Homeಮುಖಪುಟಬುರ್ಖಾ ಧರಿಸಿದ ಮಹಿಳೆಯರ ಬಗ್ಗೆ ಪೋಸ್ಟ್: ಬಿಜೆಪಿ ನಾಯಕನ ವಿರುದ್ಧ FIR ದಾಖಲು

ಬುರ್ಖಾ ಧರಿಸಿದ ಮಹಿಳೆಯರ ಬಗ್ಗೆ ಪೋಸ್ಟ್: ಬಿಜೆಪಿ ನಾಯಕನ ವಿರುದ್ಧ FIR ದಾಖಲು

- Advertisement -
- Advertisement -

ಬುರ್ಖಾ ಧರಿಸಿದ ಮಹಿಳೆಯರ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಕಾಮೆಂಟ್ ಮಾಡಿದ್ದಕ್ಕಾಗಿ ಕೇರಳ ಪೊಲೀಸರು ಮಂಗಳವಾರ ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ಮತ್ತು ವಕ್ತಾರ ಅನಿಲ್ ಆಂಟೋನಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಸಾಮಾಜಿಕ ಮಾಧ್ಯಮ ವೇದಿಕೆ Xನಲ್ಲಿ ಆಂಟನಿ ಅವರ ಪೋಸ್ಟ್ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುತ್ತದೆ ಎಂದು ಪರಿಗಣಿಸಲಾಗಿದೆ, ಇದು ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 153A ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲು ಕಾರಣವಾಗುತ್ತದೆ ಎಂದು ಕಾಸರಗೋಡು ಜಿಲ್ಲಾ ಸೈಬರ್ ಸೆಲ್ ಹೇಳಿದೆ.

IPC ಯ ಸೆಕ್ಷನ್ 153A ಧರ್ಮ, ಜನಾಂಗ, ಜನ್ಮ ಸ್ಥಳ ಅಥವಾ ವಾಸಸ್ಥಳದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಜಾಮೀನು ರಹಿತ ಅಪರಾಧದ ಪ್ರಕರಣ ದಾಖಲಿಸಲಾಗಿದೆ.

ಮೊದಲಿಗೆ ಅಕ್ಟೋಬರ್ 27 ರಂದು ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಥಮ ಮಾಹಿತಿ ವರದಿಯನ್ನು ದಾಖಲಿಸಲಾಗಿತ್ತು. ಆ ನಂತರ ಆಂಟೋನಿ ಅವರು ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ ಮತ್ತು ಅದರ ಬಗ್ಗೆ ಕಾಮೆಂಟ್ ಮಾಡಿದ್ದಾರೆ. ಹಾಗಾಗಿ ಬಿಜೆಪಿ ಮುಖಂಡನ ವಿರುದ್ಧ ಮಂಗಳವಾರ ಪ್ರಕರಣದಲ್ಲಿ ಹೆಸರು ಸೇರಿಸಲಾಗಿದೆ.

ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ಮತ್ತು ವಕ್ತಾರರಾಗಿರುವ ಆಂಟನಿ ಈ ಬೆಳವಣಿಗೆಯ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಆಂಟನಿ ವಿರುದ್ಧದ ಕ್ರಮವು ಈ ಹಿಂದೆ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧದ ಎಫ್‌ಐಆರ್‌ನ್ನು ಹೋಲುತ್ತದೆ.

ಇತ್ತೀಚೆಗೆ ಕೊಚ್ಚಿ ಬಳಿ ನಡೆದ ಸ್ಫೋಟಗಳಿಗೆ ಸಂಬಂಧಿಸಿದಂತೆ ಚಂದ್ರಶೇಖರ್ ಕೋಮು ದ್ವೇಷ ಬಿತ್ತುವ ಹೇಳಿಕೆಯನ್ನು ಪೋಸ್ಟ್ ಮಾಡಿದ್ದರು. ಅವರ ವಿರುದ್ಧ ಐಪಿಸಿಯ ಸೆಕ್ಷನ್ 153 (ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ ನೀಡುವುದು) ಮತ್ತು 153 ಎ (ಧರ್ಮ, ಜನಾಂಗ, ಜನ್ಮ ಸ್ಥಳ, ವಾಸಸ್ಥಳದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು ಸೆಕ್ಷನ್ 120 (ಒ) ಅಡಿಯಲ್ಲಿ ಅಪರಾಧಗಳನ್ನು ದಾಖಲಿಸಲಾಗಿದೆ.

ಇದನ್ನೂ ಓದಿ: ಕೇರಳ: ಸ್ಪೋಟದ ಬಗ್ಗೆ ವಿವಾದಾತ್ಮಕ ಪೋಸ್ಟ್‌; ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಮಾಸ್ ನಾಯಕ ಸಿನ್ವಾರ್, ಇಸ್ರೇಲ್ ಪ್ರಧಾನಿ ನೆತನ್ಯಾಹು ವಿರುದ್ದ ಬಂಧನ ವಾರೆಂಟ್‌ಗೆ ಆಗ್ರಹ

0
ಗಾಝಾದ ಹಮಾಸ್ ನಾಯಕ ಯಾಹ್ಯಾ ಸಿನ್ವಾರ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ (ಐಸಿಸಿ) ಕೋರ್ಟ್‌ನಿಂದ ಬಂಧನ ವಾರೆಂಟ್ ಕೋರುವುದಾಗಿ ನ್ಯಾಯಾಲಯದ ಪ್ರಾಸಿಕ್ಯೂಟರ್ ಕರೀಮ್ ಖಾನ್ ಸೋಮವಾರ ಸಿಎನ್‌ಎನ್‌ಗೆ...