Homeಕರ್ನಾಟಕಕಾರು ಅಪಘಾತವನ್ನು ಹಲ್ಲೆಯೆಂದು ಬಿಂಬಿಸಿದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್

ಕಾರು ಅಪಘಾತವನ್ನು ಹಲ್ಲೆಯೆಂದು ಬಿಂಬಿಸಿದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್

- Advertisement -
- Advertisement -

ಕಾರು ಅಪಘಾತದ ಘಟನೆಯನ್ನು ಹಲ್ಲೆ ಎಂದು ಬಿಂಬಿಸಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ರಾಜಕೀಯ ಲಾಭ ಪಡೆಯಲು ಯತ್ನಿಸಿರುವುದು ಪೊಲೀಸ್ ತನಿಖೆಯಿಂದ ಬಯಲಾಗಿದೆ.

“ಚಿತ್ತಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಾಲಗತ್ತಿ ರಾಷ್ಟ್ರೀಯ ಹೆದ್ದಾರಿ 150ರ ಬಳಿ ಇರುವ ನನ್ನ ಫಾರ್ಮ್‌ ಹೌಸ್‌ನಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಶಂಕರವಾಡಿ ಕ್ರಾಸ್ ಬಳಿ ಅಪರಿಚಿತ ದುಷ್ಕರ್ಮಿಗಳು ನನ್ನ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ” ಎಂದು ಮಣಿಕಂಠ ರಾಠೋಡ್ ನವೆಂಬರ್ 19ರಂದು ಶಹದಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ಆಧರಿಸಿ ಪೊಲೀಸರು ತನಿಖೆ ಕೈಗೊಂಡಾಗ ಅಪಘಾತವನ್ನು ಹಲ್ಲೆ ಎಂದು ಬಿಂಬಿಸಿರುವುದು ಬಯಲಾಗಿದೆ ಎಂದು ವರದಿಗಳು ಹೇಳಿವೆ.

“ಶಂಕರವಾಡಿ ಕ್ರಾಸ್ ಬಳಿ ತನ್ನ ಮೇಲೆ ಹಲ್ಲೆ ನಡೆದಿರುವುದಾಗಿ ಮಣಿಕಂಠ ರಾಠೋಡ್ ಶಹದಾಬಾದ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸರು ತನಿಖೆ ನಡೆಸಿದಾಗ ಅಪಘಾತವನ್ನು ಹಲ್ಲೆ ಎಂದು ಬಿಂಬಿಸಿರುವುದು ಗೊತ್ತಾಗಿದೆ” ಎಂದು ಕಲಬುರಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ತಿಳಿಸಿದ್ದಾರೆ.

ಮಣಿಕಂಠ ರಾಠೋಡ್ ಅವರ ಬಿಳಿ ಬಣ್ಣದ ಇನ್ನೋವಾ ಕ್ರಿಸ್ಟಾ ಕಾರು ಯಾದಗಿರಿ ಜಿಲ್ಲೆಯ ಚೆಪಟ್ಲಾದಲ್ಲಿ ಮರಕ್ಕೆ ಡಿಕ್ಕಿ ಹೊಡೆದಿತ್ತು. ಘಟನೆಯಲ್ಲಿ ಮಣಿಕಂಠ ರಾಠೋಡ್‌ಗೆ ಗಾಯಗಳಾಗಿತ್ತು. ಅಪಘಾತದ ಬಳಿಕ ತನ್ನ ಮತ್ತೊಂದು ಕಾರಿನಲ್ಲಿ ಕಲಬುರಗಿಗೆ ತೆರಳಿದ್ದ ರಾಠೋಡ್, ನಂತರ ಅಲ್ಲಿಂದ ಚಿತ್ತಾಪುರಕ್ಕೆ ಹೋಗಿದ್ದರು. ಈ ವೇಳೆ ಮಾರ್ಗ ಮಧ್ಯೆ ಹಲ್ಲೆ ನಡೆದಿರುವುದಾಗಿ ಕಥೆ ಕಟ್ಟಿದ್ದರು.

ಅಪಘಾತಗೊಂಡ ಇನ್ನೋವಾ ಕ್ರಿಸ್ಟಾ ಕಾರನ್ನು ರಾತ್ರೋರಾತ್ರಿ ಹೈದರಾಬಾದ್​ಗೆ ಟೋಯಿಂಗ್ ಮುಖಾಂತರ ಶಿಫ್ಟ್ ಮಾಡಲಾಗಿತ್ತು. ತನ್ನದೇ ಕಾರಿನ ಗಾಜು ಒಡೆದು ಹಾಕಿದ ರಾಠೋಡ್, ಏಳೆಂಟು ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ ಎಂದು ಕಥೆ ಕಟ್ಟಿದ್ದರು ಎಂದು ತಿಳಿದು ಬಂದಿದೆ.

ಆರೋಗ್ಯ ವಿಚಾರಿಸಿದ್ದರು ಅಶೋಕ್, ವಿಜಯೇಂದ್ರ

ನನ್ನ ಮೇಲೆ ಹಲ್ಲೆ ನಡೆದಿದೆ ಎಂದು ಕಥೆ ಕಟ್ಟಿ ಆಸ್ಪತ್ರೆಗೆ ದಾಖಲಾಗಿದ್ದ ಮಣಿಕಂಠ ರಾಠೋಡ್‌ನ ಆರೋಗ್ಯ ವಿಚಾರಿಸಲು ಬಿಜೆಪಿ ಮುಖಂಡರಾದ ಆರ್.ಅಶೋಕ್ ಮತ್ತು ವಿಜಯೇಂದ್ರ ತೆರಳಿದ್ದರು. ಆರೋಗ್ಯ ವಿಚಾರಿಸಿದ ಬಳಿಕ ಇಬ್ಬರು ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಬಾಯ್ಬಿಟ್ಟ ಮಣಿಕಂಠ ರಾಠೋಡ್ ಬೆಂಬಲಿಗ

ಕಲಬುರಗಿಯಿಂದ ಚಿತ್ತಾಪುರಕ್ಕೆ ಮಣಿಕಂಠ ರಾಠೋಡ್ ಬಂದ ಕಾರಿನಲ್ಲಿ ಒಂದೇ ಒಂದು ಹನಿ ರಕ್ತದ ಕಲೆ ಇರಲಿಲ್ಲ. ಮಣಿಕಂಠ ರಾಠೋಡ್ ಕಾಲ್ ರೆಕಾರ್ಡ್ ಹಿಸ್ಟರಿ ಟೆಕ್ನಿಕಲ್ ಎವಿಡೆನ್ಸ್ ಬೆನ್ನತ್ತಿದಾಗ ಅಪಘಾತ ನಡೆದಿರುವುದು ಬೆಳಕಿಗೆ ಬಂದಿದೆ. ರಾಠೋಡ್ ಜೊತೆಗಿದ್ದವನನ್ನು ವಿಚಾರಣೆ ನಡೆಸಿದಾಗ ಆತ ನಿಜ ವಿಷಯ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾನೆ ಎಂದು ನ್ಯೂಸ್‌ 18 ಕನ್ನಡ ವರದಿ ಮಾಡಿದೆ.

ಮಣಿಕಂಠ ರಾಠೋಡ್ ಯಾರು?

ರೌಡಿ ಶೀಟರ್ ಆಗಿರುವ ಮಣಿಕಂಠ ರಾಠೋಡ್ ವಿರುದ್ಧ ಕರ್ನಾಟಕ, ತೆಲಂಗಾಣ ಸೇರಿದಂತೆ ವಿವಿದೆಡೆ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳಿವೆ. 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಲಬುರಗಿಯ ಚಿತ್ತಾಪುರ ಕ್ಷೇತ್ರದಿಂದ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ರಾಠೋಡ್, ಸೋಲು ಅನುಭವಿಸಿದ್ದರು.

ಇದನ್ನೂ ಓದಿ : ಗಂಗಾವತಿ: ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಅಂಧ ವೃದ್ಧನಿಗೆ ಹಲ್ಲೆ ಪ್ರಕರಣ; ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...