Homeಮುಖಪುಟಅಸ್ಸಾಂನಲ್ಲಿ ಬಿಜೆಪಿ ಬಂಗಾಳಿ ಭಾಷಿಕರಿಗೆ ಬೆದರಿಸುತ್ತಿದೆ: ಮಮತಾ ಬ್ಯಾನರ್ಜಿ ಆಕ್ರೋಶ

ಅಸ್ಸಾಂನಲ್ಲಿ ಬಿಜೆಪಿ ಬಂಗಾಳಿ ಭಾಷಿಕರಿಗೆ ಬೆದರಿಸುತ್ತಿದೆ: ಮಮತಾ ಬ್ಯಾನರ್ಜಿ ಆಕ್ರೋಶ

- Advertisement -
- Advertisement -

ಕೋಲ್ಕತ್ತಾ: ಅಸ್ಸಾಂನಲ್ಲಿರುವ ಬಿಜೆಪಿ ಸರ್ಕಾರದ ವಿರುದ್ಧ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಸ್ಸಾಂನಲ್ಲಿರುವ ಬಂಗಾಳಿ ಮಾತನಾಡುವ ಜನರನ್ನು “ಬೆದರಿಸಲಾಗುತ್ತಿದೆ” ಎಂದು ಅವರು ಆರೋಪಿಸಿದ್ದಾರೆ. ಈ ಬಂಗಾಳಿ ಭಾಷಿಕರು “ಎಲ್ಲಾ ಭಾಷೆಗಳು ಮತ್ತು ಧರ್ಮಗಳನ್ನು ಗೌರವಿಸಿ ಶಾಂತಿಯುತವಾಗಿ ಸಹಬಾಳ್ವೆ ನಡೆಸಲು” ಬಯಸುತ್ತಾರೆ ಎಂದು ಅವರು ಹೇಳಿದ್ದಾರೆ.

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು, ಬಿಜೆಪಿಯ “ವಿಭಜಿಸಿ ಆಳುವ ನೀತಿ” ಅಸ್ಸಾಂನಲ್ಲಿ “ಎಲ್ಲಾ ಮಿತಿಗಳನ್ನು ಮೀರಿದೆ” ಎಂದು ಆರೋಪಿಸಿದ್ದಾರೆ. ಕೇಂದ್ರ ಸರ್ಕಾರ ಮತ್ತು ಬಿಜೆಪಿ ಆಡಳಿತವಿರುವ ರಾಜ್ಯಗಳು ಬಂಗಾಳಿ ಮಾತನಾಡುವ ವಲಸಿಗರನ್ನು ವ್ಯವಸ್ಥಿತವಾಗಿ “ಅಕ್ರಮ ಬಾಂಗ್ಲಾದೇಶಿ” ಅಥವಾ “ರೋಹಿಂಗ್ಯಾ” ಎಂದು ಹಣೆಪಟ್ಟಿ ಕಟ್ಟಿ ಗುರಿಪಡಿಸುತ್ತಿವೆ ಎಂದು ಅವರು ಆರೋಪಿಸಿದ್ದಾರೆ.

“ದೇಶದಲ್ಲಿ ಎರಡನೇ ಅತಿ ಹೆಚ್ಚು ಮಾತನಾಡುವ ಭಾಷೆ ಬಾಂಗ್ಲಾ ಭಾಷೆಯಾಗಿದೆ. ಇದು ಅಸ್ಸಾಂನಲ್ಲೂ ಎರಡನೇ ಅತಿ ಹೆಚ್ಚು ಮಾತನಾಡುವ ಭಾಷೆಯಾಗಿದೆ. ಎಲ್ಲಾ ಭಾಷೆಗಳು ಮತ್ತು ಧರ್ಮಗಳನ್ನು ಗೌರವಿಸಿ ಶಾಂತಿಯುತವಾಗಿ ಸಹಬಾಳ್ವೆ ನಡೆಸಲು ಬಯಸುವ ಬಂಗಾಳಿ ಭಾಷಿಕರನ್ನು ತಮ್ಮ ಮಾತೃಭಾಷೆಯನ್ನು ಎತ್ತಿಹಿಡಿದಿದ್ದಕ್ಕಾಗಿ ಕಿರುಕುಳ ನೀಡಿ, ಬೆದರಿಸುವುದು ತಾರತಮ್ಯ ಮತ್ತು ಅಸಾಂವಿಧಾನಿಕವಾಗಿದೆ. ಅಸ್ಸಾಂನಲ್ಲಿ ಬಿಜೆಪಿಯ ಈ ವಿಭಜಕ ಅಜೆಂಡಾ ಎಲ್ಲಾ ಮಿತಿಗಳನ್ನು ಮೀರಿದೆ ಮತ್ತು ಇದರ ವಿರುದ್ಧ ಅಸ್ಸಾಂ ಜನತೆ ಹೋರಾಡುತ್ತದೆ” ಎಂದು ಅವರು ‘ಎಕ್ಸ್’ (ಹಿಂದೆ ಟ್ವಿಟರ್) ನಲ್ಲಿ ಪೋಸ್ಟ್ ಮಾಡಿದ್ದಾರೆ. “ತಮ್ಮ ಭಾಷೆ ಮತ್ತು ಗುರುತಿನ ಘನತೆಗಾಗಿ ಮತ್ತು ತಮ್ಮ ಪ್ರಜಾಪ್ರಭುತ್ವದ ಹಕ್ಕುಗಳಿಗಾಗಿ ಹೋರಾಡುತ್ತಿರುವ ಪ್ರತಿಯೊಬ್ಬ ನಾಗರಿಕನೊಂದಿಗೆ ನಾನು ನಿಲ್ಲುತ್ತೇನೆ” ಎಂದು ಹೇಳಿದ್ದಾರೆ.

ಅಸ್ಸಾಂ ಸಿಎಂ ತಿರುಗೇಟು: ‘ಮಮತಾ ಕೇವಲ ಬಂಗಾಳಿ-ಮುಸ್ಲಿಮರ ಪರ’

ಗುರುವಾರ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು, ತಮ್ಮ ಪಶ್ಚಿಮ ಬಂಗಾಳದ ಸಹೋದ್ಯೋಗಿ ಬಂಗಾಳಿ ಮಾತನಾಡುವ ಮುಸ್ಲಿಮರ ಬಗ್ಗೆ ಮಾತ್ರ ಕಾಳಜಿ ವಹಿಸುತ್ತಾರೆ ಎಂದು ಆರೋಪಿಸಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದರು. ಭಾಷಿಕ ಗುರುತನ್ನು ರಾಜಕೀಯ ಉದ್ದೇಶಗಳಿಗಾಗಿ ಬಳಸಿಕೊಳ್ಳುತ್ತಿದೆ ಎಂದು ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಇತ್ತೀಚೆಗೆ ಮಾಡಿದ ಆರೋಪಕ್ಕೆ ಪ್ರತಿಕ್ರಿಯಿಸಿದ ಶರ್ಮಾ, “ಮಮತಾ ಬ್ಯಾನರ್ಜಿ ಬಂಗಾಳಿಗಳನ್ನು ಇಷ್ಟಪಡುತ್ತಾರೋ ಅಥವಾ ಮುಸ್ಲಿಂ-ಬಂಗಾಳಿಗಳನ್ನು ಮಾತ್ರ  ಇಷ್ಟಪಡುತ್ತಾರೋ ಎಂಬುದು ಪ್ರಶ್ನೆಯಾಗಿದೆ. ಇದಕ್ಕೆ ನನ್ನ ಉತ್ತರವೇನೆಂದರೆ ಮುಸ್ಲಿಂ-ಬಂಗಾಳಿಗಳನ್ನು ಮಾತ್ರ ಅವರು ಇಷ್ಟ ಪಡುತ್ತಾರೆ ಎಂಬುದು ಆಗಿದೆ” ಎಂದು ಗುವಾಹಟಿಯಲ್ಲಿ ಆರೋಪಿಸಿದ್ದರು.

“ಅವರು ಮುಸ್ಲಿಂ-ಬಂಗಾಳಿಗಳಿಗಾಗಿ ಅಸ್ಸಾಂಗೆ ಬಂದರೆ, ಅಸ್ಸಾಮಿ ಜನರು ಮತ್ತು ಹಿಂದೂ-ಬಂಗಾಳಿಗಳು ಅವರನ್ನು ಸುಮ್ಮನೆ ಬಿಡುವುದಿಲ್ಲ” ಎಂದು ಶರ್ಮಾ ಎಚ್ಚರಿಕೆ ನೀಡಿದ್ದರು.

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಬಂಗಾಳಿ ಮಾತನಾಡುವ ಜನರ ಮೇಲೆ ನಡೆಯುತ್ತಿರುವ ಕಿರುಕುಳವನ್ನು ವಿರೋಧಿಸಿ ಮಮತಾ ಬ್ಯಾನರ್ಜಿ ಬುಧವಾರ ಕೋಲ್ಕತ್ತಾದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ್ದರು.

ಬಿಹಾರ ಮತದಾರ ಪಟ್ಟಿ ಪರಿಷ್ಕರಣೆ: 36 ಲಕ್ಷ ಜನರು ಅವರ ವಿಳಾಸಗಳಲ್ಲಿ ಇಲ್ಲ ಎಂದ ಚುನಾವಣೆ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...