Homeಮುಖಪುಟಬುಡಕಟ್ಟು ಯುವತಿಗೆ ಚಿತ್ರಹಿಂಸೆ ನೀಡಿದ ಬಿಜೆಪಿ ನಾಯಕಿಯ ಬಂಧನ

ಬುಡಕಟ್ಟು ಯುವತಿಗೆ ಚಿತ್ರಹಿಂಸೆ ನೀಡಿದ ಬಿಜೆಪಿ ನಾಯಕಿಯ ಬಂಧನ

ಯುವತಿಯನ್ನು ನಾಲಗೆಯಲ್ಲಿ ಮೂತ್ರವನ್ನು ನೆಕ್ಕುವಂತೆ ಮಾಡುತ್ತಿದ್ದುದು ಮಾತ್ರವಲ್ಲದೆ, ನಿರಂತರವಾಗಿ ಹಲ್ಲೆ ನಡೆಸುತ್ತಿದ್ದರು ಎಂದು ಆರೋಪಿಸಲಾಗಿದೆ

- Advertisement -
- Advertisement -

ಮನೆಯಲ್ಲಿ ಕೆಲಸಕ್ಕಿದ್ದ ಬುಡಕಟ್ಟು ಸಮುದಾಯದ ಯುವತಿ ಸುನೀತಾ ಖಾಖಾ ಅವರಿಗೆ ಕ್ರೂರವಾಗಿ ಚಿತ್ರಹಿಂಸೆ ನೀಡಿದ ಜಾರ್ಖಂಡ್‌ನ ಬಿಜೆಪಿ ನಾಯಕಿ ಸೀಮಾ ಪಾತ್ರಾ ಅವರನ್ನು ರಾಂಚಿ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಆರೋಪಿ ಸೀಮಾ ಮನೆಯಲ್ಲಿ 8 ವರ್ಷಗಳ ಕಾಲ ಮನೆಗೆಲಸ ಮಾಡಿಕೊಂಡಿದ್ದ ಯುವತಿಯನ್ನು ನಾಲಗೆಯಲ್ಲಿ ಮೂತ್ರವನ್ನು ನೆಕ್ಕುವಂತೆ ಮಾಡುತ್ತಿದ್ದುದು ಮಾತ್ರವಲ್ಲದೆ, ನಿರಂತರವಾಗಿ ಹಲ್ಲೆ ನಡೆಸುತ್ತಿದ್ದರು ಎಂದು ಆರೋಪಿಸಲಾಗಿದೆ. ಸಂತ್ರಸ್ರೆ ಯುವತಿಗೆ ಕಬ್ಬಿಣದ ರಾಡ್‌ನಿಂದ ಹೊಡೆದು ಅವರ ಹಲ್ಲು ಕೂಡಾ ಮುರಿಯಲಾಗಿದೆ.

ಸೀಮಾ ಪಾತ್ರಾ ಅವರು ಬಿಜೆಪಿಯ ಮಹಿಳಾ ವಿಭಾಗದ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿದ್ದಾರೆ. ಅವರ ಪತಿ ಮಹೇಶ್ವರ್ ಪಾತ್ರಾ ನಿವೃತ್ತ ಐಎಎಸ್ ಅಧಿಕಾರಿ ಆಗಿದ್ದಾರೆ. ಸೀಮಾ ಅವರು ತನ್ನ ಫೇ‌ಸ್‌ಬುಕ್ ಖಾತೆಯಲ್ಲಿ,“ಬೇಟಿ ಬಚಾವೋ – ಬೇಟಿ ಪಢಾವೋ ರಾಜ್ಯ ಸಂಚಾಲಕಿ ಮತ್ತು ಜಾರ್ಖಂಡ್ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯೆ” ಎಂದು ಬರೆದುಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಂತ್ರಸ್ತೆ ಬುಡಕಟ್ಟು ಸಮುದಾಯದ ಯುವತಿಯು ಬಿಜೆಪಿ ನಾಯಕಿ ತನಗೆ ಚಿತ್ರಹಿಂಸೆ ನೀಡಿದ್ದಾರೆ ಎಂದು ಹೇಳಿರುವ ವಿಡಿಯೊ ವೈರಲ್ ಆದ ನಂತರ ಜಾರ್ಖಂಡ್ ಬಿಜೆಪಿ ಮುಖ್ಯಸ್ಥ ದೀಪಕ್ ಪ್ರಕಾಶ್ ಅವರು ಸೀಮಾ ವಿರುದ್ಧ ಕ್ರಮಕ್ಕೆ ಆದೇಶಿಸಿದ್ದಾರೆ.

ಇದನ್ನೂ ಓದಿ: ‘ನಾಲಗೆಯಲ್ಲಿ ನೆಲ ಸ್ವಚ್ಛ ಮಾಡಿಸುತ್ತಿದ್ದರು’: ಬುಡಕಟ್ಟು ಯುವತಿಯನ್ನು 8 ವರ್ಷ ಬಂಧಿಸಿಟ್ಟು ಚಿತ್ರಹಿಂಸೆ ನೀಡುತ್ತಿದ್ದ BJP ನಾಯಕಿ

ವೈರಲ್ ಆಗಿರುವ ವಿಡಿಯೊದಲ್ಲಿ, ಸಂತ್ರಸ್ತೆ ಸುನೀತಾ ಅವರ ಸ್ಥಿತಿಯು ಭಯಾನಕವಾಗಿರುವುದು ಕಂಡು ಬಂದಿದೆ. ಯುವತಿಯು ಆಸ್ಪತ್ರೆಯ ಹಾಸಿಗೆಯಲ್ಲಿದ್ದು, ಅವರ ಹಲವಾರು ಹಲ್ಲುಗಳು ಕಾಣೆಯಾಗಿವೆ. ಅಲ್ಲದೆ ಅವರು ಕುಳಿತುಕೊಳ್ಳಲು ಕೂಡಾ ಅಸಮರ್ಥ ಸ್ಥಿತಿಯಲ್ಲಿದ್ದಾರೆ. ಜೊತೆಗೆ ಅವರ ದೇಹದ ಮೇಲಿನ ಗಾಯದ ಗುರುತುಗಳು ಅವರ ಮೇಲೆ ನಿರಂತರ ದಾಳಿ ನಡೆದಿರುವುದು ಸೂಚಿಸುತ್ತವೆ ಎಂದು ಸ್ಥಳೀಯ ಮಾಧ್ಯಮ ವರದಿಗಳು ತಿಳಿಸಿವೆ.

ಸಾಮಾಜಿಕ ಮಾಧ್ಯಮಗಳಲ್ಲಿ ಸುನಿತಾ ಅವರ ಪರಿಸ್ಥಿತಿಯ ವಿಡಿಯೊ ವೈರಲ್ ಆಗುತ್ತಿದ್ದಂತೆ, ಸೀಮಾ ಪಾತ್ರ ಅವರನ್ನು ತಕ್ಷಣವೇ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

29 ವರ್ಷದ ಸುನೀತಾ ಅವರು ಜಾರ್ಖಂಡ್‌ನ ಗುಮ್ಲಾ ಮೂಲದವರಾಗಿದ್ದು, ಸುಮಾರು 10 ವರ್ಷಗಳ ಹಿಂದೆ ಸೀಮಾ ಪಾತ್ರಾ ಅವರ ಮನೆಯಲ್ಲಿ ಕೆಲಸಕ್ಕೆ ಸೇರಿದ್ದರು. ಅವರ ಮಗಳು ವತ್ಸಲಾ ಕೆಲಸದ ನಿಮಿತ್ತ ದೆಹಲಿಗೆ ತೆರಳುತ್ತಿದ್ದಾಗ ಕೂಡಾ ಸುನೀತಾ ಅವರ ಸಹಾಯಕ್ಕೆ ತೆರಳಿದ್ದರು. ಸುಮಾರು ನಾಲ್ಕು ವರ್ಷಗಳ ಹಿಂದೆ ವತ್ಸಲಾ ಮತ್ತು ಸುನೀತಾ ರಾಂಚಿಗೆ ಮರಳಿದ್ದರು.

ಇದನ್ನೂ ಓದಿ:  ಬುಡಕಟ್ಟು ಯುವತಿಗೆ ಚಿತ್ರಹಿಂಸೆ: ಆರೋಪಿ ಸೀಮಾ ಪಾತ್ರಾ ಬಿಜೆಪಿಯಿಂದ ಅಮಾನತು

ಸುಮಾರು ಆರು ವರ್ಷಗಳಿಂದ ಸೀಮಾ ಪಾತ್ರಾ ಕ್ರೂರ ಚಿತ್ರಹಿಂಸೆ ನೀಡುತ್ತಿದ್ದಾರೆ ಎಂದು ಸಂತ್ರಸ್ತೆ ಯುವತಿ ಹೇಳಿದ್ದಾರೆ. ಅಪಾರ ನೋವಿನಿಂದ ಮಾತನಾಡಿದ ಅವರು, ತನಗೆ ಬಿಸಿ ತವಾ ಮತ್ತು ರಾಡ್‌ಗಳಿಂದ ಥಳಿಸಿ ಹಲ್ಲುಗಳನ್ನು ಒಡೆದುಹಾಕಲಾಯಿತು ಎಂದು ವೀಡಿಯೊಗಳಲ್ಲಿ ಹೇಳಿಕೊಂಡಿದ್ದಾರೆ. ಆಕೆಗೆ ನೆಲದ ಮೇಲಿನ ಮೂತ್ರವನ್ನು ನೆಕ್ಕುವಂತೆ ಮಾಡಲಾಯಿತು ಎಂದು ಅವರು ತಿಳಿಸಿದ್ದಾರೆ.

ಈ ಚಿತ್ರಹಿಂಸೆಯನ್ನು ತನಗೆ ಶಿಕ್ಷೆಯಾಗಿ ನೀಡಲಾಗಿದ್ದು, ಆದರೆ ತಾನು ಮಾಡಿರುವ ತಪ್ಪುಗಳೇನು ಎಂದು ತನಗೆ ತಿಳಿದಿರಲಿಲ್ಲ ಎಂದು ಸುನೀತಾ ಹೇಳಿದ್ದಾರೆ.

ಸೀಮಾ ಪಾತ್ರಾ ಅವರ ಮಗ ಆಯುಷ್ಮಾನ್ ತನಗೆ ಸಹಾಯ ಮಾಡಿದ್ದಾನೆ ಎಂದು ಯುವತಿ ಹೇಳಿದ್ದು,“ನಾನು ಬದುಕಿರುವುದು ಅವನಿಂದ ಮಾತ್ರ” ಎಂದು ಅವರು ಹೇಳಿದ್ದಾರೆ. ತನ್ನ ಸಹೋದರಿ ಮತ್ತು ಸೋದರ ಮಾವನಿಗೆ ಈ ಕಷ್ಟಗಳನ್ನು ಹೇಳಿದ್ದರೂ ಅವರು ಇದರ ಬಗ್ಗೆ ಚಿಂತಿತರಾಗಿರಲಿಲ್ಲ ಎಂದು ಅವರು ಹೇಳಿದ್ದಾರೆ. ವೀಡಿಯೊದಲ್ಲಿ ಸುನಿತಾ ಅವರು ತಾನು ಚೇತರಿಸಿಕೊಂಡರೆ ಅಧ್ಯಯನ ಮಾಡುವುದಾಗಿ ಹೇಳಿರುವುದು ದಾಖಲಾಗಿದೆ.

ಇದನ್ನೂ ಓದಿ: ಮಾತು ಮರೆತ ಭಾರತ; ಊನಾ ಫೈಲ್: ಆರೆಸ್ಸೆಸ್-ಬಿಜೆಪಿಯ ದನದ ರಾಜಕಾರಣ ಮತ್ತು ದಲಿತರು

ಸೀಮಾ ಅವರು ಮಗ ಆಯುಷ್ಮಾನ್ ಅವರು ಸುನೀತಾ ಅವರ ಪರಿಸ್ಥಿತಿಯನ್ನು ಸ್ನೇಹಿತರಿಗೆ ವಿವರಿಸಿ ಸಹಾಯ ಕೇಳಿದ್ದರು. ನಂತರ ಆತನ ಸ್ನೇಹಿತ ಪೊಲೀಸ್ ದೂರು ದಾಖಲಿಸಿದ್ದು, ಸುನೀತಾರನ್ನು ರಕ್ಷಿಸಲಾಗಿದೆ. ಪಸ್ತುತ ಅವರು ರಾಂಚಿಯ ರಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...