Homeಕರ್ನಾಟಕಬಿಜೆಪಿಯ ಜನಾಶೀರ್ವಾದ ಯಾತ್ರೆಯಲ್ಲಿ ಕೊರೊನಾ ಬರುವುದಿಲ್ಲವೆ?: ಕಾಂಗ್ರೆಸ್ ಪ್ರಶ್ನೆ

ಬಿಜೆಪಿಯ ಜನಾಶೀರ್ವಾದ ಯಾತ್ರೆಯಲ್ಲಿ ಕೊರೊನಾ ಬರುವುದಿಲ್ಲವೆ?: ಕಾಂಗ್ರೆಸ್ ಪ್ರಶ್ನೆ

- Advertisement -
- Advertisement -

ಒಕ್ಕೂಟ ಸರ್ಕಾರದ ಸಚಿವ ಸಂಪುಟಕ್ಕೆ ಇತ್ತೀಚೆಗೆ ಸೇರ್ಪಡೆಯಾದ ರಾಜ್ಯದ ನಾಲ್ಕು ಹೊಸ ಮಂತ್ರಿಗಳನ್ನು ಕರ್ನಾಟಕದ ಜನರಿಗೆ ಪರಿಚಯಿಸುವ ಉದ್ದೇಶದಿಂದ ರಾಜ್ಯದ ಬಿಜೆಪಿ ಘಟಕವು ಆಗಸ್ಟ್ 16 (ಸೋಮವಾರ) ರಿಂದ “ಜನಾಶೀರ್ವಾದ ಯಾತ್ರೆ” ಯನ್ನು ಕೈಗೆತ್ತಿಕೊಂಡಿದೆ.

ಬಿಜೆಪಿಯ ಜನಾಶೀರ್ವಾದ ಯಾತ್ರೆಗೆ ಕರ್ನಾಟಕ ಕಾಂಗ್ರೆಸ್ ಪ್ರತಿಕ್ರಿಯಿಸಿದ್ದು, ’ ಎಲ್ಲದಕ್ಕೂ ಕೋವಿಡ್ ರೂಲ್ಸ್ ಜಾರಿಗೊಳಿಸಿದ್ದರೂ ಬಿಜೆಪಿ ಪಕ್ಷದ ಜನಾಶೀರ್ವಾದ ಯಾತ್ರೆಗೆ ಯಾವುದೇ ರೂಲ್ಸ್ ಇಲ್ಲ, ಅವರ ಯಾತ್ರೆಯಲ್ಲಿ ಕೊರೊನಾ ಬರುವುದಿಲ್ಲವೇ” ಎಂದು ಟೀಕಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, “ಗಣೇಶ ಹಬ್ಬಕ್ಕೆ ಕೊರೊನಾ ರೂಲ್ಸ್, ದೇದೇವಾಲಯಗಳಿಗೆ ಕೊರೊನಾ ರೂಲ್ಸ್, ಮದುವೆ ಸಮಾರಂಭಗಳಿಗೆ ಕೊರೊನಾ ರೂಲ್ಸ್, ಸಂತೆ, ಮಾರ್ಕೆಟ್‌ಗಳಿಗೆ ಕೊರೊನಾ ರೂಲ್ಸ್ ಎಲ್ಲದಕ್ಕೂ ಕೋವಿಡ್ ರೂಲ್ಸ್ ಜಾರಿಗೊಳಿಸಿದ್ದರೂ ಬಿಜೆಪಿ ಪಕ್ಷದ ಜನಾಶೀರ್ವಾದ ಯಾತ್ರೆಗೆ ಯಾವುದೇ ರೂಲ್ಸ್ ಇಲ್ಲ, ಅವರ ಯಾತ್ರೆಯಲ್ಲಿ ಕೊರೊನಾ ಬರುವುದಿಲ್ಲವೇ!” ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಒಕ್ಕೂಟ ಸರ್ಕಾರದ ಹೊಸ ಮಂತ್ರಿಗಳನ್ನು ಪರಿಚಯಿಸಲು ಬಿಜೆಪಿಯಿಂದ ‘ಜನಾಶೀರ್ವಾದ ಯಾತ್ರೆ’

ಮತ್ತೊಂದು ಟ್ವೀಟ್ ಮಾಡಿರುವ ಕಾಂಗ್ರೆಸ್, ಜನಾಶೀರ್ವಾದ ಯಾತ್ರೆಯಲ್ಲಿ ಉಂಟಾದ ನೂಕುನುಗ್ಗಲಿನ ಚಿತ್ರಗಳನ್ನು ಹಂಚಿಕೊಂಡಿದೆ.

“ರಾಜ್ಯದಲ್ಲಿ ಕೊರೊನಾ ಉಲ್ಬಣವಾಗುತ್ತಿದೆ, ಲಸಿಕಾಕರಣ ಹಳ್ಳ ಹಿಡಿದಿದೆ, ಲಸಿಕೆ ಕೊಡಲಾಗದೆ ಟಫ್ ರೂಲ್ಸ್ ಹೆಸರಲ್ಲಿ ಜನರ ಬದುಕಿನ ಮೇಲೆ ಸವಾರಿ ಮಾಡುತ್ತಿದೆ ಸರ್ಕಾರ. ಜನಸಾಮಾನ್ಯರಿಗೆ ರೂಲ್ಸ್ ಹೇರಿ ಬಿಜೆಪಿ ಮಾತ್ರ ಜನ ಸೇರಿಸಿ ಜನಾಶೀರ್ವಾದ ಯಾತ್ರೆ ಮಾಡಬಹುದಂತೆ, ಇವರೇನು ಒಲಂಪಿಕ್ಸ್ ಪದಕ ಗೆದ್ದು ಬಂದವರೇ?” ಎಂದು ಟೀಕಿಸಿದೆ.

ಕೊರೊನಾಶಿರ್ವಾದಯಾತ್ರೆ ಹ್ಯಾಶ್‌ಟ್ಯಾಗ್ ಬಳಸಿ ಸರ್ಕಾರ ಜನಾಶೀರ್ವಾದ ಯಾತ್ರೆ ಹೆಸರಲ್ಲಿ ಕೊರೊನಾ ಹರಡುತ್ತಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದೆ.

ಸಂಸತ್‌ ಅಧಿವೇಶನದಲ್ಲಿ ಹೊಸ ಮಂತ್ರಿಗಳನ್ನು ಪರಿಚಯಿಸಲು ಪ್ರಧಾನಿ ಮೋದಿಗೆ ವಿಪಕ್ಷಗಳು ಅನುಮತಿ ನೀಡದ ಕಾರಣ, ಇಂತಹ ಜನಾಶೀರ್ವಾದ ಯಾತ್ರೆಗಳನ್ನು ಕೈಗೊಳ್ಳುವಂತೆ ರಾಜ್ಯ ಘಟಕಗಳಿಗೆ ಬಿಜೆಪಿ ಕೇಂದ್ರ ನಾಯಕತ್ವ ಸೂಚನೆ ನೀಡಿತ್ತು ಎನ್ನಲಾಗಿದೆ.

ಹೊಸ ಸಚಿವರ ನೇತೃತ್ವದ ನಾಲ್ಕು ತಂಡಗಳು 24 ಲೋಕಸಭಾ ಕ್ಷೇತ್ರಗಳಲ್ಲಿ ಸಂಚರಿಸಲಿವೆ. ಒಟ್ಟು 161 ಕಾರ್ಯಕ್ರಮಗಳು ನಡೆಯಲಿವೆ. ಸಾರ್ವಜನಿಕ ಸಭೆಗಳಲ್ಲಿ, ಅವರು ಒಕ್ಕೂಟ ಸರ್ಕಾರದ ಯೋಜನೆಗಳ ಬಗ್ಗೆ ಮಾತನಾಡುತ್ತಾರೆ. ಕೊರೊನಾ ಲಸಿಕಾ ಕೇಂದ್ರಗಳಿಗೆ ಭೇಟಿ ನೀಡುತ್ತಾರೆ. ಬರಹಗಾರರು, ಕಲಾವಿದರು ಮತ್ತು ಹಿರಿಯ ಬಿಜೆಪಿ ನಾಯಕರ ಮನೆಗಳು ಮತ್ತು ಮಠಾಧೀಶರನ್ನು ಭೇಟಿ ಮಾಡುತ್ತಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಮಾಹಿತಿ ನೀಡಿದ್ದರು.


ಇದನ್ನೂ ಓದಿ: 3 ವರ್ಷದಿಂದ ಒಂದೇ ಭರವಸೆ ನೀಡುತ್ತಿರುವ ಪ್ರಧಾನಿ : ಸಂಖ್ಯೆಯನ್ನಾದರೂ ಬದಲಿಸಿ ಎಂದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...