Homeಮುಖಪುಟರೈತ ಪರ ದನಿ ಎತ್ತಿದ ಬಿಜೆಪಿ ನಾಯಕರಿಗೆ ರಾಷ್ಟ್ರೀಯ ಕಾರ್ಯಕಾರಿಣಿಯಿಂದ ಗೇಟ್‌ಪಾಸ್

ರೈತ ಪರ ದನಿ ಎತ್ತಿದ ಬಿಜೆಪಿ ನಾಯಕರಿಗೆ ರಾಷ್ಟ್ರೀಯ ಕಾರ್ಯಕಾರಿಣಿಯಿಂದ ಗೇಟ್‌ಪಾಸ್

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ದನಿ ಎತ್ತಿದ್ದ ಬಿಜೆಪಿ ನಾಯಕರನ್ನು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಪಟ್ಟಿಯಿಂದ ಕೈಬಿಡಲಾಗಿದೆ. ಬಿಜೆಪಿ ಸಂಸದರಾದ ವರುಣ್ ಗಾಂಧಿ, ಸುಬ್ರಮಣಿಯನ್ ಸ್ವಾಮಿ, ಮೇನಕಾ ಗಾಂಧಿ ಮತ್ತು ಮಾಜಿ ಕೇಂದ್ರ ಸಚಿವ ಚೌಧರಿ ಬೀರೇಂದ್ರ ಸಿಂಗ್ ಅವರನ್ನು ಹೊರಗಿಡಲಾಗಿದೆ.

ಬಿಜೆಪಿ ಗುರುವಾರ 80 ಸದಸ್ಯರೊಂದಿಗೆ ಹೊಸ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು ರಚಿಸಿದೆ. ಪಕ್ಷದ ಪ್ರಮುಖ ನಾಯಕರಾದ ಪಕ್ಷದ ಸಂಸದ ವರುಣ್ ಗಾಂಧಿ, ಸುಬ್ರಮಣಿಯನ್ ಸ್ವಾಮಿ ಮತ್ತು ಮಾಜಿ ಕೇಂದ್ರ ಸಚಿವ ಚೌಧರಿ ಬೀರೇಂದ್ರ ಸಿಂಗ್ ಅವರನ್ನೂ ಪಟ್ಟಿಯಿಂದ ಹೊರಗಿಟ್ಟಿದೆ. ಇವರು ಒಕ್ಕೂಟ ಸರ್ಕಾರದ ವಿವಾದಾತ್ಮಕ ಕೃಷಿ ಕಾನೂನುಗಳನ್ನು ಟೀಕಿಸಿದ್ದಾರೆ.

ಲಖಿಂಪುರ್‌ ಖೇರಿ ಹತ್ಯಾಕಾಂಡದಲ್ಲಿ ರೈತರ ಪರವಾಗಿ ಟ್ವೀಟ್ ಮಾಡುತ್ತಿರುವ ಬಿಜೆಪಿ ನಾಯಕ ವರುಣ್ ಗಾಂಧಿ ಮತ್ತು ಅವರ ತಾಯಿ ಮೇನಕಾ ಗಾಂಧಿ ಅವರನ್ನು ಇಂದು ಬಿಡುಗಡೆಯಾದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಪಟ್ಟಿಯಿಂದ ಕೈಬಿಡಲಾಗಿದೆ.

ಇದನ್ನೂ ಓದಿ: ಆರ್ಥಿಕತೆ ಸರಿಪಡಿಸಲು 12 ಪತ್ರ ಬರೆದೆ, ಕ್ರಮ ಕೈಗೊಳ್ಳದ ಮೋದಿ ಸರ್ಕಾರ: ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಟೀಕೆ

ರಾಜ್ಯಸಭೆಯ ಸಂಸದ ಸುಬ್ರಮಣಿಯನ್ ಸ್ವಾಮಿಯನ್ನೂ ಹೊಸ ಕಾರ್ಯಕಾರಿಣಿಯಿಂದ ಕೈಬಿಡಲಾಗಿದೆ. ಹೊಸದಾಗಿ ನೇಮಕಗೊಂಡ ಕೇಂದ್ರ ಸಚಿವರಾದ ಅಶ್ವಿನಿ ವೈಶೋ ಮತ್ತು ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಹೊಸ ತಂಡದಲ್ಲಿ ಸೇರಿಸಿಕೊಳ್ಳಲಾಗಿದೆ.

80 ಸಾಮಾನ್ಯ ಸದಸ್ಯರಲ್ಲದೆ, 50 ವಿಶೇಷ ಆಹ್ವಾನಿತರು ಮತ್ತು 179 ಖಾಯಂ ಆಹ್ವಾನಿತರು ಸಮಿತಿಯಲ್ಲಿ ಇರುತ್ತಾರೆ. 80 ಸದಸ್ಯರಲ್ಲಿ 37 ಮಂದಿ ಕೇಂದ್ರ ಸಚಿವರು ಮತ್ತು ರಾಜ್ಯದ ಹಲವಾರು ಸಚಿವರು ಸಮಿತಿಯ ಭಾಗವಾಗಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಅಮಿತ್ ಶಾ ಅವರನ್ನು ಒಳಗೊಂಡಂತೆ, ಪಕ್ಷದ ಹಿರಿಯರಾದ ಎಲ್.ಕೆ. ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಸಮಿತಿಯ ಸದಸ್ಯರಾಗಿದ್ದಾರೆ.

ಲಖಿಂಪುರ್‌ ಖೇರಿ ಹತ್ಯಾಕಾಂಡದ ಬಳಿಕ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ವರುಣ್ ಗಾಂಧಿ ಗುರುವಾರ ಘಟನೆಯ ಸ್ಪಷ್ಟ ಮತ್ತು ದೀರ್ಘ ವಿಡಿಯೊವನ್ನು ಟ್ವೀಟ್ ಮಾಡಿ, “ವೀಡಿಯೊ ಅತ್ಯಂತ ಸ್ಪಷ್ಟವಾಗಿದೆ. ಪ್ರತಿಭಟನಾಕಾರರನ್ನು ಕೊಲೆ ಮಾಡುವ ಮೂಲಕ ಮೌನಗೊಳಿಸಲು ಸಾಧ್ಯವಿಲ್ಲ. ಅಂದು ಚೆಲ್ಲಿದ ರೈತರ ಮುಗ್ಧ ರಕ್ತಕ್ಕೆ ಹೊಣೆಗಾರಿಕೆ ವಹಿಸಬೇಕು. ಪ್ರತಿಯೊಬ್ಬ ರೈತನ ಮನಸ್ಸಿನಲ್ಲಿ ಹಠ ಮತ್ತು ಕ್ರೌರ್ಯದ ಸಂದೇಶ ಪ್ರವೇಶಿಸುವ ಮೊದಲು ನ್ಯಾಯ ಒದಗಿಸಬೇಕು” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಜೈಲಿನಲ್ಲಿ ಇರಬೇಕಾದವರು ಕಾರ್ಯಕ್ರಮ ಉದ್ಘಾಟಿಸುತ್ತಿದ್ದಾರೆ: ಯೋಗೇಂದ್ರ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...