Homeಕರ್ನಾಟಕBJP-JDS ಮೈತ್ರಿ ಮುನಿಸು: ಸಿಎಂ ಇಬ್ರಾಹಿಂ ಮತ್ತೆ ಕಾಂಗ್ರೆಸ್‌ಗೆ ಮರಳುವ ಸಾಧ್ಯತೆ

BJP-JDS ಮೈತ್ರಿ ಮುನಿಸು: ಸಿಎಂ ಇಬ್ರಾಹಿಂ ಮತ್ತೆ ಕಾಂಗ್ರೆಸ್‌ಗೆ ಮರಳುವ ಸಾಧ್ಯತೆ

- Advertisement -
- Advertisement -

2024ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಎದುರಿಸಲು ಬಿಜೆಪಿ ಜೊತೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿರುವ ಬಗ್ಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರು ಅಮಸಮಾಧಾನ ಹೊರಹಾಕಿದ್ದಾರೆ.

ಈ ಕುರಿತು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ”ದೆಹಲಿಗೆ ಹೋಗುವಾಗ ನನ್ನನ್ನು ಬಿಟ್ಟು ಹೋಗಿದ್ದಾರೆ. ಇದು ನನಗೆ ನೋವಾಗಿದೆ. ಇವರು ಬಿಜೆಪಿ ಹತ್ತಿರ ಹೋಗಿದ್ದು ತಪ್ಪು. ಅವರೇ ದೇವೇಗೌಡರ ಮನೆ ಬಳಿಗೆ ಬರಬೇಕಾಗಿತ್ತು. ಪಕ್ಷದ ಕಾರ್ಯಕರ್ತರ ಮುಂದೆ ತಲೆ ತಗ್ಗಿಸುವ ಪರಿಸ್ಥಿತಿ ಬಂದಿದೆ” ಎಂದು ಬೇಸರ ವ್ಯಕ್ತಪಡಿಸಿದರು.

”ನಾನು ಪಕ್ಷದ ಅಧ್ಯಕ್ಷ, ನೀವು ದೆಹಲಿಗೆ ಹೋದಿರಿ, ನನಗೆ ಒಂದು ಮಾತು ಹೇಳಿಲ್ಲ… ಏನು ಚರ್ಚೆ ಮಾಡಿದ್ದೀರಿ ಎಂಬ ಬಗ್ಗೆ ಈವರೆಗೂ ನನಗೆ ಮಾಹಿತಿ ಬಂದಿಲ್ಲ. ಮೈತ್ರಿ ಎಲ್ಲಿ ಆಗಿದೆ? ನಾನು ಪಕ್ಷದ ಅಧ್ಯಕ್ಷ, ಪಕ್ಷದಲ್ಲಿ ಎಲ್ಲಿ ಚರ್ಚೆ ಆಗಿದೆ?” ಎಂದು ಕುಮಾಸ್ವಾಮಿ ಅವರನ್ನು ಪ್ರಶ್ನಿಸಿದರು.

”ಜನತಾದಳದ ಮೂಲ ಮತಗಳು ಈ ಬಾರಿ ಕಾಂಗ್ರೆಸ್​ಗೆ ಹೋಗಿದೆ. ಅದನ್ನು ಒಪ್ಪಲು ತಯಾರಿಲ್ಲ, ಅದನ್ನು ಒಪ್ಪಿಕೊಳ್ಳಿ. ಪಕ್ಷದಲ್ಲಿ ಚರ್ಚೆ ಆಗಿ ನಿರ್ಣಯ ಆದ ಮೇಲೆ ರಾಜ್ಯಾಧ್ಯಕ್ಷನಾಗಿ ನಾನು ಸಹಿ ಹಾಕಬೇಕು. ಕೋರ್ ಕಮಿಟಿ ಪ್ರವಾಸ ಶುರು ಮಾಡಿಲ್ಲ, ಆಗಲೇ ಹೋಗಿ ಭೇಟಿ ಮಾಡಿ ಬಂದಿದ್ದಾರೆ” ಎಂದು ಕುಮಾರಸ್ವಾಮಿ ಬಗ್ಗೆ ಅಸಮಾಧಾನ ಹೊರಹಾಕಿದರು.

ಅಕ್ಟೋಬರ್ 16ರ ಸಭೆಯ ಬಳಿಕ ಪಕ್ಷದ ವರಿಷ್ಠ ಎಚ್.​​ಡಿ ದೇವೇಗೌಡರು, ಕುಮಾರಸ್ವಾಮಿ ಜೊತೆ ಮಾತಾಡುತ್ತೇನೆ. ಶರದ್ ಪವಾರ್ ಸೇರಿದಂತೆ ಹಲವರು ಮತ್ತು ದೆಹಲಿಯಿಂದ ಕಾಂಗ್ರೆಸ್ ನಾಯಕರು ಮಾತಾಡಿದ್ದಾರೆ. ಸಿದ್ದರಾಮಯ್ಯ ಜೊತೆ ಏನೂ ಮಾತುಕತೆ ಮಾಡಿಲ್ಲ. ಅಕ್ಟೋಬರ್ 16ರ ಬಳಿಕ ಗಟ್ಟಿ ನಿರ್ಧಾರ ಕೈಗೊಳ್ಳುತ್ತೇನೆ” ಎಂದು ಸ್ಪಷ್ಟಪಡಿಸಿದರು.

”ನನಗೆ ಸ್ಥಾನ ಮುಖ್ಯ ಅಲ್ಲ, ಮಾನ ಮುಖ್ಯ. 60 ವರ್ಷದ ರಾಜಕೀಯದಲ್ಲಿ ಕಳಂಕ ನನ್ನ ಮೇಲೆ ಇಲ್ಲ. ಮೈತ್ರಿ ಬೇಕಾಗಿಲ್ಲ ಅಂತ ಅವತ್ತು ದೇವೇಗೌಡರು ಹೇಳಿದ್ದರು. ದೇವೇಗೌಡರು ಹೋಗಿ ಮೈತ್ರಿ ಬಗ್ಗೆ ಮಾತಾಡಿಲ್ಲ, ಕುಮಾರಸ್ವಾಮಿ ಹೋಗುವಾಗ ನನಗೆ ತಿಳಿಸಿಲ್ಲ. ಜನತಾದಳ ಹಿಂದೂ ಪಕ್ಷವೂ ಅಲ್ಲ, ಮುಸ್ಲಿಂ ಪಕ್ಷವೂ ಅಲ್ಲ. ಜನತಾದಳ ಕನ್ನಡದ ಪಕ್ಷ” ಎಂದು ಸಿ.ಎಂ. ಇಬ್ರಾಹಿಂ ಹೇಳಿದರು.

ಇದನ್ನೂ ಓದಿ: ಬಿಜೆಪಿ ಜೊತೆಗಿನ ಮೈತ್ರಿಯಿಂದ ಜೆಡಿಎಸ್‌ಗೆ ಸಂಕಷ್ಟ: ಮತ್ತೊಂದು ವಿಕೆಟ್ ಪತನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...