೊಂಡಿರುವುದು ‘ಧರ್ಮ ಯಾತ್ರೆಯಲ್ಲ, ರಾಜಕೀಯ ಯಾತ್ರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು. ಮಂಗಳವಾರ (ಸೆ.2) ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ನಡೆಯುತ್ತಿದೆ. ಬಿಜೆಪಿಯವರು ಈಗ ಎನ್‌ಐಎ ತನಿಖೆಗೆ ಒತ್ತಾಯಿಸುತ್ತಿದ್ದಾರೆ. ಹಾಗಾದರೆ, ನಮ್ಮ ಪೊಲೀಸರ ಮೇಲೆ ಅವರಿಗೆ ನಂಬಿಕೆ ಇಲ್ಲವೇ ಎಂದು ಸಿಎಂ ಪ್ರಶ್ನಿಸಿದರು.

ಎಸ್ಐಟಿ ರಚನೆಯಾದ ಪ್ರಾರಂಭದಲ್ಲಿ ಎನ್ಐಎ ತನಿಖೆ ಮಾಡಿ ಎನ್ನಲಿಲ್ಲ. ನಂತರ ದೇಹಗಳು ಸಿಗದೇ ಹೋದಾಗ ಒತ್ತಾಯಿಸುತ್ತಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರೇ ಸ್ವತಃ ಸತ್ಯ ಹೊರಬರಲಿ ಎಂದು ಎಸ್ಐಟಿ ರಚನೆಯನ್ನು ಸ್ವಾಗತಿಸಿದ್ದಾರೆ. ನಮ್ಮ ಮೇಲಿನ ಅನುಮಾನದ ತೂಗುಗತ್ತಿ ನಿವಾರಣೆಯಾಗಬೇಕೆಂದಿದ್ದಾರೆ. ಎಸ್‌ಐಟಿ ತನಿಖೆ ಸ್ವತಂತ್ರವಾಗಿ ನಡೆಯುತ್ತಿದ್ದು, ನಾವ್ಯಾರು ಅದರಲ್ಲಿ ಹಸ್ತಕ್ಷೇಪ ಮಾಡಿಲ್ಲ. ಸತ್ಯ ಹೊರಬರಬೇಕು ಎಂದರು.

ಎಲ್ಲಾ ವಿಷಯಗಳಲ್ಲಿ ರಾಜಕೀಯ ಮಾಡಬಾರದು 

ಧರ್ಮಸ್ಥಳದ ವಿರುದ್ದ ‍ಷಡ್ಯಂತ್ರ ರೂಪಿಸಲು ಹೊರದೇಶಗಳಿಂದ ಹಣ ಬಂದಿದೆ ಎಂಬ ಬಿಜೆಪಿ ಆರೋಪದ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿಎಂ, “ಇದರಲ್ಲಿ ಸತ್ಯವಿಲ್ಲ, ಹಣ ಬಂದಿರುವುದು ಬಿಜೆಪಿಯವರಿಗೆ. ವಿರೋಧಿಗಳು ಟೀಕೆ ಮಾಡಲಿ. ಆದರೆ ಎಲ್ಲಾ ವಿಷಯಗಳಲ್ಲಿ ರಾಜಕೀಯ ಮಾಡಬಾರದು ಎಂದು ಹೇಳಿದರು.

ಬಿಜೆಪಿಯವರು ಯಾರ ಪರ ಇದ್ದಾರೆ?

ಸೌಜನ್ಯ ಪ್ರಕರಣವನ್ನು ಸಿಬಿಐಗೆ ಹಸ್ತಾಂತರ ಮಾಡಬೇಕೆಂದು ಬಿಜೆಪಿ ಒತ್ತಾಯಿಸುತ್ತಿರುವ ಬಗ್ಗೆ ಮಾತನಾಡಿದ ಸಿಎಂ, “ಸಿಬಿಐ ಕೇಂದ್ರ ಸರ್ಕಾರದ ಅಧೀನದಲ್ಲಿದ್ದು, ಅವರು ತನಿಖೆ ಮಾಡಿ ವರದಿ ಕೊಟ್ಟಿದ್ದಾರೆ. ಈಗ ಸರ್ವೋಚ್ಚ ನ್ಯಾಯಾಲಯಕ್ಕೆ ಹೋಗಬೇಕೆಂದು ಬಿಜೆಪಿ ಹೇಳುತ್ತಿದೆ. ಸೌಜನ್ಯ ಪ್ರಕರಣದಲ್ಲಿ ವೀರೇಂದ್ರ ಹೆಗ್ಗಡೆಯವರ ಮೇಲೆ ಆರೋಪವಿದೆ. ಹಾಗಾದರೆ, ಬಿಜೆಪಿ ಯಾರ ಪರ ಇದ್ದಾರೆ ಎಂದು ಪ್ರಶ್ನಿಸಿದರು. ಒಂದು ಕಡೆ ವೀರೇಂದ್ರ ಹೆಗಡೆಯವರ ಪರ ಎನ್ನುತ್ತಾರೆ, ಮತ್ತೊಂದೆಡೆ ಸೌಜನ್ಯ ಪರ ಎನ್ನುತ್ತಾರೆ. ನಿಜವಾಗಿಯೂ ಇವರು ಯಾರ ಪರ ಇದ್ದಾರೆ ಎಂದು ಪ್ರಶ್ನಿಸಿದರು.

ಅಶೋಕ್ ಸದನದಲ್ಲಿ ಬೇರೆ ಚರ್ಚೆ ಮಾಡಿದ್ದರು

ಚಿನ್ನಯ್ಯ ಎಂಬ ವ್ಯಕ್ತಿಯನ್ನು ಕರೆತಂದಿರುವುದೇ ಕಾಂಗ್ರೆಸ್ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಮಾತನಾಡಿದ ಸಿಎಂ, ಸದನದಲ್ಲಿ ಈ ಬಗ್ಗೆ ಚರ್ಚೆಯಾದಾಗ ಬೇರೆ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹಾಗೂ ಶಾಸಕ ಸುನೀಲ್ ಕುಮಾರ್, ಈಗ ಬೇರೆ ಹೇಳುತ್ತಿದ್ದಾರೆ. ದಿನಕ್ಕೊಂದು ಹೇಳಿಕೆ ಕೊಡಬಾರದು. ಅಸತ್ಯದ ಮೇಲೆ ಚರ್ಚೆ ಮಾಡಿದರೆ ಹೀಗೆ ಆಗುವುದು ಎಂದರು.

ಸತ್ಯ ಗೊತ್ತಿದ್ದ ಮೇಲೆ, ಅದನ್ನು ಮುಚ್ಚಿಡುವುದು ಅಪರಾಧ

12 ವರ್ಷಗಳ ಹಿಂದೆ ಸೌಜನ್ಯಾಳನ್ನು ಅಪಹರಿಸಿರುವುದನ್ನು ಕಣ್ಣಾರೆ ನೋಡಿದ್ದೇನೆ ಎಂದು ಎಸ್ಐಟಿಗೆ ಮಹಿಳೆಯೊಬ್ಬರು ದೂರ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಇದನ್ನು ಸಿಬಿಐ ತನಿಖೆ ನಡೆದಾಗ ಏಕೆ ಹೇಳಲಿಲ್ಲ? ಸತ್ಯ ಗೊತ್ತಿದ್ದ ಮೇಲೆ, ಅದನ್ನು ಮುಚ್ಚಿಡುವುದು ಅಪರಾಧ ಎಂದು ಹೇಳಿದರು.

ಸೌಜನ್ಯ ಪ್ರಕರಣದ ಮರು ತನಿಖೆ: ಸೌಜನ್ಯ ತಾಯಿ ತೀರ್ಮಾನಿಸಬೇಕು

ಸೌಜನ್ಯ ಪ್ರಕರಣದ ಮರು ತನಿಖೆ ಅಗತ್ಯವಿದ್ದರೆ ನ್ಯಾಯಾಲಯಕ್ಕೆ ಹೋಗಲಿ. ನಾನು ಅದರ ತೀರ್ಪನ್ನು ನೋಡಿಲ್ಲ. ಈ ಬಗ್ಗೆ ಸೌಜನ್ಯ ತಾಯಿ ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕು ಎಂದರು.

ಬಾನು ಮುಷ್ತಾಕ್‌ರನ್ನು ವಿರೋಧಿಸುತ್ತಿರುವವರು ಧರ್ಮಾಂಧರು: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...