Homeಕರ್ನಾಟಕಜಿಲ್ಲಾಧಿಕಾರಿಯನ್ನು ಪಾಕಿಸ್ತಾನಿ ಎಂದಿದ್ದ ಬಿಜೆಪಿ ನಾಯಕ | ಪ್ರಕರಣ ದಾಖಲಾಗುತ್ತಿದ್ದಂತೆ ಕ್ಷಮೆ ಯಾಚನೆ!

ಜಿಲ್ಲಾಧಿಕಾರಿಯನ್ನು ಪಾಕಿಸ್ತಾನಿ ಎಂದಿದ್ದ ಬಿಜೆಪಿ ನಾಯಕ | ಪ್ರಕರಣ ದಾಖಲಾಗುತ್ತಿದ್ದಂತೆ ಕ್ಷಮೆ ಯಾಚನೆ!

- Advertisement -
- Advertisement -

ಕಲಬುರಗಿಯ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರನ್ನು ”ಪಾಕಿಸ್ತಾನಿ” ಎಂದು ಉಲ್ಲೇಖಿಸಿದ್ದ ಎಮ್‌ಎಲ್‌ಸಿ ಎನ್. ರವಿಕುಮಾರ್‌ ಅವರು ಪ್ರಕರಣ ದಾಖಲಾಗುತ್ತಿದ್ದಂತೆ ತಮ್ಮ ಹೇಳಿಕೆಗೆ ಕ್ಷಮೆ ಕೇಳಿದ್ದಾರೆ ಎಂದು ವರದಿಯಗಿದೆ. ಸಚಿವ ಪ್ರಿಯಾಂಕ್ ಖರ್ಗೆ, ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಹಾಗೂ ದಲಿತ ಸಮುದಾಯಕ್ಕೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಜಿಲ್ಲಾಧಿಕಾರಿಯನ್ನು ಪಾಕಿಸ್ತಾನಿ

ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರವಿಕುಮಾರ್, ತಮ್ಮ ಹೇಳಿಕೆಗೆ ವಿಷಾಧ ವ್ಯಕ್ತಪಡಿಸುತ್ತೇನೆ. ಹೇಳಿಕೆ ಹಿಂಪಡೆಯುತ್ತೇನೆ ಎಂದು ಹೇಳಿದ್ದಾರೆ. “ನನ್ನ ಅಜಾಗರೂಕ ಹೇಳಿಕೆಗೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ಜಿಲ್ಲಾಧಿಕಾರಿ ಅತ್ಯಂತ ಗೌರವಪಾತ್ರರು. ಆ ಹೇಳಿಕೆಯನ್ನು ಉದ್ದೇಶಪೂರ್ವಕವಾಗಿ ಹೇಳಿಲ್ಲ. ಬಾಯಿ ತಪ್ಪಿನಿಂದ ಬಂದ ಹೇಳಿಕೆಯಷ್ಟೇ. ನನ್ನ ಹೇಳಿಕೆಯನ್ನು ಕೂಡಲೇ ಹಿಂಪಡೆಯುತ್ತಿದ್ದೇನೆ” ಎಂದು ತಿಳಿಸಿದ್ದಾರೆ.

ಬಿಜೆಪಿ ಕಲಬುರಗಿಯಲ್ಲಿ ಇತ್ತಿಚೆಗೆ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ವಿಧಾನ ಪರಿಷತ್‌ನ ವಿರೋಧ ಪಕ್ಷದ (ಬಿಜೆಪಿ) ಮುಖ್ಯ ಸಚೇತಕರೂ ಆಗಿರುವ ಎನ್‌ ರವಿಕುಮಾರ್ ಮಾತನಾಡಿ, ”ಕಲಬುರಗಿ ಕರ್ನಾಟಕದಲ್ಲಿದೆಯೇ ಅಥವಾ ಪಾಕಿಸ್ತಾನದಲ್ಲಿದೆಯೇ. ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರು ಪಾಕಿಸ್ತಾನದವರೋ ಅಥವಾ ಭಾರತದವರೋ ಖಚಿತವಾಗಿ ಗೊತ್ತಿಲ್ಲ” ಎಂದಿದ್ದರು.

“ಶಹಾಬಾದ್ ಡಿವೈಎಸ್ ಪಿ ಶಂಕರಗೌಡ ಪಾಟೀಲ, ಸಿಪಿಐ ಚಂದ್ರಶೇಖರ ತಿಗಡಿ ಮತ್ತು ನಟರಾಜ ಲಾಡೆ ತಮ್ಮ ಕರ್ತವ್ಯ ನಿರ್ವಹಣೆಲ್ಲಿ ಅಸಮರ್ಥರಾಗಿದ್ದಾರೆ. ಅವರು ಸರ್ಕಾರದ ಗುಲಾಮರಾಗಿದ್ದಾರೆ” ಎಂದು ಆರೋಪಿಸಿದ್ದರು. ಮಾತ್ರವಲ್ಲ, ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧವೂ ಜಾತಿ ನಿಂದನೆ ಮಾಡಿದ್ದರು.

ಅವರ ಭಾಷಣ ವರದಿಯಾದ ಬಳಿಕ, ಕಾಂಗ್ರೆಸ್‌ ಕಾರ್ಯಕರ್ತ ದತ್ತಾತ್ರೇಯ ಇಕ್ಕಳಕಿ ಅವರು ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.

“ರವಿಕುಮಾರ್ ಅವರು ಮುಸ್ಲಿಮರ ವಿರುದ್ಧ ಕೋಮುದ್ವೇಷ ಪ್ರಚೋದನೆ ಮಾಡಿದ್ದಾರೆ. ಪೊಲೀಸರು ಮತ್ತು ಅಧಿಕಾರಿಗಳನ್ನು ಗುಲಾಮರೆಂದು ಅವಮಾನಿಸಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಜಾತಿ ನಿಂದನೆ ಮಾಡಿದ್ದಾರೆ. ದಲಿತ ಸಮುದಾಯಕ್ಕೆ ಅಪಮಾನ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದರು.

ಖರ್ಗೆ ಮತ್ತು ದಲಿತ ಸಮುದಾಯಕ್ಕೆ ಜಾತಿ ನಿಂದನೆ ಹಾಗೂ ಜಿಲ್ಲಾಧಿಕಾರಿ ವಿರುದ್ಧ ಕೋಮುದ್ವೇಷದ ಹೇಳಿಕೆ ನೀಡಿದ ಆರೋಪದ ಮೇಲೆ ರವಿಕುಮಾರ್ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಜಿಲ್ಲಾಧಿಕಾರಿಯನ್ನು ಪಾಕಿಸ್ತಾನಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಎಸ್‌ಸಿ, ಎಸ್‌ಟಿ, ಒಬಿಸಿ ಅಭ್ಯರ್ಥಿಗಳನ್ನು ಉದ್ದೇಶಪೂರ್ವಕವಾಗಿ ‘ಅರ್ಹರಲ್ಲ’ ಎಂದು ಘೋಷಿಸಲಾಗುತ್ತಿದೆ: ರಾಹುಲ್ ಗಾಂಧಿ

ಎಸ್‌ಸಿ, ಎಸ್‌ಟಿ, ಒಬಿಸಿ ಅಭ್ಯರ್ಥಿಗಳನ್ನು ಉದ್ದೇಶಪೂರ್ವಕವಾಗಿ ‘ಅರ್ಹರಲ್ಲ’ ಎಂದು ಘೋಷಿಸಲಾಗುತ್ತಿದೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....