Homeಅಂತರಾಷ್ಟ್ರೀಯಬಿಜೆಪಿ ನಾಯಕರ ದ್ವೇಷ ಭಾಷಣದ ನಿರ್ಲಕ್ಷ್ಯ ಆರೋಪ; ಫೇಸ್‌‌ಬುಕ್ ಸ್ಪಷ್ಟನೆ

ಬಿಜೆಪಿ ನಾಯಕರ ದ್ವೇಷ ಭಾಷಣದ ನಿರ್ಲಕ್ಷ್ಯ ಆರೋಪ; ಫೇಸ್‌‌ಬುಕ್ ಸ್ಪಷ್ಟನೆ

- Advertisement -
- Advertisement -

“ಯಾವುದೆ ರಾಜಕೀಯ ಸ್ಥಾನ ಅಥವಾ ಪಕ್ಷದ ಸಂಬಂಧವನ್ನು ಪರಿಗಣಿಸದೆ ದ್ವೇಷ ಭಾಷಣದ ಕುರಿತು ತನ್ನ ನೀತಿಗಳನ್ನು ಜಾರಿಗೊಳಿಸುತ್ತದೆ ಎಂದು ಫೇಸ್‌ಬುಕ್ ಹೇಳಿದೆ. ಆಡಳಿತಾರೂಢ ಬಿಜೆಪಿಯ ನಾಯಕರು ಮತ್ತು ಕಾರ್ಯಕರ್ತರ ಆಕ್ಷೇಪಾರ್ಹ ವಿಷಯವನ್ನು ಫೇಸ್‌ಬುಕ್ ನಿರ್ಲಕ್ಷಿಸಿದೆ ಎಂದು ನಿನ್ನೆ ಅಮೆರಿಕದ ಮಾಧ್ಯಮವೊಂದು ಹೇಳಿದ ಹಿನ್ನೆಲೆಯಲ್ಲಿ ಈ ಪ್ರತಿಕ್ರಿಯೆ ಬಂದಿದೆ.

“ಯಾರೊಬ್ಬರ ರಾಜಕೀಯ ಸ್ಥಾನ ಅಥವಾ ಪಕ್ಷದ ಸಂಬಂಧವನ್ನು ಪರಿಗಣಿಸದೆ ನಾವು ಈ ನೀತಿಗಳನ್ನು ಜಾಗತಿಕವಾಗಿ ಜಾರಿಗೊಳಿಸುತ್ತೇವೆ. ಹಿಂಸಾಚಾರವನ್ನು ಪ್ರಚೋದಿಸುವ ದ್ವೇಷದ ಮಾತು ಮತ್ತು ವಿಷಯವನ್ನು ನಾವು ನಿಷೇಧಿಸುತ್ತೇವೆ. ಇನ್ನೂ ಹೆಚ್ಚಿನದನ್ನು ಮಾಡಬೇಕಾಗಿದೆ ಎಂದು ನಮಗೆ ತಿಳಿದಿದ್ದರೂ, ನಾವು ಜಾರಿಗೊಳಿಸುವಲ್ಲಿ ಪ್ರಗತಿ ಸಾಧಿಸುತ್ತಿದ್ದೇವೆ. ನ್ಯಾಯ ಮತ್ತು ನಿಖರತೆಯನ್ನು ಖಚಿತಪಡಿಸಿಕೊಳ್ಳಲು ನಮ್ಮ ಪ್ರಕ್ರಿಯೆಯ ನಿಯಮಿತ ಲೆಕ್ಕಪರಿಶೋಧನೆಯನ್ನು ನಡೆಸುತ್ತೇವೆ” ಎಂದು ಫೇಸ್‌ಬುಕ್ ವಕ್ತಾರರು ತಿಳಿಸಿದ್ದಾರೆ.

“ಭಾರತೀಯ ರಾಜಕೀಯದೊಂದಿಗೆ ಫೇಸ್‌ಬುಕ್ ದ್ವೇಷ-ಭಾಷಣ ನಿಯಮಗಳಲ್ಲಿ ಘರ್ಷಣೆ – ವಿವಾದಾತ್ಮಕ ರಾಜಕಾರಣಿಯನ್ನು ನಿಷೇಧಿಸುವ ಕ್ರಮವನ್ನು ಕಂಪನಿಯ ಕಾರ್ಯನಿರ್ವಾಹಕ ವಿರೋಧಿಸಿದ್ದಾರೆ” ಎಂಬ ಶೀರ್ಷಿಕೆಯಲ್ಲಿ ಅಮೆರಿಕಾ ಮೂಲದ ವಾಲ್ ಸ್ಟ್ರೀಟ್ ಜರ್ನಲ್ ವಿಶೇಷ ವರದಿ ಮಾಡಿತ್ತು. ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರ ದ್ವೇಷದ ಮಾತು ಮತ್ತು ಆಕ್ಷೇಪಾರ್ಹ ವಿಷಯಗಳನ್ನು ನಿರ್ಬಂಧಿಸಲು ಫೇಸ್‌ ಹೆದರುತ್ತಿದೆ ಎಂದು ವರದಿಯಲ್ಲಿ ಉದಾಹರಣೆಯೊಂದಿಗೆ ವಿವರಿಸಲಾಗಿತ್ತು.

ಬಿಜೆಪಿ ಕಾರ್ಯಕರ್ತರ ಉಲ್ಲಂಘನೆಗಳಿಗೆ ಶಿಕ್ಷೆ ನೀಡುವುದು ಭಾತದಲ್ಲಿ ಕಂಪನಿಯ ವ್ಯವಹಾರದ ಭವಿಷ್ಯವನ್ನು ಹಾನಿಗೊಳಿಸುತ್ತದೆ ಎಂದು ಫೇಸ್‌ಬುಕ್ ಕಾರ್ಯನಿರ್ವಾಹಕರೊಬ್ಬರು ಹೇಳಿದ್ದಾರೆ ಎಂದು ಜರ್ನಲ್ ತನ್ನ ವರದಿಯಲ್ಲಿ ಹೇಳಿದೆ. ಪ್ರಸ್ತುತ ಮತ್ತು ಮಾಜಿ ಉದ್ಯೋಗಿಗಳನ್ನು ಉಲ್ಲೇಖಿಸಿರುವ ವರದಿಯು, ಫೇಸ್‌ಬುಕ್ ಬಿಜೆಪಿಯ ಕಡೆಗೆ ವಿಶಾಲವಾದ ಒಲವು ಹೊಂದಿದೆ ಎಂದು ಹೇಳಿದೆ.

ಜರ್ನಲ್‌ ಈ ವರದಿ ಪ್ರಕಟಿಸಿದ ನಂತರ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಾಗ್ದಾಳಿಗಳು ನಡೆದಿವೆ. ಈ ವರದಿಯು ಬಿಜೆಪಿ ಸಾಮಾಜಿಕ ಮಾಧ್ಯಮ ಕುಶಲತೆಗೆ ಸಾಕ್ಷಿಯಾಗಿದೆ ಎಂದು ಕಾಂಗ್ರೆಸ್ ಉಲ್ಲೇಖಿಸಿದೆ. ವರದಿಯನ್ನು ಉಲ್ಲೇಖಿಸಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬಿಜೆಪಿ ಮತ್ತು ಆರ್‌ಎಸ್‌ಎಸ್ ಮತದಾರರ ಮೇಲೆ ಪ್ರಭಾವ ಬೀರಲು ಫೇಸ್‌ಬುಕ್ ಮತ್ತು ವಾಟ್ಸಾಪ್ ಬಳಸಿ ನಕಲಿ ಸುದ್ದಿ ಹರಡಿದ್ದಾರೆ ಎಂದು ಆರೋಪಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಕೇಂಬ್ರಿಡ್ಜ್ ಅನಾಲಿಟಿಕಾ ವಿಷಯದ ಬಗ್ಗೆ ಕಾಂಗ್ರೆಸ್ ಅನ್ನು ನೆನಪಿಸಿದ್ದರು.

ಮಾಹಿತಿ ತಂತ್ರಜ್ಞಾನದ ಸಂಸದೀಯ ಸ್ಥಾಯಿ ಸಮಿತಿಯ ಮುಖ್ಯಸ್ಥರಾಗಿರುವ ಕಾಂಗ್ರೆಸ್ ಸಂಸದ ಶಶಿ ತರೂರ್, ಈ ವರದಿಯ ಬಗ್ಗೆ ಸಮಿತಿ ಫೇಸ್‌ಬುಕ್‌ನಿಂದ ವರದಿ ಬಯಸಿದೆ ಎಂದು ಹೇಳಿದರು.

ಮಾರ್ಚ್ 2018 ರಲ್ಲಿ ಅಂದರೆ ಭಾರತದಲ್ಲಿ ಸಾರ್ವತ್ರಿಕ ಚುನಾವಣೆಗೂ ಒಂದು ವರ್ಷದ ಮೊದಲು, ಯುಕೆ ಮೂಲದ ಸಂಸ್ಥೆ ಕೇಂಬ್ರಿಡ್ಜ್ ಅನಾಲಿಟಿಕಾ, 2016 ರ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಆಯ್ಕೆಗೆ ಸಹಾಯ ಮಾಡಲು ಫೇಸ್‌ಬುಕ್ ಲಕ್ಷಾಂತರ ಬಳಕೆದಾರರ ಡೇಟಾವನ್ನು ಕದ್ದಿದೆ ಎಂದು ಆರೋಪಿಸಿತ್ತು. ಇದರ ನಂತರ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಭಾರತದಲ್ಲಿ ಚುನಾವಣೆಗಳಿಗೆ ಸಂಪರ್ಕವಿದೆ ಎಂದು ಆರೋಪ ಪ್ರತ್ಯಾರೋಪಗಳನ್ನು ಮಾಡಿದ್ದವು.

2010ರ ಬಿಹಾರ ಚುನಾವಣೆಯ ಸಂದರ್ಭದಲ್ಲಿ ಕಂಪನಿಯು ತನ್ನ ಸೇವೆಗಳನ್ನು ಭಾರತದ ರಾಜಕೀಯ ಪಕ್ಷವೊಂದಕ್ಕೆ ಒದಗಿಸಿದೆ ಎಂದು ಕೇಂಬ್ರಿಡ್ಜ್ ಅನಾಲಿಟಿಕಾ ವೆಬ್‌ಸೈಟ್ ತಿಳಿಸಿತ್ತು. ಕೇಂಬ್ರಿಡ್ಜ್ ಅನಾಲಿಟಿಕಾದ ಭಾರತೀಯ ಅಂಗಸಂಸ್ಥೆ, ಒವ್ಲೆನೊ ಬ್ಯುಸಿನೆಸ್ ಇಂಟೆಲಿಜೆನ್ಸ್ (ಒಬಿಐ), ಬಿಜೆಪಿ, ಕಾಂಗ್ರೆಸ್ ಮತ್ತು ನಿತೀಶ್ ಕುಮಾರ್ ಅವರ ಜನತಾದಳ (ಯುನೈಟೆಡ್) ಅನ್ನು ಗ್ರಾಹಕರಾಗಿ ಉಲ್ಲೇಖಿಸಿದೆ. ಆದರೆ ಕಾಂಗ್ರೆಸ್ ಆರೋಪಗಳನ್ನು ತಿರಸ್ಕರಿಸಿತ್ತು.


ಓದಿ: ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಫೇಸ್‌ಬುಕ್‌ ಅನ್ನು ನಿಯಂತ್ರಿಸುತ್ತಿದ್ದಾರೆ: ರಾಹುಲ್ ಗಾಂಧಿ


 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...