Homeಮುಖಪುಟಮೋದಿ ಜನ್ಮದಿನದಂದು ರಕ್ತದಾನ ಮಾಡಿದಂತೆ ನಟಿಸಿದ ಬಿಜೆಪಿ ಮೇಯರ್ : ವಿಡಿಯೋ ವೈರಲ್

ಮೋದಿ ಜನ್ಮದಿನದಂದು ರಕ್ತದಾನ ಮಾಡಿದಂತೆ ನಟಿಸಿದ ಬಿಜೆಪಿ ಮೇಯರ್ : ವಿಡಿಯೋ ವೈರಲ್

- Advertisement -
- Advertisement -

ರಾಜಕಾರಣಿಗಳಿಗೆ ಕ್ಯಾಮರಾ ಅಂದ್ರೆ ಬಲು ಪ್ರೀತಿ ಎಂದು ಎಲ್ಲರಿಗೂ ಗೊತ್ತಿರುವ ವಿಚಾರ, ಆದ್ರೆ ಉತ್ತರ ಪ್ರದೇಶದ ನಗರವೊಂದರ ಮೇಯರ್ ಈ ವಿಚಾರದಲ್ಲಿ ಒಂದು ಹೆಜ್ಜೆ ಮುಂದೆ ಹೋಗಿದ್ದಾರೆ.

ಉತ್ತರ ಪ್ರದೇಶದ ಪ್ರಮುಖ ನಗರಗಳಲ್ಲಿ ಒಂದಾದ ಮೊರಾದಾಬಾದ್‌ನ ಮೇಯರ್ ಹಾಗೂ ಬಿಜೆಪಿ ನಾಯಕ ವಿನೋದ್ ಅಗರ್‌ವಾಲ್ ಅವರು ಸೆಪ್ಟೆಂಬರ್ 17ರಂದು ಪ್ರಧಾನಿ ನರೇಂದ್ರ ಮೋದಿಯ ಜನ್ಮ ದಿನಾಚರಣೆಯಂದು ರಕ್ತದಾನ ಮಾಡಿದಂತೆ ಕ್ಯಾಮರಾ ಮುಂದೆ ನಟಿಸಿದ್ದಾರೆ ಎಂದು ವರದಿಯಾಗಿದೆ.

ಈ ಕುರಿತ ವಿಡಿಯೋವೊಂದು ವೈರಲ್ ಆಗಿದ್ದು, ಅದರಲ್ಲಿ ಮೇಯರ್ ವಿನೋದ್ ಅವರು ಬೆಡ್ ಮೇಲೆ ಮಲಗಿ ರಕ್ತದಾನ ಮಾಡಿದಂತೆ ಫೋಸ್ ಕೊಟ್ಟಿರುವುದು ಇದೆ. ಬಿಜೆಪಿ ಪಕ್ಷದ ಕಚೇರಿಯಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಮೇಯರ್ ಈ ರೀತಿಯ ನಟನೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಬೆಡ್ ಮೇಲೆ ಮಲಗಿದ್ದ ಮೇಯರ್‌ಗೆ ರಕ್ತದೊತ್ತದ ಪರಿಶೀಲಿಸಿದ ವೈದ್ಯಕೀಯ ಸಿಬ್ಬಂದಿ, ರಕ್ತ ತೆಗೆಯಲು ಸೂಜಿ ಚುಚ್ಚಲು ಮುಂದಾಗಿದ್ದಾರೆ. ಈ ವೇಳೆ ಬೇಡ ಎಂದ ಮೇಯರ್ ತಕ್ಷಣ ಅಲ್ಲಿಂದ ಎದ್ದು ನಡೆಯುವುದನ್ನು ವಿಡಿಯೋದಲ್ಲಿ ನೋಡಬಹುದು.

ರಕ್ತದಾನದ ನಟನೆಯ ಬಳಿಕ ಎಕ್ಸ್‌ನಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದ ಅಗರ್‌ವಾಲ್ ಅವರು “ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ರಕ್ತದಾನ ಮಾಡುವ ಮೂಲಕ ಸಾಮಾಜಿಕ ಜವಬ್ದಾರಿಯನ್ನು ನಿರ್ವಹಿಸಿದ್ದೇನೆ” ಎಂದು ಬರೆದುಕೊಂಡಿದ್ದರು ಎಂದು ವರದಿಗಳು ಹೇಳಿವೆ.

ವಿಡಿಯೋ ವೈರಲ್ ಆದ ನಂತರ ಈ ಕುರಿತು ಅಗರ್‌ವಾಲ್ ಅವರನ್ನು ಪ್ರಶ್ನಿಸಿದಾಗ, “ಅದು ವಿರೋಧಿಗಳು ನನ್ನ ಮಾನಹಾನಿ ಮಾಡಲು ನಡೆಸಿದ ಪಿತೂರಿ” ಎಂದಿದ್ದಾರೆ.

ಅಲ್ಲದೆ, “ನಾನು ರಕ್ತದಾನ ಮಾಡಲು ಶಿಬಿರಕ್ಕೆ ಹೋಗಿದ್ದೆ. ಅಲ್ಲಿ ವೈದ್ಯರು ನನಗೆ ಮದುಮೇಹ ಇದೆ ಎಂದು ರಕ್ತ ತೆಗೆಯಲು ನಿರಾಕರಿಸಿದರು” ಎಂದು ಸಮಜಾಯಿಸಿ ನೀಡಿದ್ದಾರೆ.

ಇದನ್ನೂ ಓದಿ : ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: 42 ದಿನಗಳ ನಂತರ ಕರ್ತವ್ಯಕ್ಕೆ ಮರಳಿದ ಕಿರಿಯ ವೈದ್ಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...