HomeಮುಖಪುಟBJP ನಾಯಕ ಕಪಿಲ್ ಮಿಶ್ರಾ ಭಾಗವಹಿಸಿದ್ದ ಸಭೆಯಲ್ಲಿ ಮತ್ತೆ ‘ಗೋಲಿ ಮಾರೋ’ ಘೋಷಣೆ

BJP ನಾಯಕ ಕಪಿಲ್ ಮಿಶ್ರಾ ಭಾಗವಹಿಸಿದ್ದ ಸಭೆಯಲ್ಲಿ ಮತ್ತೆ ‘ಗೋಲಿ ಮಾರೋ’ ಘೋಷಣೆ

ಈಶಾನ್ಯ ದೆಹಲಿಯಲ್ಲಿ ಕಪಿಲ್ ಮಿಶ್ರಾ ನಡೆಸುತ್ತಿದ್ದ ರ್‍ಯಾಲಿಯಲ್ಲಿ ಕೂಡಾ ‘ಗೋಲಿ ಮಾರೊ’ ಘೋಷಣೆಗಳು ಕೂಗಲಾಗಿತ್ತು, ನಂತರ ಅಲ್ಲಿ ಕೋಮು ಗಲಭೆಗಳು ಭುಗಿಲೆದ್ದವು

- Advertisement -
- Advertisement -

ಈ ವರ್ಷ ದೆಹಲಿಯಲ್ಲಿ ನಡೆದ ಕೋಮುಗಲಭೆಯ ಪ್ರಚೋದಕ ಎಂದು ಆರೋಪಿಸಲಾಗಿರುವ ಬಿಜೆಪಿ ನಾಯಕ ಕಪಿಲ್ ಮಿಶ್ರಾ ಅವರು ಭಾಗವಹಿಸಿದ್ದ ಕಾರ್ಯಕ್ರಮವೊಂದರಲ್ಲಿ ‘ಗೋಲಿ ಮಾರೋ’ (ಗುಂಡು ಹೊಡೆಯಿರಿ) ಎಂಬ ಘೋಷಣೆಗಳು ‘ಮತ್ತೇ’ ಮೊಳಗಿವೆ. ಪ್ರತಿ ಶುಕ್ರವಾರ ನಮಾಜ್ ನಡೆಯುತ್ತಿದ್ದ ಗುರ್ಗಾಂವ್‌ನ ಸೆಕ್ಟರ್ 12 ಎ ಪ್ರದೇಶದಲ್ಲಿ ಬಿಜೆಪಿ ಬೆಂಬಲಿತ ಕೋಮು ಆಧಾರಿತ ಸಂಘಟನೆ ಆಯೋಜಿಸಿದ್ದ ಗೋವರ್ಧನ ಪೂಜೆಯಲ್ಲಿ ಅವರು ಶುಕ್ರವಾರ ಪಾಲ್ಗೊಂಡಿದ್ದರು. ಈ ವೇಳೆ ಅಲ್ಲಿ ‘ಗೋಲಿ ಮಾರೋ’ ಘೋಷಣೆಗಳನ್ನು ಕೂಗಲಾಗಿದೆ.

ಕಳೆದು ವರ್ಷ ಸಿಎಎ ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆಯನ್ನು ವಿರೋಧಿಸಿ ಈಶಾನ್ಯ ದೆಹಲಿಯಲ್ಲಿ ಕಪಿಲ್ ಮಿಶ್ರಾ ನಡೆಸುತ್ತಿದ್ದ ರ್‍ಯಾಲಿಯಲ್ಲಿ ಕೂಡಾ ‘ಗೋಲಿ ಮಾರೊ’ ಘೋಷಣೆಗಳು ಕೂಗಲಾಗಿತ್ತು. ಇದರ ನಂತರ ಅಲ್ಲಿ ಕೋಮುಗಲಭೆ ನಡೆದು ಐವತ್ತಕ್ಕೂ ಹೆಚ್ಚು ಜನರು ಸಾವನಪ್ಪಿದ್ದರು ಹಾಗೂ ಸಾವಿರಾರು ಜನರು ಗಾಯಗೊಂಡು ಕೋಟ್ಯಾಂತರ ರುಪಾಯಿಗಳ ಆಸ್ತಿಪಾಸ್ತಿ ನಷ್ಟವಾಗಿದ್ದವು.

ಇದನ್ನೂ ಓದಿ: ದೆಹಲಿ: ಸ್ಥಳೀಯರ ವಿರೋಧದಿಂದ ನಮಾಜ್‌ಗೆ ನಿಗದಿಪಡಿಸಿದ್ದ 8 ಸ್ಥಳಗಳ ಅನುಮತಿ ವಾಪಸ್

ಗುರುಗಾಂವ್‌ನ ಸೆಕ್ಟರ್ 12ಎ ಸೈಟ್‌ನಲ್ಲಿ ಪ್ರತಿ ಶುಕ್ರವಾರ ನಮಾಜ್‌ ಅನ್ನು ನಿರ್ವಹಿಸಲಾಗುತ್ತಿತ್ತು. ಆದರೆ ಇದಕ್ಕೆ ಬಿಜೆಪಿ ಬೆಂಬಲಿತ ಕೋಮು ಆಧಾರಿತ ಸಂಘಟನೆಗಳು ಕಳೆದ ಎರಡು ವಾರಗಳಿಂದ ವಿರೋಧ ವ್ಯಕ್ತಪಡಿಸಿ, ನಮಾಜ್‌ಗೆ ಅಡ್ಡಿಪಡಿಸಿವೆ. ಕಳೆದ ತಿಂಗಳ ಕೊನೆಯಲ್ಲಿ, 26 ಜನರ ಬಿಜೆಪಿ ಬೆಂಬಲಿತ ಗುಂಪು ನಮಾಜ್ ಮಾಡುವುದನ್ನು ಅಡ್ಡಿ ಪಡಿಸಿದ್ದಕ್ಕಾಗಿ ಬಂಧಿಸಲಾಗಿತ್ತು.

ಈ ನಡುವೆ ಗುರುಗ್ರಾಮ್ ಆಡಳಿತವು ಮುಸ್ಲಿಮರಿಗೆ ನಮಾಜ್ ಮಾಡಲು ಗೊತ್ತುಪಡಿಸಿದ 37 ಸ್ಥಳಗಳ ಪೈಕಿ ಎಂಟರಲ್ಲಿ ಸ್ಥಳೀಯರ ವಿರೋಧದಿಂದ ಮಂಗಳವಾರ ಅನುಮತಿ ವಾಪಸ್ ಪಡೆದಿದೆ. ಗುರುಗ್ರಾಮ್ ಜಿಲ್ಲಾಡಳಿತದ ಅಧಿಕೃತ ಹೇಳಿಕೆಯ ಪ್ರಕಾರ, ಸ್ಥಳೀಯ ಜನರು ಮತ್ತು ಆರ್‌ಡಬ್ಲ್ಯೂಎಯಿಂದ ಆಕ್ಷೇಪಣೆ ಬಂದಿರುವ ಕಾರಣ ಅನುಮತಿಯನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಿದೆ.

ಶುಕ್ರವಾರ ಅದೇ ಸ್ಥಳದಲ್ಲಿ ಗೋವರ್ಧನ ಕಾರ್ಯಕ್ರಮದಲ್ಲಿ ಹಿಂದೂ ವಿರೋಧಿಗಳಿಗೆ ಗುಂಡು ಹೊಡೆಯಿರಿ ಎಂದು ಘೋಷಣೆಗಳನ್ನು ಕೂಗಲಾಗಿದೆ. ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಕಪಿಲ್ ಮಿಶ್ರಾ ಪಟಾಕಿ ನಿಷೇಧದ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Fact check: ಕಟ್ಟಡದ ಮೇಲೆ ಒಟ್ಟಾಗಿ ನಮಾಜ್ ಮಾಡುತ್ತಿರುವುದು ನಿಜವೇ??

“ನಿಮ್ಮ ರಾಜಕೀಯಕ್ಕಾಗಿ ರಸ್ತೆಗಳನ್ನು ಬಳಸಬೇಡಿ. ನಾವು ಶಾಹೀನ್ ಬಾಗ್‌ನಲ್ಲಿ ಇದನ್ನು ನೋಡಿದ್ದೆವು. ರಸ್ತೆಗಳನ್ನೆಲ್ಲ ಬಂದ್ ಮಾಡಿ ಮನೋರಂಜನೆ ತೋರಿಸಿದ್ರು. ಸಿಎಎ ಹಿಂಪಡೆಯಲಾಗಿದೆಯೇ? ಅಪಧಮನಿಗಳು ಮತ್ತು ನರಗಳನ್ನು ನಿರ್ಬಂಧಿಸಿದರೆ, ದೇಹದ ಚಲನೆಯನ್ನು ನಿಲ್ಲಿಸುತ್ತದೆ. ಹಾಗೆಯೆ ರಸ್ತೆಗಳನ್ನು ನಿರ್ಬಂಧಿಸಿದರೆ, ನಗರ ಮತ್ತು ದೇಶವು ನಿಲ್ಲುತ್ತದೆ” ಎಂದು ಹೇಳಿದ್ದಾರೆ.

“ರಸ್ತೆಗಳನ್ನು ಮುಚ್ಚುವ ಹಕ್ಕು ಯಾರಿಗೂ ಇಲ್ಲ. ಇದು ಯಾವುದೇ ಧರ್ಮದ ಭಾಗವಲ್ಲ ಅಥವಾ ಆಗಲೂ ಸಾಧ್ಯವಿಲ್ಲ… ಗುರ್ಗಾಂವ್‌ನಲ್ಲಿ ಬೀದಿಗಳನ್ನು ನಿರ್ಬಂಧಿಸುತ್ತೀರಾ? ನೀವು ದೆಹಲಿಯಲ್ಲಿ ರಸ್ತೆಗಳನ್ನು ನಿರ್ಬಂಧಿಸುತ್ತೀರಾ? ರಸ್ತೆ ತಡೆ ಮಾಡುವುದು ಧರ್ಮದ ಭಾಗವಲ್ಲ, ಅದು ದೇಶ, ಸೌಲಭ್ಯಗಳು ಮತ್ತು ಆರ್ಥಿಕತೆಯನ್ನು ತಡೆಯುವುದಾಗಿದೆ” ಎಂದು ಅವರು ತಿಳಿಸಿದ್ದಾರೆ.

ಕಪಿಲ್‌ ಮಿಶ್ರಾ ಭಾಷಣದ ಸಮಯದಲ್ಲಿ, ನೆರೆದಿದ್ದವರು “ಸೆಕ್ಟರ್ 12 ಸರ್ಫ್ ಜಾಂಕಿ ಹೈ, ಪುರ ಗುರುಗ್ರಾಮ್ ಬಾಕಿ ಹೈ” ಎಂಬ ಘೋಷಣೆಯನ್ನು ಕೂಗಿದ್ದಾರೆ. ಜೊತೆಗೆ ಸದಾ ದ್ವೇಷ ಭಾಷಣಗಳಿಗೆ ಹೆಸರುವಾಸಿಯಾಗಿರುವ ಯತಿ ನರಸಿಂಹಾನಂದ ಸಂಗಡಿಗರು ಕೂಡಾ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಕಪಿಲ್‌ ಮಿಶ್ರಾ ಶಾಂತವಾಗಿ ಭಾಷಣ ಮಾಡಿದ್ದಾರಾದರೂ, ಸಭೆಯಲ್ಲಿ ಪ್ರಚೋಧನಕಾರಿ ಘೋಷಣೆಗಳನ್ನು ಮಾಡಲಾಗಿದೆ. ಅಮಿತ್ ಹಿಂದೂ ಎಂಬ ಕಾರ್ಯಕರ್ತನೊಬ್ಬ, “ಹಿಂದೂ ದ್ರೋಹಿಗಳನ್ನು ಶೂಟ್ ಮಾಡಿ” ಎಂಬ ಘೋಷಣೆಯನ್ನು ಕೂಗಿದ್ದಾನೆ. ಈತ ಯತಿ ನರಸಿಂಹಾನಂದ ಸರಸ್ವತಿ ಅವರ ಆಪ್ತ ಎಂದು ದಿ ವೈರ್‌ ವರದಿ ಮಾಡಿದೆ.

ಇದನ್ನೂ ಓದಿ: ಹಲಾಲ್ ಮಾಡದಿದ್ದಕ್ಕೆ ಮುಸ್ಲಿಮರಿಂದ ಹಲ್ಲೆ ಎಂಬ ಸುಳ್ಳು ಆರೋಪ: ರೆಸ್ಟೋರೆಂಟ್‌ ಮಾಲೀಕರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...