Homeಮುಖಪುಟಜನರ ಭಕ್ತಿಯೊಂದಿಗೆ ಬಿಜೆಪಿ ಆಟವಾಡುತ್ತಿದೆ: ಪ್ರಿಯಾಂಕಾ ಗಾಂಧಿ

ಜನರ ಭಕ್ತಿಯೊಂದಿಗೆ ಬಿಜೆಪಿ ಆಟವಾಡುತ್ತಿದೆ: ಪ್ರಿಯಾಂಕಾ ಗಾಂಧಿ

ಅಯೋಧ್ಯೆಯಲ್ಲಿ ಭೂಕಬಳಿಕೆ ಆರೋಪ ಕೇಳಿಬಂದಿದ್ದು, ಬಿಜೆಪಿ ನಾಯಕರ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

- Advertisement -
- Advertisement -

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತಿರುವ ವ್ಯಾಪ್ತಿಯಲ್ಲಿ ಭೂಮಿಯನ್ನು ಕಬಳಿಕೆ ಮಾಡಲಾಗುತ್ತಿದೆ ಎಂಬ ವರದಿಗಳು ಹೊರಬಂದ ನಂತರ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಬಿಜೆಪಿ ನಾಯಕರು ಮತ್ತು ಸರ್ಕಾರಿ ಅಧಿಕಾರಿಗಳ ವಿರುದ್ಧ ಗುರುವಾರ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ರಾಮಮಂದಿರ ಟ್ರಸ್ಟ್‌ನವರು ಮತ್ತು ಸರ್ಕಾರಿ ಅಧಿಕಾರಿಗಳು ಪ್ರಕರಣದಲ್ಲಿ ಭಾಗಿಯಾಗಿದ್ದಾರೆಂಬ ಆರೋಪಗಳಿವೆ. ಈ ಭ್ರಷ್ಟಾಚಾರದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು.

ರಾಮಮಂದಿರ ಟ್ರಸ್ಟ್‌ಗಾಗಿ ಏನಾದರೂ ದಾನ ಮಾಡಿದ ದೇಶದ ಅಸಂಖ್ಯಾತ ಜನರ ಭಕ್ತಿಯನ್ನು ರಾಜ್ಯದ ಆಡಳಿತ ಪಕ್ಷವು “ಲೂಟಿ” ಮಾಡುತ್ತಿದೆ. ಜನರ ಭಕ್ತಿಯೊಂದಿಗೆ ಆಟವಾಡುತ್ತಿದೆ ಎಂದು ಪ್ರಿಯಾಂಕಾ ಟೀಕಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಪ್ರಿಯಾಂಕಾ ಗಾಂಧಿ, “ದೇಶದ ಬಹುತೇಕ ಪ್ರತಿಯೊಂದು ಮನೆಯವರು ರಾಮಮಂದಿರ ಟ್ರಸ್ಟ್‌ಗೆ ಏನನ್ನಾದರೂ ದೇಣಿಗೆ ನೀಡಿದ್ದಾರೆ. ಮನೆ-ಮನೆಗೆ ತೆರಳಿ ಪ್ರಚಾರ ನಡೆಸಲಾಗಿದೆ. ಇದು ಭಕ್ತಿಯ ವಿಷಯ ಮತ್ತು ಅದರೊಂದಿಗೆ ಆಟವಾಡಲಾಗುತ್ತಿದೆ. ಖರೀದಿಸಲು ಸಾಧ್ಯವಾಗದ ದಲಿತರ ಭೂಮಿಯನ್ನು ಕಿತ್ತುಕೊಳ್ಳಲಾಗಿದೆ” ಎಂದು ದೂರಿದ್ದಾರೆ.

ರಾಮಜನ್ಮಭೂಮಿ-ಬಾಬರಿ ಮಸೀದಿ ವಿವಾದದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಿದ ನಂತರ ರಾಮ ಮಂದಿರ ನಿರ್ಮಾಣಕ್ಕೆ ದಾರಿ ಮಾಡಿಕೊಟ್ಟ ಬಳಿಕ ಶಾಸಕರು, ಮೇಯರ್‌ಗಳು, ಆಯುಕ್ತರ ಸಂಬಂಧಿಕರು, ಎಸ್‌ಡಿಎಂ ಮತ್ತು ಡಿಐಜಿ ಅಯೋಧ್ಯೆಯಲ್ಲಿ ಭೂಮಿ ಖರೀದಿಸಿದ್ದಾರೆ ಎಂದು ವರದಿಗಳಾಗಿವೆ ಎಂದು ತಿಳಿಸಿದ್ದಾರೆ.

ವರದಿ ಬಂದ ಕೂಡಲೇ ಉತ್ತರ ಪ್ರದೇಶದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಮಾಹಿತಿ) ನವನೀತ್ ಸೆಹಗಲ್ ಅವರು ಬುಧವಾರ ಪಿಟಿಐ ಸುದ್ದಿ ಸಂಸ್ಥೆಗೆ ಪ್ರತಿಕ್ರಿಯೆ ನೀಡಿದ್ದಾರೆ. “ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಈ ವಿಷಯವನ್ನು ಕೂಲಂಕಷವಾಗಿ ತನಿಖೆ ನಡೆಸುವಂತೆ ಕಂದಾಯ ಇಲಾಖೆಗೆ ಆದೇಶಿಸಿದ್ದಾರೆ” ಎಂದು ಸೆಹಗಲ್‌ ಹೇಳಿದ್ದಾರೆ.

“ಹೌದು, ಯುಪಿ ಸರ್ಕಾರವು ಆರೋಪಗಳ ತನಿಖೆಗಾಗಿ ತನಿಖಾ ಆಯೋಗವನ್ನು ನೇಮಿಸುತ್ತಿದೆ, ಯಾರು ತನಿಖೆಯನ್ನು ನಡೆಸುತ್ತಾರೆ? ಇವರು ಜಿಲ್ಲಾಧಿಕಾರಿ ಮಟ್ಟದ ಅಧಿಕಾರಿಗಳಾಗಿದ್ದಾರೆ. ಇದರ ಬದಲಿಗೆ ಸುಪ್ರೀಂ ಕೋರ್ಟ್ ನೇತೃತ್ವದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಸಬೇಕು” ಎಂದು ಪ್ರಿಯಾಂಕಾ ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಮುಖ್ಯ ವಕ್ತಾರ ರಣದೀಪ್ ಸುರ್ಜೇವಾಲಾ ಅವರು ಈ ಪ್ರಕರಣವನ್ನು “ಭೂ ಹಗರಣ” ಎಂದು ಕರೆದಿದ್ದಾರೆ. “ಬಿಜೆಪಿಯೊಂದಿಗೆ ಸಂಪರ್ಕದಲ್ಲಿರುವವರು ಅಯೋಧ್ಯೆ ನಗರದೊಳಗೆ ಭೂಮಿಯನ್ನು ಬಹಿರಂಗವಾಗಿ ಲೂಟಿ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ಮಹಾಭಾರತದ ಬಗ್ಗೆ ರಾಹುಲ್‌ ಗಾಂಧಿ ತಪ್ಪುತಪ್ಪಾಗಿ ಹೇಳಿದ್ದಾರೆ ಎನ್ನಲಾಗಿರುವ ಈ ಟ್ವೀಟ್ ಎಡಿಟ್‌ ಮಾಡಿರುವಂತದ್ದು!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...