Homeಕರ್ನಾಟಕಬಿಜೆಪಿ ನಾಯಕ ನಳಿನ್ ಕುಮಾರ್ ಕಟೀಲ್ ವಿರುದ್ಧದ ಚುನಾವಣಾ ಬಾಂಡ್ 'ಸುಲಿಗೆ' ಎಫ್‌ಐಆರ್ ರದ್ದು

ಬಿಜೆಪಿ ನಾಯಕ ನಳಿನ್ ಕುಮಾರ್ ಕಟೀಲ್ ವಿರುದ್ಧದ ಚುನಾವಣಾ ಬಾಂಡ್ ‘ಸುಲಿಗೆ’ ಎಫ್‌ಐಆರ್ ರದ್ದು

- Advertisement -
- Advertisement -

ಪ್ರಸ್ತುತ ರದ್ದಾಗಿರುವ ಚುನಾವಣಾ ಬಾಂಡ್ ಯೋಜನೆಗೆ ಸಂಬಂಧಿಸಿದಂತೆ ಸುಲಿಗೆ ಆರೋಪದಡಿ ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ರದ್ದುಗೊಳಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ಅನ್ನು ದಾಖಲಿಸಿರುವುದನ್ನು ಕಟೀಲ್ ಪ್ರಶ್ನಿಸಿದ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಗೆ ತಡೆ ನೀಡಿದ್ದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಈ ಆದೇಶವನ್ನು ಹೊರಡಿಸಿದ್ದಾರೆ. ಬಿಜೆಪಿ ನಾಯಕ ನಳಿನ್

ನಳಿನ್ ಕುಮಾರ್ ಕಟೀಲ್ ಅವರು 2019 ಮತ್ತು 2023 ರ ನಡುವೆ ಬಿಜೆಪಿಯ ರಾಜ್ಯಾಧ್ಯಕ್ಷರಾಗಿದ್ದರು. ಇದೇ ಪ್ರಕರಣದಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಬಿಜೆಪಿ ನಾಯಕರು ಪ್ರಕರಣದಲ್ಲಿ ಸಹ ಆರೋಪಿಗಳಾಗಿದ್ದಾರೆ. ಆದಾಗ್ಯೂ, ಸೀತಾರಾಮನ್ ಸೇರಿದಂತೆ ಇತರ ಆರೋಪಿಗಳು ಅದರ ವಿರುದ್ಧ ಇನ್ನೂ ಅರ್ಜಿಯನ್ನು ಸಲ್ಲಿಸದ ಕಾರಣ ನ್ಯಾಯಾಲಯವು ಎಫ್‌ಐಆರ್ ರದ್ದುಗೊಳಿಸುವಿಕೆಯನ್ನು ಕಟೀಲ್‌ಗೆ ಮಾತ್ರ ನಿರ್ಬಂಧಿಸಿದೆ ಎಂದು ದಿ ಹಿಂದೂ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕಂಪನಿಗಳಿಂದ ಹಣ ಸುಲಿಗೆ ಮಾಡಲು ಎಲೆಕ್ಟೋರಲ್ ಬಾಂಡ್ ಯೋಜನೆಯನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ರಾಜ್ಯ ಪೊಲೀಸರು ಸೆಪ್ಟೆಂಬರ್‌ನಲ್ಲಿ ನಳಿನ್ ಕಟೀಲ್, ನಿರ್ಮಲಾ ಸೀತಾರಾಮನ್ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಸುಲಿಗೆ ಮತ್ತು ಕ್ರಿಮಿನಲ್ ಪಿತೂರಿಗಾಗಿ ಶಿಕ್ಷೆಗೆ ಸಂಬಂಧಿಸಿದಂತೆ ಅವರು ವಿರುದ್ಧ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಬೆಂಗಳೂರು ನ್ಯಾಯಾಲಯದ ನಿರ್ದೇಶನಗಳನ್ನು ಆಧರಿಸಿ ಎಫ್‌ಐಆರ್ ದಾಖಲಿಸಲಾಗಿತ್ತು.

ಸರ್ಕಾರೇತರ ಸಂಸ್ಥೆ ಜನಾಧಿಕಾರ ಸಂಘರ್ಷ ಪರಿಷತ್‌ನ ಕಾರ್ಯಕರ್ತ ಆದರ್ಶ್ ಆರ್ ಅಯ್ಯರ್ ಅವರ ದೂರಿನ ಮೇರೆಗೆ ಬೆಂಗಳೂರು ನ್ಯಾಯಾಲಯದ ಈ ನಿರ್ದೇಶನಗಳನ್ನು ನೀಡಿತ್ತು. ಬಿಜೆಪಿ ನಾಯಕ ನಳಿನ್

ನಿರ್ಮಲಾ ಸೀತಾರಾಮನ್ ಮತ್ತು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹಾಗೂ ಬಿಜೆಪಿಯ ಮುಖಂಡರು ಮತ್ತು ಪದಾಧಿಕಾರಿಗಳೊಂದಿಗೆ “ಚುನಾವಣಾ ಬಾಂಡ್‌ಗಳ ಸೋಗಿನಲ್ಲಿ ಸುಲಿಗೆ ಮಾಡಿದ್ದು. ಈ ಮೂಲಕ ಅವರು 8,000 ಮತ್ತು ಅದಕ್ಕಿಂತ ಹೆಚ್ಚು ಕೋಟಿ ರೂ.ಗಳಷ್ಟುರೂ ಲಾಭ ಗಳಿಸಿದ್ದಾರೆ” ಎಂದು ಅಯ್ಯರ್ ದೂರಿನಲ್ಲಿ ಹೇಳಿದ್ದರು.

ಇದನ್ನೂ ಓದಿ: ಅರೆಸ್ಸೆಸ್‌ನ “ಭಾರತಿಯ ಸಂಸ್ಕೃತಿ ಉತ್ಸವ’’ದಲ್ಲಿ ಕಾಂಗ್ರೆಸ್ ನಾಯಕರು ಭಾಗವಹಿಸಬಾರದು: ಸಾಹಿತಿ, ಪ್ರಗತಿಪರ ಚಿಂತಕರಿಂದ ಜಂಟಿ ಪತ್ರಿಕಾ ಹೇಳಿಕೆ

ಅರೆಸ್ಸೆಸ್‌ನ “ಭಾರತಿಯ ಸಂಸ್ಕೃತಿ ಉತ್ಸವ’’ದಲ್ಲಿ ಕಾಂಗ್ರೆಸ್ ನಾಯಕರು ಭಾಗವಹಿಸಬಾರದು: ಸಾಹಿತಿ, ಪ್ರಗತಿಪರ ಚಿಂತಕರಿಂದ ಜಂಟಿ ಪತ್ರಿಕಾ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...