Homeಕರ್ನಾಟಕBJP ನಾಯಕರು ಕನ್ನಡ ಧಿಕ್ಕರಿಸಿ ಹಿಂದಿಯನ್ನು ಮೆರೆಸುತ್ತಿರುವುದು ‘ಸಾಂಸ್ಕೃತಿಕ ಭಯೋತ್ಪಾದನೆ’: ಸಿದ್ದರಾಮಯ್ಯ ಆಕ್ರೋಶ

BJP ನಾಯಕರು ಕನ್ನಡ ಧಿಕ್ಕರಿಸಿ ಹಿಂದಿಯನ್ನು ಮೆರೆಸುತ್ತಿರುವುದು ‘ಸಾಂಸ್ಕೃತಿಕ ಭಯೋತ್ಪಾದನೆ’: ಸಿದ್ದರಾಮಯ್ಯ ಆಕ್ರೋಶ

ಕನ್ನಡ‌ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾಗಿ ನಾನು ರಾಜಕೀಯ ಜೀವನ ಪ್ರಾರಂಭಿಸಿದ್ದು, ನಾನು ಇಂದು,‌ ಮುಂದು, ಎಂದೆಂದೂ ಒಬ್ಬ ಕನ್ನಡದ ಕಾವಲುಗಾರ ಎಂದು ಅವರು ಘೋಷಿಸಿದ್ದಾರೆ

- Advertisement -
- Advertisement -

ಒಮ್ಮಿಂದೊಮ್ಮೆಲೇ ಬಿಜೆಪಿಯ ರಾಷ್ಟ್ರ-ರಾಜ್ಯ ನಾಯಕರೆಲ್ಲರೂ ಗುಂಪು ಕಟ್ಟಿಕೊಂಡು ಕನ್ನಡವನ್ನು ಧಿಕ್ಕರಿಸಿ ಹಿಂದಿ ಭಾಷೆಯನ್ನು ತಲೆಮೇಲೆ ಹೊತ್ತು ಮೆರವಣಿಗೆ ಮಾಡಲು ಹೊರಟಿರುವುದನ್ನು “ಸಾಂಸ್ಕೃತಿಕ ಭಯೋತ್ಪಾದನೆ” ಎನ್ನದೆ ಬೇರೇನು ಹೇಳಲು ಸಾಧ್ಯ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸರಣೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, “ಧರ್ಮ ರಾಜಕಾರಣದ ಹಸು ಬರಡಾಗುತ್ತಿರುವುದನ್ನು ಕಂಡ ಬಿಜೆಪಿ ನಾಯಕರು, ಈಗ ಭಾಷಾ ರಾಜಕಾರಣದ ಹಸುವಿನ ಕೆಚ್ಚಲಿಗೆ ಕೈ ಹಾಕಿದ್ದಾರೆ. ಈ ಸ್ವಾರ್ಥ ರಾಜಕಾರಣಕ್ಕೆ ಸ್ವಾಭಿಮಾನಿ ಕನ್ನಡಿಗರು ತಕ್ಕ ಉತ್ತರ ನೀಡಲಿದ್ದಾರೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಭಾಷೆ, ಪ್ರದೇಶಗಳ ನಮ್ಮ ನೀತಿ-ನಿಲುವು ‘ಜಯಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ…’ ಎನ್ನುವ ಕುವೆಂಪು ಅವರ ಕವಿ ನುಡಿಯಿಂದ ಪ್ರೇರಿತವಾದುದು. ಕನ್ನಡ ಭಾಷೆ ನಮಗೆ ರಾಜಕಾರಣದ ಆಯುಧ ಅಲ್ಲ, ಇದು ನಮ್ಮ ಜೀವದ ಉಸಿರು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಹಿಂದಿ ರಾಷ್ಟ್ರೀಯ ಭಾಷೆ ಎಂದ ಅಜಯ್‌ ದೇವಗನ್‌ಗೆ ಕನ್ನಡ ಕಲಾವಿದರ ಖಡಕ್‌ ಪ್ರತಿಕ್ರಿಯೆ

“ಇಂಗ್ಲೀಷ್, ಹಿಂದಿ ಎಲ್ಲ ಭಾಷೆಗಳ ಬಗ್ಗೆ ನಮಗೆ ಗೌರವ ಇದೆ, ಇವೆಲ್ಲವೂ ಬೇಕು. ಈ ಭಾಷೆಗಳ ಮೂಲಕ ಹರಿದು ಬರುವ ಜ್ಞಾನದ ಅಮೃತವೂ ಬೇಕು. ಆದರೆ ಕನ್ನಡಕ್ಕೆ ಮೊದಲ ಆದ್ಯತೆ, ಮಾತೃಭಾಷೆಗೆ ಮೊದಲ ಪೂಜೆ. ನಮ್ಮದು ಒಕ್ಕೂಟ ವ್ಯವಸ್ಥೆಯ ದೇಶ. ರಾಜ್ಯಗಳು ಭಾಷೆಯ ಆಧಾರದಲ್ಲಿ ರಚನೆಯಾಗಿವೆ. ಭಾಷಾವಾರು ಪ್ರಾಂತದಲ್ಲಿ ಪ್ರಾದೇಶಿಕ ಭಾಷೆಯನ್ನು ಮನ್ನಿಸಬೇಕಾಗುತ್ತದೆ. ಕನ್ನಡ ನಮಗೆ‌ ಮಾತೃಭಾಷೆಯೂ ಹೌದು,‌ ಪರಿಸರದ ಭಾಷೆ ಕೂಡಾ” ಎಂದು ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ.

“ಹಿಂದಿ ನಮ್ಮ ರಾಷ್ಟ್ರಭಾಷೆ ಅಲ್ಲ. ಪ್ರತಿಯೊಂದು ರಾಜ್ಯಭಾಷೆಯೂ ನಮ್ಮ ರಾಷ್ಟ್ರಭಾಷೆ, ನೆಲದ ಸಾರ್ವಭೌಮ ಭಾಷೆ. ಇದನ್ನೂ ಸಂವಿಧಾನವೂ ಅಂಗೀಕರಿಸಿದೆ. ಸಂವಿಧಾನವನ್ನೇ ವಿರೋಧಿಸುವ ದೇಶದ್ರೋಹಿಗಳಿಗೆ ಈ ಸಾಮಾನ್ಯ ಜ್ಞಾನದ ಅರಿವಿರಲಿ. ಮಾತೃಭಾಷೆ ಎನ್ನುವುದು ಕೇವಲ ವರ್ಣಮಾಲೆ ಅಲ್ಲ, ಮಾತೃಭಾಷೆ ಎಂದರೆ ನಮ್ಮ ಭಾವನೆ, ಸಂಬಂಧ, ತನ್ನತನದ ಪ್ರಜ್ಞೆ, ಸಂಸ್ಕೃತಿ, ಇತಿಹಾಸ, ನೆಲ, ಜಲ, ಸಂಪತ್ತು ಎಲ್ಲವನ್ನೂ ಒಳಗೊಂಡ ಅಸ್ಮಿತೆ. ಇದು ಕನ್ನಡವನ್ನು ತುಳಿದು ಹಿಂದಿ ಹೇರಲು ಹೊರಟಿರುವ ಮೂರ್ಖರಿಗೆ ತಿಳಿದಿರಲಿ” ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಹಿಂದಿ ಭಾಷೆಯ ವಕಾಲತು ಮಾಡಲು ಹೊರಟಿರುವ ಸಿ.ಟಿ.ರವಿ, ಮುರುಗೇಶ್ ನಿರಾಣಿ, ರಮೇಶ್ ಜಿಗಜಿಣಗಿ ಮೊದಲಾದವರಿಗೆ ಆ ಭಾಷೆಯ ಬಗ್ಗೆಯೂ ಪ್ರೀತಿ ಇಲ್ಲ. ಇವರೆಲ್ಲ ತಮ್ಮ ದೆಹಲಿ ದೊರೆಗಳನ್ನು ಓಲೈಸಲು ಹೊರಟಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹಿಂದಿ ಪರ ವಕಾಲತು ಮಾಡಿದ ಕೂಡಲೇ ರಾಜ್ಯದ ಬಿಜೆಪಿ ನಾಯಕರು ಅವರನ್ನು ಓಲೈಸಲು ಸಾಲಲ್ಲಿ ನಿಂತಿದ್ದಾರೆ. ಬಿಜೆಪಿ ನಾಯಕರೇ, ಅಮಿತ್ ಶಾ ಅವರ ಗುಲಾಮರಾಗಬೇಡಿ, ಕನ್ನಡ ತಾಯಿಯ‌ ಸ್ವಾಭಿಮಾನಿ ಮಕ್ಕಳಾಗಿ” ಎಂದು ಕರೆ ನೀಡಿದ್ದಾರೆ.

ಇದನ್ನೂ ಓದಿ: ಮಂಗಳೂರು: ಮಳಲಿಪೇಟೆಯ ಪ್ರಾಚೀನ ಮಸೀದಿಯನ್ನು ದೇವಸ್ಥಾನ ಎಂದು ಸುಳ್ಳು ಹಬ್ಬಿಸಿದ ಕನ್ನಡ ಮಾಧ್ಯಮಗಳು

“ಕನ್ನಡ‌ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾಗಿ ನಾನು ರಾಜಕೀಯ ಜೀವನ ಪ್ರಾರಂಭಿಸಿದವನು. ನಾನು ಇಂದು,‌ ಮುಂದು, ಎಂದೆಂದೂ ಒಬ್ಬ ಕನ್ನಡದ ಕಾವಲುಗಾರ. ಕಳ್ಳರ ಜೊತೆ ಷಾಮೀಲಾಗುವ ಡೋಂಗಿ ಚೌಕಿದಾರ ಅಲ್ಲ. ಕಾಂಗ್ರೆಸ್ ಬಹು ಧರ್ಮ, ಬಹುಭಾಷೆ, ಬಹು ಸಂಸ್ಕೃತಿಗಳನ್ನೊಳಗೊಂಡ ಬಹುತ್ವವನ್ನು ಒಪ್ಪಿಕೊಂಡ,‌‌ ಅಪ್ಪಿಕೊಂಡ ಪಕ್ಷ. ಒಂದು ಧರ್ಮ,‌ ಒಂದು ಭಾಷೆ, ಒಂದು ಸಂಸ್ಕೃತಿಯನ್ನು ಹೇರುವುದು ಜನವಿರೋಧಿ‌ ಮಾತ್ರವಲ್ಲ ಸಂವಿಧಾನ ವಿರೋಧಿ ಕೂಡಾ ಆಗಿದೆ” ಎಂದು ಅವರು ಹೇಳಿದ್ದಾರೆ.

“ಕನ್ನಡವನ್ನು ತುಳಿದು ಹಿಂದಿ ಹೇರಲು ಹೊರಟಿರುವ ಬಿಜೆಪಿ ನಾಯಕರ ಕುತಂತ್ರದ ರಾಜಕಾರಣವನ್ನು ಸ್ವಾಭಿಮಾನಿ ಕನ್ನಡಿಗರೆಲ್ಲರೂ ಒಕ್ಕೊರಲಿನಿಂದ ವಿರೋಧಿಸಬೇಕಾಗಿದೆ.‌ ನಮ್ಮೆದುರಿಗೆ ಗೋಕಾಕ್ ಹೋರಾಟದ ಮಾದರಿ ಇದೆ. ನಮ್ಮ ಚಂದನವನದ ಕನ್ನಡ ಚಿತ್ರಗಳು, ಬಾಲಿವುಡ್ ಚಿತ್ರಗಳಿಗೆ ಸೆಡ್ಡು ಹೊಡೆದು ರಾಷ್ಟ್ರಮಟ್ಟದಲ್ಲಿ‌ ಯಶಸ್ಸು ಕಾಣುವುದನ್ನು‌ ಸಹಿಸದ ಹಿಂದಿ ಚಿತ್ರನಟರು ಕನ್ನಡದ ವಿರುದ್ಧ ನಂಜು ಕಾರುತ್ತಿದ್ದಾರೆ. ಕನ್ನಡ ಚಿತ್ರರಂಗ ಇದಕ್ಕೆ ಒಕ್ಕೊರಲಿನ ಉತ್ತರ ನೀಡಬೇಕಾಗಿದೆ” ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕನ್ನಡದ ಬಗ್ಗೆ ನಮ್ಮ ಸಿದ್ದರಾಮಯ್ಯ ಧೈರ್ಯದಿಂದ ಮಾತನಾಡಿದ್ದಾರೆ. ಧನ್ಯವಾದಗಳು.

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...