Homeಫ್ಯಾಕ್ಟ್‌ಚೆಕ್ಚೀನಾ ವಿಮಾನ ನಿಲ್ದಾಣದ ಚಿತ್ರ ಹಾಕಿ ಯುಪಿಯದ್ದು ಎಂದ ಬಿಜೆಪಿ ನಾಯಕರು!

ಚೀನಾ ವಿಮಾನ ನಿಲ್ದಾಣದ ಚಿತ್ರ ಹಾಕಿ ಯುಪಿಯದ್ದು ಎಂದ ಬಿಜೆಪಿ ನಾಯಕರು!

ಭಾರತೀಯ ಅಧಿಕಾರಿಗಳು ತಮ್ಮ ‘ಮೂಲಸೌಕರ್ಯಗಳ ಸಾಧನೆಗಳ’ ಪುರಾವೆಯಾಗಿ ಚೀನಾದ ಚಿತ್ರವನ್ನು ಬಳಸಬೇಕಾಗಿದೆ ಎಂದು ಚೀನಿಗರು ವ್ಯಂಗ್ಯವಾಡಿದ್ದಾರೆ

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಸಜ್ಜಾಗುತ್ತಿದೆ. ಚುನಾವಣೆಯ ಪ್ರಚಾರಕ್ಕಾಗಿ ಬೇರೆ ರಾಜ್ಯಗಳು ಮತ್ತು ದೇಶಗಳ ಚಿತ್ರಗಳನ್ನು ಬಳಸಿದ್ದು ಹಲವು ಬಾರಿ ಮಾಧ್ಯಮಗಳಲ್ಲಿ ವರದಿಯಾಗಿದ್ದರೂ, ರಾಜ್ಯದ ಬಿಜೆಪಿ ನಾಯಕರು ಇನ್ನೂ ಈ ಚಾಳಿಯನ್ನು ಬಿಟ್ಟಿಲ್ಲ. ಇದೀಗ ಹೊಸದಾಗಿ ಚೀನಾ ದೇಶದ ವಿಮಾನ ನಿಲ್ದಾಣದ ಚಿತ್ರವನ್ನು ಬಳಸಿ, ಅಂತಾರಾಷ್ಟ್ರೀಯವಾಗಿ ದೇಶವನ್ನು ಮುಜುಗರಕ್ಕೆ ಒಳಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನವೆಂಬರ್ 25 ರ ಗುರುವಾರ ಉತ್ತರ ಪ್ರದೇಶದ ಜೇವರ್‌ನಲ್ಲಿ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ ಮಾಡಿದ್ದರು. ಹೊಸದಾಗಿ ನಿರ್ಮಾಣವಾಗುತ್ತಿರುವ ಈ ವಿಮಾನ ನಿಲ್ದಾಣಕ್ಕೆ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ನಾಮಕರಣ ಮಾಡಲಾಗಿದೆ. ಈ ವಿಮಾನ ನಿಲ್ದಾಣವು ಪೂರ್ಣಗೊಂಡ ನಂತರ ಈ ರೀತಿ ಕಾಣಿಸುತ್ತದೆ ಎಂದು ಹೇಳಿಕೊಂಡು ವಿಮಾನ ನಿಲ್ದಾಣದ ಫೋಟೋ ಮತ್ತು ಚಿತ್ರವನ್ನು ಹಲವಾರು ಬಿಜೆಪಿ ನಾಯಕರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪುನೀತ್‌ರವರ ‘ಬೊಂಬೆ ಹೇಳುತೈತೆ’ ಹಾಡನ್ನು ಪಾಕ್ ಅಭಿಮಾನಿ ಹಾಡಿದ್ದು 2018 ರಲ್ಲಿ!

ಆದರೆ ವಾಸ್ತವದಲ್ಲಿ ಅವರು ಹಂಚಿಕೊಂಡಿರುವ ವಿಮಾನ ನಿಲ್ದಾಣವು ಚೀನಾದ ಬೀಜಿಂಗ್ ಡಾಕ್ಸಿಂಗ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣವಾಗಿದೆ. ಇದರ ವಿನ್ಯಾಸವನ್ನು ಇರಾಕಿನ ವಾಸ್ತುಶಿಲ್ಪಿ ಜಹಾ ಹದಿದ್ ವಿನ್ಯಾಸಗೊಳಿಸಿದ್ದಾರೆ. ಈ ಮೆಗಾ ಯೋಜನೆಗೆ ಚೀನಾವು 17.47 ಶತಕೋಟಿ ಡಾಲರ್‌ ವೆಚ್ಚ ಮಾಡಿದೆ.

ಬಿಜೆಪಿಯ ಮಾಜಿ ಸಂಸದ ಕನ್ವರ್ ಸಿಂಗ್ ತನ್ವಾರ್ ಅವರು ಫೇಸ್‌ಬುಕ್‌ನಲ್ಲಿ ಈ ಫೋಟೋವನ್ನು ಹಂಚಿಕೊಂಡು, “ಪಶ್ಚಿಮ ಉತ್ತರ ಪ್ರದೇಶವು ಇಂದು ‘ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ’ದ ಶಂಕುಸ್ಥಾಪನೆಯೊಂದಿಗೆ ಅಭಿವೃದ್ಧಿಯ ಹೊಸ ಮಗ್ಗುಲಿಗೆ ಹೊರಳಿದೆ. ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಜೀ ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ ಮತ್ತು ಜನಸಾಮಾನ್ಯರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. #New_UP_Ki_Udaan” ಎಂದು ಬರೆದಿದ್ದರು.

ಆರ್ಕೈವ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿಮಾನ ನಿಲ್ದಾಣದ ಇದೇ ಫೋಟೋವನ್ನು ಹೊಂದಿರುವ 1:58 ನಿಮಿಷಗಳ ವೀಡಿಯೊವನ್ನು ಒಕ್ಕೂಟ ಸರ್ಕಾರದ ಸಚಿವ ಅನುರಾಗ್ ಠಾಕೂರ್ (ಆರ್ಕೈವ್), ಶಿಕ್ಷಣ ರಾಜ್ಯ ಸಚಿವೆ ಅನ್ನಪೂರ್ಣ ದೇವಿ (ಆರ್ಕೈವ್) ಸೇರಿದಂತೆ ಹಲವು ಬಿಜೆಪಿ ನಾಯಕರು ಹಂಚಿಕೊಳ್ಳುತ್ತಿದ್ದಾರೆ. ಒಕ್ಕೂಟ ಸರ್ಕಾದ ಸಚಿವ ಅರ್ಜುನ್ ರಾಮ್ ಮೇಘವಾಲ್ (ಆರ್ಕೈವ್) ಉತ್ತರ ಪ್ರದೇಶದ ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ (ಆರ್ಕೈವ್) ಕೂಡಾ ಇದನ್ನು ಹಂಚಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿನ ಹಲವು ಬಳಕೆದಾರರು ಒಂದೇ ರೀತಿಯ ಪ್ರತಿಪಾದನೆಯೊಂದಿಗೆ ಅದೇ ಫೋಟೋವನ್ನು ಹಂಚಿಕೊಂಡಿದ್ದಾರೆ. ಆರ್ಕೈವ್ ಮಾಡಿದ ಲಿಂಕ್‌ಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಜಿಮ್‌ನಲ್ಲಿ ಕುಸಿದು ಬೀಳುತ್ತಿರುವ ಈ ವಿಡಿಯೊ ‘ಪುನೀತ್‌ ರಾಜ್‌ಕುಮಾರ್‌’ ಅವರದಲ್ಲ

ಫ್ಯಾಕ್ಟ್‌ಚೆಕ್

ವಾಸ್ತವದಲ್ಲಿ ಈ ಚಿತ್ರವು 2015 ರಲ್ಲಿ ಲಂಡನ್ ಮೂಲದ ಆರ್ಕಿಟೆಕ್ಚರ್ ಮ್ಯಾಗಜೀನ್ ‘ಡಿ ಜೀನ್‌’ನಲ್ಲಿ ಪ್ರಕಟವಾಗಿತ್ತು. “ಜಹಾ ಹದಿದ್ ಬೀಜಿಂಗ್‌ನಲ್ಲಿ ‘ವಿಶ್ವದ ಅತಿದೊಡ್ಡ ವಿಮಾನ ನಿಲ್ದಾಣದ ಪ್ರಯಾಣಿಕರ ಟರ್ಮಿನಲ್’ ಗಾಗಿ ವಿನ್ಯಾಸಗಳನ್ನು ಅನಾವರಣಗೊಳಿಸಿದ್ದಾರೆ” ಎಂಬ ಶೀರ್ಷಿಕೆಯನ್ನು ಬರೆಯಲಾಗಿದೆ.

ಬೀಜಿಂಗ್ ನ್ಯೂ ಏರ್‌ಪೋರ್ಟ್ ಎಂದೂ ಕರೆಯಲ್ಪಡುವ ಬೀಜಿಂಗ್ ಡ್ಯಾಕ್ಸಿಂಗ್ ಇಂಟರ್‌ನ್ಯಾಶನಲ್ ಏರ್‌ಪೋರ್ಟ್ (PKX), ಮೇಲ್ಮೈ ವಿಸ್ತೀರ್ಣದಿಂದ ವಿಶ್ವದ ಅತಿದೊಡ್ಡ ವಿಮಾನ ನಿಲ್ದಾಣ ಎಂದು ಹೇಳಲಾಗುತ್ತದೆ. ನಿರ್ಮಾಣವು 2015 ರಲ್ಲಿ ಪ್ರಾರಂಭವಾಯಿತು ಮತ್ತು ಅದರ ಕಾರ್ಯಾಚರಣೆಗಳು ಸೆಪ್ಟೆಂಬರ್ 2019 ರಲ್ಲಿ ಪ್ರಾರಂಭವಾಯಿತು. ಈ ವಿಮಾನ ನಿಲ್ದಾಣದ ಚಿತ್ರವನ್ನು ಗೆಟ್ಟಿ ಕೂಡಾ ಕ್ಲಿಕ್ ಮಾಡಿದೆ.

ಇಷ್ಟೇ ಅಲ್ಲದೆ ಗೂಗಲ್ ಅರ್ಥ್‌ ಕೂಡಾ ಬೀಜಿಂಗ್ ಡಾಕ್ಸಿಂಗ್ ವಿಮಾನ ನಿಲ್ದಾಣದ ಚಿತ್ರಗಳನ್ನು ತೆಗೆದಿದೆ.

ನವೆಂಬರ್ 24 ರಂದು ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕೃತ ಟ್ವಿಟರ್ ಹ್ಯಾಂಡಲ್ ವಿಮಾನ ನಿಲ್ದಾಣದ ಚಿತ್ರಾತ್ಮಕ ವಿನ್ಯಾಸವನ್ನು ಹಂಚಿಕೊಂಡಿದೆ. ಆದರೆ ಇದು ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ನಾಯಕರು ಹಂಚಿಕೊಂಡ ಚಿತ್ರವನ್ನು ಹೋಲುತ್ತಿಲ್ಲ.

ಚೀನಾ ದೇಶದ ವಿಮಾನ ನಿಲ್ದಾಣವನ್ನು ಉತ್ತರ ಪ್ರದೇಶದ ವಿಮಾನ ನಿಲ್ದಾಣ ಎಂದು ಬಿಜೆಪಿ ನಾಯಕರು ಪ್ರಚಾರ ಮಾಡುತ್ತಿರುವುದ ಬಗ್ಗೆ ಚೀನಾದ ಸಾಗರೋತ್ತರ ವಿಶ್ಲೇಷಕ ಶೇನ್ ಶಿವೈ ಟ್ವಿಟರ್‌ನಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಅವರು, “ಭಾರತ ಸರ್ಕಾರದ ಸುಳ್ಳು ಸುದ್ದಿಯ ಪ್ರೊಪಗಾಂಡವನ್ನು ಬಹಿರಂಗಪಡಿಸಲಾಗಿದೆ. ಯಪ್ಪೋ….ಭಾರತದ ಸರ್ಕಾರದ ಅಧೀಕೃತರು ಚೀನಾ ಬೀಜಿಂಗ್ ಡಾಕ್ಸಿಂಗ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಛಾಯಾಚಿತ್ರಗಳನ್ನು ತಮ್ಮ ‘ಮೂಲಸೌಕರ್ಯಗಳ ಸಾಧನೆಗಳ’ ಪುರಾವೆಯಾಗಿ ಬಳಸಬೇಕಾಗಿದೆ ಎಂದು ತಿಳಿದು ಆಘಾತವಾಯಿತು. ಚೀನಾದ ಬೀಜಿಂಗ್ ಡಾಕ್ಸಿಂಗ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸುಸ್ವಾಗತ, 17.47 ಶತಕೋಟಿ ಡಾಲರ್‌ ವೆಚ್ಚದ ಮೆಗಾ ಯೋಜನೆ” ಎಂದು ವಿಮಾನ ನಿಲ್ದಾಣದ ಚಿತ್ರವನ್ನು ಮತ್ತು ಬಿಜೆಪಿಯ ನಾಯಕರ ಟ್ವೀಟ್‌ನ ಚಿತ್ರವನ್ನು ಪೋಸ್ಟ್‌ ಮಾಡಿದ್ದಾರೆ.

ನೋಯ್ಡಾ ವಿಮಾನ ನಿಲ್ದಾಣದ ಬಗ್ಗೆ ಈ ಹಿಂದೆ ಕೂಡಾ ಸುಳ್ಳು ಸುದ್ದಿ ಹರಡಲಾಗಿತ್ತು. ಆ ಸಮಯದಲ್ಲಿ ದಕ್ಷಿಣ ಕೊರಿಯಾದ ಇಂಚಿಯಾನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಫೋಟೋವನ್ನು ಜೆವಾರ್‌ನಲ್ಲಿರುವ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ತಪ್ಪಾಗಿ ಹಂಚಿಕೊಳ್ಳಗಿತ್ತು.

ಇದನ್ನೂ ಓದಿ: ಫ್ಯಾಕ್ಟ್‌ ಚೆಕ್‌: ಇಟಲಿಯಲ್ಲಿ ವಿಶ್ವನಾಯಕರನ್ನು ಭೇಟಿ ಮಾಡಲು ಮೋದಿ ಟ್ಯಾಕ್ಸಿಯಲ್ಲಿ ತೆರಳಿದ್ದರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...