Homeಕರ್ನಾಟಕಮುಸ್ಲಿಂ ಜಿಲ್ಲಾಧಿಕಾರಿಯನ್ನು ಪಾಕಿಸ್ತಾನಿ ಎಂದ ಬಿಜೆಪಿ ನಾಯಕ | ಕ್ಷಮೆಯಾಚಿಸುವಂತೆ ಸೂಚಿಸಿದ ಕರ್ನಾಟಕ ಹೈಕೋರ್ಟ್

ಮುಸ್ಲಿಂ ಜಿಲ್ಲಾಧಿಕಾರಿಯನ್ನು ಪಾಕಿಸ್ತಾನಿ ಎಂದ ಬಿಜೆಪಿ ನಾಯಕ | ಕ್ಷಮೆಯಾಚಿಸುವಂತೆ ಸೂಚಿಸಿದ ಕರ್ನಾಟಕ ಹೈಕೋರ್ಟ್

- Advertisement -
- Advertisement -

ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನಮ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಎಂಎಲ್‌ಸಿ ಎನ್. ರವಿ ಕುಮಾರ್ ಅವರಿಗೆ ಕರ್ನಾಟಕ ಹೈಕೋರ್ಟ್ ಗುರುವಾರ ಕ್ಷಮೆಯಾಚಿಸುವಂತೆ ಮೌಖಿಕವಾಗಿ ಸೂಚಿಸಿದೆ. ಜಿಲ್ಲಾಧಿಕಾರಿಯನ್ನು ಪಾಕಿಸ್ತಾನಿ ಎಂದು ಕರೆದಿದ್ದಕ್ಕಾಗಿ ಪೊಲೀಸರು ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು. ಮುಸ್ಲಿಂ ಜಿಲ್ಲಾಧಿಕಾರಿಯನ್ನು

ರವಿ ಕುಮಾರ್ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) 2023 ರ ಸೆಕ್ಷನ್ 197, 224, 299, 302, 351, 353 ಮತ್ತು ಎಸ್‌ಸಿ ಮತ್ತು ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3(1)(ಆರ್) ಅಡಿಯಲ್ಲಿ ಗುಲ್ಬರ್ಗದ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತನ್ನ ವಿರುದ್ಧ ದಾಖಲಿಸಿರುವ ಈ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ರವಿ ಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸುವಾಗ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ರಜಾ ಪೀಠವು ಜಿಲ್ಲಾಧಿಕಾರಿ ಜೊತೆಗೆ ಕ್ಷಮೆ ಕೇಳುವಂತೆ ಹೇಳಿದೆ.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, “ಈ ರೀತಿಯ ಹೇಳಿಕೆ ನೀಡಬೇಕಾಗಿರಲಿಲ್ಲ. ಹಾಲಿ ಸಚಿವರೊಂದಿಗೆ ಮಧ್ಯಪ್ರದೇಶ ಮತ್ತು ಸುಪ್ರೀಂಕೋರ್ಟ್‌ನಲ್ಲಿ ಏನಾಯಿತು ಎಂಬುದನ್ನು ನೀವು ನೋಡಿದ್ದೀರಿ. ಅವರಿಗಿಂತ ನೀವು ಭಿನ್ನವಾಗಿಲ್ಲ, ನೀವು ಅಂತಹ ರೀತಿಯ ಹೇಳಿಕೆಗಳನ್ನು ನೀಡುವಂತಿಲ್ಲ” ಎಂದು ಹೇಳಿದೆ.

ಈ ವೇಳೆ ಅರ್ಜಿದಾರ ರವಿ ಕುಮಾರ್ ಪರವಾಗಿ ಹಾಜರಾದ ವಕೀಲ ವಿನೋದ್ ಕುಮಾರ್ ಎಂ., ಈ ಬಗ್ಗೆ ಕ್ಷಮೆಯಾಚಿಸಲಾಗಿದೆ ಎಂದು ವಾದಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯ, “ಯಾರ ವಿರುದ್ಧ ಹೇಳಿಕೆ ನೀಡಿದ್ದೀರೊ ಅವರು ಈ ಕ್ಷಮೆಯಾಚನೆಯನ್ನು ಸ್ವೀಕರಿಸಬೇಕು. ನೀವು ಆ ಮಹಿಳೆ ಜೊತೆಗೆ ಕ್ಷಮೆಯಾಚಿಸಿ ಮತ್ತು ಅವರು ಅದನ್ನು ಸ್ವೀಕರಿಸಲಿ, ಈ ವೇಳೆ ನೀವು ಅದನ್ನು ದಾಖಲಿಸಲಿ. ಅಲ್ಲಿಯವರೆಗೆ ನಾವು ಈ ಅರ್ಜಿಯನ್ನು ಪರಿಗಣಿಸುವುದಿಲ್ಲ” ಎಂದು ಹೇಳಿದೆ.

“ಇದು ಸಂಪೂರ್ಣ ಅನಗತ್ಯವಾಗಿತ್ತು. ದಯವಿಟ್ಟು ಅವರಿಗೆ ಕ್ಷಮೆಯಾಚಿಸಿ ಮತ್ತು ಅವರು ಅದನ್ನು ಸ್ವೀಕರಿಸಿ ಮತ್ತು ಅದನ್ನು ದಾಖಲಿಸಲಿ. ನಂತರ ನಾವು ಅದನ್ನು ಪರಿಗಣಿಸಬಹುದು, ಅಲ್ಲಿಯವರೆಗೆ ಕಷ್ಟ” ಎಂದು ಅದು ಹೇಳಿದೆ.

ಈ ವೇಳೆ ರವಿ ಕುಮಾರ್ ಅವರ ವಕೀಲರು, ಅರ್ಜಿದಾರರು ಅವರ ಸಮುದಾಯದ ಹೆಸರನ್ನು ಹೇಳುವ ಮೂಲಕ ಅವರನ್ನು ಅವಮಾನಿಸಿಲ್ಲ ಎಂದು ವಾದಿಸಿದರು. ಅವರ ಜಾತಿಯ ಆಧಾರದ ಮೇಲೆ ನಾನು ಅವರನ್ನು ಅವಮಾನಿಸಿದ್ದೇನೆ ಎಂಬ ಯಾವುದೇ ಪದ ದೂರಿನಲ್ಲಿ ಇಲ್ಲ. ಹಾಗಾಗಿ ಇದರಲ್ಲಿ ದೌರ್ಜನ್ಯ ತಡೆ ಕಾಯ್ದೆಯನ್ನು ಹೇಗೆ ಅನ್ವಯಿಸಲು ಸಾದ್ಯ ಎಂದು ಪ್ರಶ್ನಿಸಿದರು.

ಹೆಚ್ಚುವರಿ ರಾಜ್ಯ ಸಾರ್ವಜನಿಕ ಅಭಿಯೋಜಕ ಬಿ.ಎನ್. ಜಗದೀಶ ಅವರು ಅರ್ಜಿಯನ್ನು ವಿರೋಧಿಸಿ, “ದೂರಿನಲ್ಲಿ ಬರೆಯಲ್ಪಟ್ಟಿರುವುದು ವೀಡಿಯೊದಲ್ಲಿ ಹೇಳಲಾದ ಅರ್ಧದಷ್ಟು ವಿಚಾರ ಮಾತ್ರವಿದೆ” ಎಂದು ಹೇಳಿದ್ದು, ಈ ಬಗ್ಗೆ ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಲು ಸಮಯವನ್ನು ಕೋರಿದ್ದಾರೆ. ಮುಸ್ಲಿಂ ಜಿಲ್ಲಾಧಿಕಾರಿಯನ್ನು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬೆಂಗಳೂರು| ರಾತ್ರೋರಾತ್ರಿ ದಲಿತರ ಮನೆ, ದೇವಸ್ಥಾನ ಧ್ವಂಸ ಆರೋಪ: ಪ್ರಕರಣ ದಾಖಲು

ಬೆಂಗಳೂರು| ರಾತ್ರೋರಾತ್ರಿ ದಲಿತರ ಮನೆ, ದೇವಸ್ಥಾನ ಧ್ವಂಸ ಆರೋಪ: ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...