Homeಕರ್ನಾಟಕಬಿಜೆಪಿಯ ಸುಳ್ಳುಗಳಿಗೆ ನಾನು ಹೆದರಲ್ಲ: ಸಿಎಂ ಸಿದ್ದರಾಮಯ್ಯ

ಬಿಜೆಪಿಯ ಸುಳ್ಳುಗಳಿಗೆ ನಾನು ಹೆದರಲ್ಲ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಕೇಂದ್ರ ಸರ್ಕಾರ ಕಾರ್ಪೋರೇಟ್ ತೆರಿಗೆಯನ್ನು 30% ದಿಂದ 20% ಗೆ ಇಳಿಸಿದ್ದು ನಿಜವಲ್ಲವೇ? ಎಂದು ಸಿಎಂ ಸಿದ್ದರಾಮಯ್ಯ ಅವರು ಮಂಗಳವಾರ ಕೇಳಿದ್ದಾರೆ. ವಿಧಾನ ಪರಿಷತ್‌ನಲ್ಲಿ ಮಾತನಾಡಿದ ಸಿಎಂ ಅವರು, ಯಡಿಯೂರಪ್ಪನವರು 2008 ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಸಾಲ ಮನ್ನಾ ಮಾಡಲು ‘ನೋಟ್ ಪ್ರಿಂಟ್ ಮಾಡುವ ಮಿಷನ್’ ನಮ್ಮಲ್ಲಿ ಇಲ್ಲ ಎಂದಿರುವುದು ದಾಖಲೆಯಲ್ಲಿ ಇದೆ ಎಂದು ಹೇಳಿದ್ದಾರೆ. ಬಿಜೆಪಿಯ ಸುಳ್ಳುಗಳಿಗೆ

“ನಾನು ಮುಖ್ಯಮಂತ್ರಿಯಾಗಿರುವಾಗ 50 ಸಾವಿರದವರೆಗಿನ ಸೊಸೈಟಿ ಸಾಲ ಮನ್ನಾ ಮಾಡಿದ್ದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು 72 ಸಾವಿರ ಕೋಟಿ ರೈತರ ಸಾಲ ಮನ್ನಾ ಮಾಡಿದ್ದರು. ಆದರೆ ನರೇಂದ್ರ ಮೋದಿಯವರು ರೈತರ ಸಾಲ ಮನ್ನಾ ಮಾಡಲಿಲ್ಲ. ನಮ್ಮ ಸರ್ಕಾರ ನುಡಿದಂತೆ ನಡೆದಿದೆ.” ಎಂದು ಅವರು ಹೇಳಿದ್ದಾರೆ. ಬಿಜೆಪಿಯ ಸುಳ್ಳುಗಳಿಗೆ

“ಗ್ಯಾರಂಟಿಗಳನ್ನು ವಿರೋಧಿಸಿದ ಬಿಜೆಪಿಯವರು ಮದ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ತಾನಗಳೂ ಸೇರಿದಂತೆ ಹಲವು ರಾಜ್ಯಗಳಲ್ಲಿ ನಮ್ಮ ಗ್ಯಾರಂಟಿಗಳನ್ನು ಕಾಪಿ ಮಾಡಿದರು. ಕಾಂಗ್ರೆಸ್ ಸರ್ಕಾರ ಜಾರಿಮಾಡಿರುವ ಐದು ಗ್ಯಾರಂಟಿಗಳನ್ನು ಬಡವರಿಗೆ ಸಾಮಾಜಿಕ , ಆರ್ಥಿಕವಾಗಿ ಶಕ್ತಿತುಂಬಿದ ಯೋಜನೆಗಳನ್ನು ಪ್ರತಿಪಕ್ಷಗಳು ಒಪ್ಪಿಕೊಳ್ಳಲಿ. ಬಿಜೆಪಿಯವರು ಸುಳ್ಳು ಭಾಷಣ ಮಾಡುವುದರಲ್ಲಿ ನಿಸ್ಸೀಮರು ಎಂದು ಎಲ್ಲರಿಗೂ ತಿಳಿದಿದೆ” ಎಂದು ಹೇಳಿದ್ದಾರೆ.

“ಉತ್ತರ ನೀಡುವಾಗ ಅಡ್ಡಿಪಡಿಸಿದರೆ, ನಾನು ಯಾರಿಗೂ ಹೆದರುವುದಿಲ್ಲ. ನಮ್ಮ ಸರ್ಕಾರದಲ್ಲಿ ಯಾವುದೇ ತಪ್ಪು ಹುಡುಕಲು ಸಾಧ್ಯವಿಲ್ಲದ್ದರಿಂದ ಪ್ರತಿಪಕ್ಷಗಳು ಸುಳ್ಳು ಹೇಳುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳು ಶಕ್ತಿ ನೀಡುವುದಿಲ್ಲ ಎಂದು ವಿರೋಧಪಕ್ಷದ ನಾಯಕರು ಹೇಳಿದರು. ಶಕ್ತಿ ಯೋಜನೆಯಡಿ 409 ಕೋಟಿ ಜನ ಉಚಿತವಾಗಿ ಓಡಾದಿದ್ದಾರೆ. ಇದು ಮಹಿಳೆಯರಿಗೆ ಸಾಮಾಜಿಕ ಆರ್ಥಿಕ ಶಕ್ತಿ ನೀಡಿದ ಕಾರ್ಯಕ್ರಮ.1.26 ಕೋಟಿ ಅನ್ನಭಾಗ್ಯ ದಡಿ 170 ರೂ.ಗಳನ್ನು ಡಿಬಿಟಿ ಮಾಡಲಾಗಿದೆ. 4 ಕೋಟಿಗೂ ಹೆಚ್ಚು ಜನ , ಗ್ಯಾರಂಟಿಗಳಿಂದ ಲಾಭ ಪಡೆದಿದ್ದಾರೆ.” ಎಂದು ಅವರು ಹೇಳಿದ್ದಾರೆ.

“ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರ ಜೀವನ ಸುಧಾರಿಸಿರುವ ಉದಾಹರಣೆಗಳಿವೆ. ಗೃಹಲಕ್ಷ್ಮಿಯ ಫಲಾನುಭವಿಯೊಬ್ಬರು , ಈ ಯೋಜನೆಯಿಂದ 10 ರಿಂದ 20 ಸಾವಿರ ಉಳಿಸಿ, ಇಡೀ ಊರಿಗೆ ಹೋಳಿಗೆ ಊಟ ಹಾಕಿಸಿ, ಸೊಸೆಗೆ ಬಳೆ ಅಂಗಡಿ ಇಟ್ಟುಕೊಟ್ಟಿದ್ದೇನೆ ಎಂದು ತಮ್ಮ ಸಂತಸವನ್ನು ವ್ಯಕ್ತಪಡಿಸಿದ್ದರು.” ಎಂದು ಅವರ ಇದೇ ವೇಳೆ ನನಪಿಸಿಕೊಂಡಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಔರಂಗಜೇಬ್‌ ವಿರುದ್ಧ ಜನರ ಕೋಪಕ್ಕೆ ‘ಛಾವಾ’ ಸಿನಿಮಾ ಕಾರಣ: ಸಿಎಂ ದೇವೇಂದ್ರ ಫಡ್ನವೀಸ್

ಔರಂಗಜೇಬ್‌ ವಿರುದ್ಧ ಜನರ ಕೋಪಕ್ಕೆ ‘ಛಾವಾ’ ಸಿನಿಮಾ ಕಾರಣ: ಸಿಎಂ ದೇವೇಂದ್ರ ಫಡ್ನವೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...