Homeಮುಖಪುಟಮಧ್ಯಪ್ರದೇಶ ಸರ್ಕಾರವನ್ನು ಬಿಜೆಪಿ "ಅಪರೇಷನ್ ಹೋಳಿ" ಮಾಡುತ್ತಿದೆ: ಕಾಂಗ್ರೆಸ್ ಆರೋಪ

ಮಧ್ಯಪ್ರದೇಶ ಸರ್ಕಾರವನ್ನು ಬಿಜೆಪಿ “ಅಪರೇಷನ್ ಹೋಳಿ” ಮಾಡುತ್ತಿದೆ: ಕಾಂಗ್ರೆಸ್ ಆರೋಪ

- Advertisement -
- Advertisement -

ತನ್ನ ಸರ್ಕಾರವನ್ನು ಅಸ್ಥಿರಗೊಳಿಸಲು “ಆಪರೇಷನ್ ಹೋಳಿ” ಎಂದು ಕರೆದು 14 ಕಾಂಗ್ರೆಸ್‌ ಶಾಸಕರನ್ನು ಬಿಜೆಪಿ ಅಪಹರಿಸಿದೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ಆರೋಪಿಸಿದೆ.

ಕಾಂಗ್ರೆಸ್ ಬೆಂಬಲದ ನಾಲ್ಕು ಶಾಸಕರಾದ ಹರ್ದೀಪ್ ಡಾಂಗ್, ರಘುರಾಜ್ ಕನ್ಸಾನಾ ಮತ್ತು ಬಿಸಾಹುಲಾಲ್ ಸಿಂಗ್ ಮತ್ತು ಸ್ವತಂತ್ರ ಸದಸ್ಯೆ ಶೇರಾ ಭೈಯಾರನ್ನು ಕರ್ನಾಟಕದ ಪಂಚತಾರಾ ಹೋಟೆಲ್ ನಲ್ಲಿಟ್ಟಿದ್ದಾರೆ ಎಂಬ ವದಂತಿಗಳಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ದೆಹಲಿಯ ಕಾಂಗ್ರೆಸ್ ಮುಖಂಡರು ಬಿಜೆಪಿಯು “ರಾಜ್ಯದಿಂದ ರಾಜ್ಯ”ದ ಮೇಲೆ ಆಕ್ರಮಣ ಮಾಡುತ್ತಿದೆ. ರಾಜ್ಯಸಭೆಯ ಚುನಾವಣೆಗೆ ಹತ್ತಿರವಿರುವಾಗ ಸರ್ಕಾರಗಳನ್ನು ಉರುಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಮಂಗಳವಾರ ಸಂಜೆ ಮಧ್ಯಪ್ರದೇಶ ಕಾಂಗ್ರೆಸ್ ಸರ್ಕಾರದ ಕೆಲವು ಶಾಸಕರು ದೆಹಲಿ ಬಳಿಯ ಗುರಗಾಂವ್‌ನಲ್ಲಿರುವ ಪಂಚತಾರಾ ಹೋಟೆಲ್‌ನಲ್ಲಿ ಬೀಡುಬಿಟ್ಟಿರುವ ಬಗ್ಗೆ ವರದಿಗಳು ಹೊರಬಿದ್ದಿವೆ. ಬಿಜೆಪಿ ತಮ್ಮ ಪಕ್ಷದ ಶಾಸಕರಿಗೆ 25-35 ಕೋಟಿ ರೂ. ಲಂಚ ನೀಡಲು ಪ್ರಯತ್ನಿಸುತ್ತಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ದಿಗ್ವಿಜಯ ಸಿಂಗ್ ಆರೋಪಿಸಿದ್ದಾರೆ.

ಶಾಸಕರೊಂದಿಗೆ ಮಾತನಾಡಲು ಪ್ರಯತ್ನಿಸುತ್ತಿರುವ ಪಕ್ಷದ ಹಿರಿಯ ನಾಯಕರನ್ನು ಬಿಜೆಪಿ ಆಡಳಿತದ ಹರಿಯಾಣದ ಪೊಲೀಸರು ಹೋಟೆಲ್‌ಗೆ ಅನುಮತಿಸುತ್ತಿಲ್ಲ ಎಂದು ಕಾಂಗ್ರೆಸ್ ದೂರಿದೆ.

ಬುಧವಾರ ಮುಂಜಾನೆ 2 ಗಂಟೆ ಸುಮಾರಿಗೆ ಬಿಎಸ್‌ಪಿ ಶಾಸಕಿ ರಮಾಬಾಯಿ ದಿಗ್ವಿಜಯ ಸಿಂಗ್ ಅವರ ಪುತ್ರ ಸೇರಿದಂತೆ ಕಾಂಗ್ರೆಸ್ ಮಂತ್ರಿಗಳ ಬೆಂಗಾವಲಿನೊಂದಿಗೆ ಐಟಿಸಿ ಗ್ರ್ಯಾಂಡ್ ಭಾರತ್‌ ಹೋಟೆಲ್‌ನಿಂದ ತನ್ನ ಬ್ಯಾಗುಗಳೊಂದಿಗೆ ಹೊರಬಂದಿದ್ದರು.

“ಕಾಂಗ್ರೆಸ್ ಸರ್ಕಾರವು 15 ವರ್ಷಗಳಿಂದ ನಡೆಯುತ್ತಿರುವ ಲ್ಯಾಂಡ್ ಮಾಫಿಯಾ, ಚಿಟ್ ಫಂಡ್ ಮಾಫಿಯಾ, ಸುಲಿಗೆ ಮಾಫಿಯಾದಂತಹ ಮಾಫಿಯಾಗಳನ್ನು ನಿಲ್ಲಿಸಿದೆ, ಅವುಗಳ ಕುರಿತು ಸಾಕ್ಷ್ಯ ಸಂಗ್ರಹಿಸಿದೆ. ಇದರಿಂದ ಜೈಲಿನ ಕಂಬಿಗಳಿಗೆ ಹೆದರಿ ಮಧ್ಯಪ್ರದೇಶದ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸಲಾಗುತ್ತಿದೆ. ಅಮಿತ್ ಶಾ, ಶಿವರಾಜ್ ಸಿಂಗ್‌ ಚೌಹಾಣ್‌ ಮತ್ತು ಎಂಎಲ್ ಖಟ್ಟರ್ ಅವರೇ, 12 ಶಾಸಕರನ್ನು ವಿಶೇಷ ವಿಮಾನದಲ್ಲಿ ಗುರಗಾಂವ್ ಗೆ ಕರೆದೊಯ್ದವರು ಯಾರು ಎಂದು ದಯವಿಟ್ಟು ಹೇಳುತ್ತೀರಾ?” ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ ಹೇಳಿದ್ದಾರೆ.

ಮಧ್ಯಪ್ರದೇಶದ ಪ್ರಮುಖ ಬಿಜೆಪಿ ಮುಖಂಡ ನರೋತ್ತಮ್ ಮಿಶ್ರಾ ಈ ಆರೋಪಗಳನ್ನು ತಿರಸ್ಕರಿಸಿದ್ದಾರೆ. ಇದು ರಾಜ್ಯಸಭಾ ಸದಸ್ಯರಾಗಿ ದಿಗ್ವಿಜಯ್‌ ಸಿಂಗ್‌ ಮುಂದುವರೆಯಲು ಆಡುತ್ತಿರು ನಾಟಕ ಎಂದು ಕರೆದಿದ್ದಾರೆ.

ವಿಶೇಷ ವಿಮಾನದ ಮೂಲಕ ತನ್ನನ್ನು ಮತ್ತು ಇತರರನ್ನು ದೆಹಲಿಗೆ ಕರೆಸಿಕೊಳ್ಳಲಾಗಿದೆ ಎಂಬ ಕಾಂಗ್ರೆಸ್ ಆರೋಪವನ್ನು ರಮಾಬಾಯಿ ನಿರಾಕರಿಸಿದ್ದಾರೆ. ಅಲ್ಲದೆ ತಾನು ಮುಖ್ಯಮಂತ್ರಿ ಕಮಲ್ ನಾಥ್ ಅವರೊಂದಿಗೆ ಇದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ. “ರಾಜ್ಯ ಸರ್ಕಾರಕ್ಕೆ ಯಾವುದೇ ಬೆದರಿಕೆ ಇಲ್ಲ. ಅವರು ನನ್ನನ್ನು ಮಂತ್ರಿಯನ್ನಾಗಿ ಮಾಡಲು ಬಯಸಿದರೆ ನಾನು ತಯಾರಿದ್ದೇನೆ” ಎಂದೂ ಸಹ ಅವರು ಹೇಳಿದ್ದಾರೆ.

230 ಸದಸ್ಯರ ಮದ್ಯಪ್ರದೇಶದ ವಿಧಾನಸಭೆಯಲ್ಲಿ ಕಮಲ್ ನಾಥ್ ಸರ್ಕಾರವು 120 ಶಾಸಕರನ್ನು ಹೊಂದಿದೆ. ಈ ಪೈಕಿ 114 ಶಾಸಕರು ಕಾಂಗ್ರೆಸ್, ಇಬ್ಬರು ಬಿಎಸ್ಪಿ, ಒಬ್ಬರು ಸಮಾಜವಾದಿ ಪಕ್ಷ ಮತ್ತು ನಾಲ್ವರು ಪಕ್ಷೇತರರು. ಬಿಜೆಪಿಗೆ 107 ಶಾಸಕರಿದ್ದಾರೆ. ವಿಧಾನಸಭೆಯಲ್ಲಿ ಎರಡು ಸ್ಥಾನಗಳು ಖಾಲಿ ಇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರಧಾನಿ ಮೋದಿಯವರ ವಿದೇಶಾಂಗ ನೀತಿಯ ಸಾರ ಮತ್ತು ಶೈಲಿ ಎರಡಕ್ಕೂ ರಾಷ್ಟ್ರವು ಭಾರಿ ಬೆಲೆ ತೆರುತ್ತಿದೆ’: ಕಾಂಗ್ರೆಸ್

ನವದೆಹಲಿ: ಇರಾನ್ ಮೇಲೆ ನಡೆದ ಯುದ್ಧಕ್ಕೆ ಸರ್ಕಾರದ ಪ್ರತಿಕ್ರಿಯೆಯು ಭಾರತದ ಮೌಲ್ಯಗಳು, ತತ್ವಗಳು ಮತ್ತು ಹಿತಾಸಕ್ತಿಗಳಿಗೆ ಮಾಡಿದ ದ್ರೋಹವಾಗಿದೆ ಎಂದು ಕಾಂಗ್ರೆಸ್ ಭಾನುವಾರ ಹೇಳಿದೆ, ಪ್ರಧಾನಿ ನರೇಂದ್ರ ಮೋದಿಯವರ ವಿದೇಶಾಂಗ ನೀತಿಯ ಸಾರ...

ಬಂಗಾಳ ಎಸ್‌ಐಆರ್| ಮುಸ್ಲಿಂ ಬಹುಸಂಖ್ಯಾತ ಮುರ್ಷಿದಾಬಾದ್-ಮಾಲ್ಡಾದಲ್ಲಿ ಅತ್ಯಧಿಕ ಮತದಾರರ ಪರಿಶೀಲನೆ ಬಾಕಿ

ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಚುನಾವಣಾ ಆಯೋಗ ಪ್ರಕಟಿಸಿದ ಅಂತಿಮ ಮತದಾರರ ಪಟ್ಟಿಯ ಪ್ರಕಾರ, ಪಶ್ಚಿಮ ಬಂಗಾಳದ ಮುಸ್ಲಿಂ ಪ್ರಾಬಲ್ಯದ ಮುರ್ಷಿದಾಬಾದ್ ಮತ್ತು ಮಾಲ್ಡಾ ಜಿಲ್ಲೆಗಳಲ್ಲಿ ದಾಖಲೆಗಳ ಪರಿಶೀಲನೆಗೆ...

‘ಪ್ರಜಾಪ್ರಭುತ್ವ ಜಗತ್ತಿನ ನಾಯಕರು, ಸಾರ್ವಭೌಮ ರಾಷ್ಟ್ರದ ನಾಯಕನನ್ನು ಹತ್ಯೆ ಮಾಡಿದ್ದು ಹೇಯ ಕೃತ್ಯ’: ಖಮೇನಿ ಹತ್ಯೆಗೆ ಪ್ರಿಯಾಂಕ ಗಾಂಧಿ ಖಂಡನೆ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ ತೀವ್ರವಾಗಿ ಖಂಡಿಸಿದ್ದಾರೆ. "ಪ್ರಜಾಪ್ರಭುತ್ವ ಜಗತ್ತಿನ ನಾಯಕರು ಎಂದು ಕರೆಯಲ್ಪಡುವವರು" ಸಾರ್ವಭೌಮ ರಾಷ್ಟ್ರದ ನಾಯಕತ್ವವನ್ನು ಗುರಿಯಾಗಿಸಿಕೊಂಡು...

ದುಬೈ-ಅಬುಧಾಬಿ ಮೇಲೆ ದಾಳಿ; ಇರಾನ್‌ಗೆ ಯುಎಇ ಎಚ್ಚರಿಕೆ

ಇರಾನ್ ತನ್ನ ನೆರೆಹೊರೆಯವರನ್ನು ಗುರಿಯಾಗಿಸಿಕೊಳ್ಳಬಾರದು ಎಂದು ಯುಎಇ ಅಧ್ಯಕ್ಷರ ರಾಜತಾಂತ್ರಿಕ ಸಲಹೆಗಾರ ಅನ್ವರ್ ಗರ್ಗಶ್ ಎಚ್ಚರಿಕೆ ನೀಡಿದ್ದಾರೆ. "ಗಲ್ಫ್ ರಾಷ್ಟ್ರಗಳ ವಿರುದ್ಧ ಇರಾನ್ ಆಕ್ರಮಣವು ತಪ್ಪು ಲೆಕ್ಕಾಚಾರವಾಗಿದೆ. ಇದೇ ಬೆಳವಣಿಗೆ ನಿರ್ಣಾಯಕ ಹಂತದಲ್ಲಿ ಇರಾನ್...

ಇರಾನ್‌ ಹಂಗಾಮಿ ಸರ್ವೋಚ್ಚ ನಾಯಕರಾಗಿ ಅಯಾತೊಲ್ಲ ಅಲಿರೆಝಾ ಅರಾಫಿ ನೇಮಕ

ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾದ ಹಿನ್ನೆಲೆ, ಹಿರಿಯ ಧರ್ಮಗುರು ಅಯತೊಲ್ಲಾ ಅಲಿರೆಝಾ ಅರಾಫಿ ಅವರು ಇರಾನ್‌ನ ಹಂಗಾಮಿ ಸರ್ವೋಚ್ಚ ನಾಯಕರಾಗಿ ಆಯ್ಕೆ ಮಾಡಲಾಗಿದೆ ಎಂದು ಸರ್ಕಾರಿ-ಸಂಯೋಜಿತ...

ಖಮೇನಿ ಹತ್ಯೆ ವಿರೋಧಿಸಿ ಬೃಹತ್ ಪ್ರತಿಭಟನೆ; ಶ್ರೀನಗರದಲ್ಲಿ ಇಂಟರ್‌ನೆಟ್ ಸ್ತಬ್ಧ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯನ್ನು ವಿರೋಧಿಸಿ ಕಾಶ್ಮೀರದಾದ್ಯಂತ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿವೆ. ಶ್ರೀನಗರದಲ್ಲಿರುವ ವಿಶ್ವಸಂಸ್ಥೆಯ ಮಿಲಿಟರಿ ವೀಕ್ಷಕರ ಗುಂಪು (UNMOGIP) ಪ್ರಧಾನ ಕಚೇರಿಯ ಮುಂದೆ ದೊಡ್ಡ ಜನಸಮೂಹ ಜಮಾಯಿಸಿತ್ತು....

ಅಮೆರಿಕಾ-ಇಸ್ರೇಲ್ ‘ಪುಂಡ ರಾಷ್ಟ್ರಗಳು’; ಇರಾನ್ ಮೇಲಿನ ದಾಳಿ ಖಂಡಿಸಿದ ಕೇರಳ ಸಿಎಂ; ಅನಿವಾಸಿ ಭಾರತೀಯರ ಆತಂಕ ಪರಿಹರಿಸಲು ಕೇಂದ್ರಕ್ಕೆ ಮನವಿ

ತಿರುವನಂತಪುರಂ: ಇಸ್ರೇಲ್ ಮತ್ತು ಅಮೆರಿಕ ಇರಾನ್ ಮೇಲೆ ನಡೆಸುತ್ತಿರುವ ದಾಳಿಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತೀವ್ರವಾಗಿ ಖಂಡಿಸಿದ್ದಾರೆ ಮತ್ತು ಗಲ್ಫ್ ರಾಷ್ಟ್ರಗಳಲ್ಲಿರುವ ಹಲವಾರು ಅನಿವಾಸಿ ಭಾರತೀಯರ ಆತಂಕವನ್ನು ಪರಿಹರಿಸಲು ಕೇಂದ್ರವು ತಕ್ಷಣ...

ಅಮೆರಿಕ-ಇಸ್ರೇಲಿ ಮಿಲಿಟರಿ ದಾಳಿಯಲ್ಲಿ ‘ಇರಾನ್‌ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಹತ್ಯೆ; ಇರಾನ್ ಮಾಧ್ಯಮಗಳ ವರದಿ 

ಟೆಹ್ರಾನ್: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಸಾವನ್ನಪ್ಪಿದ್ದಾರೆ ಎಂದು ದೇಶದ ಸರ್ಕಾರಿ ಸ್ವಾಮ್ಯದ ಐಆರ್‌ಐಬಿ ಟಿವಿ ಭಾನುವಾರ ವರದಿ ಮಾಡಿದೆ. ಟೆಹ್ರಾನ್ ಮೇಲಿನ ದಾಳಿಯಲ್ಲಿ...

ಕರಾಚಿ| ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆ ವೇಳೆ ಘರ್ಷಣೆ : ಕನಿಷ್ಠ 9 ಸಾವು

ಪಾಕಿಸ್ತಾನದ ಕರಾಚಿಯಲ್ಲಿರುವ ಅಮೆರಿಕ ದೂತಾವಾಸದ ಬಳಿ ಭಾನುವಾರ (ಮಾ.1) ಇರಾನ್ ಪರ ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿಯ ನಡುವೆ ಘರ್ಷಣೆ ಉಂಟಾಗಿ ಕನಿಷ್ಠ ಒಂಭತ್ತು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. "ನಾವು ಕನಿಷ್ಠ ಎಂಟು...

ಇರಾನ್-ಇಸ್ರೇಲ್ ಯುದ್ಧ: ಭಾರತ ತಕ್ಷಣದ ಆರ್ಥಿಕ ಸವಾಲುಗಳನ್ನು ಎದುರಿಸುವ ಸಾಧ್ಯತೆಯಿದೆ; ವರದಿ

ಫೆಬ್ರವರಿ 28, 2026 ರಂದು ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಮುಷ್ಕರದ ನಂತರ ಇರಾನ್-ಇಸ್ರೇಲ್ ಸಂಘರ್ಷದಲ್ಲಿ ತೀವ್ರ ಏರಿಕೆಯು ಪಶ್ಚಿಮ ಏಷ್ಯಾದಲ್ಲಿ ಭೌಗೋಳಿಕ ರಾಜಕೀಯ ಅಪಾಯಗಳನ್ನು ತೀವ್ರಗೊಳಿಸಿದೆ ಮತ್ತು ಜಾಗತಿಕ ಇಂಧನ ಮಾರುಕಟ್ಟೆಗಳಿಗೆ ತಕ್ಷಣದ...