Homeಮುಖಪುಟನಮ್ಮ ತಾಂಡಕ್ಕೆ ಬಿಜೆಪಿ ಮುಖಂಡರಿಗೆ ಪ್ರವೇಶವಿಲ್ಲ: ಬಾಗಲಕೋಟೆಯಲ್ಲಿ ಫಲಕಗಳ ಅಳವಡಿಕೆ

ನಮ್ಮ ತಾಂಡಕ್ಕೆ ಬಿಜೆಪಿ ಮುಖಂಡರಿಗೆ ಪ್ರವೇಶವಿಲ್ಲ: ಬಾಗಲಕೋಟೆಯಲ್ಲಿ ಫಲಕಗಳ ಅಳವಡಿಕೆ

- Advertisement -
- Advertisement -

ನಮ್ಮ ತಾಂಡಕ್ಕೆ ಬಿಜೆಪಿ ರಾಜಕೀಯ ಮುಖಂಡರ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂಬ  ಫಲಕಗಳ ಅಳವಡಿಕೆಗೆ ಬಾಗಲಕೋಟೆ ಜಿಲ್ಲೆಯ ಹಲವು ತಾಂಡಗಳು ನಿರ್ಧಿರಿಸಿವೆ.

2023ರ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಕೇಂದ್ರಕ್ಕೆ ಶಿಫಾರಸ್ಸು ಮಾಡಿರುವ ಒಳಮೀಸಲಾತಿ ಹಿಂಪಡೆಯಲು ಆಗ್ರಹಿಸಿ ಈ ನಿರ್ಣಯ ಕೈಗೊಳ್ಳಲಾಗಿದೆ. ಇದೇ ಫಲಕದಲ್ಲಿ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ ಎಂದು ಸಹ ಬರೆಯಲಾಗಿದೆ.

ಬಾಗಲಕೋಟೆ ಜಿಲ್ಲೆ ಮತ್ತು ತಾಲ್ಲೂಕಿನ ಮಚಖಂಡಿ ತಾಂಡದಲ್ಲಿ ಪ್ರತಿಭಟನೆ ನಡೆಸಿದ್ದು, ಈ ಫಲಕದ ಬ್ಯಾನರ್ ಸಿದ್ದಪಡಿಸಲಾಗಿದೆ. ಶೀಘ್ರದಲ್ಲಿಯೇ ಸುತ್ತಮುತ್ತಲ ತಾಂಡಗಳಲ್ಲಿಯೂ ಇದೇ ರೀತಿಯ ಫಲಕಗಳನ್ನು ಹಾಕಲು ಗ್ರಾಮಸ್ಥರು ನಿರ್ಧರಿಸಿದ್ದಾರೆ.

ಈ ಕುರಿತು ಸಭೆ ನಡೆಸಿದ್ದು, ಮಾರ್ಚ್ 29 ರಿಂದ ಫಲಕಗಳನ್ನು ಎಲ್ಲಾ ತಾಂಡಗಳಲ್ಲಿಯೂ ಅಳವಡಿಸಲಾಗುವುದು ಎಂದು ಲಂಬಾಣಿ ಸಮಾಜದ ಮುಖಂಡರಾದ ರಾಜುರವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಪರಿಶಿಷ್ಟ ಸಮುದಾಯಗಳಲ್ಲಿ ಒಳ ಮೀಸಲಾತಿ ನೀಡಿಕೆಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಸದಾಶಿವ ವರದಿಯನ್ನು ರಾಜ್ಯ ಸರ್ಕಾರವು ಕೇಂದ್ರಕ್ಕೆ ಶಿಫಾರಸು ಮಾಡುವ ನಿರ್ಧಾರವನ್ನು ವಿರೋಧಿಸಿ ಶಿಕಾರಿಪುರದಲ್ಲಿ ಸೋಮವಾರ ಬಂಜಾರ ಸಮಾಜದವರು ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.

ಇನ್ನೊಂದೆಡೆ ಸೋಮವಾರ ಒಳ ಮೀಸಲಾತಿ ವಿರೋಧಿಸಿ, ಪ್ರತಿಭಟನಾಕಾರರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಅವರನ್ನು ತಡೆದಿದ್ದಾರೆ. ಆದರೆ ಕೆಲವು ಕಿಡಿಗೇಡಿಗಳು ಯಡಿಯೂರಪ್ಪನವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಕಲ್ಲು ತೂರಾಟದಿಂದ ಮನೆಯ ಕಿಟಕಿ ಗಾಜಿಗೆ ಹಾನಿಯಾಗಿದೆ. ತಡಯಲು ಬಂದ ಪೊಲೀಸರ ಮೇಲೂ ಕಲ್ಲು ತೂರಾಟ ಮಾಡಲಾಗಿದೆ. ಯಡಿಯೂರಪ್ಪ ನಿವಾಸದ ಮುಂದೆ ಹಾಕಲಾಗಿದ್ದ ಬ್ಯಾನರ್​ಗಳನ್ನು ಸಹ ಹರಿದು ಹಾಕಲಾಗಿದೆ. ನಿವಾಸದ ಮೇಲೆ ಚಪ್ಪಲಿ ಎಸೆದು ಆಕ್ರೋಶ ಹೊರಹಾಕಿದ್ದಾರೆ.

ಒಳಮೀಸಲಾತಿಯನ್ನು ಜಾರಿಗೊಳಿಸುವುದಾಗಿ ರಾಜ್ಯ ಸಚಿವ ಸಂಪುಟ ತೀರ್ಮಾನ ಕೈಗೊಂಡಿದ್ದು, ಕೇಂದ್ರ ಶಿಫಾರಸ್ಸು ಮಾಡಿದೆ. ಮಾದಿಗ ಸಂಬಂಧಿತ ಜಾತಿಗಳಿಗೆ ಶೇ. 6, ಹೊಲೆಯ ಸಂಬಂಧಿತ ಜಾತಿಗಳಿಗೆ ಶೇ.5.5, ಲಂಬಾಣಿ, ಭೋವಿ, ಕೊರಚ, ಕೊರಮ ಸಮುದಾಯಗಳಿಗೆ ಶೇ. 4.5, ಇತರೆ ಅಲೆಮಾರಿ ಸಮುದಾಯಗಳಿಗೆ ಶೇ. 1 ಮೀಸಲಾತಿಯನ್ನು ಹಂಚಿಕೆ ಮಾಡುವ ನಿರ್ಣಯವನ್ನು ಸರ್ಕಾರ ಕೈಗೊಂಡಿದೆ.

ಇದನ್ನೂ ಓದಿ: ಒಳಮೀಸಲಾತಿ: ಮಾದಿಗ ಸಮುದಾಯಕ್ಕೆ ಮತ್ತೆ ಮೋಸ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...