Homeಮುಖಪುಟಎಲ್ಲಾ ರೀತಿ ವಿಫಲವಾಗಿರುವ ಬಿಜೆಪಿ ಅಧಿಕಾರಕ್ಕಾಗಿ ಮಾತ್ರ ಸಾವರ್ಕರ್ ಹೆಸರು ಬಳಸುತ್ತಿದೆ: ಹಿಂದೂ ಮಹಾಸಭಾ ಆರೋಪ

ಎಲ್ಲಾ ರೀತಿ ವಿಫಲವಾಗಿರುವ ಬಿಜೆಪಿ ಅಧಿಕಾರಕ್ಕಾಗಿ ಮಾತ್ರ ಸಾವರ್ಕರ್ ಹೆಸರು ಬಳಸುತ್ತಿದೆ: ಹಿಂದೂ ಮಹಾಸಭಾ ಆರೋಪ

ರಾಜ್ಯ ಬಿಜೆಪಿಗೆ ಸಾವರ್ಕರ್ ಹೆಸರು ಬಳಸುವ ಯಾವುದೇ ನೈತಿಕತೆಯಿಲ್ಲ.ಬಿಜೆಪಿ ಕಾಂಗ್ರೆಸ್‌ಗಿಂತಲೂ ಹೀನಾಯವಾಗಿ ಧರ್ಮ ಒಡೆಯಲು ಮುಂದಾಗಿದೆ.

- Advertisement -
- Advertisement -

ರಾಜ್ಯವನ್ನು ಅಭಿವೃದ್ದಿ ಮಾಡಲು ಎಲ್ಲಾ ಹಂತಗಳಲ್ಲಿ ವಿಫಲವಾಗಿರುವ ಬಿಜೆಪಿ ಪಕ್ಷವು ಚುನಾವಣೆ ಹತ್ತಿರ ಬಂದಿರುವುದರಿಂದ ಅಧಿಕಾರ ಉಳಿಸಿಕೊಳ್ಳುವುದಕ್ಕಾಗಿ ಮಾತ್ರ ಸಾವರ್ಕರ್ ಹೆಸರು ಬಳಸುತ್ತಿದೆ ಎಂದು ಅಖಿಲ ಭಾರತ ಹಿಂದೂ ಮಹಾಸಭಾದ ರಾಜ್ಯ ಕಾರ್ಯದರ್ಶಿ ಧರ್ಮೇಂದ್ರ ಆರೋಪಿಸಿದ್ದಾರೆ.

ರಾಜ್ಯ ಬಿಜೆಪಿಗೆ ಸಾವರ್ಕರ್ ಹೆಸರು ಬಳಸುವ ಯಾವುದೇ ನೈತಿಕತೆಯಿಲ್ಲ. ಏಕೆಂದರೆ ಬಿಜೆಪಿ ರೀತಿ ಸಾವರ್ಕರ್ ಜಾತಿಗಳನ್ನು ಸಂಘಟಿಸಲಿಲ್ಲ. ಬದಲಿಗೆ ಕೇವಲ ಧರ್ಮ ಪ್ರಚಾರ ಮಾಡಿದರು. ಆದರೆ ಬಿಜೆಪಿ ಕಾಂಗ್ರೆಸ್‌ಗಿಂತಲೂ ಹೀನಾಯವಾಗಿ ಧರ್ಮ ಒಡೆಯಲು ಮುಂದಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು, “ಬಿಜೆಪಿಗೆ ಅಖಂಡ ಭಾರತದ ಕಲ್ಪನೆಯೊಂದಿಗೆ ಸಾವರ್ಕರ್ ಸ್ಥಾಪಿಸಿದ ಅಖಿಲ ಭಾರತ ಹಿಂದೂ ಮಹಾಸಭಾ ಬೇಕಿಲ್ಲ. ಬದಲಿಗೆ ಮುಂದಿನ ಚುನಾವಣೆಗಾಗಿ ಅವರ ಹೆಸರು ಮತ್ತು ಫೋಟೊ ಮಾತ್ರ ಬೇಕಿದೆ” ಎಂದು ಟೀಕಿಸಿದರು ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಬಿಜೆಪಿಗೆ ನಿಜವಾಗಿಯೂ ಸಾವರ್ಕರ್ ಬಗ್ಗೆ ಪ್ರೀತಿಯಿದ್ದರೆ ಅವರ ಜನ್ಮದಿನವನ್ನು ರಾಷ್ಟ್ರೀಯ ಹಬ್ಬ ಎಂದು ಘೋಷಿಸಲಿ. ಆದರೆ ಟಿಪ್ಪು ಜಯಂತಿ ಆಚರಿಸುವಾಗ ಬಿಜೆಪಿ ಸಾವರ್ಕರ್‌ರನ್ನು ಮರೆತಿತ್ತು ಎಂದಿದ್ದಾರೆ.

ಸಾವರ್ಕರ್ ವಿರುದ್ಧ ಹೇಳಿಕೆ ನೀಡುತ್ತಿರುವ ಸಿದ್ದರಾಮಯ್ಯ ಹೇಡಿ ಸ್ವಭಾವದವರು ಎಂದು ಟೀಕಿಸಿದ ಧರ್ಮೇಂದ್ರ ಅವರು ವಿರುದ್ಧ ದೂರು ದಾಖಲಿಸಿ ಕಾಂಗ್ರೆಸ್ ವಿರುದ್ಧ ಹೋರಾಡುವುದಾಗಿ ಹೇಳಿದರು. ಅದೇ ಸಂದರ್ಭದಲ್ಲಿ ಸಿದ್ದರಾಮಯ್ಯ ಮಾಂಸ ತಿಂದು ದೇವಸ್ಥಾನಕ್ಕೆ ಹೋದರು ಎಂದು ಬಿಜೆಪಿ ಅನಗತ್ಯವಾಗಿ ವಿವಾದವೆಬ್ಬಿಸುತ್ತಿದೆ. ಏಕೆಂದರೆ ಬಿಜೆಪಿಗೆ ಬೇರೆ ವಿಷಯಗಳೇ ಇಲ್ಲ. ಬಿಜೆಪಿಯವರು ಎಂದೂ ಮಾಂಸ ತಿಂದು ದೇವಾಲಯಕ್ಕೆ ಹೋಗಿಲ್ಲವೇ ಎಂದರು. ಜೊತೆಗೆ ನಾನು ವಿಷಯದಲ್ಲಿ ಸಿದ್ದರಾಮಯ್ಯನವರನ್ನು ಬೆಂಬಲಿಸುವುದಿಲ್ಲ ಎಂದು ಸ್ಪಷ್ಟೀಕರಣ ನೀಡಿದರು.

ಇದೇ ಧರ್ಮೇಂದ್ರರವರು ಈ ಹಿಂದೆ ಗಾಂಧಿಯನ್ನು ಕೊಂದವರು ನಾವು ಎಂಬ ಹೇಳಿಕೆ ನೀಡಿ ಬಂಧನಕ್ಕೆ ಒಳಗಾಗಿದ್ದರು. ಪತ್ರಿಕಾಗೋಷ್ಟಿಯಲ್ಲಿ “ನಾವು ಗಾಂಧೀಜಿಯನ್ನೆ ಬಿಟ್ಟಿಲ್ಲ ಸ್ವಾಮಿ, ಇನ್ನು ನೀವು ಯಾವ ಲೆಕ್ಕ ನಮಗೆ? ಹಿಂದೂಗಳ ಮೇಲೆ ನಡೆದಿರುವ ದಾಳಿಯನ್ನು ಖಂಡಿಸಿ ಗಾಂಧೀಜಿಯನ್ನೇ ಹತ್ಯೆ ಮಾಡಿದವರಿಗೆ ನಿಮ್ಮ ವಿಚಾರದಲ್ಲಿ ಆಲೋಚನೆ ಮಾಡಲ್ಲಿಕ್ಕೆ ಸಾಧ್ಯವಿಲ್ಲ ಎನ್ನುತ್ತೀರಾ?” ಎಂಬ ಹೇಳಿಕೆ ನೀಡಿದ್ದರು.

ದೇಗುಲ ಧ್ವಂಸ ವಿರೋಧಿಸಿ ಹೇಳಿಕೆ ನೀಡಿದ್ದ ಅವರು, ಬಿಜೆಪಿ, ಸಂಘಪರಿವಾರ ಮತ್ತು ಸಹಪರಿವಾರಗಳಾದ ಹಿಂದೂ ಜಾಗರಣ ವೇದಿಕೆ, ಭಜರಂಗದಳ, ವಿಹಿಂಪ ರಾಜ್ಯದ ವಿವಿಧೆಡೆ ಪ್ರತಿಭಟನೆ ನಡೆಸಿವೆ. ಸ್ವಾಮಿ ನಾನು ಕೇಳುತ್ತೇನೆ ರಾಜ್ಯದಲ್ಲಿ ಯಾರ ಸರ್ಕಾರ ಇದೆ? ಒಂದು ವೇಳೆ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಆಡಳಿತದಲ್ಲಿ ಇದ್ದಿದ್ರೆ ಪರಿಸ್ಥಿತಿ ಏನಾಗ್ತಿತ್ತು..? ಕರ್ನಾಟಕ ಹೀಗೆ ಇರುತ್ತಿತ್ತೆ? ಎಂದು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದರು.

ಇದನ್ನೂ ಓದಿ; ಗಾಂಧೀಜಿಯನ್ನೆ ಹತ್ಯೆ ಮಾಡಿದವರು ನಾವು, ಇನ್ನು ನೀವು ಯಾವ ಲೆಕ್ಕ?: ಹಿಂದೂ ಮಹಾಸಭಾ ಮುಖಂಡನ ಪ್ರಚೋದನಾಕಾರಿ ಹೇಳಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...