Homeಮುಖಪುಟಅಮೆರಿಕದಲ್ಲಿ ಟ್ರಂಪ್ ಸೋತಂತೆ ಬಿಹಾರದಲ್ಲಿ ಬಿಜೆಪಿ ಸೋಲುತ್ತದೆ: ಶಿವಸೇನೆ

ಅಮೆರಿಕದಲ್ಲಿ ಟ್ರಂಪ್ ಸೋತಂತೆ ಬಿಹಾರದಲ್ಲಿ ಬಿಜೆಪಿ ಸೋಲುತ್ತದೆ: ಶಿವಸೇನೆ

ನಮ್ಮನ್ನು ಹೊರತುಪಡಿಸಿ ದೇಶ ಮತ್ತು ರಾಜ್ಯದಲ್ಲಿ ಬೇರೆ ಪರ್ಯಾಯಗಳಿಲ್ಲ ಎಂಬ ಭ್ರಮೆಯನ್ನು ಜನರು ಕೆಲವೊಮ್ಮೆ ತೆಗೆದುಹಾಕಬೇಕಾಗುತ್ತದೆ. ಈ ಬಾರಿ ಬಿಹಾರದಲ್ಲಿ ಎನ್‌ಡಿಎ ಸ್ಪಷ್ಟವಾಗಿ ಸೋಲಲಿದೆ - ಸಾಮ್ನಾ

- Advertisement -
- Advertisement -

ಅಮೆರಿಕಾದಲ್ಲಿ ಟ್ರಂಪ್ ಸೋತು ಅಧಿಕಾರ ಬದಲಾವಣೆಯಾದಂತೆ ಬಿಹಾರದಲ್ಲಿಯೂ ಸಹ ಅದು ಮರುಕಳಿಸಲಿದ್ದು ಬಿಜೆಪಿ ಸೋಲಲಿದೆ ಎಂದು ಶಿವಸೇನೆ ಭವಿಷ್ಯ ನುಡಿದಿದೆ. ತನ್ನ ಮುಖವಾಣಿ ಸಾಮ್ನಾದಲ್ಲಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಶಿವಸೇನೆ, ಕೊರೊನಾ ಸಾಂಕ್ರಾಮಿಕದ ನಡುವೆಯೂ ಕೋಟ್ಯಂತರ ಹಣ ಖರ್ಚು ಮಾಡಿ ‘ನಮಸ್ತೆ ಟ್ರಂಪ್’ ಕಾರ್ಯಕ್ರಮ ಆಯೋಜಿಸಿ ಡೊನಾಲ್ಡ್ ಟ್ರಂಪ್ ಕರೆಸಿದ್ದನ್ನು ತೀವ್ರವಾಗಿ ಟೀಕಿಸಿದೆ.

“ನಮ್ಮನ್ನು ಹೊರತುಪಡಿಸಿ ದೇಶ ಮತ್ತು ರಾಜ್ಯದಲ್ಲಿ ಬೇರೆ ಪರ್ಯಾಯಗಳಿಲ್ಲ ಎಂಬ ಭ್ರಮೆಯನ್ನು ಜನರು ಕೆಲವೊಮ್ಮೆ ತೆಗೆದುಹಾಕಬೇಕಾಗುತ್ತದೆ. ಈ ಬಾರಿ ಬಿಹಾರದಲ್ಲಿ ಎನ್‌ಡಿಎ ಸ್ಪಷ್ಟವಾಗಿ ಸೋಲಲಿದೆ” ಎಂದು ಸಾಮ್ನಾ ಹೇಳಿದೆ.

ಅಮೆರಿಕಾದಲ್ಲಿ ರಾಜಕೀಯಾಧಿಕಾರ ಬದಲಾಗಿದೆ. ಎಷ್ಟು ಬಾರಿ ಟ್ರಂಪ್ ಟ್ರಂಪ್ ಎಂದು ಕೂಗಾಡಿದರು ಅಲ್ಲಿ ಜೋ ಬೈಡನ್ ಗೆದ್ದಿದ್ದಾರೆ. ಅಮೆರಿಕದ ಜನರು ಒಮ್ಮೆ ಮಾಡಿದ ತಪ್ಪನ್ನು ತಿದ್ದಿಕೊಂಡಿದ್ದಾರೆ. ಅದೇ ರೀತಿಯಲ್ಲಿ ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಬಿಹಾರದಲ್ಲಿ ಸ್ಪಷ್ಟವಾಗಿ ಸೋಲಲಿದೆ. ನಾವು ಭಾರತದಲ್ಲಿ ನಮಸ್ತೆ ಟ್ರಂಪ್ ಎಂದರೆ ಅಮೆರಿಕನ್ನರು ವಿದಾಯಗಳು ಟ್ರಂಪ್ ಎಂದರು ಎಂದು ಶಿವಸೇನೆ ಹೇಳಿದೆ.

ಕೊರೊನಾ ಸಾಂಕ್ರಾಮಿಕದ ಮಧ್ಯೆ ಡೊನಾಲ್ಡ್ ಟ್ರಂಪ್‌ರನ್ನು ಕರೆಸಿ ನಮಸ್ತೆ ಟ್ರಂಪ್ ಕಾರ್ಯಕ್ರಮ ಮಾಡಿದ್ದನ್ನು, ಅದರಿಂದ ಕೊರೊನಾ ಸೋಂಕು ಹರಡಿದ್ದನ್ನು ಯಾರು ಅಲ್ಲಗೆಲೆಯಲು ಸಾಧ್ಯವಿಲ್ಲ. ಈಗ ಅಮೆರಿಕದ ಜನತೆ ಟ್ರಂಪ್ ಎಂಬ ವೈರಸ್‌ ಅನ್ನು ಎದೆಂದಿಗೂ ತೊಡೆದುಹಾಕಿದೆ ಎಂದು ಸಾಮ್ನಾದಲ್ಲಿ ಉಲ್ಲೇಖಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ನಿತೀಶ್ ಕುಮಾರ್ ಸೇರಿದಂತೆ ಹಲವು ಎನ್‌ಡಿಎ ನಾಯಕರಿಗೆ ಯುವನಾಯಕ ತೇಜಶ್ವಿ ಯಾದವ್ ಮುಂದೆ ನಿಲ್ಲಲು ಸಾಧ್ಯವಿಲ್ಲ. ಬಿಹಾರದ ಜನರು ಮೋದಿ ಮತ್ತು ನಿತೀಶ್ ಕುಮಾರ್ ಮುಂದೆ ಮಂಡಿಯೂರದೆ, ಚುನಾವಣೆಯನ್ನು ತಮ್ಮ ಕೈಗೆ ತೆಗೆದುಕೊಂಡಿದ್ದಾರೆ ಎಂದು ಶಿವಸೇನೆ ಹೇಳಿದೆ.

ಬಿಹಾರದ ಜಂಗಲ್ ರಾಜ್ ಕುರಿತ ಪ್ರಶ್ನೆಗೆ ಉತ್ತರಿಸಿರುವ ಶಿವಸೇನೆ, ‘ಬಿಹಾರದ ಜನರು ಮೊದಲು ನೀವು ಹೋಗಿ, ಜಂಗಲ್ ರಾಜ್ ಬಂದರೂ ಅದನ್ನು ನಾವು ನಿಭಾಯಿಸುತ್ತೇವೆ’ ಎನ್ನುತ್ತಿದ್ದಾರೆ ಎಂದಿದೆ.

ನಾಳೆ ಮಂಗಳವಾರ ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬೀಳಲಿದ್ದು, ಎಲ್ಲಾ ಚುನಾವಣಾತ್ತೋರ ಸಮೀಕ್ಷೆಗಳು ತೇಜಸ್ವಿ ಯಾದವ್ ನೇತೃತ್ವದ ಮಹಾಘಟಬಂಧನ್ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿವೆ.


ಇದನ್ನೂ ಓದಿ: ಬಿಹಾರ ExitPoll: ಮಹಾಘಟಬಂಧನ್‌ಗೆ ಬಹುಮತ ಸಾಧ್ಯತೆ ಎಂದ ಎಲ್ಲಾ ಸಮೀಕ್ಷೆಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...