Homeಕರ್ನಾಟಕBJP ಲೀಡರ್ ಲೆಸ್, JDS ಪೀಪಲ್ ಲೆಸ್ ಪಾರ್ಟಿ: ಪ್ರಿಯಾಂಕ್ ಖರ್ಗೆ ವ್ಯಂಗ್ಯ

BJP ಲೀಡರ್ ಲೆಸ್, JDS ಪೀಪಲ್ ಲೆಸ್ ಪಾರ್ಟಿ: ಪ್ರಿಯಾಂಕ್ ಖರ್ಗೆ ವ್ಯಂಗ್ಯ

- Advertisement -
- Advertisement -

”ರಾಜ್ಯದಲ್ಲಿ ವಿಪಕ್ಷ ಎಲ್ಲಿದೆ? ಬಿಜೆಪಿ ಲೀಡರ್ ಲೆಸ್, ಜೆಡಿಎಸ್ ಪೀಪಲ್ ಲೆಸ್ ಪಾರ್ಟಿಯಾಗಿದೆ. ಬಿಜೆಪಿ ನಾಯಕರಿಗೆ ರಾಜ್ಯದಲ್ಲಿ ಧ್ವನಿ ಇಲ್ಲದಂತಾಗಿದೆ. ಇಲ್ಲಿ ಕಾಂಗ್ರೆಸ್ ವಿರುದ್ಧ ಘರ್ಜಿಸುವ ಬದಲು ಕೇಂದ್ರ ನಾಯಕರ ಬಳಿ ಘರ್ಜಿಸಿದರೆ ವಿಪಕ್ಷ ಸ್ಥಾನವಾದರೂ ಸಿಗುತ್ತಿತ್ತು” ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ.

”ಬಿಜೆಪಿ ನಾಯಕರಿಗೆ ರಾಜ್ಯದಲ್ಲಿ ಧ್ವನಿ ಇಲ್ಲದಂತಾಗಿದೆ. ಇಲ್ಲಿ ಕಾಂಗ್ರೆಸ್ ವಿರುದ್ಧ ಘರ್ಜಿಸುವ ಬದಲು ಕೇಂದ್ರ ನಾಯಕರ ಬಳಿ ಘರ್ಜಿಸಿದರೆ ವಿಪಕ್ಷ ಸ್ಥಾನವಾದರು ಸಿಗುತ್ತಿತ್ತು. ಬಿಜೆಪಿಯಿಂದ ಪಾಠ ಕಲಿಯುವ ಅಗತ್ಯವಿಲ್ಲ. ಯಡಿಯೂರಪ್ಪ ಅವರನ್ನ ಕಡೆಗಣಿಸಿದ್ದಾರೆ. ಈಗ ಮಾತನಾಡಿದರೆ ಮಗನಿಗೆ ಸ್ಥಾನ ಸಿಗಬಹುದು ಎಂಬ ಕಾರಣಕ್ಕೆ ಮಾತನಾಡುತ್ತಿದ್ದಾರೆ” ಎಂದರು.

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಇದೀಗ ಮತ್ತೆ ಮುಖ್ಯಮಂತ್ರಿ ವಿಚಾರ ಮುನ್ನಲೆಗೆ ಬಂದಿದ್ದು, ಇತ್ತೀಚೆಗೆ ಸಿದ್ದರಾಮಯ್ಯ ಅವರು ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ ಎಂದು ಹೇಳಿಕೆ ನೀಡಿದ ಬೆನ್ನಲ್ಲೇ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಾವು ಮುಖ್ಯಮಂತ್ರಿಯಾಗಬೇಕು ಎನ್ನುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಮೈಸೂರು ನಗರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ”ನಾನೇನು ಹೇಳಿಕೆ ನೀಡಿದರೂ ಅದು ನನ್ನ ವೈಯಕ್ತಿಕ ಅಭಿಪ್ರಾಯ ಮಾತ್ರ. ಒಂದು ವೇಳೆ ಹೈಕಮಾಂಡ್ ನೀನು ಸಿಎಂ ಆಗು ಎಂದರೆ ನಾನೂ ಸಿದ್ಧ” ಎಂದು ಹೇಳಿದರು.

”ದೆಹಲಿಯಲ್ಲಿ ನಾಲ್ಕು ಜನ ಕುಳಿತು ಮಾತನಾಡಿದ್ದಾರೆ. ಅವರಿಗೆ ಮಾತ್ರ ಈ ವಿಚಾರದ ಬಗ್ಗೆ ಸ್ಪಷ್ಟತೆ ಇದೆ. ಸಿಎಂ ಅವರದ್ದು ವೈಯಕ್ತಿಕ ಅಭಿಪ್ರಾಯ. ಜಿಲ್ಲಾ ಪಂಚಾಯತ್ ಸದಸ್ಯರಿಂದ ಹಿಡಿದು ಶಾಸಕರವರೆಗೆ ಎಲ್ಲರಿಗೂ ತಮ್ಮ ಅಭಿಪ್ರಾಯ ಹೇಳಲು ಸ್ವಾತಂತ್ರವಿದೆ. ಇದರಲ್ಲಿ ತಪ್ಪು ಏನು ಇಲ್ಲ. ಆದರೆ ಅವರ ಹೇಳಿಕೆ, ಕಲ್ಲಿನ ಕೆತ್ತಿದ ಶಾಸನವಲ್ಲ. ಎಲ್ಲವೂ ಪಕ್ಷದ ಹೈಕಮಾಂಡ್‌ಗೆ ಬಿಟ್ಟಿದ್ದು” ಎಂದು ಹೇಳಿದರು.

”ಸಿದ್ದರಾಮಯ್ಯ ಅವರದ್ದು ವೈಯಕ್ತಿಕ ಅಭಿಪ್ರಾಯ.. ಅಧಿಕಾರ ಹಂಚಿಕೆ ಬಗ್ಗೆ ದೆಹಲಿಯಲ್ಲಿ ನಾಲ್ವರು ಮಾತನಾಡಿದ್ದಾರೆ. ಅವರಿಗೆ ಮಾತ್ರ ಈ ವಿಚಾರದ ಬಗ್ಗೆ ಸ್ಪಷ್ಟತೆ ಇದೆ. ಅವರನ್ನು ಹೊರತುಪಡಿಸಿ ಬೇರೆ ಯಾರೇ ಮಾತನಾಡಿದರೂ ಅದಕ್ಕೆ ಬೆಲೆ ಇಲ್ಲ” ಎಂದು ತಿಳಿಸಿದ್ದಾರೆ.

“ಯಾರು ಮುಂದುವರಿಯಬೇಕೆಂದು ಹೈಕಮಾಂಡ್ ನಿರ್ಧರಿಸುತ್ತದೆ. ಎಲ್ಲರಿಗೂ ಅಭಿಪ್ರಾಯ ಹೇಳಲು ಸ್ವಾತಂತ್ರವಿದೆ, ಇದರಲ್ಲಿ ತಪ್ಪಿಲ್ಲ’ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಗಣಪತಿ ಕಾಲ್ಪನಿಕ ದೇವರು, ಪೂಜಿಸುವುದು ನಮ್ಮ ಸಂಸ್ಕೃತಿಯಲ್ಲ: ಸಾಣೇಹಳ್ಳಿ ಸ್ವಾಮೀಜಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಲೈಂಗಿಕ ದೌರ್ಜನ್ಯ ಪ್ರಕರಣ: ಸಂತ್ರಸ್ತೆಯರಿಗೆ ಸಹಾಯವಾಣಿ ಆರಂಭಿಸಿದ ಎಸ್‌ಐಟಿ

0
ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತರಿಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಹಾಯವಾಣಿ ತೆರೆದಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಎಸ್‌ಐಟಿ ಮುಖ್ಯಸ್ಥ ಬಿ.ಕೆ ಸಿಂಗ್, "ಹಾಸನ ಜಿಲ್ಲೆಯಲ್ಲಿ ನಡೆದ ಲೈಂಗಿಕ ದೌರ್ಜನ್ಯ...