Homeಕರ್ನಾಟಕಬಿಜೆಪಿ-ಜೆಡಿಎಸ್‌ನ ಒಳ ಒಪ್ಪಂದದಿಂದ ಉಪಚುನಾವಣೆಯನ್ನು ಗೆಲ್ಲಲಾಗಿದೆ: ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್‌ನ ಒಳ ಒಪ್ಪಂದದಿಂದ ಉಪಚುನಾವಣೆಯನ್ನು ಗೆಲ್ಲಲಾಗಿದೆ: ಸಿದ್ದರಾಮಯ್ಯ

ಮುಂದಿನ ಬಸವಕಲ್ಯಾಣ ಉಪಚುನಾವಣೆಯಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸದಂತೆ ನಿರ್ಧಾರ ತೆಗೆದುಕೊಳ್ಳುವ ಮೂಲಕ ಜೆಡಿಎಸ್ ನಾಯಕರು ಚುನಾವಣೆಗೆ ಮುಂಚಿತವಾಗಿಯೇ ಬಿಜೆಪಿಗೆ ಶರಣಾಗಿದ್ದಾರೆ

- Advertisement -
- Advertisement -

ಅರಸೀಕೆರೆಯ ಖಾಸಗೀ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಸಿದ್ದರಾಮಯ್ಯ, “ಜೆಡಿಎಸ್‌ ಮತ್ತು ಬಿಜೆಪಿ ಪಕ್ಷಗಳು ರಾಜಕೀಯ ಹೊಂದಾಣಿಕೆ ಮಾಡಿಕೊಂಡಿದ್ದಕ್ಕಾಗಿ ಕರ್ನಾಟಕದ ಉಪಚುನಾವಣೆಯಲ್ಲಿ ಬಿಜೆಪಿ ಗೆಲ್ಲಲು ಸಾಧ್ಯವಾಯಿತು” ಎಂದು ವಾಗ್ದಾಳಿ ನಡೆಸಿದರು.  ಜೆಡಿಎಸ್ ಪಕ್ಷದ ಮತಗಳನ್ನು ಒಳ ಒಪ್ಪಂದದ ಮೂಲಕ ಬಿಜೆಪಿಗೆ ವರ್ಗಾಯಿಸಿದ್ದಕ್ಕಾಗಿ ಎರಡೂ ಕಡೆ ಬಿಜೆಪಿಯೇ ಗೆಲ್ಲಲು ಸಾಧ್ಯವಾಯಿತು ಎಂದು ಹೇಳಿದರು.

“ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ತನ್ನ ನೆಲೆಯನ್ನು ಕಳೆದುಕೊಂಡಿದೆ. ಬಿಜೆಪಿ ಇದರ ರಾಜಕೀಯ ಲಾಭ ಪಡೆದುಕೊಂಡಿದೆ. ಮುಂದಿನ ಬಸವಕಲ್ಯಾಣ ಉಪಚುನಾವಣೆಯಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸದಂತೆ ನಿರ್ಧಾರ ತೆಗೆದುಕೊಳ್ಳುವ ಮೂಲಕ ಜೆಡಿಎಸ್ ನಾಯಕರು ಚುನಾವಣೆಗೆ ಮುಂಚಿತವಾಗಿಯೇ ಬಿಜೆಪಿಗೆ ಶರಣಾಗಿದ್ದಾರೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ವೀರಶೈವ-ಲಿಂಗಾಯುತ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ರೂ. ಅನುದಾನ

ಕೊರೊನಾ ಸಾಂಕ್ರಾಮಿಕ ರೋಗವನ್ನು ನಿಭಾಯಿಸಲು ರಾಜ್ಯ ಮತ್ತು ಕೇಂದ್ರ ವಿಫಲವಾಗಿದೆ ಎಂದು ಆರೋಪಿಸಿದ ಸಿದ್ದರಾಮಯ್ಯ, ಅಭಿವೃದ್ಧಿ ಕಾರ್ಯಗಳ ಸೋಗಿನಲ್ಲಿ ಹಣವನ್ನು ವಂಚಿಸಿದ ಆರೋಪದ ಮೇಲೆ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರ ಮೇಲೂ ವಾಗ್ದಾಳಿ ನಡೆಸಿದರು.

ಮಾಜಿ ಕೇಂದ್ರ ಸಚಿವ ಮಲ್ಲಿಕರ್ಜುನ ಖರ್ಗೆ ಅವರ ಇತ್ತೀಚಿನ ಹೇಳಿಕೆಯನ್ನು ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, “ಅವರು ಹಿರಿಯ ನಾಯಕರಾಗಿ ಪಕ್ಷದ ಸಭೆಗಳಲ್ಲಿ ಮಾರ್ಗದರ್ಶನ ಮತ್ತು ನಿರ್ದೇಶನಗಳನ್ನು ನೀಡುವ ಎಲ್ಲ ಹಕ್ಕನ್ನು ಹೊಂದಿದ್ದಾರೆ. ಆದರೆ ಮಾಧ್ಯಮಗಳಲ್ಲಿ ವರದಿಯಾದಂತೆ ಕಾಂಗ್ರೆಸ್‌ನಲ್ಲಿ ಯಾವುದೇ ಬಣಗಳಿಲ್ಲ” ಎಂದು ಹೇಳಿದರು.

ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಒಳ ಒಪ್ಪಂದ ಮಾಡಿಕೊಂಡಿವೆ ಎಂದು ಈ ಮೊದಲೂ ಸಹ ಆರೋಪ ಮಾಡಲಾಗಿತ್ತು. ಆದರೆ ಇದಕ್ಕೆ ಸಂಬಂಧಿಸಿದಂತೆ ಬಿಜೆಪಿ ಅಥವಾ ಜೆಡಿಎಸ್ ನಾಯಕರು ಯಾವುದೆ ಪ್ರತಿಕ್ರಿಯೆಯನ್ನೂ ನೀಡಿಲ್ಲ.


ಇದನ್ನೂ ಓದಿ: 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಒಡಿಶಾ ಅಸೆಂಬ್ಲಿ ಮುಂದೆ ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ…

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ವಿವರಿಸಲು ಸಮಯಾವಕಾಶ ಕೋರಿ ಪ್ರಧಾನಿಗೆ ಖರ್ಗೆ ಪತ್ರ

0
ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪ್ರಣಾಳಿಕೆ 'ನ್ಯಾಯಪತ್ರ'ದ ಕುರಿತು ಪ್ರಧಾನಿ ಮೋದಿ ಸರಣಿ ಹೇಳಿಕೆಗಳನ್ನು ಕೊಡುತ್ತಿದ್ದು, ಈ ಹಿನ್ನೆಲೆ ಪ್ರಣಾಳಿಕೆಯ ಕುರಿತು ವಿವರಿಸಲು ಸಮಯ ಕೋರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ. ಖರ್ಗೆ...