Homeಕರ್ನಾಟಕಬೆಳಗಾವಿ: ಕಾಂಗ್ರೆಸ್-ಬಿಜೆಪಿ ನಡುವೆ ರಾಜಕೀಯ ಕಿತ್ತಾಟಕ್ಕೆ ಕಾರಣವಾದ ಚಾಕು ಇರಿತ ಪ್ರಕರಣ

ಬೆಳಗಾವಿ: ಕಾಂಗ್ರೆಸ್-ಬಿಜೆಪಿ ನಡುವೆ ರಾಜಕೀಯ ಕಿತ್ತಾಟಕ್ಕೆ ಕಾರಣವಾದ ಚಾಕು ಇರಿತ ಪ್ರಕರಣ

- Advertisement -
- Advertisement -

ಬೆಳಗಾವಿಯಲ್ಲಿ ನಿನ್ನೆ (ಡಿ.4) ನಡೆದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆಪ್ತ, ಬಿಜೆಪಿ ಎಸ್‌ಸಿ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ಪೃಥ್ವಿ ಸಿಂಗ್ ಮೇಲಿನ ಚಾಕು ಇರಿತ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದ್ದು, ಬಿಜೆಪಿ-ಕಾಂಗ್ರೆಸ್ ನಡುವೆ ಕಿತ್ತಾಟಕ್ಕೆ ಕಾರಣವಾಗಿದೆ.

ನಿನ್ನೆ ಸಂಜೆ 4 ಗಂಟೆಯ ಹೊತ್ತಿಗೆ ಬೆಳಗಾವಿಯ ಜಯನಗರದ ನಿವಾಸದ ಬಳಿ ಪೃಥ್ವಿ ಸಿಂಗ್ ಮೇಲೆ ದಾಳಿ ನಡೆದಿದೆ. ಘಟನೆಯಲ್ಲಿ ಪೃಥ್ವಿ ಸಿಂಗ್ ಅವರ ಕೈ ಹಾಗೂ ಬೆನ್ನಿನ ಭಾಗಕ್ಕೆ ತೀವ್ರವಾಗಿ ಗಾಯಗಳಾಗಿವೆ. ಕೂಡಲೇ ಅವರನ್ನು ಕೆಎಲ್‌ಇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಸಹೋದರ, ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಅವರ ಗನ್‌ಮ್ಯಾನ್‌ ಮತ್ತು ಆಪ್ತರು ಪೃಥ್ವಿ ಸಿಂಗ್ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಇದಕ್ಕೆ ಪುಷ್ಠಿ ನೀಡುವಂತೆ ಚನ್ನರಾಜ್ ಆಪ್ತರು ಪೃಥ್ವಿ ಸಿಂಗ್ ಜೊತೆ ಮಾತನಾಡುತ್ತಿರುವ ಸಿಸಿಟಿವಿ ದೃಶ್ಯಗಳು ಲಭ್ಯವಾಗಿದ್ದು, ಸೂಕ್ತ ತನಿಖೆಗೆ ಬಿಜೆಪಿ ಮುಖಂಡರು ಆಗ್ರಹಿಸಿದ್ದಾರೆ.

ಪೃಥ್ವಿ ಸಿಂಗ್ ಬೋಗಸ್‌ ಎಂದ ಲಕ್ಷ್ಮೀ ಹೆಬ್ಬಾಳ್ಕರ್‌

ತನ್ನ ತಮ್ಮನ ಆಪ್ತರು ಹಲ್ಲೆ ನಡೆಸಿದ ಆರೋಪ ಕೇಳಿ ಬರುತ್ತಿದ್ದಂತೆ ಸಚಿವೆ ಹೆಬ್ಬಾಳ್ಕರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಪೃಥ್ವಿ ಸಿಂಗ್ ಮೋಸ್ಟ್‌ ಬೋಗಸ್‌. ಆತನ ಹೆಸರು ಬರೆದಿಟ್ಟು ಹುಡುಗರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣದಲ್ಲಿ ನಮ್ಮ ಹೆಸರು ಕೇಳಿ ಬಂದಿರುವುದರಿಂದ ಸೂಕ್ತ ತನಿಖೆಯಾಗಲಿ. ಪೃಥ್ವಿ ಸಿಂಗ್‌ನನ್ನೂ ವಿಚಾರಣೆ ಮಾಡಬೇಕು, 24 ಗಂಟೆಯೊಳಗೆ ಘಟನೆಯ ಸತ್ಯಾಸತ್ಯತೆ ಗೊತ್ತಾಗಬೇಕು ಎಂದಿದ್ದಾರೆ. ಈ ಘಟನೆಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಚನ್ನರಾಜ್‌ ಹಟ್ಟಿಹೊಳಿ ಹೇಳಿದ್ದೇನು?

ಎಂಎಲ್‌ಸಿ ಚನ್ನರಾಜ್ ಹಟ್ಟಿಹೊಳಿ ಅವರ ಆಪ್ತರು ಪೃಥ್ವಿ ಸಿಂಗ್ ಮೇಲೆ ದಾಳಿ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಕುರಿತು ಇಂದು(ಡಿ.5) ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಚನ್ನರಾಜ್, ಪೃಥ್ವಿ ಸಿಂಗ್ ಮೇಲೆ ಹಲ್ಲೆ ನಡೆದಾಗ ನಾನು ಅಲ್ಲೇ ಕಾರಿನಲ್ಲಿ ಇದ್ದೇ ಎಂದು ಹೇಳಲಾಗ್ತಿದೆ. ನಾನು ಕಾರಿನಲ್ಲಿ ಇರಲಿಲ್ಲ. ಪೃಥ್ವಿ ಸಿಂಗ್ ಮನೆಯ ದಾರಿಯಾಗಿ ನನ್ನ ಕಾರು ಬಂದಿರುವುದು ದೊಡ್ಡ ವಿಷವೇನಲ್ಲ. ನನ್ನ ಮನೆಗೆ ಬರುವ ದಾರಿಯಲ್ಲಿ ಪೃಥ್ವಿ ಸಿಂಗ್ ಮನೆಯಿದೆ. ನಾನೂ ಕೂಡ ಪ್ರಕರಣ ಸೂಕ್ತ ತನಿಖೆಗೆ ಆಗ್ರಹಿಸುತ್ತೇನೆ ಎಂದಿದ್ದಾರೆ.

ಆಸ್ಪತ್ರೆಗೆ ಭೇಟಿ ನೀಡಿದ ವಿಜಯೇಂದ್ರ :

ಪೃಥ್ವಿ ಸಿಂಗ್ ಮೇಲೆ ಚಾಕು ಇರಿದ ವಿಷಯ ತಿಳಿದ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನಿನ್ನೆ ರಾತ್ರಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ವಿಧಾನಮಂಡಲದ ಚಳಿಗಾಲದ ಅಧಿವೇಶನ ಪ್ರಯುಕ್ತ ವಿಜಯೇಂದ್ರ ಬೆಳಗಾವಿಯಲ್ಲೇ ಇದ್ದಾರೆ.

ಆಸ್ಪತ್ರೆ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ವಿಜಯೇಂದ್ರ, ಸೋಮವಾರ ಸಂಜೆ 4 ಗಂಟೆಯ ಸುಮಾರಿಗೆ ಚನ್ನರಾಜ್ ಹಟ್ಟಿಹೊಳಿ ಅವರ ಬಲಗೈ ಬಂಟ ಸುದೀಪ್ ಜಾಧವ್, ಆಪ್ತ ಕಾರ್ಯದರ್ಶಿ ಸದ್ದಾಂ ಮತ್ತು ಗನ್‌ಮ್ಯಾನ್ ಪೃಥ್ವಿ ಸಿಂಗ್‌ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ. ಹಟ್ಟಿಹೊಳಿ ಪ್ರಭಾವಿ ವ್ಯಕ್ತಿಯಾಗಿದ್ದು, ಹೀಗಾಗಿ ಹಗಲು ಹೊತ್ತಿನಲ್ಲೇ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ಬೆಳಗಾವಿಯಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯುತ್ತಿರುವ ಹೊತ್ತಿನಲ್ಲೇ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿರುವುದು ದುರಾದೃಷ್ಟಕರ ಸಂಗತಿ. ಪೃಥ್ವಿ ಸಿಂಗ್ ಮೇಲಿನ ಹಲ್ಲೆಗೆ ಕಾರಣರಾದವರನ್ನು ಪೊಲೀಸರು ಕೂಡಲೇ ಬಂಧಿಸಬೇಕು. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಈ ವಿಷಯದ ಬಗ್ಗೆ ಹೇಳಿಕೆಗಳನ್ನು ನೀಡುವ ಬದಲು, ಜವಾಬ್ದಾರಿಯುತ ಸ್ಥಾನದಲ್ಲಿ ನಿಂತು ತಮ್ಮ ಸಹೋದರನನ್ನು ತಕ್ಷಣವೇ ಬಂಧಿಸುವಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ನಾಪತ್ತೆಯಾಗಿದ್ದ ಎಂಎಲ್​ಸಿ ಸಿಪಿ ಯೋಗೇಶ್ವರ್ ಬಾವ ಶವವಾಗಿ ಪತ್ತೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...