Homeಕರ್ನಾಟಕಬಿಜೆಪಿಯ ನಾಯಕರು ಒಬ್ಬೊಬ್ಬರಾಗಿ ದೇಶದ ಮುಂದೆ ಬೆತ್ತಲಾಗುತ್ತಿದ್ದಾರೆ: ಸಿದ್ದರಾಮಯ್ಯ

ಬಿಜೆಪಿಯ ನಾಯಕರು ಒಬ್ಬೊಬ್ಬರಾಗಿ ದೇಶದ ಮುಂದೆ ಬೆತ್ತಲಾಗುತ್ತಿದ್ದಾರೆ: ಸಿದ್ದರಾಮಯ್ಯ

- Advertisement -
- Advertisement -

ಸಚಿವ ರಮೇಶ್ ಜಾರಕಿಹೊಳಿಯ ಲೈಂಗಿಕ ಪ್ರಕರಣದ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ‘ಬಿಜೆಪಿಯ ನೈತಿಕ ಭ್ರಷ್ಟ ನಾಯಕರು ಒಬ್ಬೊಬ್ಬರಾಗಿ ದೇಶದ ಮುಂದೆ ಬೆತ್ತಲಾಗುತ್ತಿದ್ದಾರೆ’ ಎಂದು ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ‘‘ಅನೈತಿಕ ಚಟುವಟಿಕೆಯಲ್ಲಿ ತೊಡಗಿ ತನ್ನ ಮತ್ತು ಪಕ್ಷದ ಮಾತ್ರವಲ್ಲ ಕರ್ನಾಟಕ ರಾಜ್ಯದ ಮಾನಹಾನಿ‌ ಮಾಡಿರುವ ಸಚಿವ ರಮೇಶ್ ಜಾರಕಿಹೊಳಿಯಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಕ್ಷಣ ರಾಜೀನಾಮೆ‌ ಪಡೆದು, ಎಫ್.ಐ.ಆರ್ ದಾಖಲಿಸಿ ನಿಷ್ಪಕ್ಷಪಾತ ತನಿಖೆ ನಡೆಸಬೇಕು” ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

‘‘ಅನೈತಿಕ ರಾಜಕೀಯದ ಶಿಶುವಾಗಿರುವ ರಾಜ್ಯದ ಬಿಜೆಪಿ ಸರ್ಕಾರ ರಮೇಶ್ ಜಾರಕಿಹೊಳಿಯ ಅನೈತಿಕ ಕೃತ್ಯವನ್ನು ಸಮರ್ಥಿಸುತ್ತಾ ತನ್ನ ಮಾನ ಮರ್ಯಾದೆಯನ್ನು ತಾನೇ ಹರಾಜು ಹಾಕಿಕೊಳ್ಳುತ್ತಿದೆ.
ಬಿಜೆಪಿಯ ನೈತಿಕ ಭ್ರಷ್ಟ ನಾಯಕರು ಒಬ್ಬೊಬ್ಬರಾಗಿ ದೇಶದ ಮುಂದೆ ಬೆತ್ತಲಾಗುತ್ತಿದ್ದಾರೆ’’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಪ್ರಕರಣ: ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ

ಈ ಮಧ್ಯೆ ತಮ್ಮ ಮೇಲೆರೆಗಿರುವ ಆರೋಪಕ್ಕೆ ನೈತಿಕ ಹೊಣೆ ಹೊತ್ತು ಸಚಿವ ರಮೇಶ್ ಜಾರಕಿಹೊಳಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುತ್ತಿದ್ದೇನೆ. ಪಕ್ಷಕ್ಕೆ ಮುಜುಗರ ಮಾಡಲು ಬಯಸುವುದಿಲ್ಲ. ತನಿಖೆ ಆದ ಬಳಿಕ ನಿರ್ದೋಷಿಯಾಗಿ ಬರುತ್ತೇನೆ. ನಂತರ ಮತ್ತೆ ಸಚಿವ ಆಗುತ್ತೇನೆ ಎಂದು ರಮೇಶ್‌ ಅವರು ಮುಖ್ಯಮಂತ್ರಿಗೆ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: 75% ಖಾಸಗಿ ಉದ್ಯೋಗಗಳು ಸ್ಥಳೀಯರಿಗೆ ಮೀಸಲು – ಹರಿಯಾಣ ಸರ್ಕಾರ ಅನುಮೋದನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ವಿವರಿಸಲು ಸಮಯಾವಕಾಶ ಕೋರಿ ಪ್ರಧಾನಿಗೆ ಖರ್ಗೆ ಪತ್ರ

0
ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪ್ರಣಾಳಿಕೆ 'ನ್ಯಾಯಪತ್ರ'ದ ಕುರಿತು ಪ್ರಧಾನಿ ಮೋದಿ ಸರಣಿ ಹೇಳಿಕೆಗಳನ್ನು ಕೊಡುತ್ತಿದ್ದು, ಈ ಹಿನ್ನೆಲೆ ಪ್ರಣಾಳಿಕೆಯ ಕುರಿತು ವಿವರಿಸಲು ಸಮಯ ಕೋರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ. ಖರ್ಗೆ...