Homeಕರ್ನಾಟಕಶುರುವಾಗಿಯೇಬಿಟ್ಟಿತಾ ಬಿಜೆಪಿ-ಜೆಡಿಎಸ್ ಮೈತ್ರಿ?

ಶುರುವಾಗಿಯೇಬಿಟ್ಟಿತಾ ಬಿಜೆಪಿ-ಜೆಡಿಎಸ್ ಮೈತ್ರಿ?

- Advertisement -
- Advertisement -

| ನೀಲಗಾರ |

ಬಿಜೆಪಿಗೆ ಉಪಚುನಾವಣೆಯಲ್ಲಿ ಬಹುಮತ ಪಡೆಯುವಷ್ಟು ಸೀಟುಗಳು ಬರುವ ಕುರಿತು ಅನುಮಾನ ಉಂಟಾಗುತ್ತಿದ್ದ ಹಾಗೇ, ‘ಈ ಸರ್ಕಾರ ಉರುಳಲು ಬಿಡುವುದಿಲ್ಲ’ ಎಂದು ಕುಮಾರಸ್ವಾಮಿಯವರು ಸ್ಪಷ್ಟಪಡಿಸಿಬಿಟ್ಟಿದ್ದಾರೆ. ಅಷ್ಟೇ ವೇಗವಾಗಿ ಯಡಿಯೂರಪ್ಪನವರು ಧನ್ಯವಾದಗಳನ್ನೂ ಅರ್ಪಿಸಿಬಿಟ್ಟಿದ್ದಾರೆ.

ಮೈತ್ರಿ ಸರ್ಕಾರ ರಚನೆಯಾಗಿಲ್ಲ ಎಂಬುದೊಂದು ಬಿಟ್ಟರೆ ಇದೀಗ ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೈತ್ರಿ ಏರ್ಪಟ್ಟಿದೆ ಎಂಬುದರಲ್ಲಿ ಯಾವ ಸಂದೇಹವೂ ಉಳಿದಿಲ್ಲ. ದೋಸೆ ಮಗುಚಿದ ಹಾಗೆ ಜೆಡಿಎಸ್ ಬಹುಬೇಗ ಮೈತ್ರಿ ಬದಲಿಸಲು ಸಾಧ್ಯ ಎಂಬ ಬಗ್ಗೆ ಯಾರಿಗೇನೂ ಡೌಟು ಇಲ್ಲವಾದರೂ, ಇಷ್ಟು ಬೇಗ ಅದಕ್ಕೆ ಸಂದರ್ಭ ಒದಗಿ ಬಂದುಬಿಡುತ್ತದೆ ಎಂದುಕೊಂಡಿರಲಿಲ್ಲ. ಬಿಜೆಪಿಗೆ ಉಪಚುನಾವಣೆಯಲ್ಲಿ ಬಹುಮತ ಪಡೆಯುವಷ್ಟು ಸೀಟುಗಳು ಬರುವ ಕುರಿತು ಅನುಮಾನ ಉಂಟಾಗುತ್ತಿದ್ದ ಹಾಗೇ, ‘ಈ ಸರ್ಕಾರ ಉರುಳಲು ಬಿಡುವುದಿಲ್ಲ’ ಎಂದು ಕುಮಾರಸ್ವಾಮಿಯವರು ಸ್ಪಷ್ಟಪಡಿಸಿಬಿಟ್ಟಿದ್ದಾರೆ. ಅಷ್ಟೇ ವೇಗವಾಗಿ ಯಡಿಯೂರಪ್ಪನವರು ಧನ್ಯವಾದಗಳನ್ನೂ ಅರ್ಪಿಸಿಬಿಟ್ಟಿದ್ದಾರೆ.

ಮುಖ್ಯವಾಗಿ ನಾಲ್ಕು ಅಂಶಗಳು ಅದನ್ನು ಸಾಧ್ಯವಾಗಿಸುತ್ತಿವೆ.

1. ಡಿಕೆಶಿ ಫ್ಯಾಕ್ಟರ್: ಡಿಕೆ ಶಿವಕುಮಾರ್‍ರನ್ನು ಅಪ್ಪಿಕೊಳ್ಳುವ ಮೂಲಕ ಜಾತಿ ಸಮೀಕರಣದ ಅನುಕೂಲವನ್ನು ಗೌಡರ ಕುಟುಂಬ ಪಡೆದುಕೊಳ್ಳುತ್ತಿದೆಯಾದರೂ, ಡಿಕೆಶಿಗಾಗಿದ್ದು ತಮಗೂ ಮೆಸೇಜ್ ಎಂಬುದು ಅವರಿಗೆ ಗೊತ್ತಿದೆ. ಅದೇರೀತಿ ಚಿದಂಬರಂ ಮತ್ತಿತರರು ಜೈಲುಪಾಲಾಗಿ ಹೊರಬರದೇ ಇರುವುದು ಸಿಬಿಐನಲ್ಲೂ ಕೇಸುಗಳನ್ನು ಎದುರಿಸುತ್ತಿರುವ ಎಚ್‍ಡಿಕೆಗೆ ಆತಂಕ ಹುಟ್ಟಿಸಿದೆ.

2. ಉಪಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚಿನ ಸೀಟುಗಳು ಬಂದರೂ, ಬಾರದೇ ಇದ್ದರೂ ಆಪರೇಷನ್ ಕಮಲದ ಮುಂದಿನ ಟಾರ್ಗೆಟ್ ಜೆಡಿಎಸ್ ಎಂಎಲ್‍ಎಗಳೇ ಆಗಿರುತ್ತಾರೆಂಬುದರಲ್ಲಿ ಅನುಮಾನವಿಲ್ಲ. ಈಗಾಗಲೇ ಜಿ.ಟಿ.ದೇವೇಗೌಡರು ಒಂದು ಕಾಲು ಹೊರಗಿಟ್ಟಿರುವುದನ್ನು ಘೋಷಿಸಿಯೂ ಆಗಿದೆ. ಹಾಗಾಗಿ ಜೆಡಿಎಸ್‍ಅನ್ನು ದುರ್ಬಲಗೊಳಿಸಿಕೊಳ್ಳುತ್ತಾ ಹೋಗುವುದಕ್ಕಿಂತ ಅಧಿಕಾರ ಹಂಚಿಕೆ ಅಥವಾ ಅಧಿಕಾರಸ್ಥರ ಸಖ್ಯದೊಂದಿಗೆ ಎಂಎಲ್‍ಎಗಳನ್ನು ಮತ್ತು ಪಕ್ಷವನ್ನು ಉಳಿಸಿಕೊಳ್ಳುವುದು ಜೆಡಿಎಸ್‍ಗೆ ಅನಿವಾರ್ಯ.

3. ಒಂದುವೇಳೆ ಬಿಜೆಪಿಗೆ ಬಹುಮತಕ್ಕೆ ಬೇಕಿರುವಷ್ಟು ಎಂಎಲ್‍ಎಗಳು ಗೆಲ್ಲದಿದ್ದರೆ ಯಡಿಯೂರಪ್ಪನವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿ ಇಳಿಸಬಹುದಾದರೂ, ತಾವೇ ಸರ್ಕಾರ ರಚನೆ ಮಾಡುವುದು ಸಾಧ್ಯವಿಲ್ಲ. ಯಾರು ಒಪ್ಪಿದರೂ ಕಾಂಗ್ರೆಸ್‍ನಲ್ಲಿ ಸಿದ್ದರಾಮಯ್ಯ ಒಪ್ಪುವುದಿಲ್ಲವಾದ್ದರಿಂದ ಮತ್ತೆ ಚುನಾವಣೆಗೇ ಹೋಗಬೇಕು. ಅದಕ್ಕೆ ಬಿಜೆಪಿಗಿರುವ ಸಿದ್ಧತೆಯೂ ಜೆಡಿಎಸ್‍ಗಿಲ್ಲ.

4. ಫೀಲ್ಡ್‍ನಲ್ಲಿ ಜೆಡಿಎಸ್‍ಗೆ ಎದುರಾಳಿ ಕಾಂಗ್ರೆಸ್ಸೇ ಹೊರತು ಬಿಜೆಪಿಯಲ್ಲ. ಒಂದುವೇಳೆ ಮೈತ್ರಿ ಮುಂದುವರೆದರೆ ದಕ್ಷಿಣ ಕರ್ನಾಟಕದ ಎಲ್ಲಾ ಭಾಗಗಳಲ್ಲೂ ಕಾಂಗ್ರೆಸ್ ವರ್ಸಸ್ ಬಿಜೆಪಿ ಎಂದಾಗಿಬಿಟ್ಟರೆ ಜೆಡಿಎಸ್ ಅಪ್ರಸ್ತುತವಾಗಿಬಿಡುತ್ತದೆ.

ಇವೆಲ್ಲಾ ಕಾರಣಗಳಿಂದ ಜೆಡಿಎಸ್ ಮತ್ತು ಬಿಜೆಪಿಯ ನಡುವೆ ಮೈತ್ರಿ ಏರ್ಪಟ್ಟಿದೆ. ಇನ್ನು ಜಾತ್ಯತೀತತೆ, ಸಿದ್ಧಾಂತ ಎಂಬುದಕ್ಕೂ ಕುಮಾರಸ್ವಾಮಿಯವರಿಗೂ ಯಾವ ಸಂಬಂಧವೂ ಇಲ್ಲ. ಹೀಗಾಗಿ ಒಂದು ರೀತಿಯಲ್ಲಿ ಇದು ಸಹಜ ಬೆಳವಣಿಗೆಯಾಗಿದೆ. ಹರಿಯಾಣದಲ್ಲಿ ಬಿಜೆಪಿಯನ್ನು ಬಾಯಿಗೆಬಂದಂತೆ ಬಯ್ಯುತ್ತಿದ್ದ ಜೆಜೆಪಿ ಪಕ್ಷದ ಚೌತಾಲಾ ಅವರ ಜೊತೆಯೇ ಚುನಾವಣೋತ್ತರ ಮೈತ್ರಿಗೆ ಮುಂದಾದರು. ಭ್ರಷ್ಟಾಚಾರದ ಪ್ರಕರಣಗಳಲ್ಲಿ ಜೈಲಿನಲ್ಲಿದ್ದ ಆತನ ತಂದೆ ಮತ್ತು ತಾತ ಪೆರೋಲ್ ಮೇಲೆ ಹೊರಬಂದು ಪ್ರಮಾಣವಚನ ಸಮಾರಂಭಕ್ಕೆ ಹಾಜರಾದರು. ಇದರ ಬಗ್ಗೆ ಬಿಜೆಪಿಗೂ ಯಾವ ನಾಚಿಕೆಯಿರಲಿಲ್ಲ. ಭ್ರಷ್ಟಾಚಾರದ ವಿರುದ್ಧ ಮೋದಿ ಮತ್ತು ಶಾ ಈಗಲೂ ವೀರಾವೇಶದ ಭಾಷಣಗಳನ್ನೂ ಮಾಡಬಹುದು. ಆದರೆ, ಇಂಥದ್ದಕ್ಕೇನೂ ಅಡ್ಡಿಯಾಗುವುದಿಲ್ಲ.

ಕರ್ನಾಟಕದಲ್ಲಿ ಗಣಿ ಕೇಸುಗಳಲ್ಲಿ ಜೈಲಿಗೆ ಹೋಗಿಬಂದ ಬಿಜೆಪಿ ಶಾಸಕರನ್ನು ಆಲಂಗಿಸಿಕೊಂಡ ಕಾಂಗ್ರೆಸ್ಸಿಗೂ ಯಾವ ನೈತಿಕತೆಯಿಲ್ಲ. ಈಗ ಅದೇ ಶಾಸಕರು ಮರಳಿ ಬಿಜೆಪಿಗೇ ಹೋಗಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಜೆಡಿಎಸ್‍ಗೆ ಬಿಜೆಪಿ ಜೊತೆ ಸೇರುವುದರಿಂದ ನೈತಿಕ ಪ್ರಶ್ನೆಗಳೇಳುವ ಸಾಧ್ಯತೆಯೇ ಇಲ್ಲ.

ಹಾಗಾಗಿ ಇನ್ನೊಂದು ನಿರ್ಲಜ್ಜ ಮೈತ್ರಿಯನ್ನು ನೋಡಲು ಕರ್ನಾಟಕವು ಸಿದ್ಧವಾಗಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...