Homeಮುಖಪುಟಮುಸ್ಲಿಮರನ್ನು ತುಚ್ಛವಾಗಿ ನಿಂದಿಸುತ್ತಿರುವ ಬಿಜೆಪಿ ನಾಯಕಿ ನಾಝಿಯಾ ಇಲಾಹಿ : ಕ್ರಮ ಕೈಗೊಳ್ಳದ ಪೊಲೀಸರು

ಮುಸ್ಲಿಮರನ್ನು ತುಚ್ಛವಾಗಿ ನಿಂದಿಸುತ್ತಿರುವ ಬಿಜೆಪಿ ನಾಯಕಿ ನಾಝಿಯಾ ಇಲಾಹಿ : ಕ್ರಮ ಕೈಗೊಳ್ಳದ ಪೊಲೀಸರು

- Advertisement -
- Advertisement -

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ನಾಯಕಿ ಎನ್ನಲಾದ ನಾಝಿಯಾ ಇಲಾಹಿ (ನಾಝಿಯಾ ಇಲಾಹಿ ಖಾನ್) ಪದೇ ಪದೇ ಮುಸ್ಲಿಮರನ್ನು ತುಚ್ಛವಾಗಿ ನಿಂದಿಸಿ, ಅದರ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ರಾಜಾರೋಷವಾಗಿ ಹಂಚಿಕೊಳ್ಳುತ್ತಿದ್ದು, ಪೊಲೀಸರು ಯಾವುದೇ ಕ್ರಮ ಕೈಗೊಂಡ ಬಗ್ಗೆ ಇದುವರೆಗೆ ವರದಿಯಾಗಿಲ್ಲ.

ಸಾಮಾಜಿಕ ಜಾಲತಾಣಗಳಲ್ಲಿ ಈಕೆಯ ವರ್ತನೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸೂಕ್ತ ಕ್ರಮಕ್ಕೆ ಜನರು ಆಗ್ರಹಿಸಿದ್ದಾರೆ.

ಇತ್ತೀಚಿನ ಘಟನೆಯಲ್ಲಿ, ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ, ಅಲ್ಲಿನ ಮುಸ್ಲಿಂ ಸಿಬ್ಬಂದಿಯನ್ನು ಧಾರ್ಮಿಕ ಗುರುತಿನ ಮೇಲೆ ನಿಂದಿಸಿದ ವಿಡಿಯೋವನ್ನು ಸ್ವತಃ ನಾಝಿಯಾ ಸೋಮವಾರ (ಡಿ.22) ತನ್ನ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದರು.

ವಿಡಿಯೋ ಜೊತೆಗೆ, “ತುರ್ತು ಪ್ರಯಾಣ ನಿಮಿತ್ತ ಇಂಡಿಗೋ ಟಿಕೆಟ್ ಪಡೆದು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರವೇಶಿಸಿದಾಗ, ಇಂಡಿಗೋ ಕೌಂಟರ್‌ನಿಂದ ರನ್‌ವೇವರೆಗೆ ಮೂರು ಸಲ ಮಿನಿ ಜಿಹಾದಿಯನ್ನು ಎದುರಿಸಬೇಕಾದರೆ ಎನನಿಸಬೇಕು?” ಎಂದು ಬರೆದುಕೊಂಡಿದ್ದರು.

ಮುಂದುವರಿದು, “ಇಂಡಿಗೋ ಕೌಂಟರ್ ‘ಕೆ’ ನಲ್ಲಿ ರೆಹಾನ್, ಸ್ಟ್ರೆಚ್ ಕೌಂಟರ್‌ನಲ್ಲಿ ಮೊಯಿನುದ್ದೀನ್ ಮತ್ತು ರನ್‌ವೇ ಕೋಚ್‌ನಲ್ಲಿ ಚಾಲಕ ಅಬ್ದುಲ್ಲಾ ಖಾನ್. ನಿಮ್ಮ ಹೃದಯದಲ್ಲಿರುವ ದೇಶ ಭಕ್ತಿಯಿಂದ ನಿಮ್ಮನ್ನು ಗುರುತಿಸಿ, ನಂತರ ಅವರು ನಿಮಗೆ ಕಿರುಕುಳ ನೀಡಲು ಮತ್ತು ವಿವಿಧ ರೀತಿಯಲ್ಲಿ ಹಾನಿ ಮಾಡಲು ಪ್ರಯತ್ನಿಸುತ್ತಾರೆ. ಇಂದು ನನಗೆ ಇದೇ ಅನುಭವ ಆಯಿತು” ಎಂದಿದ್ದರು.

“ಒಂದು ವೇಳೆ ಇಂಡಿಗೋ ಏರ್‌ಲೈನ್ಸ್ ಮೂಲಕ ಭಯೋತ್ಪಾದಕರು ಮತ್ತು ಭಯೋತ್ಪಾದನೆ ಭುಗಿಲೆದ್ದರೆ, ಭಾರತ ದೇಶಕ್ಕೆ ಹಾನಿ ಮಾಡಲು ಪ್ರಯತ್ನಿಸಿದರೆ, ಆಗ ಇಂಡಿಗೋ ಏರ್‌ಲೈನ್ಸ್ ಮಾಲೀಕರು ಕೊಂಚವೂ ಆಘಾತಕ್ಕೊಳಗಾಗುವುದಿಲ್ಲ ಎಂದು ನಾನು ಭಾವಿಸುತ್ತೇನೆ. ಏಕೆಂದರೆ ಇಂಡಿಗೋ ಏರ್‌ಲೈನ್ಸ್ ಮಾಲೀಕರು ಉದಾರವಾದಿ ಹಿಂದೂವಾಗಿ ಪೂರೈಸುತ್ತಿರುವ ಜವಾಬ್ದಾರಿಯಿಂದ” ಎಂದು ಹೇಳಿದ್ದರು.

“ಹೆಚ್ಚಿನ ಸಂಖ್ಯೆಯಲ್ಲಿ ಉಮ್ಮ (ಮುಸ್ಲಿಮರು) ಜನರನ್ನು ನೇಮಿಸಿಕೊಳ್ಳುವ ಮೂಲಕ ಇದು ವ್ಯವಸ್ಥಿತ ಪಿತೂರಿಯೇ? ಅಥವಾ ಒಬ್ಬ ಉದಾರವಾದಿ ಹಿಂದೂವಿನ ಕರ್ತವ್ಯಗಳ ನೆರವೇರಿಕೆಯೇ? ಸರ್ಕಾರವು ಕೇವಲ ಕೈಜೋಡಿಸಿ ಪ್ರತಿ ಬಾರಿಯೂ ಕ್ಷಮೆಯಾಚಿಸಿದರೆ ಕ್ಷಮಿಸುವುದಿಲ್ಲ, ಹಾಗೆ ಆಗಬಾರದು” ಎಂದು ಬರೆದುಕೊಂಡಿದ್ದರು.

ತಾನು ಪೋಸ್ಟ್ ಮಾಡಿದ್ದ ವಿಡಿಯೋದಲ್ಲಿಯೂ ಆಕೆ, “Poora desh pareshan ho gaya hai tum Abdul aur Abdullah se” (ಅಬ್ದುಲ್ ಮತ್ತು ಅಬ್ದುಲ್ಲಾ, ನಿಮ್ಮಿಂದಾಗಿ ಇಡೀ ದೇಶ ತೊಂದರೆಗೀಡಾಗಿದೆ) ಎಂದು ಹೇಳುವುದು ಇದೆ.

ಈ ಮೂಲಕ ಮುಸ್ಲಿಮರ ಮೇಲಿನ ಮತೀಯ ದ್ವೇಷವನ್ನು ನಾಝಿಯಾ ಹೊರ ಹಾಕಿದ್ದರು. ತನ್ನ ಪೋಸ್ಟನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ, ಇಂಡಿಗೋ ಸಂಸ್ಥೆಗೆ ಟ್ಯಾಗ್ ಮಾಡಿದ್ದರು.

ವಿಡಿಯೋ ಅಥವಾ ಪೋಸ್ಟ್‌ನಲ್ಲಿ ನಾಝಿಯಾ ಅವರು ಮುಂಬೈ ನಿಲ್ದಾಣದಲ್ಲಿ ಆಕೆಗೆ ಆಗಿರುವ ಸಮಸ್ಯೆ ಏನು? ಆಕೆ ಮುಸ್ಲಿಂ ಸಿಬ್ಬಂದಿಯನ್ನು ನಿಂದಿಸಲು ಕಾರಣವೇನು? ಎಂದು ಸ್ಪಷ್ಟಪಡಿಸಿಲ್ಲ.

ನಾಝಿಯಾ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಅನೇಕರು ಆಕೆ ದ್ವೇಷ ಹರಡುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸಾಮಾನ್ಯ ಜನರು ಏನಾದರು ಪೋಸ್ಟ್‌ ಹಾಕಿದಾಗ ತಕ್ಷಣ ಮನೆಗೆ ನುಗ್ಗಿ ಬಂದಿಸುವ ಪೊಲೀಸರು, ಈಕೆಯ ಮೇಲೆ ಇದುವರೆಗೆ ಕ್ರಮ ಕೈಗೊಂಡ ಬಗ್ಗೆ ವರದಿಯಾಗಿಲ್ಲ. ಎಕ್ಸ್‌ ಕೂಡ ಆಕೆಯ ದ್ವೇಷ ಹರಡುವ ವಿಡಿಯೋ ಕುರಿತು ಯಾವುದೇ ಕ್ರಮ ಕೈಗೊಂಡಿಲ್ಲ. ಎಕ್ಸ್‌ನ ಮಾನದಂಡಗಳನ್ನು ಉಲ್ಲಂಘಿಸಿದ ಬಗ್ಗೆ ಚಕಾರವೆತ್ತಿಲ್ಲ.

ತನ್ನ ವಿಡಿಯೋ ದೇಶದಾದ್ಯಂತ ವೈರಲ್ ಆಗಿ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆ ನಾಝಿಯಾ ಮತ್ತೊಂದು ಸೆಲ್ಪೀ ವಿಡಿಯೋವನ್ನು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಮುಸ್ಲಿಮರನ್ನು “ಜಿಹಾದಿ”, “ಕಟ್ಮುಲ್ಲಾ” “ಹಂದಿಗಳು” ಇತ್ಯಾದಿ ಪದಗಳನ್ನು ಉಪಯೋಗಿಸಿ ತುಚ್ಛವಾಗಿ ನಿಂದಿಸಿದ್ದಾರೆ.

ವಿಡಿಯೋ ಜೊತೆಗೆ, “ಇಂಡಿಗೋ ಮಾಲೀಕರು ಭಾರತ ಮತ್ತು ಪಾಕಿಸ್ತಾನದ ಮುಸ್ಲಿಂ ಬೆಂಬಲಿಗರ ಮಾತನ್ನು ಕೇಳಿ ನನ್ನನ್ನು ಕಪ್ಪುಪಟ್ಟಿಗೆ ಸೇರಿಸಬೇಕು. ಏಕೆಂದರೆ ನಾನು ಸುಮ್ಮನಿರುವುದಿಲ್ಲ. ಇಂಡಿಗೋದ ಉಮ್ಮಾ (ಮುಸ್ಲಿಂ) ನೌಕರರು ತಮ್ಮ ಜಿಹಾದಿ ಮನಸ್ಥಿತಿಯನ್ನು ನನಗೆ ತೋರಿಸಿದಾಗಲೆಲ್ಲಾ, ನಾನು ಅವರ ಹಿಜಾಬ್ ಕಳಚುತ್ತೇನೆ, ಇದು ಸವಾಲು” ಎಂದು ಬರೆದುಕೊಂಡಿದ್ದಾರೆ. ಈ ವಿಡಿಯೋ ಬಗ್ಗೆ ಸಂಬಂಧಪಟ್ಟವರು ಕ್ರಮ ಕೈಗೊಂಡ ಬಗ್ಗೆ ವರದಿಯಾಗಿಲ್ಲ.

ಇದೇ ಘಟನೆಗೆ ಸಂಬಂಧಪಟ್ಟಂತೆ ಡಿಸೆಂಬರ್ 24ರಂದು ನಾಝಿಯಾ ಮತ್ತೊಂದು ವಿಡಿಯೋ ಹಂಚಿಕೊಂಡಿದ್ದಾರೆ. ಅದರಲ್ಲಿ ಜಮ್ಮು ಕಾಶ್ಮೀರಾದ ಪಿಡಿಪಿ ಪಕ್ಷದ ನಾಯಕಿ ಇಲ್ತಿಜಾ ಮುಫ್ತಿ ವಿಷಯ ಗೊತ್ತಿಲ್ಲದೆ ಹೇಳಿಕೆ ಕೊಡುವ ಮೂಲಕ ನನ್ನನ್ನು ಅವಮಾನಿಸಿದ್ದಾರೆ. ಅಲ್ಲದೆ, ಅವರ ಕಡೆಯವರು ನನಗೆ ಬೆದರಿಕೆ ಕರೆಗಳನ್ನು ಮಾಡುತ್ತಿದ್ದಾರೆ ಎಂದು ಕೆಲ ಫೋನ್‌ ನಂಬರ್‌ಗಳನ್ನು ಹಂಚಿಕೊಂಡಿದ್ದಾರೆ.

ನಾಝಿಯಾ ತಮ್ಮ ಎಕ್ಸ್‌ ಖಾತೆ ಬಯೋದಲ್ಲಿ, “ಕ್ಷಮೆಯಾಚಿಸದ ಭಾರತೀಯೆ, ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ನಾಯಕಿ, ರಾಜ್ಯ ಸಮಿತಿ ಸದಸ್ಯೆ ಕೈಮಗ್ಗ_ನೇಯ್ಗೆ ಕೋಶ, ರಾಷ್ಟ್ರೀಯ ವೀಕ್ಷಕಿ ಮಜ್ದೂರ್ ಕೋಶ, ಅಧ್ಯಕ್ಷೆ ಖಾನ್ ಲೀಗಲ್ ಸಾಲಿಸಿಟರ್ ಸಂಸ್ಥೆ” ಎಂದು ತನ್ನನ್ನು ತಾನು ಪರಿಚಯಿಸಿಕೊಂಡಿದ್ದಾರೆ.

ಇತರ ಮುಸ್ಲಿಂ ದ್ವೇಷ ಭಾಷಣಗಳು

1. ಆಗಸ್ಟ್ 2024ರಲ್ಲಿ ಸಂದರ್ಶನವೊಂದರಲ್ಲಿ ಪ್ರವಾದಿ ಮುಹಮ್ಮದರು, ಮದೀನಾ ನಗರ ಮತ್ತು ಮುಸ್ಲಿಂ ಮಹಿಳೆಯರನ್ನು ನಾಝಿಯಾ ಅವಹೇಳನ ಮಾಡಿದ್ದರು. ಇದರ ವಿರುದ್ದ ಕೋಲ್ಕತ್ತಾದ ಕ್ರಿಮಿನಲ್ ವಕೀಲರೊಬ್ಬರು ದೂರು ದಾಖಲಿಸಿದ್ದರು.

    2. ಜನವರಿ 2025ರಲ್ಲಿ ದೆಹಲಿಯ ರೋಹಿಣಿ ಪ್ರದೇಶದಲ್ಲಿ ಹಿಂದುತ್ವ ಸಂಘಟನೆಯೊಂದು ಏರ್ಪಡಿಸಿದ್ದ ಸಾರ್ವಜನಿಕ ಕಾರ್ಯಕ್ರಮದಲ್ಲಿ ನಾಝಿಯಾ ಲವ್ ಜಿಹಾದ್, ಅತ್ಯಾಚಾರ, ಹಿಂಸಾಚಾರ, ಭಯೋತ್ಪಾದನೆ ಆರೋಪಗಳನ್ನು ಮಾಡಿ ಮುಸ್ಲಿಮರನ್ನು ನಿಂದಿಸಿದ್ದರು.

    ಈ ಸಂಬಂಧ ‘ಚುನಾವಣೆಗೆ ಮುನ್ನ ಕೋಮು ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪದ’ ಮೇಲೆ ಸಿಟಿಜನ್ಸ್ ಫಾರ್ ಜಸ್ಟೀಸ್ ಅಂಡ್ ಪೀಸ್ (ಸಿಜೆಪಿ) ದೆಹಲಿಯ ಮುಖ್ಯ ಚುನಾವಣಾ ಅಧಿಕಾರಿಗೆ ದೂರು ಸಲ್ಲಿಸಿತ್ತು. ಮಾದರಿ ನೀತಿ ಸಂಹಿತೆ (ಎಂಸಿಸಿ) ಮತ್ತು ಜನತಾ ಪ್ರಾತಿನಿಧ್ಯ ಕಾಯ್ದೆ, 1951ರ ಉಲ್ಲಂಘನೆಯಾಗಿದೆ ಎಂದು ಆರೋಪಿಸಿತ್ತು.

    3. ಜನವರಿ 2025ರಲ್ಲಿ ಕರ್ನಾಟಕದ ಬೆಳಗಾವಿಯ ಜಿಲ್ಲೆಯ ಸೂಳಿಬಾವಿ ಗ್ರಾಮದಲ್ಲಿ ನಡೆದ ಸಮಾವೇಶದಲ್ಲಿ ನಾಝಿಯಾ ಮುಸ್ಲಿಮರ ವಿರುದ್ದ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದರು.

    ಸಾಮಾಜಿಕ ಜಾಲತಾಣಗಳಲ್ಲಿ ಈಕೆ ಪದೇ ಪದೇ ಮುಸ್ಲಿಮರ ವಿರುದ್ದ ದ್ವೇಷ ಕಾರುತ್ತಿರುತ್ತಾರೆ.

    ಈ ಹಿಂದೆ ಮುಸ್ಲಿಮರ ವಿರುದ್ದ ಸುಳ್ಳು ಸುದ್ದಿ ಹರಡಿ ಸಿಕ್ಕಿಬಿದ್ದಿದ್ದರು ನಾಝಿಯಾ

    ಯಾವುದೇ ವಿಷಯಗಳ ಕುರಿತು ವಿಡಿಯೋ ಮಾಡುವಾಗ, ಪೋಸ್ಟ್‌ ಮಾಡುವಾಗ ಮುಸ್ಲಿಮರನ್ನು ನಿಂದಿಸುವುದನ್ನು ನಾಝಿಯಾ ಮರೆಯುವುದಿಲ್ಲ. ಆಕೆಯ ಬಹುತೇಕ ಪೋಸ್ಟ್‌ಗಳು ಕಟ್ಟರ್ ಹಿಂದುತ್ವದ ಪ್ರತಿಪಾದನೆ ಮತ್ತು ದ್ವೇಷ ಹರಡುವಂತದ್ದಾಗಿದೆ. ಇಂತಹ ನಾಝಿಯಾ ಈ ಹಿಂದೆ ಮುಸ್ಲಿಮರ ವಿರುದ್ದ ಅಪಘಾತದ ಕಟ್ಟು ಕಥೆ ಕಟ್ಟಿ ಸಿಕ್ಕಿಬಿದಿದ್ದರು.

    2025ರ ಫೆಬ್ರವರಿ 24ರಂದು, ಮಹಾಕುಂಭ ಮೇಳಕ್ಕೆ ತೆರಳುವಾಗ ಮುಸ್ಲಿಮರು ನಮ್ಮ ಕಾರನ್ನು ಹಿಂಬಾಲಿಸಿ ಅಪಘಾತವೆಸಗಿದ್ದಾರೆ ಎಂದು ನಾಝಿಯಾ ಆರೋಪಿಸಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಕಣ್ಣೀರು ಹಾಕಿ ವಿಡಿಯೋ ಪೋಸ್ಟ್ ಮಾಡಿದ್ದರು. ಆದರೆ, ಉತ್ತರ ಪ್ರದೇಶ ಪೊಲೀಸರು ತನಿಖೆ ನಡೆಸಿ ಆಕೆಯ ಸುಳ್ಳಾರೋಪವನ್ನು ಬಯಲು ಮಾಡಿದ್ದರು.

    ಈ ಕುರಿತು ನಾನುಗೌರಿ.ಕಾಂ ಪ್ರಕಟಿಸಿದ ಫ್ಯಾಕ್ಟ್‌ಚೆಕ್ ವರದಿಯನ್ನು ಕೆಳಗಡೆ ನೋಡಬಹುದು.

    ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

    LEAVE A REPLY

    Please enter your comment!
    Please enter your name here

    - Advertisment -

    ಕೇಂದ್ರದ ಜಿ ರಾಮ್‌ ಜಿ ಕಾಯ್ದೆ ವಿರುದ್ದ ತಮಿಳುನಾಡಿದಾದ್ಯಂತ ಬೃಹತ್ ಪ್ರತಿಭಟನೆ

    ಕೇಂದ್ರದ ವಿಕಸಿತ್ ಭಾರತ್ ಗ್ಯಾರಂಟಿ ಫಾರ್ ರೋಝ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್) ಕಾಯ್ದೆ, 2025 (ವಿಬಿ-ಜಿ ರಾಮ್‌ ಜಿ) ವಿರುದ್ದ ತಮಿಳುನಾಡಿನ ಆಡಳಿತರೂಢ ಡಿಎಂಕೆ ಮೈತ್ರಿಕೂಟವು ಬುಧವಾರ (ಡಿ.24) ರಾಜ್ಯದಾದ್ಯಂತ ಬೃಹತ್...

    ತೆಲಂಗಾಣ: ಸರಪಂಚ್ ಚುನಾವಣೆಯಲ್ಲಿ ಬೆಂಬಲಿಸದ ದಲಿತ ಕುಟುಂಬದ ಮನೆ ಕೆಡವಿದ ಕಾಂಗ್ರೆಸ್ ಸದಸ್ಯರು

    ಕಾಂಗ್ರೆಸ್ ಬೆಂಬಲಿತ ಸರಪಂಚ್ ಆಗಿ ಪ್ರಮಾಣವಚನ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ, ಪದ್ಮಾವತಿ ಮತ್ತು ಅವರ ಮಗ ಪ್ರಸಾದ್ ರೆಡ್ಡಿ ಎಂಬುವವರು ಸೋಮವಾರ ಕೊಹಿರ್ ಮಂಡಲದ ಸಜ್ಜಾಪುರದಲ್ಲಿ ನಿರ್ಮಾಣ ಹಂತದಲ್ಲಿದ್ದ ದಲಿತ ಕುಟುಂಬದ ಮನೆಯನ್ನು...

    “ಆತ್ಮಹತ್ಯೆಗೆ ಮುಂದಾದೆ, ಕುಟುಂಬ ನೆನೆದು ಸುಮ್ಮನಾದೆ”: ನೋವು ತೋಡಿಕೊಂಡ ಉನ್ನಾವೋ ಅತ್ಯಾಚಾರ ಸಂತ್ರಸ್ತೆ

    "ನಾನು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದಿದ್ದೆ. ಆದರೆ, ನನ್ನ ಕುಟುಂಬವನ್ನು ನೆನೆದು ಸುಮ್ಮನಾದೆ" ಇದು ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮಂಗಳವಾರ (2025 ಡಿಸೆಂಬರ್ 24) ಸಂಜೆ ದೆಹಲಿಯ ಇಂಡಿಯಾ ಗೇಟ್ ಎದುರಿನ ಹುಲ್ಲುಹಾಸಿನ ಮೇಲೆ...

    ಜಿಬಿಎ ಅಧಿಕಾರಿಗಳಿಂದ ಮನೆಗಳ ನೆಲಸಮ : ತೀವ್ರ ಖಂಡನೆ ವ್ಯಕ್ತಪಡಿಸಿದ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ

    ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಕೋಗಿಲು ಗ್ರಾಮದಲ್ಲಿ ಬಡ ಜನರ ಸುಮಾರು 150 ಮನೆಗಳನ್ನು ಏಕಾಏಕಿ ನೆಲಸಮಗೊಳಿಸಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಕ್ರಮವನ್ನು ಭೂಮಿ ಮತ್ತು ವಸತಿ ಹಕ್ಕು ವಂಚಿತರ...

    17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ : ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಆಯ್ಕೆ

    17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ 2026ರ ಜನವರಿ 29ರಿಂದ ಫೆಬ್ರವರಿ 6ರವರೆಗೆ ನಡೆಯಲಿದ್ದು, ರಾಯಭಾರಿಯಾಗಿ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕರು ಪ್ರಕಾಶ್ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ. ಚಲನಚಿತ್ರೋತ್ಸವದ ಪೂರ್ವಭಾವಿಯಾಗಿ ಸಂಘಟನಾ...

    ಗುಂಪು ಹತ್ಯೆ ಪ್ರಕರಣ ಹಿಂಪಡೆಯಲು ಮುಂದಾದ ಯುಪಿ ಸರ್ಕಾರ : ಹೈಕೋರ್ಟ್ ಮೆಟ್ಟಿಲೇರಿದ ಅಖ್ಲಾಕ್ ಪತ್ನಿ

    ದಾದ್ರಿ ಗುಂಪು ಹತ್ಯೆ ಪ್ರಕರಣದ ಬಲಿಪಶು ಮೊಹಮ್ಮದ್ ಅಖ್ಲಾಕ್ ಅವರ ಪತ್ನಿ, ಆರೋಪಿಗಳ ವಿರುದ್ಧದ ಪ್ರಕರಣವನ್ನು ಹಿಂಪಡೆಯುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರ ಮತ್ತು ಗೌತಮ್ ಬುದ್ಧ ನಗರದ ನ್ಯಾಯಾಲಯದಲ್ಲಿ ಪ್ರಾಸಿಕ್ಯೂಟರ್ ಸಲ್ಲಿಸಿರುವ...

    ಉನ್ನಾವೋ ಅತ್ಯಾಚಾರ ಪ್ರಕರಣ: ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್‌ ಜೀವಾವಧಿ ಶಿಕ್ಷೆ ಅಮಾನತು

    ಉನ್ನಾವೋ ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಅಪರಾಧಿ, ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ಗೆ ದೆಹಲಿ ಹೈಕೋರ್ಟ್ ಮಂಗಳವಾರ (ಡಿ.23) ಜಾಮೀನು ಮಂಜೂರು ಮಾಡಿದೆ. ನ್ಯಾಯಾಧೀಶರಾದ ಸುಬ್ರಹ್ಮಣ್ಯಂ ಪ್ರಸಾದ್ ಮತ್ತು ಹರೀಶ್ ವೈದ್ಯನಾಥನ್...

    ಮಕ್ಕಳ ಕ್ರಿಸ್‌ಮಸ್ ಕ್ಯಾರೋಲ್ ಗುಂಪಿನ ಮೇಲೆ ದಾಳಿ : ಬಿಜೆಪಿ-ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನ

    ಇತ್ತೀಚೆಗೆ ಗುಂಪು ಹತ್ಯೆ ನಡೆದ ವಲಯಾರ್‌ನಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿರುವ ಕೇರಳದ ಪಾಲಕ್ಕಾಡ್‌ನ ಪುದುಶ್ಶೇರಿಯಲ್ಲಿ ಮಕ್ಕಳನ್ನೊಳಗೊಂಡ ಕ್ರಿಸ್‌ಮಸ್ ಕ್ಯಾರೋಲ್ ಗುಂಪಿನ ಮೇಲೆ ದಾಳಿ ಮಾಡಿದ ಆರೋಪದಲ್ಲಿ ಬಿಜೆಪಿ-ಆರ್‌ಎಸ್‌ಎಸ್ ಸದಸ್ಯನೊಬ್ಬನನ್ನು ಬಂಧಿಸಲಾಗಿದೆ ಎಂದು...

    ಮಧ್ಯಪ್ರದೇಶ | ಅಂಧ ಮಹಿಳೆ ಮೇಲೆ ಹಲ್ಲೆ ನಡೆಸಿದ ಬಿಜೆಪಿ ನಾಯಕಿ

    ಮಧ್ಯಪ್ರದೇಶದ ಜಬಲ್ಪುರದಲ್ಲಿ ಬಿಜೆಪಿ ನಾಯಕಿಯೊಬ್ಬರು ಅಂಧ ಮಹಿಳೆಗೆ ಕಿರುಕುಳ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಜನಾಕ್ರೋಶಕ್ಕೆ ಕಾರಣವಾಗಿದೆ. ಅಂಧ ಮಹಿಳೆಯ ಅಂಗವೈಕಲ್ಯವದ ಕುರಿತು ಬಿಜೆಪಿ ನಾಯಕಿ ಅವಹೇಳನಕಾರಿ ಹೇಳಿಕೆ ನೀಡಿರುವುದು...

    ‘ಇದು ಹಿಂದೂ ರಾಷ್ಟ್ರ, ಇಲ್ಲಿ ಕ್ರಿಶ್ಚಿಯನ್ ಸಾಮಗ್ರಿಗಳ ಮಾರಾಟಕ್ಕೆ ಅವಕಾಶವಿಲ್ಲ’ : ಸಾಂತಾ ಟೋಪಿ ಮಾರಾಟಗಾರರಿಗೆ ದುಷ್ಕರ್ಮಿಗಳಿಂದ ಕಿರುಕುಳ

    ಒಡಿಶಾದ ಭುವನೇಶ್ವರ ನಗರದಲ್ಲಿ ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ರಸ್ತೆ ಬದಿ ಸಾಂತಾ ಕ್ಲಾಸ್ ಟೋಪಿಗಳನ್ನು ಮಾರಾಟ ಮಾಡುತ್ತಿದ್ದ ಬಡ ವ್ಯಾಪಾರಿಗಳಿಗೆ ದುಷ್ಕರ್ಮಿಗಳ ಗುಂಪು ಕಿರುಕುಳ ನೀಡಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ವಿಡಿಯೋವೊಂದು ಸಾಮಾಜಿಕ...