Homeಕರ್ನಾಟಕಬಿಜೆಪಿ-ಜೆಡಿಎಸ್‌ನಿಂದ ನನ್ನ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಯತ್ನ: ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್‌ನಿಂದ ನನ್ನ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಯತ್ನ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಅಧಿವೇಶನದಲ್ಲಿ ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಆಡಳಿತ ಪಕ್ಷದವರು ಬೆಳಕು ಚೆಲ್ಲಿ ಚರ್ಚಿಸಿದರು. ಆದರೆ, ವಿರೋಧ ಪಕ್ಷದವರು ನೆಪಕ್ಕೂ ರಾಜ್ಯದ ಜನರ ಸಂಕಷ್ಟಗಳ ಬಗ್ಗೆ ಚಕಾರವನ್ನೇ ಎತ್ತಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ನನ್ನ ರಾಜಕೀಯ ಜೀವನ ತೆರೆದ ಪುಸ್ತಕ. ಪ್ರತಿ ಪುಟಗಳು ಪಾರದರ್ಶಕ ಮತ್ತು ಪ್ರಾಮಾಣಿಕ. ಸಣ್ಣದೊಂದು ಕಪ್ಪು ಚುಕ್ಕೆ ಇಲ್ಲದಂತೆ ರಾಜಕೀಯದ ಪಾವಿತ್ರ್ಯತೆ ಕಾಪಾಡಿಕೊಂಡಿದ್ದೇನೆ. ನನ್ನ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಪ್ರಯತ್ನದಂತೆ ಪ್ರತಿಪಕ್ಷಗಳು ನಡೆದುಕೊಂಡವು” ಎಂದು ಆರೋಪಿಸಿದರು.

“ಬಿಜೆಪಿ, ಜೆಡಿಎಸ್ ಹತಾಶರಾಗಿದ್ದಾರೆ. ನಾವು 135 ಸ್ಥಾನ ಗೆದ್ದ ಬಳಿಕ ರಾಜಕೀಯ ಪ್ರೇರಿತವಾದ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ನಾನು ಎರಡನೇ ಬಾರಿ ಸಿಎಂ ಆಗಿರುವುದು ಅವರಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ” ಎಂದರು.

“ಎರಡು ವಾರವೂ ವಾಲ್ಮೀಕಿ ನಿಗಮದ ಒಂದೇ ವಿಚಾರ ಪ್ರಸ್ತಾಪ ಆಗಿದೆ. ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಚಕಾರವನ್ನೇ ಎತ್ತಲಿಲ್ಲ. ಆಡಳಿತ ಪಕ್ಷದ ಶಾಸಕರು ರಾಜ್ಯದ ಜನರ ಸಮಸ್ಯೆಗಳನ್ನು ಪ್ರಸ್ತಾಪಿಸಿ ಚರ್ಚೆ ನಡೆಸಿದರು. ಇದನ್ನೆಲ್ಲಾ ನೋಡಿದಾಗ ಮುಖ್ಯಮಂತ್ರಿಗಳ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಅಧಿವೇಶನವನ್ನು ದುರುಪಯೋಗ ಪಡಿಸಿಕೊಳ್ಳುವುದು ಬಿಟ್ಟರೆ ಬೇರೆ ಜನಪರವಾದ ಉದ್ದೇಶ ವಿರೋಧ ಪಕ್ಷಗಳಿಗೆ ಇರಲಿಲ್ಲ ಎನ್ನುವುದು ಸ್ಪಷ್ಟವಾಗಿದೆ” ಎಂದು ಹರಿಹಾಯ್ದರು.

“ಮೂಡಾ ಹಗರಣ ವಿಚಾರವಾಗಿ ಕಾನೂನು ವಿದ್ಯಾರ್ಥಿಯಾದ ಹಾಗೂ 40 ವರ್ಷಗಳಿಂದ ಸುದೀರ್ಘ ರಾಜಕಾರಣದಲ್ಲಿ ಇರುವ ನನಗೆ ಒಂದು ನಯಾಪೈಸೆಯಷ್ಟು ತಪ್ಪುಗಳೂ ಕಂಡುಬರುತ್ತಿಲ್ಲ. ಇದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಕೂಡ ಮಾಧ್ಯಮದ ಮೂಲಕ ಈ ನಾಡಿನ ಜನರ ಮುಂದೆ ಇಡುವೆ” ಎಂದರು.

“ನನ್ನ ಮೇಲೆ ಆರೋಪ ಕೇಳಿ ಬಂದಿದ್ದರು ಕೂಡ ಈ ವಿಚಾರಗಳನ್ನೆಲ್ಲಾ ಪರಿಶೀಲಿಸಲು ಜಸ್ಟೀಸ್ ಪಿ.ಎನ್. ದೇಸಾಯಿಯವರ ಅಧ್ಯಕ್ಷತೆಯಲ್ಲಿ ವಿಚಾರಣಾ ಆಯೋಗವನ್ನು ರಚಿಸಲಾಗಿದೆ. ವಿಚಾರಣಾ ಆಯೋಗವು ಈ ಕುರಿತು ತನಿಖೆ ಪ್ರಾರಂಭಿಸಿದೆ. ಬಿಜೆಪಿ, ಜೆಡಿಎಸ್‌ನವರು ಮೂಡಾ ವಿಚಾರದಲ್ಲೂ, ವಾಲ್ಮೀಕಿ ಹಗರಣದಲ್ಲೂ ನನ್ನ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಪ್ರಯತ್ನಿಸುತ್ತಿದ್ದಾರೆ” ಎಂದು ಆರೋಪಿಸಿದರು.

ಬಿಜೆಪಿ-ಜೆಡಿಎಸ್ ರಾಜ್ಯದ ಜನರಿಂದ ದಾಖಲೆಗಳನ್ನು ಮರೆ ಮಾಚಿ ಆಡಿದ ಜಂಟಿ ಕಪಟತನಕ್ಕೆ ದಾಖಲೆಗಳ ಮೂಲಕವೇ ಉತ್ತರ ಕೊಡುವೆ ಎಂದು ಮೂಡಾ ಪ್ರಕರಣದ ದಾಖಲೆಗಳನ್ನು ಸಿಎಂ ಬಹಿರಂಗ ಪಡಿಸಿದರು.

“ಆಗ ಮೂಡಾದಲ್ಲಿದ್ದ ರಾಮದಾಸ್, ನಾಗೇಂದ್ರ, ಜಿಟಿ ದೇವೇಗೌಡ ಯಾವ ಪಕ್ಷದವರು? ನಾವೇನು ಇಂಥಾ ಜಾಗದಲ್ಲೇ ನಿವೇಶನ ಕೇಳಿಲ್ಲ. ಬಿಜೆಪಿಯವರ ಅವಧಿಯಲ್ಲೇ ಅವರೇ ನಿರ್ಣಯ ಕೈಗೊಂಡು ಕೊಟ್ಟಿರುವ ನಿವೇಶನ ಇದು. ಮತ್ತೇಕೆ ರಾಜ್ಯದ ಜನತೆಯ ಮುಂದೆ ಸುಳ್ಳು ಹೇಳಿ ಸಿಕ್ಕಿಕೊಳ್ಳುತ್ತಿದ್ದೀರಿ” ಪ್ರಶ್ನಿಸಿದರು.

“ಕುಟುಂಬದಲ್ಲಿ ಅನ್ಯೋನ್ಯರಾಗಿದ್ದವರನ್ನು ಪರಸ್ಪರ ಎತ್ತಿ ಕಟ್ಟಿ ಮನೆ ಮುರುಕ ರಾಜಕಾರಣ ಮಾಡಿದರೆ ರಾಜ್ಯದ ಜನತೆ ಯಾವುದೇ ಕಾರಣಕ್ಕೂ ಸಹಿಸಲ್ಲ. ಇದರಲ್ಲಿ ನನ್ನದಾಗಲಿ, ನಮ್ಮ ಪತ್ನಿಯವರದ್ದಾಗಲಿ, ನಮ್ಮ ಬಾಮೈದುನನ ಪಾತ್ರ ಎಲ್ಲಿದೆ ಹೇಳಿ” ಎಂದರು.

“ವಿವಾದ ಅಲ್ಲದ್ದನ್ನು ಕೃತಕವಾಗಿ ವಿವಾದವನ್ನಾಗಿಸಲು ಬಿಜೆಪಿ-ಜೆಡಿಎಸ್ ಪಾರ್ಲಿಮೆಂಟಿನಲ್ಲಿ ಪ್ರಯತ್ನಿಸುತ್ತಿದ್ದಾರೆ. ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯದ ಏಳೂವರೆ ಕೋಟಿ ಜನರಿಗೆ ಆಗಿರುವ ಅನ್ಯಾಯದ ಬಗ್ಗೆ ನೆಪಕ್ಕೂ ಪಾರ್ಲಿಮೆಂಟಿನಲ್ಲಿ ಪ್ರಶ್ನೆ ಮಾಡಿಲ್ಲ ಏಕೆ? ಇಲ್ಲಿ ವಿಧಾನಸಭೆಯನ್ನು ಅವರ ರಾಜಕಾರಣಕ್ಕೆ ಬಳಸಿಕೊಂಡರು , ಈಗ ಪಾರ್ಲಿಮೆಂಟನ್ನೂ ಬಳಸಿಕೊಳ್ಳುತ್ತಿದ್ದಾರೆ” ಎಂದು ಕಿಡಿಕಾರಿದರು.

ಇದನ್ನೂ ಓದಿ : ಗ್ಯಾರಂಟಿ ಯೋಜನೆಗಳಿಗೆ ಪರಿಶಿಷ್ಟರ ನಿಧಿ ಬಳಕೆ: ಸದನ ಸಮಿತಿ ಆಕ್ಷೇಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...