Homeಕರ್ನಾಟಕರಾಜ್ಯಾಧ್ಯಕ್ಷರ ನೇಮಕದಿಂದ ಬಿಜೆಪಿಯ ನಾಯಕರಲ್ಲಿ ಅಸಮಧಾನ: ಸಿದ್ದರಾಮಯ್ಯ

ರಾಜ್ಯಾಧ್ಯಕ್ಷರ ನೇಮಕದಿಂದ ಬಿಜೆಪಿಯ ನಾಯಕರಲ್ಲಿ ಅಸಮಧಾನ: ಸಿದ್ದರಾಮಯ್ಯ

- Advertisement -
- Advertisement -

ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರ ಮಗ ವಿಜಯೇಂದ್ರರನ್ನು ಬಿಜೆಪಿಯ ರಾಜ್ಯಾಧ್ಯಕ್ಷರನ್ನಾಗಿ ಮಾಡಿರುವುದರಿಂದ ಅವರ ಪಕ್ಷದ ಅನೇಕ ನಾಯಕರು ಅಸಮಧಾನಗೊಂಡಿದ್ದಾರೆ. ಇನ್ನು ಸ್ಪಲ್ಪ ದಿನಗಳಲ್ಲಿ ಬಿಜೆಪಿಯ ಪರಿಸ್ಥಿತಿಯನ್ನು ಎಲ್ಲರೂ ನೋಡಬಹುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಅಶೋಕ್ ಅವರನ್ನು ಪ್ರತಿಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಪ್ರತಿಪಕ್ಷದ ನಾಯಕರು ಯಾರಾದರೂ ನಮಗೆ ಅಭ್ಯಂತರವಿಲ್ಲ ಎಂದು ತಿಳಿಸಿದ್ದಾರೆ.

ಇಂದು ಚುನಾವಣೆ ನಡೆದರೂ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂಬ ಯಡಿಯೂರಪ್ಪನವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ”ಚುನಾವಣೆಯಲ್ಲಿ ಕೇವಲ 66 ಸೀಟು ಪಡೆದು ವಿರೋಧ ಪಕ್ಷದಲ್ಲಿ ಕುಳಿತಿದ್ದಾರೆ. ಅವರ ಮಗ ವಿಜಯೇಂದ್ರರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಿರುವುದರಿಂದ ಅವರ ಪಕ್ಷದ ಅನೇಕ ನಾಯಕರು ಅಸಮಧಾನಗೊಂಡಿದ್ದಾರೆ. ಇನ್ನು ಸ್ಪಲ್ಪ ದಿನಗಳಲ್ಲಿ ಬಿಜೆಪಿಯ ಪರಿಸ್ಥಿತಿಯನ್ನು ಎಲ್ಲರೂ ನೋಡಬಹುದು” ಎಂದರು.

”ರಾಜ್ಯದಲ್ಲಿ ದ್ವೇಷದ ರಾಜಕಾರಣ ಮಾಡದೇ, ಶಾಂತಿಯುತವಾದ ವಾತಾವರಣವನ್ನು ಸರ್ಕಾರ ನಿರ್ಮಿಸುತ್ತಿದೆ. ಬಿಜೆಪಿಯವರು ಸರ್ಕಾರದ ವಿರುದ್ಧ ಮಾಡುತ್ತಿರುವ ಭ್ರಷ್ಟಾಚಾರದ ಆರೋಪಗಳಿಗೆ ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಉತ್ತರವನ್ನು ನೀಡಲಾಗುವುದು” ಎಂದು ಸಿದ್ದರಾಮಯ್ಯ ತಿಳಿಸಿದರು.

ಮಾಜಿ ಸಿಎಂ ಕುಮಾರಸ್ವಾಮಿ ಯವರು ವಿವೇಕಾನಂದ ಎಂಬುವವರ ವರ್ಗಾವಣೆ ಬಗ್ಗೆ ಟ್ವೀಟ್ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ”ವಿವೇಕಾನಂದ ಎಂಬುವವರು ಮೈಸೂರು ಗ್ರಾಮಾಂತರ ಕ್ಷೇತ್ರ ಶಿಕ್ಷಣಾಧಿಕಾರಿ ಆಗಿದ್ದಾರೆ. ಅವರ ಬಗ್ಗೆ ಮಾತನಾಡಲಾಗಿದೆಯೆ ಹೊರತು ಪೋಲಿಸ್ ಅಧಿಕಾರಿ ಬಗ್ಗೆಯಲ್ಲ, ವಿವಿಪುರಂ
ಇನ್ಸ್ ಪೆಕ್ಟರ್ ವಿವೇಕಾನಂದ ಚಾಮರಾಜ ವಿಧಾನಸಭಾ ಕ್ಷೇತ್ರಕ್ಕೆ, ವರ್ಗಾವಣೆಯಾಗಿರುವ ಬಗ್ಗೆ ಸ್ಥಳೀಯ ಶಾಸಕರನ್ನು ಕೇಳಲಿ ಎಂದು ಸ್ಪಷ್ಟನೆ ನೀಡಿದ್ದಾರೆ.

ಕಾಂಗ್ರೆಸ್ ವಿರುದ್ಧ ಬಿಜೆಪಿ ಪೋಸ್ಟರ್ ಚಳವಳಿ ಪ್ರಾರಂಭಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ”ಜನ ಬಿಜೆಪಿಯವರಿಗೆ ತಕ್ಕ ಪಾಠ ಕಲಿಸಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಸೇರಿ ಸಮ್ಮಿಶ್ರ ಸರ್ಕಾರ ರಚಿಸುವ ಕನಸು ಕಂಡಿದ್ದರು. ಆದರೆ ಜನ ಕಾಂಗ್ರೆಸ್ ಪಕ್ಷಕ್ಕೆ 136 ಸ್ಥಾನಗಳನ್ನು ನೀಡಿರುವುದು ಅವರನ್ನು ಆತಂಕಕ್ಕೆ ದೂಡಿದ್ದು, ಇದರಿಂದ ಅರ್ಥವಿಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ” ಎಂದರು.

ಕಾಂಗ್ರೆಸ್‌ನವರು ಕೌರವ ಸಂಸ್ಕೃತಿಯನ್ನು ನನ್ನ ಬಳಿ ತೋರಿಸುವುದು ಬೇಡ ಎಂಬ ಕುಮಾರಸ್ವಾಮಿಯವರ ಹೇಳಿಕೆಗೆ ಉತ್ತರಿಸಿ, ”ಕುಮಾರಸ್ವಾಮಿಯವರು ಎಂದಿಗೂ ತಾವು ಮಾಡಿರುವ ಆರೋಪಗಳನ್ನು ಸಾಬೀತು ಪಡಿಸಿಲ್ಲ. ದ್ವೇಷ ಹಾಗೂ ಅಸೂಯೆಯ ರಾಜಕಾರಣ ಮಾಡುತ್ತಿದ್ದಾರೆ. 38 ಸ್ಥಾನದಲ್ಲಿದ್ದ ಜೆಡಿಎಸ್ ನವರು ಈಗ 19 ಸ್ಥಾನಕ್ಕೆ ಇಳಿದಿದ್ದಾರೆ. ಅವರು ಮಾಡುವ ಸುಳ್ಳು ಆರೋಪಗಳಿಗೆ ಉತ್ತರ ನೀಡುವ ಅವಶ್ಯಕತೆ ಇಲ್ಲ” ಎಂದು ತಿರುಗೇಟು ನೀಡಿದ್ದಾರೆ.

ಪೆನ್ ಡ್ರೈವ್‌ನಲ್ಲಿ ಸಾಕಷ್ಟು ಮಾಹಿತಿಗಳಿದ್ದು, ಆಡಳಿತ ಪಕ್ಷದವರು ಅದನ್ನು ಬಹಿರಂಗಗೊಳಿಸದಂತೆ ಮನವಿ ಮಾಡಿದ್ದಾರೆ ಎಂಬ ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯಿಸಿ, ”ಅವರ ಪೆನ್ ಡ್ರೈವ್ ಹೇಳಿಕೆಯ ನಂತರ ವಿಧಾನಸಭೆ ಅಧಿವೇಶನ ನಡೆದರೂ, ಅದರ ಬಗ್ಗೆ ಅವರು ಪ್ರಸ್ತಾಪ ಮಾಡಲಿಲ್ಲವೇಕೆ? ಪೆನ್ ಡ್ರೈವ್ ಬಹಿರಂಗಗೊಳಿಸಬೇಡಿ ಎಂದು ಮನವಿ ಮಾಡಿದವರು ಯಾರು ಎಂಬ ಮಾಹಿತಿಯನ್ನು ನೀಡಲಿ” ಎಂದು ಹೇಳಿದರು.

”ಮಾಜಿ ಮುಖ್ಯಮಂತ್ರಿಯಾಗಿದ್ದುಕೊಂಡು ವಿದ್ಯುತ್ ಕಳವು ಮಾಡಿರುವ ಕುಮಾರಸ್ವಾಮಿಯವರಿಗೆ ಇಂತಹ ಹೇಳಿಕೆಗಳನ್ನು ನೀಡಲು ಯಾವ ನೈತಿಕತೆಯೂ ಇಲ್ಲ. ದಂಡ ಕಟ್ಟುವ ಮೂಲಕ ವಿದ್ಯುತ್ ಕಳುವು ಮಾಡಿರುವ ಅಪರಾಧವನ್ನು ಒಪ್ಪಿಕೊಂಡಿದ್ದಾರೆ. ಚಿಕ್ಕದಾದರೂ ಅಪರಾಧ ಅಪರಾಧವೇ” ಎಂದರು.

ಇದನ್ನೂ ಓದಿ: ಆರೋಪ ಮಾಡುವಾಗ ಸಾಕ್ಷ್ಯ ಇಟ್ಟುಕೊಂಡು ಮಾತನಾಡಿ: ಹೆಚ್‌ಡಿಕೆಗೆ ಯತೀಂದ್ರ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...