Homeಕರ್ನಾಟಕBJP-JDS ಮೈತ್ರಿ ನಿಶ್ಚಿತ: ಹೆಚ್​ಡಿ ದೇವೇಗೌಡ ಸ್ಪಷ್ಟನೆ

BJP-JDS ಮೈತ್ರಿ ನಿಶ್ಚಿತ: ಹೆಚ್​ಡಿ ದೇವೇಗೌಡ ಸ್ಪಷ್ಟನೆ

- Advertisement -
- Advertisement -

”2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್​ ಮೈತ್ರಿ ಮಾಡಿಕೊಳ್ಳುವುದು ಅಂತಿಮ ಹಂತಕ್ಕೆ ಬಂದಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಮಾತನಾಡಿರುವುದು ನಿಜ ಎಂದು ಸ್ವತಃ ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ ಒಪ್ಪಿಕೊಂಡಿದ್ದಾರೆ.

ಈ ಬಗ್ಗೆ ಇಂದು (ಸೆ. 10) ಬೆಂಗಳೂರಿನಲ್ಲಿ ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ದೇವೇಗೌಡ ಅವರು, ”ಮೈತ್ರಿ ಬಗ್ಗೆ ಪ್ರಧಾನಿ ಮೋದಿ ಜೊತೆ ಮಾತುಕತೆ ನಡೆದಿರುವುದು ನಿಜ. ಆದರೆ ಸೀಟು ಹಂಚಿಕೆ ಬಗ್ಗೆ ಇನ್ನೂ ಯಾವುದೇ ಚರ್ಚೆ ನಡೆದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

”ನಮಗೆ ಎಷ್ಟು ಸೀಟು ಬೇಕು ಎಂದು ನಾವು ಕೇಳುವುದಿಲ್ಲ. ಸೀಟು ಹಂಚಿಕೆ ಬಗ್ಗೆ ಮೋದಿ ಜೊತೆ ಕುಮಾರಸ್ವಾಮಿ ಮಾತಾಡುತ್ತಾರೆ. ಅವರಾಗಿಯೇ ಬಂದು ಸಂಪರ್ಕ ಮಾಡಿ ಮಾತಾಡಿದ್ದಾರೆ. ಪಕ್ಷ ಉಳಿಸಲು ದೆಹಲಿ ನಾಯಕರನ್ನು ಸಂಪರ್ಕ ಮಾಡಿದ್ದೇನೆ. ಪ್ರತಿಕ್ಷೇತ್ರದ ಪರಿಸ್ಥಿತಿ ವಿವರಿಸಿದ್ದೇನೆ. ವಿಜಯಪುರ, ರಾಯಚೂರು, ಬೀದರ್​ನಲ್ಲಿ ಬಿಜೆಪಿಗೆ ಬೆಂಬಲ. ಅಲ್ಲಿ ನಾವು ಬೆಂಬಲ ನೀಡಿದರೆ ಬಿಜೆಪಿ ಗೆಲ್ಲಲು ಸಾಧ್ಯವಿದೆ” ಎಂದು ಹೇಳಿದರು.

ಬಿಜೆಪಿ ಜೆಡಿಎಸ್ ಮೈತ್ರಿ ಬಗ್ಗೆ ಇಷ್ಟು ದಿನ ಸುದ್ದಿಗಳು ಹರಿದಾಡುತ್ತಿದ್ದವು. ಆದರೆ ಎರಡೂ ಪಕ್ಷಗಳು ಸ್ಪಷ್ಟನೆ ನೀಡಿರಲಿಲ್ಲ. ಆದರೆ ಇದೀಗ ಎರಡೂ ಪಕ್ಷದ ನಾಯಕರು ಮೈತ್ರಿ ಮಾಡಿಕೊಳ್ಳುವ ಬಗ್ಗೆ ಸ್ಪಷ್ಟನೆ ನೀಡಿವೆ.

ಬಿಜೆಪಿ ನಾಯಕರಾದ ಬಿಎಸ್ ಯಡಿಯೂರಪ್ಙ ಹಾಗೂ ಬಸವರಾಜ ಬೊಮ್ಮಾಯಿ ಅವರು ಮೈತ್ರಿ ಪಕ್ಕಾ ಎಂದು ಖಚಿತಪಡಿಸಿದ್ದರು. ಆದರೆ, ಈ ಬಗ್ಗೆ ಜೆಡಿಎಸ್​​ ವರಿಷ್ಠರಿಂದ ಯಾವುದೇ ಅಧಿಕೃತ ಹೇಳಿಕೆ ಬಂದಿರಲಿಲ್ಲ. ಇದೀಗ ಸ್ವತಃ ಹೆಚ್​ಡಿ ದೇವೇಗೌಡ ಅವರೇ ಮೈತ್ರಿ ಬಗ್ಗೆ ನರೇಂದ್ರ ಮೋದಿ ಅವರ ಜೊತೆ ಮಾತನಾಡಿರುವುದು ನಿಜ ಎಂದು ಒಪ್ಪಿಕೊಂಡಿದ್ದಾರೆ. ಜೆಡಿಎಸ್​ ಹಾಗೂ ಬಿಜೆಪಿ ಮೈತ್ರಿಯೊಂದಿಗೆ ಲೋಕಸಭಾ ಅಖಾಡಳ್ಳಿಯುವುದು ನಿಶ್ಚಯ ಆಗಿದ್ದು, ಇನ್ನು ಕ್ಷೇತ್ರಗಳ ಹಂಚಿಕೆ ಬಗ್ಗೆ ಚರ್ಚೆಗಳು ನಡೆದಿವೆ.

ಇದನ್ನೂ ಓದಿ: ಬಿಜೆಪಿ ಸೋಲಿನ ಕಾರಣ ಬಿಚ್ಚಿಟ್ಟ ರೇಣುಕಾಚಾರ್ಯ; ಸ್ವಪಕ್ಷೀಯರ ವಿರುದ್ಧ ವಾಗ್ದಾಳಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ: ರೇವಣ್ಣ ನಿವಾಸದಲ್ಲಿ ಎಸ್‌ಐಟಿ ತಂಡದಿಂದ ಸ್ಥಳ ಮಹಜರು

0
ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಮಹಿಳೆಯೊಬ್ಬರು ದಾಖಲಿಸಿರುವ ಲೈಂಗಿಕ ದೌರ್ಜನ್ಯ ದೂರಿಗೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿರುವ ಎಸ್‌ಐಟಿ ತಂಡ, ಇಂದು (ಮೇ 4) ಹಾಸನದ ಹೆಚ್‌.ಡಿ ರೇವಣ್ಣ ಅವರ ನಿವಾಸದಲ್ಲಿ ಮಹಜರು ನಡೆಸಿದೆ. ಡಿವೈಎಸ್‌ಪಿ...