Homeಕರ್ನಾಟಕಬಿಜೆಪಿ ನಾಯಕರು ಚುನಾವಣೆ ಬಗ್ಗೆ ಮಾತ್ರ ಚಿಂತಿತರಾಗಿದ್ದಾರೆ, ಆಡಳಿತದ ಬಗ್ಗೆ ಅಲ್ಲ: ಸಿದ್ದರಾಮಯ್ಯ ಆಕ್ರೋಶ

ಬಿಜೆಪಿ ನಾಯಕರು ಚುನಾವಣೆ ಬಗ್ಗೆ ಮಾತ್ರ ಚಿಂತಿತರಾಗಿದ್ದಾರೆ, ಆಡಳಿತದ ಬಗ್ಗೆ ಅಲ್ಲ: ಸಿದ್ದರಾಮಯ್ಯ ಆಕ್ರೋಶ

ಸಾರ್ವಜನಿಕರಿಗೆ ಬೋಧಿಸಲು ಪ್ರಯತ್ನಿಸುತ್ತಿರುವ ಮಾರ್ಗಸೂಚಿಗಳನ್ನು ಬಿಜೆಪಿ ನಾಯಕರು ಯಾಕೆ ಅನುಸರಿಸುತ್ತಿಲ್ಲ? ಎಂದು ಅವರು ಪ್ರಶ್ನಿಸಿದ್ದಾರೆ.

- Advertisement -
- Advertisement -

ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರಗಳ ಅಡಿಯಲ್ಲಿನ ದುರ್ಬಲವಾದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಕೊರೊನಾ 2 ನೇ ಅಲೆಯ ಬಿಕ್ಕಟ್ಟು ಬಹಿರಂಗಪಡಿಸಿದೆ. ಕೊರೊನಾಗೆ ಯಾವುದೇ ವೈದ್ಯಕೀಯ ಚಿಕಿತ್ಸೆ ಇಲ್ಲದೆ ಜನರು ಅಸಹಾಯಕರಾಗಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಅವರು ಸರಣಿ ಟ್ವೀಟ್ ಮಾಡಿದ್ದು, “ಕೊರೊನಾ 1 ನೇ ಅಲೆಯಲ್ಲಿ ಭಾರತಕ್ಕೆ ಗಂಭೀರ ಪರಣಾಮ ಬೀರಿದೆ. ಆದರೂ ಸರ್ಕಾರ ಯಾವುದೇ ಪಾಠ ಕಲಿತಿಲ್ಲ. ಕೊರೊನಾ ಚಿಕಿತ್ಸೆಗೆ ವ್ಯಾಪಕವಾಗಿ ಬಳಸಲಾಗುವ ರೆಮ್‌ಡೆಸಿವಿರ್ ಲಭ್ಯವಿಲ್ಲ. ಸರ್ಕಾರವು ಔಷಧಿಗಳೊಂದಿಗೆ ಯಾಕೆ ಸಿದ್ಧವಾಗಿಲ್ಲ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಮಸ್ಕಿ: ಬಿಜೆಪಿ ಪರ ಹಣ ಹಂಚಿ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಹಾಸನದ ಯುವಕರ ಬಂಧನ

“ಕೊರೊನಾ ರೋಗಿಗಳಿಗೆ ಸಾಮಾನ್ಯ ಮತ್ತು ಐಸಿಯು ಹಾಸಿಗೆಗಳ ಕೊರತೆಯೂ ಇದೆ. ಆಮ್ಲಜನಕ ಮತ್ತು ಇತರ ಬೆಂಬಲ ವ್ಯವಸ್ಥೆಗಳಿಲ್ಲದೆ ಜನರು ಬಳಲುತ್ತಿದ್ದಾರೆ. ಸಾರ್ವಜನಿಕ ಆರೋಗ್ಯ ಬಿಕ್ಕಟ್ಟನ್ನು ಪರಿಹರಿಸುವ ಬದಲು ಆಂತರಿಕ ಬಿಕ್ಕಟ್ಟನ್ನು ಪರಿಹರಿಸುವಲ್ಲಿ ಸರ್ಕಾರ ನಿರತವಾಗಿದೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸರ್ಕಾರಿ ಆಸ್ಪತ್ರೆಗಳು ತುಂಬಿರುವುದರಿಂದ, ಜನರು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳತ್ತ ಸಾಗುತ್ತಿದ್ದಾರೆ. ಖಾಸಗಿ ಆಸ್ಪತ್ರೆಯ ಶುಲ್ಕವನ್ನು ಭರಿಸಲು ಅನೇಕರಿಗೆ ಸಾಧ್ಯವಾಗುತ್ತಿಲ್ಲ. ಎಲ್ಲಾ ರೋಗಿಗಳಿಗೆ ಕೊರೊನಾ ಚಿಕಿತ್ಸೆಯನ್ನು ಖಾಸಗಿ ಆಸ್ಪತ್ರೆಗಳಿಗೆ ಉಚಿತವಾಗಿ ನೀಡಿ” ಎಂದು ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರನ್ನು ಅವರು ಕೋರಿದ್ದಾರೆ.

“ಬಿಜೆಪಿ ನಾಯಕರು ಚುನಾವಣೆಯ ಬಗ್ಗೆ ಮಾತ್ರ ಚಿಂತಿತರಾಗಿದ್ದು, ಆಡಳಿತದ ಬಗ್ಗೆ ಚಿಂತಿತರಾಗಿಲ್ಲ ಎಂಬುದು ನಿಜಕ್ಕೂ ದುರದೃಷ್ಟಕರ. ಬಿಜೆಪಿ ನಾಯಕರು ಸಾರ್ವಜನಿಕರಿಗೆ ಬೋಧಿಸಲು ಪ್ರಯತ್ನಿಸುತ್ತಿರುವ ಮಾರ್ಗಸೂಚಿಗಳನ್ನು ಯಾಕೆ ಅನುಸರಿಸುತ್ತಿಲ್ಲ?” ಎಂದು ಸಿದ್ದರಾಮಯ್ಯ ಕೇಳಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಕೊರೊನಾ ಚಿಕಿತ್ಸೆಗೆ ರೆಮ್ಡಿಸಿವಿರ್‌ ಕೊರತೆ: ಖಾಸಗಿ ಆಸ್ಪತ್ರೆಗಳ ಒಕ್ಕೂಟ ‘ಫಾನಾ’

ವಿಡಿಯೋ ನೋಡಿ: ಚಕ್ರವರ್ತಿ ಸೂಲಿಬೆಲೆ ಪ್ರತಾಪ್ ಸಿಂಹ ಜಗಳವಾಡ್ತಿರೋದು ಏಕೆ? ಫುಲ್ ಎಪಿಸೋಡ್ Sulibele versus Pratap Simha

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯ ಅಧಿಕೃತ ‘ಎಕ್ಸ್’ ಖಾತೆ ವಿರುದ್ಧ ಎಫ್‌ಐಆರ್‌ ದಾಖಲಿಸಿದ ಚುನಾವಣಾ ಆಯೋಗ

0
ವಿವಿಧ ಗುಂಪುಗಳು ಮತ್ತು ವರ್ಗಗಳ ನಡುವೆ ದ್ವೇಷ ಹರಡಲು ಮತ್ತು ಉತ್ತೇಜಿಸಲು ಯತ್ನಿಸುತ್ತಿರುವ ಆರೋಪದ ಮೇಲೆ ಬಿಜೆಪಿಯ ಅಧಿಕೃತ ಎಕ್ಸ್ ಖಾತೆ ವಿರುದ್ಧ ಚುನಾವಣಾ ಆಯೋಗ ಎಫ್‌ಐಆರ್‌ನ್ನು ದಾಖಲಿಸಿದೆ. ಈ ಕುರಿತು ಚುನಾವಣಾ ಆಯೋಗ...