Homeಮುಖಪುಟಬಿಜೆಪಿ ನಾಯಕರನ್ನೇ 'ಆಪರೇಷನ್' ಮಾಡಲಿರುವ ಎನ್‌ಸಿಪಿ: ಮಹಾ ಡಿಸಿಎಂ ಅಜಿತ್ ಪವಾರ್‌

ಬಿಜೆಪಿ ನಾಯಕರನ್ನೇ ‘ಆಪರೇಷನ್’ ಮಾಡಲಿರುವ ಎನ್‌ಸಿಪಿ: ಮಹಾ ಡಿಸಿಎಂ ಅಜಿತ್ ಪವಾರ್‌

ಬಿಜೆಪಿ ನಾಯಕರು ನಮ್ಮ ಪಕ್ಷಕ್ಕೆ ಸೇರಲು ಬಯಸಿದ್ದು, ಆದರೆ ಚುನಾವಣಾ ನೀತಿ ಸಂಹಿತೆ ಮುಗಿದ ನಂತರ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಪ್ರಕ್ರಿಯೆ ಆರಂಭಿಸುತ್ತೇವೆ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ಕಳೆದ ಬಾರಿ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೂ ಮುನ್ನ ಪಕ್ಷ ತೊರೆದು ಬಿಜೆಪಿ ಸೇರಿದ್ದ ಹಲವು ನಾಯಕರು ಮರಳಿ ಎನ್‌ಸಿಪಿ ಸೇರಲಿದ್ದಾರೆ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಹಾಗೂ ಎನ್‌ಸಿಪಿ ನಾಯಕ ಅಜಿತ್ ಪವಾರ್‌ ಹೇಳಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಹಾಗೂ ತಮ್ಮ ಪ್ರದೇಶದ ಅಭಿವೃದ್ದಿಗೆ ಬೆಂಬಲ ಸಿಗುತ್ತದೆ ಎಂಬ ಭರವಸೆಯಿಂದ, ಈ ಮೊದಲ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಎನ್‌ಸಿಪಿ ಮತ್ತು ಕಾಂಗ್ರೆಸ್ ನಾಯಕರು ತಮ್ಮ ಕಾರ್ಯಕರ್ತರೊಡನೆ ದೊಡ್ಡ ಪ್ರಮಾಣದಲ್ಲಿ ಬಿಜೆಪಿಗೆ ಹೋಗಿದ್ದರು. ಆದರೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರದೆ ಈ ನಾಯಕರು ನಿರಾಶೆಗೊಂಡಿದ್ದಾರೆ. ಆದ್ದರಿಂದ ಈಗ ಮರಳಿ ಪಕ್ಷಕ್ಕೆ ಬರಲು ಉತ್ಸುಕರಾಗಿದ್ದಾರೆ ಎಂದು ಅಜಿತ್ ಪವಾರ್‌ ಹೇಳಿದ್ದಾರೆ.

ಇದನ್ನೂ ಓದಿ: ನಾವು ಹಿಂದುತ್ವವನ್ನು ಇನ್ನೂ ಬಿಟ್ಟು ಕೊಟ್ಟಿಲ್ಲ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ

“ಈಗ ಕೆಲವು ನಾಯಕರು ನಮ್ಮ ಪಕ್ಷಕ್ಕೆ ಸೇರಲು ಬಯಸಿದ್ದಾರೆ. ಆದರೆ ಚುನಾವಣಾ ನೀತಿ ಸಂಹಿತೆ ಮುಗಿದ ನಂತರ ನಾವು ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಪ್ರಕ್ರಿಯೆ ಆರಂಭಿಸುತ್ತೇವೆ. ಪುಣೆ ಮತ್ತು ಪಿಂಪ್ರಿ-ಚಿಂಚ್‌ವಾಡ್‌ನ ಕೆಲವು ಪ್ರಮುಖ ನಾಯಕರು ಶೀಘ್ರದಲ್ಲೇ ನಮ್ಮೊಂದಿಗೆ ಸೇರಿಕೊಳ್ಳಲಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇದು ಪುಣೆ , ಪಿಂಪ್ರಿ-ಚಿಂಚ್‌ವಾಡ್‌ನಲ್ಲಿ ಮಾತ್ರವಲ್ಲದೆ ಮಹಾರಾಷ್ಟ್ರದ ಇತರ ಭಾಗಗಳಲ್ಲಿಯೂ ಸಂಭವಿಸುತ್ತದೆ. ಪ್ರಸ್ತುತ ಗ್ರಾಮ ಪಂಚಾಯಿತಿ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಯಾರು ಪಕ್ಷಕ್ಕೆ ಸೇರುತ್ತಾರೆ ಎಂಬುದನ್ನು ಹೇಳಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಸಾರಿಗೆ ಕಂಡಕ್ಟರ್‌ಗಳ‌ ಸಮವಸ್ತ್ರದಲ್ಲಿ ಶೀಘ್ರ ಕ್ಯಾಮೆರಾ ಅಳವಡಿಕೆ; ಯಾಕೆ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...