ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದಾರೆ ಎಂದು ಆರೋಪಿಸಲಾದ ಅಪ್ತಾಪ್ರ ಬಾಲಕಿಯ ಗುರುತನ್ನು ಬಹಿರಂಪಡಿಸಿದ್ದಾಗಿ ಪಶ್ಚಿಮ ಬಂಗಾಳದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (WBCPCR)ವು ಬಿಜೆಪಿ ನಾಯಕ ಅಮಿತ್ ಮಾಳವೀಯ ಅವರಿಗೆ ಶೋಕಾಸ್ ನೋಟಿಸ್ ಕಳುಹಿಸಿದೆ ಎಂದು ವರದಿಯಾಗಿದೆ. ಅತ್ಯಾಚಾರ ಸಂತ್ರಸ್ತೆ
ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ, ಪಶ್ಚಿಮ ಬಂಗಾಳದ ಬಿಜೆಪಿಯ ಸಹ-ವೀಕ್ಷಕ ಅಮಿತ್ ಮಾಳವೀಯ ತಮ್ಮ ಎಕ್ಸ್ ಖಾತೆಯಲ್ಲಿ ಹ್ಯಾಂಡಲ್‌ನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂದು ಹೇಳಿಕೊಂಡಿದ್ದರು. ಜೂನ್ 16 ರಂದು ಕ್ಯಾನಿಂಗ್‌ನಲ್ಲಿರುವ ಬಾಲಕಿಯ ನಿವಾಸದಿಂದ ಶವ ಪತ್ತೆಯಾಗಿತ್ತು.
ಪಶ್ಚಿಮ ಬಂಗಾಳದಲ್ಲಿ ಹುಡುಗಿಯರು ಸುರಕ್ಷಿತವಾಗಿಲ್ಲ ಎಂದು ಆರೋಪಿಸಿದ್ದ ಮಾಳವಿಯ, ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಅಪ್ರಾಪ್ತ ಬಾಲಕಿಯ ಮಸುಕಾದ ಚಿತ್ರವನ್ನು ಸಹ ಹಂಚಿಕೊಂಡಿದ್ದರು.
ಇದನ್ನು ಉಲ್ಲೇಖಿಸಿ ಪಶ್ಚಿಮ ಬಂಗಾಳದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (WBCPCR) ಅಧ್ಯಕ್ಷೆ ತುಲಿಕಾ ದಾಸ್, ಮಾಳವೀಯ ಮೃತ ಅಪ್ರಾಪ್ತ ಬಾಲಕಿಯ ಚಿತ್ರವನ್ನು ಪ್ರಕಟಿಸಿದ್ದಾರೆ, ಇದು ಬಾಲ ನ್ಯಾಯ ಕಾಯ್ದೆಯ ಸೆಕ್ಷನ್ 74 ರ ಉಲ್ಲಂಘನೆಯಾಗಿದೆ ಎಂದು ಹೇಳಿಕೊಂಡಿದ್ದಾರೆ.
“ಲೈಂಗಿಕ ದೌರ್ಜನ್ಯ ನಡೆದಿದೆ ಎಂಬ ಅವರ ಹೇಳಿಕೆಯ ಬಗ್ಗೆ ನಾವು ಏನನ್ನೂ ಹೇಳುತ್ತಿಲ್ಲ. ನಾವು ಪೊಲೀಸ್ ವರದಿಯನ್ನು ಕೋರಿದ್ದೇವೆ. ಅವರು (ಬಿಜೆಪಿ ನಾಯಕ ಅಮಿತ್ ಮಾಳವೀಯ) ಸಂತ್ರಸ್ತರ ಚಿತ್ರವನ್ನು ನೀಡಿದ್ದಾರೆ. ಅವರು ಅದನ್ನು ಮಸುಕುಗೊಳಿಸಲು ಪ್ರಯತ್ನಿಸಿದ್ದಾರೆ. ಆದರೆ ಅದು ಸ್ಪಷ್ಟವಾಗಿದೆ. ಅದಕ್ಕಾಗಿಯೇ ನಾವು ಶೋಕಾಸ್ ನೋಟಿಸ್ ಕಳುಹಿಸಿದ್ದೇವೆ” ಎಂದು ತುಲಿಕಾ ದಾಸ್ ಹೇಳಿದ್ದಾರೆ.
ಈ ಮಧ್ಯೆ, ಪೊಲೀಸರು ಅಪ್ರಾಪ್ತ ವಯಸ್ಕ ಬಾಲಕಿಯು ವಿಷಪೂರಿತ ವಸ್ತುವನ್ನು ಸೇವಿಸಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ ಮತ್ತು ಶವಪರೀಕ್ಷೆಯ ವರದಿಯಲ್ಲಿ ಲೈಂಗಿಕ ದೌರ್ಜನ್ಯದ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ ಎಂದು ತಿಳಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಅಪ್ರಾಪ್ತ ವಯಸ್ಕ ಬಾಲಕಿಯ ಚಿತ್ರಗಳನ್ನು ಪ್ರಕಟಿಸಿದ ಅಪರಿಚಿತ ವ್ಯಕ್ತಿಗಳ ವಿರುದ್ಧ ಕೂಡಾ ಪೊಲೀಸರು ಕ್ರಿಮಿನಲ್ ಮೊಕದ್ದಮೆ ಹೂಡಿದ್ದಾರೆ ಎಂದು ವರದಿಯಾಗಿದೆ. ಅತ್ಯಾಚಾರ ಸಂತ್ರಸ್ತೆ
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ಬಿಹಾರ ಚುನಾವಣೆಗೂ ಮುನ್ನ ಸಾಮಾಜಿಕ ಭದ್ರತಾ ಪಿಂಚಣಿಯನ್ನು 1,100 ರೂ.ಗೆ ಹೆಚ್ಚಿಸಿದ ಸಿಎಂ ನಿತೀಶ್ ಕುಮಾರ್!
ಬಿಹಾರ ಚುನಾವಣೆಗೂ ಮುನ್ನ ಸಾಮಾಜಿಕ ಭದ್ರತಾ ಪಿಂಚಣಿಯನ್ನು 1,100 ರೂ.ಗೆ ಹೆಚ್ಚಿಸಿದ ಸಿಎಂ ನಿತೀಶ್ ಕುಮಾರ್!

