Homeಮುಖಪುಟವಲಸಿಗರ ವಿಚಾರದಲ್ಲಿ ಬಿಜೆಪಿ ಸುಳ್ಳು ಸುದ್ದಿ ಹರಡುತ್ತಿದೆ: ಸಿಎಂ ಸ್ಟಾಲಿನ್ ವಾಗ್ದಾಳಿ

ವಲಸಿಗರ ವಿಚಾರದಲ್ಲಿ ಬಿಜೆಪಿ ಸುಳ್ಳು ಸುದ್ದಿ ಹರಡುತ್ತಿದೆ: ಸಿಎಂ ಸ್ಟಾಲಿನ್ ವಾಗ್ದಾಳಿ

- Advertisement -
- Advertisement -

ವಲಸಿಗರು ದಾಳಿಗೆ ಒಳಗಾಗುತ್ತಿದ್ದಾರೆ ಎಂಬ ವದಂತಿಗಳ ಬಗ್ಗೆ ಬಿಜೆಪಿ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ವಾಗ್ದಾಳಿ ನಡೆಸಿದ್ದಾರೆ. ದೇಶದ ಎಲ್ಲಾ ಬಿಜೆಪಿಯೇತರ ಪಕ್ಷಗಳ ಒಗ್ಗಟ್ಟಿಗೆ ಕರೆ ನೀಡಿದ ಒಂದು ದಿನದ ನಂತರ “ಉತ್ತರ ಭಾರತದ ಬಿಜೆಪಿ ನಾಯಕರು” “ಸುಳ್ಳು ಸುದ್ದಿ” ಹರಡಲು ಆರಂಭಿಸಿದರು ಎಂದು ಗುರುವಾರ ಸ್ಟಾಲಿನ್ ಬಿಜೆಪಿ ವಿರುದ್ಧ ಕಿಡಿಕಾರಿದರು.

ತಮಿಳುನಾಡಿನಲ್ಲಿ ಉತ್ತರ ಭಾರತದ ಕಾರ್ಮಿಕರ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಸುಳ್ಳು ಸುದ್ದಿ ಹರಡುವಿಕೆ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸ್ಟಾಲಿನ್, ”ಬಿಜೆಪಿ ವಿರೋಧಿ ಪಕ್ಷಗಳು ಒಂದಾಗುವ ಅಗತ್ಯದ ಬಗ್ಗೆ ನಾನು ಮಾತನಾಡಿದ ಒಂದು ದಿನದ ನಂತರ ಉತ್ತರ ಭಾರತದ ಬಿಜೆಪಿ ನಾಯಕರಿಂದ ನಕಲಿ ವೀಡಿಯೊಗಳ ಹರಡುವಿಕೆ ಪ್ರಾರಂಭವಾಯಿತು, ಇದು ಅವರ ರಹಸ್ಯ ಉದ್ದೇಶವನ್ನು ಬಹಿರಂಗಪಡಿಸುತ್ತದೆ. ಈ ಸುಳ್ಳುಗಳನ್ನು ಹರಡುವುದರ ಹಿಂದಿನ ಸ್ಪಷ್ಟ ಉದ್ದೇಶ ಏನು ಎಂಬುದನ್ನು ಸೂಚಿಸುತ್ತದೆ” ಎಂದು ಸ್ಟಾಲಿನ್ ಅವರು ಕಲಾಪದ ವೇಳೆ ಪ್ರಶ್ನೋತ್ತರ ಅವಧಿಯಲ್ಲಿ ಗುರುವಾರ ಹೇಳಿದರು.

ಇದನ್ನೂ ಓದಿ: ತಮಿಳುನಾಡು: ಬಿಜೆಪಿ ತೊರೆದು ಎಐಎಡಿಎಂಕೆ ಸೇರಿದ 13 ಮುಖಂಡರು

”ಪಾಟ್ನಾದಲ್ಲಿ ಜೆಡಿಯು ಕೂಡ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ತಮಿಳುನಾಡಿನಲ್ಲಿ ವಲಸೆ ಕಾರ್ಮಿಕರ ಮೇಲಿನ ದಾಳಿಯ “ವದಂತಿಗಳನ್ನು” ಹರಡುತ್ತಿದೆ. ಎರಡು ರಾಜ್ಯಗಳ ನಡುವೆ ಬಿರುಕು ಮೂಡಿಸಲು ಮತ್ತು ವಿರೋಧ ಪಕ್ಷಗಳನ್ನು ಸೋಲಿಸಲು ಈ ರೀತಿ ಬಿಜೆಪಿ ಸುಳ್ಳುಗಳನ್ನು ಹರಿಬಿಡುತ್ತಿದೆ ಎಂದು ಆರೋಪಿಸಿದೆ” ಎಂದರು.

”ಬಿಜೆಪಿಯು ವಲಸಿಗರ ಮೇಲೆ ದಾಳಿ ನಡೆಸಲಾಗಿದೆ ಎಂಬ ವದಂತಿಗಳನ್ನು ಹರಡಿತು. ಇದರಿಂದ ತಮಿಳುನಾಡು ಮತ್ತು ಬಿಹಾರದ ನಡುವೆ ಬಿರುಕು ಉಂಟುಮಾಡಲು ಪ್ರಯತ್ನಿಸಿತು ಆದರೆ ಏನಾಯಿತು? ಹಲ್ಲೆ ನಡೆದಿದೆ ಎನ್ನುವ ವಿಚಾರವೇ ಸುಳ್ಳು. ಈ ಬಗ್ಗೆ ತನಿಖೆ ನಡೆಸಲು ಬಿಹಾರದ ತಂಡವೊಂದು ತಮಿಳುನಾಡಿಗೆ ಭೇಟಿ ನೀಡಿತ್ತು ಮತ್ತು ಅವರ ಸರ್ಕಾರವೂ ಅದನ್ನು ಪರಿಶೀಲಿಸಿದೆ. ಆದರೆ ಒಂದೇ ಒಂದು ಘಟನೆ ಕೂಡ ವರದಿಯಾಗಿಲ್ಲ ಎಂದು ಜೆಡಿಯು ರಾಷ್ಟ್ರೀಯ ಅಧ್ಯಕ್ಷ ರಾಜೀವ್ ರಂಜನ್ ಸಿಂಗ್ ಅ.ಕಾ.ಲಾಲನ್ ಸಿಂಗ್ ಹೇಳಿದ್ದಾರೆ” ಎಂದು ಸ್ಟಾಲಿನ್ ವಿವರಿಸಿದರು.

”ಈ ನಕಲಿ ವರದಿಗಳ ಹರಿದಾಡಿದಾಗ, ನಾನು ಡಿಜಿಪಿ ಬಳಿ ವಿಚಾರಿಸಿದ್ದೇನೆ. ಅವರು ಅಂತಹ ಯಾವದೇ ಘಟನೆ ನಡೆದಿಲ್ಲ ಎಂಬುದನ್ನು ಖಚಿತಪಡಿಸಿದ್ದಾರೆ. ಆನಂತರ ನಾನು, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಸಂಪರ್ಕಿಸಿ ಇಲ್ಲಿಯ ವಾಸ್ತವತೆ ಬಗ್ಗೆ ತಿಳಿಸಿದ್ದೇನೆ. ಆದರೂ ಬಿಹಾರದ ಅಧಿಕಾರಿಗಳ ನಿಯೋಗವು ತಮಿಳುನಾಡಿಗೆ ಭೇಟಿ ನೀಡಿ, ಇಲ್ಲಿನ ಶಾಂತಿಯುತ ವಾತಾವರಣದಿಂದ ತೃಪ್ತರಾಗಿ ಮರಳಿದೆ. ತಮಿಳುನಾಡು ಹೊರಗಿನವರನ್ನು ಸ್ವಾಗತಿಸಲು ಹೆಸರುವಾಸಿಯಾಗಿದೆ” ಎಂದು ಗುರುವಾರ ತಮ್ಮ ಹೇಳಿಕೆಯಲ್ಲಿ ಸ್ಟಾಲಿನ್ ತಿಳಿಸಿದ್ದಾರೆ.

”ತಮಿಳುನಾಡು ಮತ್ತು ತಮಿಳರು ಏಕತೆ ಮತ್ತು ಭ್ರಾತೃತ್ವವನ್ನು ಗೌರವಿಸುತ್ತಾರೆ. ನಮ್ಮ ಧ್ಯೇಯವಾಕ್ಯವೆಂದರೆ ‘ಎಲ್ಲಾ ಪಟ್ಟಣಗಳು ನಮ್ಮದು, ಮತ್ತು ಎಲ್ಲರೂ ನಮ್ಮ ಬಂಧುಗಳು..’ ಇಲ್ಲಿ ವಾಸಿಸುವ ಉತ್ತರ ಭಾರತೀಯ ಸಹೋದರರಿಗೆ ಇದು ಚೆನ್ನಾಗಿ ತಿಳಿದಿದೆ” ಎಂದು ಸ್ಟಾಲಿನ್ ಹೇಳಿದರು.

”ಬಿಜೆಪಿ ನಕಲಿ ಸುದ್ದಿ ಹರುಡುತ್ತಿದೆ” ಎಂದು ಸ್ಟಾಲಿನ್ ಅವರು ಗುರುವಾರ ಮೊದಲ ಬಾರಿಗೆ ಪಕ್ಷದ ಹೆಸರು ಬಳಸಿ ನೇರವಾಗಿ ಆರೋಪಿಸಿದ್ದಾರೆ. ಏಕೆಂದರೆ ಮಂಗಳವಾರ, ಇದೇ ವಿಚಾರವಾಗಿ ನಾಗರ್‌ಕೋಯಿಲ್‌ನಲ್ಲಿ ನಡೆದ ಡಿಎಂಕೆ ಕುಲಪತಿ ಎಂ ಕರುಣಾನಿಧಿ ಅವರ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡುವಾಗ, ಕೆಲವು ಶಕ್ತಿಗಳು ”ಜಾತಿ ಮತ್ತು ಕೋಮು ಗಲಭೆಗಳನ್ನು” ಪ್ರಚೋದಿಸುವ ಮೂಲಕ ತಮ್ಮ ಸರ್ಕಾರವನ್ನು ಉರುಳಿಸಲು ಪ್ರಯತ್ನಿಸುತ್ತಿವೆ ಎಂದು ಬಿಜೆಪಿಯ ಹೆಸರು ಹೇಳದೆ ಮಾತನಾಡಿದ್ದರು. ಆದರೆ ಇದೇ ಮೊದಲ ಬಾರಿಗೆ ಸ್ಟಾಲಿನ್ ಅವರು ಬಿಜೆಪಿ ವಿರುದ್ಧ ನೇರವಾಗಿ ಆರೋಪ ಮಾಡಿದ್ದಾರೆ.

ಮಾರ್ಚ್ 1ರಂದು ಚೆನ್ನೈನಲ್ಲಿ ಡಿಎಂಕೆ ಆಯೋಜಿಸಿದ್ದ ಸಾರ್ವಜನಿಕ ರ್ಯಾಲಿಯಲ್ಲಿ, ಸ್ಟಾಲಿನ್ ಅವರು ‘2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಭಾರತದ ಎಲ್ಲಾ ವಿರೋಧ ಪಕ್ಷಗಳ ಬೇಷರತ್ ಒಗ್ಗಟ್ಟಿಗೆ ಕರೆ’ ನೀಡಿದ್ದರು. ಅವರ ಈ ಹೇಳಿಕೆಯ ನಂತರ ಬಿಜೆಪಿ ನಾಯಕರು, ತಮಿಳುನಾಡಿನಲ್ಲಿ ವಲಸಿಗರು ದಾಳಿಗೆ ಒಳಗಾಗುತ್ತಿದ್ದಾರೆ ಎಂಬ ವದಂತಿಗಳನ್ನು ಹರಡಲು ಪ್ರಾರಂಭಿಸಿದರು ಎಂದು ಗುರುವಾರ ಸ್ಟಾಲಿನ್ ಹೇಳಿದ್ದಾರೆ.

ಬಿಜೆಪಿ ಹರಿಬಿಟ್ಟ ಸುಳ್ಳು ಸುದ್ದಿಯ ಬಳಿಕ, ಬಿಹಾರ ಗ್ರಾಮೀಣಾಭಿವೃದ್ಧಿ ಕಾರ್ಯದರ್ಶಿ ಡಿ ಬಾಲಮುರುಗನ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ತಮಿಳುನಾಡಿಗೆ ಭೇಟಿ ನೀಡಿತ್ತು. ಈ ಸಂದರ್ಭದಲ್ಲಿ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿ ವಿ ಇರೈ ಅನ್ಬು ಅವರನ್ನು ಭೇಟಿ ಮಾಡಿದರು. ತಿರುಪುರ್ ಮತ್ತು ಕೊಯಮತ್ತೂರಿನಲ್ಲಿ ಬಿಹಾರದಿಂದ ವಲಸೆ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...