Homeಮುಖಪುಟಗುಜರಾತ್‌: ನಾಮಪತ್ರ ಹಿಂಪಡೆಯಲು ಒತ್ತಾಯಿಸಿ ಆಪ್‌ ಅಭ್ಯರ್ಥಿಯನ್ನು ಎಳೆದೊಯ್ದ ಬಿಜೆಪಿ- ಎಎಪಿ ಆರೋಪ

ಗುಜರಾತ್‌: ನಾಮಪತ್ರ ಹಿಂಪಡೆಯಲು ಒತ್ತಾಯಿಸಿ ಆಪ್‌ ಅಭ್ಯರ್ಥಿಯನ್ನು ಎಳೆದೊಯ್ದ ಬಿಜೆಪಿ- ಎಎಪಿ ಆರೋಪ

- Advertisement -
- Advertisement -

“ನಾಮಪತ್ರ ಹಿಂಪಡೆಯುವಂತೆ ಒತ್ತಾಯಿಸಿ ಆಮ್‌ ಆದ್ಮಿ ಪಕ್ಷದ ಅಭ್ಯರ್ಥಿಯನ್ನು ಬಿಜೆಪಿ ಗೂಂಡಾಗಳು ಹಾಗೂ ಪೊಲೀಸರು ಎಳೆದೊಯ್ದಿದ್ದಾರೆ” ಎಂದು ಆರೋಪಿಸಿರುವ ಎಎಪಿ ವಿಡಿಯೊ ಬಿಡುಗಡೆ ಮಾಡಿದೆ.

ಈ ಕುರಿತು ವಿಡಿಯೊ ತುಣುಕು ಟ್ವೀಟ್ ಮಾಡಿರುವ ಎಎಪಿ ನಾಯಕ ರಾಘವ್ ಚಡ್ಡ, “ಪೊಲೀಸರು ಮತ್ತು ಬಿಜೆಪಿ ಗೂಂಡಾಗಳು ಹೇಗೆ ಒಟ್ಟಾಗಿ ನಮ್ಮ ಸೂರತ್ ಪೂರ್ವ ಅಭ್ಯರ್ಥಿ ಕಾಂಚನ್ ಜರಿವಾಲಾ ಅವರನ್ನು ತಮ್ಮ ನಾಮಪತ್ರ ಹಿಂಪಡೆಯುವಂತೆ ಒತ್ತಾಯಿಸಿ ಆರ್‌ಒ ಕಚೇರಿಗೆ ಎಳೆದೊಯ್ದಿದ್ದಾರೆ ಎಂಬುದನ್ನು ನೋಡಿರಿ. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ಎಂಬ ಪದವೇ ಜೋಕ್ ಆಗಿಬಿಟ್ಟಿದೆ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಗುಜರಾತ್‌ನಲ್ಲಿ ತನ್ನ ಅಭ್ಯರ್ಥಿಯೊಬ್ಬರನ್ನು ಅಪಹರಣ ಮಾಡಲಾಗಿದೆ ಮತ್ತು ಮುಂದಿನ ತಿಂಗಳ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಒತ್ತಾಯಿಸಿ ನಾಮಪತ್ರವನ್ನು ಹಿಂಪಡೆಯಲು ಯತ್ನಿಸಲಾಗಿದೆ ಎಂದು ಎಎಪಿ ದೂರಲು ಆರಂಭಿಸಿತು.

ಸೂರತ್ (ಪೂರ್ವ) ಕ್ಷೇತ್ರದ ಅಭ್ಯರ್ಥಿ ಕಾಂಚನ್ ಜರಿವಾಲಾ ನಿನ್ನೆಯಿಂದ ಕಾಣೆಯಾಗಿದ್ದಾರೆ ಎಂದು ಎಎಪಿ ಟ್ವೀಟ್‌ ಮಾಡುವ ಮೂಲಕ ಆರೋಪಿಸಲಾರಂಭಿಸಿತು. ಎಎಪಿ ಅಭ್ಯರ್ಥಿ ಕಾಂಚನ್ ಜರಿವಾಲಾ ಅವರನ್ನು ಬಿಜೆಪಿ ಅಪಹರಿಸಿದೆ ಎಂದು ಮನೀಶ್ ಸಿಸೋಡಿಯಾ ಹೇಳಿಕೆ ನೀಡಿದರು.

ಸ್ವಲ್ಪ ಸಮಯದ ನಂತರ ಸಿಸೋಡಿಯಾ ಟ್ವೀಟ್ ಮಾಡಿ, “ಜರಿವಾಲಾ ಪತ್ತೆಯಾಗಿದ್ದಾರೆ. 500 ಪೊಲೀಸರು ಸುತ್ತುವರೆದಿದ್ದು, ಗುಜರಾತ್ ಚುನಾವಣಾ ರಿಟರ್ನಿಂಗ್ ಕಚೇರಿಗೆ ಕರೆತರಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

“ಜರಿವಾಲ ಅವರ ಮೇಲೆ ನಾಮಪತ್ರ ಹಿಂಪಡೆಯುವ ಒತ್ತಡ ಹೇರಲಾಗಿದೆ. ಅವರನ್ನು ಚುನಾವಣಾ ಕಚೇರಿಯಲ್ಲಿ ಕುಳಿತುಕೊಳ್ಳುವಂತೆ ಒತ್ತಾಯಿಸಲಾಗಿದೆ. ಪೊಲೀಸರಿಂದ ಒತ್ತಡ ತರಲಾಗುತ್ತಿದೆ. ಇದು ಪ್ರಜಾಪ್ರಭುತ್ವಕ್ಕೆ ಒಡ್ಡಿದ ಬಹಿರಂಗ ಬೆದರಿಕೆಯಾಗಿದೆ ಎಂದು ನಾನು ಚುನಾವಣಾ ಆಯೋಗಕ್ಕೆ ಹೇಳಲು ಬಯಸುತ್ತೇನೆ” ಎಂದು ಸಿಸೋಡಿಯಾ ಪ್ರತಿಕ್ರಿಯಿಸಿದ್ದಾರೆ.

ಗುಜರಾತ್ ಚುನಾವಣೆಯಲ್ಲಿ ಸೋಲುವ ಭಯದಲ್ಲಿ ಬಿಜೆಪಿ ಇದೆ. ಆದ್ದರಿಂದ ಎಎಪಿ ಅಭ್ಯರ್ಥಿಯನ್ನು ಅಪಹರಿಸಲು ಮುಂದಾಗಿದೆ ಎಂದು ಸಿಸೋಡಿಯಾ ದೂರಿದ್ದಾರೆ.

ಕಾಂಚನ್ ಜರಿವಾಲಾ ಮತ್ತು ಅವರ ಕುಟುಂಬ ಸದಸ್ಯರು ನಿನ್ನೆ ನಾಮಪತ್ರ ಪರಿಶೀಲನೆಗೆ ಹೋದಾಗ ನಾಪತ್ತೆಯಾಗಿದ್ದರು. ಅವರು ತಮ್ಮ ನಾಮಪತ್ರ ಪರಿಶೀಲನೆಯ ನಂತರ ಕಚೇರಿಯಿಂದ ಹೊರಬಂದ ಕ್ಷಣ, ಬಿಜೆಪಿಯ ಗೂಂಡಾಗಳು ಜರಿವಾಲ ಅವರನ್ನು ಎಳೆದೋಯ್ದರು ಎಂದು ಸಿಸೋಡಿಯಾ ಮಾಹಿತಿ ನೀಡಿದ್ದಾರೆ.

“ಇದು ಅಪಾಯಕಾರಿ. ಇದು ಕೇವಲ ಅಭ್ಯರ್ಥಿಯ ಅಪಹರಣವಲ್ಲ, ಪ್ರಜಾಪ್ರಭುತ್ವದ ಅಪಹರಣವಾಗಿದೆ” ಎಂದು ಟೀಕಾಪ್ರಹಾರ ನಡೆಸಿದ್ದಾರೆ.

ಎಎಪಿ ಆರೋಪಗಳಿಗೆ ಬಿಜೆಪಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಗುಜರಾತ್‌ನಲ್ಲಿ 27 ವರ್ಷಗಳಿಂದ ಅಧಿಕಾರದಲ್ಲಿರುವ ಆಡಳಿತರೂಢ ಬಿಜೆಪಿಯು ಈ ಬಾರಿ ಎಎಪಿಯಿಂದ ಆಕ್ರಮಣಕಾರಿ ಸವಾಲನ್ನು ಎದುರಿಸುತ್ತಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡುತ್ತಿದೆ. ರಾಜ್ಯದಲ್ಲಿ ಸಾಂಪ್ರದಾಯಿಕವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಪೈಪೋಟಿ ಇರುತ್ತಿತ್ತು. ಈ ಚುನಾವಣೆಯಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ ಎಂದು ವಿಶ್ಲೇಷಣೆಗಳು ಬರುತ್ತಿವೆ.

ಡಿಸೆಂಬರ್ 1 ಮತ್ತು 5 ರಂದು ಗುಜರಾತ್‌ನಲ್ಲಿ ಹೊಸ ಸರ್ಕಾರ ರಚನೆಗಾಗಿ ಚುನಾವಣೆ ನಡೆಯಲಿದೆ. ಡಿಸೆಂಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...