Homeಕರ್ನಾಟಕಫಾಸಿಲ್‌ ಕೊಲೆಗೆ ಮೆಚ್ಚುಗೆ ಸೂಚಿಸಿದ ಬಿಜೆಪಿ ಮುಖಂಡ ಶರಣ್ ಪಂಪ್‌ವೆಲ್: ದ್ವೇಷ ಭಾಷಣಕ್ಕೆ ಖಂಡನೆ

ಫಾಸಿಲ್‌ ಕೊಲೆಗೆ ಮೆಚ್ಚುಗೆ ಸೂಚಿಸಿದ ಬಿಜೆಪಿ ಮುಖಂಡ ಶರಣ್ ಪಂಪ್‌ವೆಲ್: ದ್ವೇಷ ಭಾಷಣಕ್ಕೆ ಖಂಡನೆ

- Advertisement -
- Advertisement -

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಹಾಗೂ ಬಿಜೆಪಿ ಮುಖಂಡ ಶರಣ್ ಪಂಪ್‌ವೆಲ್ ಅವರು ಮಂಗಳೂರಿನಲ್ಲಿ ನಡೆದ ಫಾಸಿಲ್‌ ಕೊಲೆಯನ್ನು ಸಮರ್ಥಿಸಿ ಹೇಳಿಕೆ ನೀಡಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಬಳಿಕ ಅಮಾಯಕ ಫಾಸಿಲ್‌ನನ್ನು ಹಿಂದೂ ಸಂಘಟನೆಗಳು ಕೊಂದಿರುವುದಾಗಿ ಒಪ್ಪಿಕೊಂಡಿರುವ ಶರಣ್‌, “ಈ ಕೊಲೆಯಲ್ಲಿ ಪರೋಕ್ಷವಾಗಿ ತನ್ನ ಪಾತ್ರವಿದೆ” ಎಂಬ ಸೂಚನೆಯನ್ನು ನೀಡಿದ್ದಾರೆ.

ತುಮಕೂರು ನಗರದಲ್ಲಿ ಭಜರಂಗದಳದ ಶೌರ್ಯ ಯಾತ್ರೆಯಲ್ಲಿ ಮಾತನಾಡಿದ ಅವರು, “ಪ್ರವೀಣ್ ನೆಟ್ಟಾರು ಹತ್ಯೆಯಲ್ಲಿ ಭಾಗಿಯಾಗಿರುವ ಮುಸ್ಲಿಂ ಜಿಹಾದಿಗಳಿಗೆ ಪ್ರತ್ಯುತ್ತರ ನೀಡಲು, ಸುರತ್ಕಲ್‌ನ ಬಿಸಿ ರಕ್ತದ ಯುವಕರು ಸೇಡು ತೀರಿಸಿಕೊಂಡರು” ಎಂದು ಹೇಳಿಕೆ ನೀಡಿದ್ದಾರೆ.

“ಪ್ರವೀಣ್ ನೆಟ್ಟಾರು ಹತ್ಯೆಯಲ್ಲಿ ಮುಸಲ್ಮಾನ್ ಜಿಹಾದಿಗಳಿದ್ದಾರೆ. ಅವರಿಗೆ ಉತ್ತರವನ್ನು ಕೊಡಬೇಕೆಂಬ ಕಾರಣಕ್ಕಾಗಿ ಸುರತ್ಕಲ್‌ನಲ್ಲಿದ್ದ ಬಿಸಿ ನೆತ್ತರಿನ ಯುವಕರು ಕೊಂದಿದ್ದಾರೆ. ಯಾರು ಇಲ್ಲದ ಸಮಯದಲ್ಲಿ ಅಲ್ಲ. ಮಾರ್ಕೆಟ್‌ನಲ್ಲಿ ಜನ ಇದ್ದಾಗಲೇ, ಅವರ ಎದುರಲ್ಲೇ ನುಗ್ಗಿ ನುಗ್ಗಿ ಅವರಿಗೆ ಹೊಡೆದು ಹತ್ಯೆಗೆ ಪ್ರತಿಕಾರವನ್ನು ತೋರಿಸಿದ್ದು ಹಿಂದೂ ಹುಡುಗರ ತಾಕತ್ತು” ಎಂದು ಪ್ರಚೋದಿಸಿದ್ದಾರೆ. ತುಮಕೂರಿನ ತಿಲಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ಕಾರ್ಯಕ್ರಮ ನಡೆದಿದೆ.

“ಶರಣ್ ಪಂಪ್‌ವೆಲ್ ಮಾಡಿದ ಆಪಾದಿತ ಪ್ರಚೋದಕ ಹೇಳಿಕೆಗಳ ಮೇಲೆ ಯಾವುದೇ ದೂರುಗಳು ದಾಖಲಾಗಿಲ್ಲ. ಅವರ ಭಾಷಣದಲ್ಲಿ ನಾವು ಸ್ವಯಂಪ್ರೇರಿತ ಪ್ರಕರಣಗಳನ್ನು ತೆಗೆದುಕೊಳ್ಳುವುದಿಲ್ಲ. ನಗರದಲ್ಲಿ ಕಾನೂನು ಸುವ್ಯವಸ್ಥೆ ಸ್ಥಿರವಾಗಿದೆ” ಎಂದು ತಿಲಕ್ ನಗರ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹೇಳಿರುವುದಾಗಿ ವರದಿಯಾಗಿದೆ.

“ನಾನು ಯಾವುದೇ ಸೇಡಿನ ಹತ್ಯೆಗಳನ್ನು ಸಮರ್ಥಿಸಿಕೊಂಡಿಲ್ಲ. ನಾನು ಯುವಕರ ಶಕ್ತಿಯ ಬಗ್ಗೆ ಮಾತ್ರ ಮಾತನಾಡಿದ್ದೇನೆ. ಹಿಂದೂಗಳು ಸಹ ಮುಸ್ಲಿಮರ ದೌರ್ಜನ್ಯದ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಬಹುದು. ಸಮಾರಂಭದಲ್ಲಿ ನಾನು ಸತ್ಯವನ್ನಷ್ಟೇ ಮಾತನಾಡಿದ್ದೇನೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ನಾನು ಯಾವುದೇ ವಿವಾದಾತ್ಮಕ ಹೇಳಿಕೆ ನೀಡಿಲ್ಲ ಅಥವಾ ಯಾವುದೇ ನಿರ್ದಿಷ್ಟ ಹತ್ಯೆಗಳನ್ನು ಎತ್ತಿ ತೋರಿಸಿಲ್ಲ” ಎಂದು ಪಂಪ್‌ವೆಲ್‌ ಸಮರ್ಥಿಸಿಕೊಂಡಿದ್ದಾರೆ.

ಶರಣ್ ಪಂಪ್‌ವೆಲ್ ಹೇಳಿಕೆಗೆ ಜನಾಕ್ರೋಶ ವ್ಯಕ್ತವಾಗಿದೆ. “ವಿಧಾನಸಭೆ ಚುನಾವಣೆಗೂ ಮುನ್ನ ರಾಜ್ಯವನ್ನು ಧ್ರುವೀಕರಣಗೊಳಿಸುವ ಪ್ರಯತ್ನ ಇದಾಗಿದೆ. ಇದು ಆರೆಸ್ಸೆಸ್ ಮತ್ತು ಬಿಜೆಪಿಯ ಹಿಡನ್ ಅಜೆಂಡಾ. ಕಾನೂನು ಸುವ್ಯವಸ್ಥೆ ಹದಗೆಡಿಸಲು ಯತ್ನಿಸಿದ ಪಂಪ್‌ವೆಲ್ ವಿರುದ್ಧ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು” ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಡಿವೈಎಫ್ಐ ಕರ್ನಾಟಕ ರಾಜ್ಯಾಧ್ಯಕ್ಷರಾದ ಮನೀರ್‌ ಕಾಟಿಪಳ್ಳ ಪ್ರತಿಕ್ರಿಯಿಸಿ, “ಶರಣ್ ಪಂಪ್ ವೆಲ್ ತುಮಕೂರಿನಲ್ಲಿ ಸಂಫಪರಿವಾರದ ವೇದಿಕೆಯಲ್ಲಿ ಮಾಡಿದ ಭಾಷಣ ದುಷ್ಟತನದ ಪರಮಾವಧಿ” ಎಂದಿದ್ದಾರೆ.

“ಇದು ತೀರಾ ಆತಂಕಕಾರಿ ಬೆಳವಣಿಗೆ. ನಾಗರಿಕ ಸಮಾಜದಲ್ಲಿ ಇದು ಭೀತಿಯನ್ನು ಮೂಡಿಸಿದೆ. ಫಾಝಿಲ್ ಕೊಲೆಗೆ ವಿಎಚ್‌ಪಿ, ಬಿಜೆಪಿ ಮುಖಂಡರ ಬೆಂಬಲ ದೊರಕಿರುವ ಅನುಮಾನ ಕೊಲೆ ನಡೆದ ಸಂದರ್ಭದಲ್ಲೇ ವ್ಯಕ್ತವಾಗಿತ್ತು. ಪೊಲೀಸರು ರಾಜಕೀಯ ಒತ್ತಡದಿಂದ ಕೊಲೆಯ ಪಿತೂರಿದಾರರನ್ನು ರಕ್ಷಿಸುತ್ತಿದ್ದಾರೆ ಎಂದು ಫಾಝಿಲ್ ಕುಟುಂಬ ಆರೋಪಿಸಿತ್ತು. ಶರಣ್ ಪಂಪ್ ವೆಲ್ ಭಾಷಣ ಈ ಅನುಮಾನ, ಆರೋಪವನ್ನು ಅನುಮಾನಕ್ಕೆ ಎಡೆಯಿಲ್ಲದಂತೆ ಪುಷ್ಟೀಕರಿಸಿದೆ” ಎಂದು ತಿಳಿಸಿದ್ದಾರೆ.

“ಶರಣ್ ಪಂಪ್ ವೆಲ್ ಇಂದಿನ ಅತಿರೇಕದ ದ್ವೇಷ ಭಾಷಣ, ಕೊಲೆಗಳ ಸಮರ್ಥನೆ, ಬೆದರಿಕೆ ಜನಾಂಗ ಹತ್ಯೆಗೆ ಪ್ರಚೋದನೆ ನೀಡುವಂತಿದೆ‌. ನಿರುದ್ಯೋಗ, ಬಡತನದಿಂದ ಹತಾಶಗೊಂಡಿರುವ ಯುವಕರ ಕೈಗೆ ತಲವಾರು ನೀಡಿ ಗಲಭೆಗಿಳಿಸುವ, ಇಡೀ ಸಮಾಜವನ್ನು ಕ್ರಿಮಿನಲೀಕರಣಗೊಳಿಸುವ, ಚುನಾವಣೆ ಸನಿಹದಲ್ಲಿರುವ ಸಂದರ್ಭ ಮತೀಯ ಧ್ರುವೀಕರಣ ರಾಜಕೀಯ ದುರುದ್ದೇಶಗಳನ್ನು ಹೊಂದಿದೆ. ಹಾಗೂ ಶರಣ್ ಪಂಪ್ ವೆಲ್‌ಗೆ ಬಿಜೆಪಿ ಸರಕಾರದ ಬೆಂಬಲವೂ ದೊರಕಿರುವುದು ಎದ್ದು ಕಾಣುತ್ತಿದೆ” ಎಂದು ಟೀಕಿಸಿದ್ದಾರೆ.

“ಅಮಾಯಕ ಫಾಝಿಲ್ ಕೊಲೆಯ ಸಂದರ್ಭ ರಾಜ್ಯ ಸರಕಾರ ಸಾಂತ್ವನ, ಪರಿಹಾರ ಒದಗಿಸದೆ ಫಾಝಿಲ್ ಕುಟುಂಬದೊಂದಿಗೆ ತಾರತಮ್ಯದಿಂದ ಕೆಟ್ಟದಾಗಿ ನಡೆದುಕೊಂಡಿತ್ತು. ಪ್ರಕರಣದ ತನಿಖೆಯೂ ದುರ್ಬಲ ನೆಲೆಯಲ್ಲಿ ನಡೆದಿತ್ತು. ಈಗ ಫಾಝಿಲ್ ಕೊಲೆಯನ್ನು ಭಜರಂಗ ದಳದ ಕಾರ್ಯಕರ್ತರ ಶೌರ್ಯದ ಸಂಕೇತ ಎಂದು ಭಾಷಣ ಬಿಗಿಯಲು‌ ಅವಕಾಶ ಒದಗಿಸಿ ಆ ಸಂತ್ರಸ್ತ ಕುಟುಂಬವನ್ನು ಮತ್ತಷ್ಟು ನೋವುಣ್ಣುವಂತೆ ಮಾಡಲಾಗುತ್ತಿದೆ. ಮುಸ್ಲಿಂ ಸಮುದಾಯದ ವಿರುದ್ದ ಇನ್ನಷ್ಟು ದ್ವೇಷ ಹರಡುವ ಯತ್ನವೂ ಇದರ ಹಿಂದಿದೆ. ಸರಕಾರಿ ಪ್ರಾಯೋಜಿತ ಇಂತಹ ಯೋಜನಾಬದ್ದ ಜನಾಂಗ ದ್ವೇಷದ ಕೆಲಸಗಳು ಮುಸ್ಲಿಂ ಸಮುದಾಯದೊಳಗಡೆ ನಕಾರಾತ್ಮಕ ಶಕ್ತಿಗಳ ಬೆಳವಣಿಗೆಗೂ ಕುಮ್ಮಕ್ಕು‌ ನೀಡುತ್ತದೆ. ಇದು ನಮ್ಮ ಸಮಾಜವನ್ನು ಅಪಾಯಕಾರಿ ವಿಭಜನೆಯೆಡೆಗೆ ಒಯ್ಯುತ್ತದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ಕೊಲೆ, ನರಮೇಧದ ಸಮರ್ಥನೆಯ ಭಾಷಣಕ್ಕಾಗಿ ಶರಣ್ ಪಂಪ್ ವೆಲ್ ರನ್ನು ಕಠಿಣ ಕಾಯ್ದೆಯಡಿ ಬಂಧಿಸಬೇಕು, ಫಾಝಿಲ್ ಕೊಲೆಯಲ್ಲಿ ಶರಣ್ ಪಂಪ್ ವೆಲ್ ಮತ್ತಿತರ ನಾಯಕರ ಪಾತ್ರದ ಕುರಿತು ಮರು ತನಿಖೆ ಮಾಡಬೇಕು ಎಂದು ಡಿವೈಎಫ್ಐ ಆಗ್ರಹಿಸುತ್ತದೆ. ನಾಗರಿಕ ಸಮಾಜ ಒಂದಾಗಿ ಶರಣ್ ಪಂಪ್ ವೆಲ್ ಭಾಷಣವನ್ನು ಖಂಡಿಸಬೇಕು ಹಾಗೂ ಕ್ರಮಕ್ಕಾಗಿ ಒತ್ತಾಯಿಸಬೇಕು” ಎಂದಿದ್ದಾರೆ.

ಫಾಜಿಲ್ ಕೊಲೆ ಪ್ರಕರಣ

ಪ್ರವೀಣ್ ನೆಟ್ಟಾರು ಹತ್ಯೆಯ ಎರಡು ದಿನಗಳ ನಂತರ, ಹಿಂದುತ್ವ ಸಂಘಟನೆಗಳೊಂದಿಗೆ ಸೇರಿರುವ ದುಷ್ಕರ್ಮಿಗಳ ಗುಂಪೊಂದು 2022ರ ಜುಲೈ 28 ರಂದು ಮಂಗಳೂರಿನಲ್ಲಿ 23 ವರ್ಷದ ಮೊಹಮ್ಮದ್ ಫಾಜಿಲ್ ಅವರನ್ನು ಕೊಂದಿತು.

ಒಂದು ವಾರದೊಳಗೆ ಮಂಗಳೂರು ನಗರ ಪೊಲೀಸರು ಪ್ರಕರಣವನ್ನು ಭೇದಿಸಿ ಈ ಸಂಬಂಧ ಆರು ಮಂದಿಯನ್ನು ವಶಕ್ಕೆ ಪಡೆದರು. ಆರೋಪಿಗಳೆಲ್ಲರೂ ಹಿಂದುತ್ವವಾದಿಗಳಾಗಿದ್ದಾರೆ.

ಫಾಜಿಲ್ ಹತ್ಯೆಯಾಗಿ ಆರು ತಿಂಗಳಾದರೂ ಆತನ ಕುಟುಂಬಕ್ಕೆ ಕರ್ನಾಟಕ ಸರ್ಕಾರದಿಂದ ಪರಿಹಾರ ಸಿಕ್ಕಿಲ್ಲ. ಯಾವುದೇ ಕ್ಯಾಬಿನೆಟ್ ಮಂತ್ರಿಗಳು ಸಂತ್ರಸ್ತರ ಕುಟುಂಬ ಸದಸ್ಯರನ್ನು ಭೇಟಿ ಮಾಡಲಿಲ್ಲ ಅಥವಾ ಕುಟುಂಬಕ್ಕೆ ಪರಿಹಾರವನ್ನು ನೀಡಲಿಲ್ಲ ಎಂದು ಪ್ರತಿಪಕ್ಷಗಳು ರಾಜ್ಯ ಸರ್ಕಾರವನ್ನು ಟೀಕಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...