Homeಕರ್ನಾಟಕಕೊಚ್ಚಿ ಸ್ಪೋಟಕ್ಕೆ ಮುಸ್ಲಿಂ ನಂಟು ಸೃಷ್ಟಿಸಿದ ಬಿಜೆಪಿ ನಾಯಕ ಭಾಸ್ಕರ್ ರಾವ್

ಕೊಚ್ಚಿ ಸ್ಪೋಟಕ್ಕೆ ಮುಸ್ಲಿಂ ನಂಟು ಸೃಷ್ಟಿಸಿದ ಬಿಜೆಪಿ ನಾಯಕ ಭಾಸ್ಕರ್ ರಾವ್

- Advertisement -
- Advertisement -

ಕೇರಳದ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್‌ನಲ್ಲಿ ರವಿವಾರ ನಡೆದ ಸರಣಿ ಸ್ಫೋಟದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 45 ಮಂದಿ ಗಾಯಗೊಂಡಿದ್ದಾರೆ. ಈ ಸ್ಪೋಟಕ್ಕೆ ಕಾರಣವಾದ ವ್ಯಕ್ತಿ ಡೊಮಿನಿಕ್ ಮಾರ್ಟಿನ್ ತನ್ನ ಫೇಸ್‌ಬುಕ್ ಲೈವ್‌ನಲ್ಲಿ ವೀಡಿಯೊ ಮೂಲಕ ಈ ಕೃತ್ಯ ಎಸಗಿದ್ದು ತಾನೇ ಎಂದು ಹೇಳಿ, ಆ ಬಳಿಕ ಪೊಲೀಸರಿಗೆ ಶರಣಾಗಿದ್ದಾನೆ.

ಅಪರಾಧಿಯೇ ಕೃತ್ಯದ ಬಗ್ಗೆ ತಪ್ಪುಒಪ್ಪಿಕಜೊಂಡು ಪೊಲೀಸರಿಗೆ ಶರಣಾದರೂ ಕೂಡ ನಿವೃತ್ತ ಐಪಿಎಸ್ ಅಧಿಕಾರಿ, ಬಿಜೆಪಿ ನಾಯಕ ಭಾಸ್ಕರ್ ರಾವ್ ಮಾತ್ರ ಪರೋಕ್ಷವಾಗಿ ಮುಸ್ಲಿಂ ಸಮುದಾಯದವರ ತಲೆಗೆ ಕಟ್ಟಲು ನೋಡುತ್ತಿದ್ದಾರೆ.

ಎಕ್ಸಾನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ”ದೇಶದಲ್ಲಿ ಬಾಂಬ್ ಸ್ಫೋಟಗಳಿಗೆ ದೀರ್ಘ ವಿರಾಮವಿತ್ತು. ಕಾಂಗ್ರೆಸ್ ಮತ್ತು ಸಿಪಿಎಂನಿಂದ ದಶಕಗಳ ಕಾಲದ ಒಲೈಕೆಯ ಮತಬ್ಯಾಂಕ್ ರಾಜಕಾರಣವು ಮುಸ್ಲಿಮರನ್ನು ಅವಿದ್ಯಾವಂತರನ್ನಾಗಿ, ಹಿಂದುಳಿದವರನ್ನಾಗಿ ಮತ್ತು ಅಪರಾಧಿಗಳನ್ನಾಗಿ ಮಾಡಿದೆ. ಪರಿಣಾಮವಾಗಿ ಭಯೋತ್ಪಾದನೆಯನ್ನು ನಾವು ಮನೆಬಾಗಿಲಿಗೆ ಆಹ್ವಾನಿಸಿದ್ದೇವೆ. ಈ ಜನರು ಮುಖ್ಯವಾಹಿನಿಗೆ ಬರಲು ಯಾವಾಗ ಯೋಚಿಸುತ್ತಾರೆ..?” ಎಂದು ಪೋಸ್ಟ್ ಹಂಚಿಕೊಂಡಿದ್ದಾರೆ.

ಬೆಂಗಳೂರಿನ ನಿವೃತ್ತ ಪೊಲೀಸ್ ಕಮಿಶನರ್ ಆಗಿದ್ದ ಭಾಸ್ಕರ್ ರಾವ್ ಅವರ ಈ ಪೋಸ್ಟ್, ಕಲಮಶೇರಿ ಸ್ಪೋಟಕ್ಕೆ ಮುಸ್ಲಿಮರೇ ಕಾರಣ ಎಂದು ಪರೋಕ್ಷವಾಗಿ ಬಿಂಬಿಸಲು ಹೊರಟಿರುವುದಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆಯಾಗುತ್ತಿದೆ.

ಕೇರಳದ ಕಲಮಶೇರಿಯಲ್ಲಿ ಸ್ಫೋಟ ನಡೆದದ್ದು ಬೆಳಿಗ್ಗೆ 9 ಗಂಟೆ ಸುಮಾರಿಗೆ ರಾಷ್ಟ್ರೀಯ ಮಾಧ್ಯಮಗಳಲ್ಲಿ 11.20 ರ ವೇಳೆಗೆ ಅದು ಸುದ್ದಿಯಾಯಿತು. ಆ ಬಳಿಕ ದಾಳಿಯ ಹಿಂದಿನ ಕೈಗಳ ಬಗ್ಗೆ ಎಲ್ಲೆಡೆ ಊಹಾಪೋಹಗಳೇ ಹರಿದಾಡಿದವು. ಕೇರಳ ಪೊಲೀಸರು ಸುಳ್ಳು ಸುದ್ದಿ ಹರಡಿದವರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂಬ ಎಚ್ಚರಿಕೆಯ ಸಂದೇಶವನ್ನೂ ನೀಡಿದರು. ಸಂಜೆ 4.20 ರ ವೇಳೆಗೆ ಎಡಿಜಿಪಿ ಎಂ.ಆರ್.ಅಜಿತ್ ಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಆರೋಪಿ ಡೊಮಿನಿಕ್ ಮಾರ್ಟಿನ್ ಶರಣಾಗಿದ್ದಾನೆ ಎಂದು ಧೃಡಪಡಿಸಿದರು. ಶರಣಾಗುವ ಮುಂಚೆ ಆರೋಪಿ 6 ತಿಂಗಳ ಹಿಂದೆ ತೆರೆದಿದ್ದ ಫೇಸ್ ಬುಕ್ ಖಾತೆಯಲ್ಲಿ ಲೈವ್ ಗೆ ಬಂದು ಕೃತ್ಯದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದೂ ವೈರಲಾಯಿತು.

ಇದನ್ನೂ ಓದಿ: ಕೊಚ್ಚಿ: ಸರಣಿ ಸ್ಪೋಟ ಪ್ರಕರಣ: ವಿಡಿಯೋ ಹೇಳಿಕೆ ಕೊಟ್ಟು ಪೊಲೀಸರಿಗೆ ಶರಣಾದ ಆರೋಪಿ

ಮಾರ್ಟಿನ್ ಹಂಚಿಕೊಂಡ ವಿಡಿಯೋದಲ್ಲಿ ಏನಿದೆ?

”ಹಲೋ, ನನ್ನ ಹೆಸರು ಮಾರ್ಟಿನ್. ಕೇರಳದ ಕಳಮಶ್ಶೇರಿಯಲ್ಲಿರುವ ಕನ್ವೆನ್ಸನ್ ಸೆಂಟರ್‌ನಲ್ಲಿ ಯಹೋವನ ಸಾಕ್ಷಿಗಳ ಪ್ರಾರ್ಥನಾ ಸಭೆಯಲ್ಲಿ ಬಾಂಬ್ ಸ್ಫೋಟ ಘಟನೆಗೆ ಬಗ್ಗೆ ನಿಮಗೆ ಸುದ್ದಿ ಸಿಕ್ಕಿರಬಹುದು. ಅಲ್ಲಿ ಏನು ನಡೆದಿದೆ ಎಂಬ ಬಗ್ಗೆ ನನಗೆ ಖಚಿತವಾಗಿ ತಿಳಿದಿಲ್ಲ. ಘಟನೆ ನಡೆದಿದೆ, ಏನಾದರೂ ಸಂಭವಿಸಿದೆ ಎಂಬುದು ಖಚಿತ . ಆ ಘಟನೆಯ ಸಂಪೂರ್ಣ ಹೊಣೆಯನ್ನು ನಾನು ಹೊತ್ತುಕೊಳ್ಳುತ್ತಿದ್ದೇನೆ” ಎಂದು ಹೇಳಿದ್ದಾನೆ.

”ಯಹೋವನ ಸಾಕ್ಷಿಗಳ ಗುಂಪಿನಲ್ಲಿ ನಾನು ಕಳೆದ 16 ವರ್ಷಗಳಿಂದ ಗುರುತಿಸಿಕೊಂಡಿದ್ದೆ. ಆದರೆ ಕಳೆದ ಆರು ವರ್ಷಗಳ ಹಿಂದೆ  ಈ ಪಂಗಡವು ತಪ್ಪಾದ ಪಂಗಡವೆಂದು ನನಗೆ ಅರಿವಾಯಿತು. ನೀವು ಬೋಧಿಸುತ್ತಿರುವ ವಿಚಾರಗಳು ತಪ್ಪು ಎಂದು ಸಂಬಂಧಪಟ್ಟವರಲ್ಲಿ ತಿಳಿಸಿದೆ. ಆದರೆ ಅವರು ಅದಕ್ಕೆ ಮನ್ನಣೆ ನೀಡಲಿಲ್ಲ. ಇವರು ಈ ದೇಶದಲ್ಲಿದ್ದುಕೊಂಡು ಈ ದೇಶದ ಜನರೊಂದಿಗೆ ಬೆರೆಯಬಾರದು, ಅವರು ವೇಶ್ಯೆಯಂತೆ, ಅವರೊಂದಿಗೆ ವ್ಯವಹರಿಸಬಾರದು ಎಂದು ಬೋಧಿಸುತ್ತಾರೆ” ಎಂದು ಆರೋಪಿಸಿದ್ದಾನೆ.

”4 ವರ್ಷದ ಮಗುವಿಗೂ ಇವರು ನಿನ್ನ ಸ್ನೇಹಿತ ನೀಡಿದ ಚಾಕೊಲೇಟ್ ತಿನ್ನಬಾರದೆಂದು ಕಲಿಸಿಕೊಡುತ್ತಾರೆ. ಇದು ಯಾವ ರೀತಿಯ ಬೋಧನೆ. ಆ ಮಗುವಿನ ಮನಸ್ಥಿತಿ ಹೇಗಿರಬೇಡ. ನಾಲ್ಕು ವರ್ಷದಿಂದಲೇ ಮಕ್ಕಳ ಮನಸ್ಸಿನಲ್ಲಿ ದ್ವೇಷ ಬಿತ್ತುತ್ತಿದ್ದಾರೆ. ಸರ್ಕಾರಿ ಸೇವೆಗೆ ಸೇರಬಾರದು, ದೇಶ ಭಕ್ತಿ ಗೀತೆ ಹಾಡಬಾರದು, ಸೇನೆಗೆ ಸೇರಬಾರದು, ಮತದಾನ ಮಾಡಬಾರದು ಎಂದು ಕಲಿಸಿಕೊಡುತ್ತಾರೆ. ಇಂತಹ ಬೋಧನೆ ಮಾಡುವವರಿಗೆ ಇನ್ನು ಏನು ಮಾಡಬೇಕು. ಭೂಮಿಯಲ್ಲಿ ಎಲ್ಲರೂ ನಾಶವಾಗುತ್ತಾರೆ, ಯಹೋವನ ಸಾಕ್ಷಿಗಳ ಗುಂಪು ಮಾತ್ರ ಬದುಕುಳಿಯುತ್ತಾರೆ ಎಂದು ಬೋಧಿಸುತ್ತಾರೆ. ಇವರು ಜನರ ನಾಶವನ್ನು ಬಯಸುತ್ತಾರೆ. ಇವರನ್ನು ಇನ್ನು ಏನು ಮಾಡಬೇಕು? ಈ ಪಂಗಡವು ತಪ್ಪು ಪಂಗಡ. ಹಾಗಾಗಿ, ಬಹಳ ಯೋಚಿಸಿ ಬಾಂಬ್ ಇಡುವ ತೀರ್ಮಾನ ಮಾಡಿದೆ” ಎಂದು ವಿಡಿಯೋದಲ್ಲಿ ಹೇಳಿದ್ದಾನೆ.

”ಘಟನೆಯ ಸಂಪೂರ್ಣ ಹೊಣೆಯನ್ನು ನಾನು ಹೊತ್ತುಕೊಳ್ಳುತ್ತಿದ್ದೇನೆ. ಪೊಲೀಸರಿಗೆ ಶರಣಾಗುತ್ತೇನೆ. ಬಾಂಬ್ ತಯಾರಿಸುವ ವಿಡಿಯೋವನ್ನು ಯಾರೂ ಕೂಡ ಜನರಿಗೆ ತೋರಿಸಬಾರದು. ಜನಸಾಮಾನ್ಯನಿಗೆ ಬಾಂಬ್ ತಯಾರಿಸುವ ಅರಿವು ಬಂದುಬಿಟ್ಟರೆ ದೊಡ್ಡ ಅಪಾಯವಾಗಬಹುದು” ಎಂದು ಬಾಂಬ್ ಸ್ಫೋಟ ನಡೆಸಿರುವ ಹೊಣೆ ಹೊತ್ತುಕೊಂಡಿರುವ ಡೊಮಿನಿಕ್ ಮಾರ್ಟಿನ್ ಹೇಳಿಕೊಂಡಿದ್ದಾನೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗುಜರಾತ್| 200ಕ್ಕೆ 212 ಅಂಕ ಪಡೆದ ವಿದ್ಯಾರ್ಥಿನಿ: ಶಿಕ್ಷಣ ವ್ಯವಸ್ಥೆಯ ಗುಣಮಟ್ಟ ಪ್ರಶ್ನಿಸಿದ ಜನ

0
ಗುಜರಾತ್‌ನ ದಾಹೋದ್ ಜಿಲ್ಲೆಯಲ್ಲಿ ಪ್ರಾಥಮಿಕ ಶಾಲಾ ಪರೀಕ್ಷೆಯ ಫಲಿತಾಂಶಗಳಲ್ಲಿ ಕಂಡು ಬಂದ ದೋಷಗಳು ಭಾರೀ ಚರ್ಚೆಗೆ ಕಾರಣವಾಗಿದ್ದು, ಶಿಕ್ಷಣ ವ್ಯವಸ್ಥೆಯ ಗುಣಮಟ್ಟದ ಬಗ್ಗೆ ಕಳವಳ ವ್ಯಕ್ತವಾಗಿದೆ. ವರದಿಗಳ ಪ್ರಕಾರ, ನಾಲ್ಕನೇ ತರಗತಿಯ ವಿದ್ಯಾರ್ಥಿನಿ ವಂಶಿಬೆನ್...