Homeಮುಖಪುಟದೆಹಲಿ ಹಿಂಸೆಗೆ ಬಿಜೆಪಿಯ ಕಪಿಲ್ ಮಿಶ್ರಾ ಕಾರಣ: ಭೀಮ್‌ ಆರ್ಮಿ ಆಜಾದ್‌ ಆರೋಪ

ದೆಹಲಿ ಹಿಂಸೆಗೆ ಬಿಜೆಪಿಯ ಕಪಿಲ್ ಮಿಶ್ರಾ ಕಾರಣ: ಭೀಮ್‌ ಆರ್ಮಿ ಆಜಾದ್‌ ಆರೋಪ

- Advertisement -
- Advertisement -

ಈಶಾನ್ಯ ದೆಹಲಿಯ ಜಾಫ್ರಾಬಾದ್ ಮತ್ತು ಮೌಜ್‌ಪುರದಲ್ಲಿ ನಡೆದ ಹಿಂಸಾಚಾರಕ್ಕೆ ಬಿಜೆಪಿ ನಾಯಕ ಕಪಿಲ್ ಮಿಶ್ರಾರವರ ಪ್ರಚೋದನಕಾರಿ ಭಾಷಣವೇ ಕಾರಣ ಎಂದು ಆರೋಪಿಸಿ ಭೀಮ್‌ ಆರ್ಮಿಯ ಚಂದ್ರಶೇಖರ್‌ ಆಜಾದ್‌ ಸುಪ್ರೀಂ ಕೋರ್ಟಗೆ ಸಲ್ಲಿಸಿದ ಸಾರ್ವಜನಿಕ ಹಿತರಕ್ಷಣಾ ಅರ್ಜಿಯಲ್ಲಿ ಆರೋಪಿಸಿದ್ದಾರೆ.

ಫೆಬ್ರವರಿ 23 ರ ಸಂಜೆ ಪ್ರಾರಂಭವಾದ ದಾಳಿಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಆಜಾದ್‌ ಸುಪ್ರೀಂ ಕೋರ್ಟ್‌ನಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಿದ್ದಾರೆ. ಅವರ ಅರ್ಜಿಯನ್ನು ಆಲಿಸಲು ನ್ಯಾಯಾಲಯ ಸಮ್ಮತಿಸಿದೆ.

ಅಲ್ಲದೇ ದೆಹಲಿಯ ಶಹೀನ್ ಬಾಗ್‌ನಲ್ಲಿ ಸಿಎಎ ವಿರೋಧಿಸಿ ಕಲೆದ 80 ದಿನಗಳಿಂದ ಶಾಂತಿಯುತ ಪ್ರತಿಭಟನೆ ನಡೆಸುತ್ತಿರುವ ಮಹಿಳೆಯರಿಗೆ ಭದ್ರತೆ ನೀಡಬೇಕೆಂದು ಅವರು ಕೋರಿದ್ದಾರೆ.

ಎರಡು ದಿನದ ಮೊದಲು ಬಿಜೆಪಿಯ ಕಪಿಲ್‌ ಮಿಶ್ರಾ ಹಿಂಸೆಗೆ ಪ್ರಚೋದನೆ ನೀಡುವ ಭಾಷಣ ಮಾಡಿದ್ದರು. ಶನಿವಾರ ರಾತ್ರಿಯಿಂದ ಈಶಾನ್ಯ ದೆಹಲಿಯಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ, ಆದರೆ ಮೂರು ದಿನಗಳೊಳಗೆ ಪೊಲೀಸರು ಪ್ರತಿಭಟನಾಕಾರರನ್ನು ತೆಗೆದುಹಾಕಬೇಕೆಂದು ಒತ್ತಾಯಿಸುತ್ತೇನೆ. ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೆಹಲಿಯಲ್ಲಿ ಇರುವವರೆಗೂ ನಾವು ಕಾಯುತ್ತೇವೆ. ಆದರೆ ಅದರ ನಂತರ, ರಸ್ತೆಗಳನ್ನು ತೆರವುಗೊಳಿಸದಿದ್ದರೆ ನಾವು ಪೊಲೀಸರನ್ನು ಕೇಳುವುದಿಲ್ಲ, ಬೀದಿಗಿಳಿಯಬೇಕಾಗುತ್ತದೆ ಎಂದು ಪೊಲೀಸ್‌ ಅಧಿಕಾರಿಗಳ ಎದುರಿಗೆ ಅವರಾಡಿದ್ದ ಮಾತುಗಳು ವೈರಲ್‌ ಆಗಿದ್ದವು.

ಈ ಭಾಷಣದಿಂದಲೇ ಸಿಎಎ ಪರ ಪ್ರತಭಟನಾಕಾರರು ಹಿಂಸಾಚಾರದಲ್ಲಿ ಪಾಲ್ಗೊಂಡಿದ್ದಾರೆ ಎಂದು ಜನರ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿ ಆಜಾದ್‌ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರಿಗೆ ಸೋಮವಾರ ಪತ್ರ ಬರೆದಿದ್ದರು.

“ಈಶಾನ್ಯ ದೆಹಲಿಯ ಅನೇಕ ಭಾಗಗಳಲ್ಲಿ ಮುಸ್ಲಿಂ ಮತ್ತು ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದ ಜನರ ಸುರಕ್ಷತೆಗಾಗಿ ನಾನು ತುಂಬಾ ಕಾಳಜಿ ವಹಿಸುತ್ತೇನೆ ಮತ್ತು ಹಿಂಸಾಚಾರದಿಂದ ಬಳಲುತ್ತಿರುವ ಪ್ರದೇಶಗಳಿಗೆ ಭೇಟಿ ನೀಡಲು ಬಯಸುತ್ತೇನೆ. ಭೇಟಿಗೆ ಸಾಕಷ್ಟು ಭದ್ರತೆ ಒದಗಿಸುವಂತೆ ದೆಹಲಿ ಪೊಲೀಸರಿಗೆ ನಿರ್ದೇಶಿಸುವಂತೆ ಕೋರಲಾಗಿದೆ” ಎಂದು ಆಜಾದ್ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಶಹೀನ್ ಬಾಗ್ ಪ್ರತಿಭಟನೆ ಕುರಿತು ಆಜಾದ್ ಸೋಮವಾರ ಸುಪ್ರೀಂ ಕೋರ್ಟ್‌ನಲ್ಲಿ ಮಾಜಿ ಮುಖ್ಯ ಮಾಹಿತಿ ಆಯುಕ್ತ ವಜಾಹತ್ ಹಬೀಬುಲ್ಲಾ ಮತ್ತು ಸಾಮಾಜಿಕ ಕಾರ್ಯಕರ್ತ ಸೈಯದ್ ಬಹದ್ದೂರ್ ಅಬ್ಬಾಸ್ ನಖ್ವಿ ಅವರೊಂದಿಗೆ ಅವರು ಅರ್ಜಿ ಸಲ್ಲಿಸಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...